ನೆಬೂಕದ್ನೆಚ್ಚರನು ಬಾಬಿಲೋನಿನ ಅರಸನಾಗಿದ್ದನು. ನೆಬೂಕದ್ನೆಚ್ಚರನು ಜೆರುಸಲೇಮಿಗೆ ಬಂದನು. ನೆಬೂಕದ್ನೆಚ್ಚರನು ತನ್ನ ಸೈನ್ಯ ಸಮೇತ ಜೆರುಸಲೇಮಿಗೆ ಮುತ್ತಿಗೆ ಹಾಕಿದನು. ಯೆಹೂದದ ಅರಸನಾದ ಯೆಹೋಯಾಕೀಮನ ಆಳ್ವಿಕೆಯ ಮೂರನೆಯ ವರ್ಷದಲ್ಲಿ [*ಯೆಹೋಯಾಕೀಮ … ವರ್ಷ ಅಂದರೆ ಕ್ರಿ.ಪೂ. 605.] ಈ ಘಟನೆ ನಡೆಯಿತು.
ನೆಬೂಕದ್ನೆಚ್ಚರನು ಯೆಹೂದದ ಅರಸನಾದ ಯೆಹೋಯಾಕೀಮನನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಅವನು ಆಲಯದ ಸಾಮಾಗ್ರಿಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದನು. ಆ ಸಾಮಾಗ್ರಿಗಳನ್ನು ಅವನು ತನ್ನ ವಿಗ್ರಹಾಲಯದಲ್ಲಿಟ್ಟನು.
ಆಗ ಅರಸನಾದ ನೆಬೂಕದ್ನೆಚ್ಚರನು ಅಶ್ಪೆನಜನಿಗೆ ಆದೇಶಕೊಟ್ಟನು. ಅಶ್ಪೆನಜನು ಅರಸನ ಸೇವೆಯಲ್ಲಿದ್ದ ಎಲ್ಲಾ ಕಂಚುಕಿಯರಿಗೆ ಮುಖಂಡನಾಗಿದ್ದನು. ಅರಸನು ಕೆಲವು ಜನ ಇಸ್ರೇಲರನ್ನು ತನ್ನ ಅರಮನೆಗೆ ಸೇರಿಸಬೇಕೆಂದು ಅಶ್ಪೆನಜನಿಗೆ ಹೇಳಿದನು. ನೆಬೂಕದ್ನೆಚ್ಚರನು ಇಸ್ರೇಲರ ರಾಜವಂಶೀಯರನ್ನು ಮತ್ತು ಪ್ರಮುಖ ಮನೆತನದವರನ್ನು ತನ್ನ ಅರಮನೆಗೆ ಸೇರಿಸಬಯಸಿದನು.
ಅರಸನಾದ ನೆಬೂಕದ್ನೆಚ್ಚರನು ದಿನಾಲು ಆ ತರುಣರಿಗೆ ತಾನು ಸೇವಿಸುವ ಆಹಾರವನ್ನು ಮತ್ತು ದ್ರಾಕ್ಷಾರಸವನ್ನು ಕೊಡುತ್ತಿದ್ದನು. ಅವರನ್ನು ತನ್ನ ಸೇವಕರನ್ನಾಗಿ ಮಾಡಿಕೊಳ್ಳುವ ಉದ್ದೇಶದಿಂದ ಮೂರು ವರ್ಷಗಳ ತರಬೇತಿ ಕೊಡಬೇಕೆಂದು ಆಜ್ಞಾಪಿಸಿದನು.
ಅಶ್ಪೆನಜನು ಆ ಯೆಹೂದ್ಯ ತರುಣರಿಗೆ ಬಾಬಿಲೋನಿನ ಹೆಸರುಗಳನ್ನಿಟ್ಟನು. ದಾನಿಯೇಲನ ಹೊಸ ಹೆಸರು ಬೇಲ್ತೆಶಚ್ಚರ್, ಹನನ್ಯನ ಹೊಸ ಹೆಸರು ಶದ್ರಕ್, ಮೀಶಾಯೇಲನ ಹೊಸ ಹೆಸರು ಮೇಶಕ್ ಮತ್ತು ಅಜರ್ಯನ ಹೊಸ ಹೆಸರು ಅಬೇದ್‌ನೆಗೋ.
ದಾನಿಯೇಲನು ಅರಸನ ಪುಷ್ಟಿದಾಯಕ ಆಹಾರವನ್ನು ಮತ್ತು ಪಾನೀಯವನ್ನು ಇಷ್ಟಪಡಲಿಲ್ಲ. ಆ ಆಹಾರ ಮತ್ತು ಪಾನೀಯಗಳಿಂದ ತನ್ನನ್ನು ಅಶುದ್ಧಗೊಳಿಸಿಕೊಳ್ಳಲು ದಾನಿಯೇಲನಿಗೆ ಇಷ್ಟವಿರಲಿಲ್ಲ. ಆದ್ದರಿಂದ ಈ ರೀತಿ ತನ್ನನ್ನು ಅಶುದ್ಧಗೊಳಿಸಿಕೊಳ್ಳದೆ ಇರುವದಕ್ಕಾಗಿ ಅಶ್ಪೆನಜನ ಅಪ್ಪಣೆಯನ್ನು ಕೇಳಿದನು.
