ನಾನು ಯೇಸುವಿನ ಇಡೀ ಜೀವಮಾನದ ಬಗ್ಗೆ ಅಂದರೆ ಆತನು ಪರಲೋಕಕ್ಕೆ ಏರಿಹೋಗುವವರೆಗೆ ನಡೆದ ಸಂಗತಿಗಳನ್ನು ಬರೆದೆನು. ಯೇಸು ಪರಲೋಕಕ್ಕೆ ಎತ್ತಲ್ಪಡುವದಕ್ಕಿಂತ ಮೊದಲು, ತಾನು ಆರಿಸಿಕೊಂಡಿದ್ದ ಅಪೊಸ್ತಲರೊಂದಿಗೆ ಮಾತಾಡಿದನು; ಅವರು ಮಾಡಬೇಕಾದದ್ದನ್ನು ಪವಿತ್ರಾತ್ಮನ ಸಹಾಯದಿಂದ ಅವರಿಗೆ ತಿಳಿಸಿದನು.
ಇದು ಆತನ ಮರಣಾನಂತರ ನಡೆದ ಸಂಗತಿ. ತಾನು ಜೀವಂತವಾಗಿರುವುದನ್ನು ಆತನು ಅಪೊಸ್ತಲರಿಗೆ ತೋರ್ಪಡಿಸಿದನು ಮತ್ತು ಶಕ್ತಿಯುತವಾದ ಅನೇಕ ಕಾರ್ಯಗಳನ್ನು ಮಾಡುವುದರ ಮೂಲಕ ಅದನ್ನು ನಿರೂಪಿಸಿದನು. ಯೇಸು ಜೀವಂತವಾಗಿ ಎದ್ದುಬಂದ ನಂತರದ ನಲವತ್ತು ದಿನಗಳ ಅವಧಿಯಲ್ಲಿ ಅಪೊಸ್ತಲರು ಆತನನ್ನು ಅನೇಕ ಸಲ ನೋಡಿದರು. ಯೇಸು ದೇವರ ರಾಜ್ಯದ ಕುರಿತು ಅಪೊಸ್ತಲರೊಂದಿಗೆ ಮಾತಾಡಿದನು.
ಒಮ್ಮೆ, ಯೇಸು ಅವರೊಂದಿಗೆ ಊಟ ಮಾಡುತ್ತಿದ್ದಾಗ, ಜೆರುಸಲೇಮನ್ನು ಬಿಟ್ಟು ಹೋಗಬಾರದೆಂದು ಅವರಿಗೆ ಹೇಳಿದನು. “ತಂದೆಯು ನಿಮಗೊಂದು ವಾಗ್ದಾನವನ್ನು ಮಾಡಿದ್ದಾನೆ. ನಾನು ಮೊದಲೇ ಅದರ ಬಗ್ಗೆ ನಿಮಗೆ ತಿಳಿಸಿದ್ದೇನೆ. ಈ ವಾಗ್ದಾನವನ್ನು ಸ್ವೀಕರಿಸಿಕೊಳ್ಳಲು ಜೆರುಸಲೇಮಿನಲ್ಲಿ ಕಾದುಕೊಂಡಿರಿ.
ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲಹೊಂದಿ ಜೆರುಸಲೇಮಿನಲ್ಲಿಯೂ ಇಡೀ ಜುದೇಯದಲ್ಲಿಯೂ ಸಮಾರ್ಯದಲ್ಲಿಯೂ ಮತ್ತು ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಎಂದನು.
ಯೇಸು ಹೋಗುತ್ತಿರಲು ಅಪೊಸ್ತಲರು ಆಕಾಶವನ್ನೇ ನೋಡುತ್ತಾ ನಿಂತಿದ್ದರು. ಆಗ, ಬಿಳುಪಾದ ಬಟ್ಟೆಗಳನ್ನು ಧರಿಸಿಕೊಂಡಿದ್ದ ಇಬ್ಬರು ಪುರುಷರು (ದೇವದೂತರು) ಇದ್ದಕ್ಕಿದ್ದಂತೆ ಅವರ ಪಕ್ಕದಲ್ಲಿ ನಿಂತುಕೊಂಡು,
“ಗಲಿಲಾಯದವರೇ, ಏಕೆ ಆಕಾಶವನ್ನೇ ನೋಡುತ್ತಾ ನಿಂತುಕೊಂಡಿದ್ದೀರಿ? ಯೇಸು ನಿಮ್ಮ ಕಣ್ಣೆದುರಿನಲ್ಲಿ ಪರಲೋಕಕ್ಕೆ ಹೇಗೆ ಏರಿ ಹೋದನೋ ಅದೇ ರೀತಿಯಲ್ಲಿ ಹಿಂತಿರುಗಿ ಬರುತ್ತಾನೆ” ಎಂದು ಹೇಳಿದರು.
ಅಪೊಸ್ತಲರೆಲ್ಲರೂ ಒಟ್ಟಾಗಿ ಸೇರಿದ್ದರು. ಅವರು ಒಂದೇ ಉದ್ದೇಶದಿಂದ ಎಡಬಿಡದೆ ಪ್ರಾರ್ಥಿಸುತ್ತಿದ್ದರು. ಕೆಲವು ಸ್ತ್ರೀಯರೂ ಯೇಸುವಿನ ತಾಯಿ ಮರಿಯಳೂ ಆತನ ಸಹೋದರರೂ ಅಪೊಸ್ತಲರ ಸಂಗಡವಿದ್ದರು.
(ಈ ಕಾರ್ಯ ಮಾಡುವುದಕ್ಕಾಗಿ ಯೂದನಿಗೆ ಹಣ ಕೊಡಲಾಗಿತ್ತು. ಆ ಹಣದಿಂದ ಒಂದು ಹೊಲವನ್ನು ಅವನಿಗಾಗಿ ಕೊಂಡುಕೊಳ್ಳಲಾಯಿತು. ಆದರೆ ಯೂದನು ತಲೆಕೆಳಗಾಗಿ ಬಿದ್ದಾಗ ಅವನ ಹೊಟ್ಟೆ ಒಡೆದುಹೋಯಿತು. ಅವನ ಕರುಳೆಲ್ಲಾ ಹೊರಗೆ ಬಂದವು.
‘ಅವನ ಮನೆ ಹಾಳಾಗಲಿ! ಅಲ್ಲಿ ಯಾರೂ ವಾಸಿಸದಂತಾಗಲಿ! ‘ ಕೀರ್ತನೆ 69:25 ಎಂದು ಕೀರ್ತನೆಗಳ ಪುಸ್ತಕದಲ್ಲಿ ಯೂದನ ಬಗ್ಗೆ ಬರೆದಿದೆ. ಅಲ್ಲದೆ ‘ಬೇರೊಬ್ಬನು ಅವನ ಕೆಲಸವನ್ನು ಪಡೆದುಕೊಳ್ಳಲಿ’ ಕೀರ್ತನೆ 109:8 ಎಂದು ಸಹ ಬರೆದಿದೆ.