ಆದರೆ ಅಶ್ಪೆನಜನು ದಾನಿಯೇಲನಿಗೆ, “ನಾನು ನನ್ನ ಒಡೆಯನಾದ ಅರಸನಿಗೆ ಹೆದರುತ್ತೇನೆ. ಈ ಆಹಾರ ಮತ್ತು ಪಾನೀಯಗಳನ್ನು ನಿನಗೆ ಕೊಡಬೇಕೆಂದು ಅರಸನು ಅಪ್ಪಣೆ ಮಾಡಿದ್ದಾನೆ. ನೀನು ಈ ಆಹಾರವನ್ನು ತೆಗೆದುಕೊಳ್ಳದಿದ್ದರೆ ಅಶಕ್ತನಾಗಿಯೂ ಅಸ್ವಸ್ಥನಾಗಿಯೂ ಕಾಣಿಸುವೆ. ನೀನು ನಿನ್ನ ವಯಸ್ಸಿನ ಬೇರೆ ತರುಣರಿಗಿಂತ ಸೊರಗಿದವನಾಗಿ ಕಾಣುವೆ. ಅರಸನು ಇದನ್ನು ಗಮನಿಸಿ ನನ್ನ ಮೇಲೆ ಕೋಪಗೊಂಡು ನನ್ನ ತಲೆಯನ್ನೇ ಕತ್ತರಿಸಬಹುದು. ಅದಕ್ಕೆ ನೀನೇ ಹೊಣೆಯಾಗುವೆ” ಎಂದನು.
ಹತ್ತು ದಿನಗಳಾದ ಮೇಲೆ ನಮ್ಮನ್ನು ಅರಸನ ಆಹಾರ ಪಾನೀಯಗಳನ್ನು ಸ್ವೀಕರಿಸುವ ತರುಣರ ಜೊತೆಗೆ ಹೋಲಿಸಿ ನೋಡಿರಿ. ಯಾರು ಹೆಚ್ಚು ಆರೋಗ್ಯವಂತರಾಗಿ ಕಾಣುತ್ತಾರೆಂಬುದನ್ನು ನೀವೇ ಪರೀಕ್ಷಿಸಿ ನೋಡಿರಿ. ಆಮೇಲೆ ನಮ್ಮ ವಿಷಯದಲ್ಲಿ ನೀವೇ ತೀರ್ಮಾನಿಸಿರಿ. ನಾವು ನಿಮ್ಮ ಸೇವಕರಾಗಿದ್ದೇವೆ” ಎಂದು ಬೇಡಿಕೊಂಡನು.
ಆದ್ದರಿಂದ ಕಾವಲುಗಾರನು ಅರಸನ ವಿಶೇಷ ಆಹಾರವನ್ನು ಮತ್ತು ದ್ರಾಕ್ಷಾರಸವನ್ನು ತೆಗೆದುಕೊಂಡು ಅದಕ್ಕೆ ಬದಲಾಗಿ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರುಗಳಿಗೆ ಕಾಯಿಪಲ್ಯಗಳನ್ನು ಕೊಡಲು ಪ್ರಾರಂಭಿಸಿದನು.
ರಾಜನು ಅವರ ಸಂಗಡ ಮಾತಾಡಿದನು. ಅರಸನಿಗೆ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರಷ್ಟು ಯೊಗ್ಯರಾದವರು ಆ ಸಮಸ್ತ ಯುವಕರಲ್ಲಿ ಮತ್ತಾರೂ ಕಂಡು ಬರಲಿಲ್ಲ. ಆದ್ದರಿಂದ ಆ ನಾಲ್ಕು ಜನ ಯುವಕರು ರಾಜನ ಸೇವಕರಾದರು.
ಅರಸನು ಮಹತ್ವಪೂರ್ಣವಾದ ವಿಷಯಗಳ ಬಗ್ಗೆ ಅವರನ್ನು ಕೇಳಿದಾಗಲೆಲ್ಲ ಅವರು ಹೆಚ್ಚಿನ ಪ್ರಜ್ಞೆಯನ್ನು, ಬುದ್ಧಿಯನ್ನು ತೋರಿದರು. ಅವರು ಇಡೀ ದೇಶದ ಎಲ್ಲ ಜೋಯಿಸರಿಗಿಂತಲೂ ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿದ್ದಾರೆಂಬುದನ್ನು ಅರಸನು ಕಂಡುಕೊಂಡನು.