ಭೂಮಿಯು ಅಸ್ತವ್ಯಸ್ತವಾಗಿಯೂ ಬರಿದಾಗಿಯೂ ಇತ್ತು. ಭೂಮಿಯ ಮೇಲೆ ಏನೂ ಇರಲಿಲ್ಲ. ಸಾಗರದ ಮೇಲೆ ಕತ್ತಲು ಕವಿದಿತ್ತು. ದೇವರಾತ್ಮನು ಜಲಸಮೂಹಗಳ ಮೇಲೆ ಚಲಿಸುತ್ತಿದ್ದನು. [*ಚಲಿಸುತ್ತಿದ್ದನು ಹೀಬ್ರೂ ಭಾಷೆಯಲ್ಲಿ ಈ ಪದವು ಪಕ್ಷಿಯೊಂದು ಗೂಡಿನಲ್ಲಿರುವ ತನ್ನ ಮರಿಗಳನ್ನು ರಕ್ಷಿಸುವುದಕ್ಕಾಗಿ “ಮೇಲೆ ಹಾರಾಡುವಂತೆ” ಎಂಬರ್ಥವನ್ನು ನೀಡುತ್ತದೆ.] ಮೊದಲನೆ ದಿನ — ಬೆಳಕು
ಬಳಿಕ ದೇವರು, “ಭೂಮಿಯು ಸಸ್ಯರಾಶಿಯನ್ನು ಬೆಳೆಸಲಿ; ಬೀಜಗಳನ್ನು ಫಲಿಸುವ ಸಸ್ಯಗಳು ಬೆಳೆಯಲಿ; ತನ್ನತನ್ನ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣುಗಳನ್ನು ಫಲಿಸುವ ಹಣ್ಣಿನ ಮರಗಳು ಭೂಮಿಯ ಮೇಲೆ ಬೆಳೆಯಲಿ” ಅಂದನು. ಹಾಗೆಯೇ ಆಯಿತು.
ಸಸಿಗಳು ಭೂಮಿಯ ಮೇಲೆ ಬೆಳೆದವು. ಅವುಗಳಲ್ಲಿ ಬೀಜ ಫಲಿಸುವ ಗಿಡಗಳೂ ಬೀಜವುಳ್ಳ ಹಣ್ಣುಗಳನ್ನು ಫಲಿಸುವ ಮರಗಳೂ ಇದ್ದವು. ಪ್ರತಿಯೊಂದು ಸಸಿಯು ತನ್ನದೇ ಆದ ರೀತಿಯ ಬೀಜವನ್ನು ಫಲಿಸಿತು. ದೇವರಿಗೆ ಇವು ಒಳ್ಳೆಯದಾಗಿ ಕಂಡವು.
ಬಳಿಕ ದೇವರು, “ಆಕಾಶದಲ್ಲಿ ಬೆಳಕುಗಳು ಉಂಟಾಗಲಿ. ಈ ಬೆಳಕುಗಳು ಹಗಲುರಾತ್ರಿಗಳನ್ನು ಬೇರ್ಪಡಿಸಲಿ. ಈ ಬೆಳಕುಗಳು ವಿಶೇಷವಾದ ಗುರುತುಗಳಾಗಿದ್ದು, ವಿಶೇಷವಾದ ಸಮಯಗಳನ್ನೂ ದಿನಗಳನ್ನೂ ವರ್ಷಗಳನ್ನೂ ತೋರಿಸಲಿ.
ಆದ್ದರಿಂದ ದೇವರು ಎರಡು ದೊಡ್ಡಬೆಳಕುಗಳನ್ನು ಸೃಷ್ಟಿಸಿದನು. ಹಗಲನ್ನಾಳುವುದಕ್ಕಾಗಿ ದೊಡ್ಡಬೆಳಕನ್ನೂ ರಾತ್ರಿಯನ್ನಾಳುವುದಕ್ಕಾಗಿ ಅದಕ್ಕಿಂತ ಚಿಕ್ಕಬೆಳಕನ್ನು ಸೃಷ್ಟಿಸಿದನು. ಆತನು ನಕ್ಷತ್ರಗಳನ್ನು ಸಹ ಸೃಷ್ಟಿಸಿದನು.
ಹೀಗೆ ದೇವರು ಸಮುದ್ರದ ಬೃಹದಾಕಾರದ ಪ್ರಾಣಿಗಳನ್ನು, ಸಮುದ್ರದಲ್ಲಿ ಚಲಿಸುವ ಪ್ರತಿಯೊಂದು ಬಗೆಯ ಜೀವಿಗಳನ್ನು ಮತ್ತು ರೆಕ್ಕೆಗಳುಳ್ಳ ಪ್ರತಿಯೊಂದು ಬಗೆಯ ಪಕ್ಷಿಗಳನ್ನು ಸೃಷ್ಟಿಸಿದನು. ಆತನಿಗೆ ಇವು ಒಳ್ಳೆಯದಾಗಿ ಕಂಡವು.
ಬಳಿಕ ದೇವರು, “ಭೂಮಿಯು ಅನೇಕ ಬಗೆಯ ಪ್ರಾಣಿಗಳನ್ನು ಅವುಗಳ ಜಾತಿಗನುಸಾರವಾಗಿ ಹುಟ್ಟಿಸಲಿ. ಪ್ರತಿಯೊಂದು ಬಗೆಯ ದೊಡ್ಡ ಪ್ರಾಣಿಗಳು ಮತ್ತು ಹರಿದಾಡುವ ಚಿಕ್ಕ ಪ್ರಾಣಿಗಳು ಹುಟ್ಟಿಕೊಂಡು ಅಭಿವೃದ್ಧಿಯಾಗಲಿ” ಅಂದನು. ಹಾಗೆಯೇ ಆಯಿತು.
ಬಳಿಕ ದೇವರು, “ಈಗ ನಾವು ಮನುಷ್ಯನನ್ನು ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ನಿರ್ಮಿಸೋಣ. ಮನುಷ್ಯರು ಸಮುದ್ರದಲ್ಲಿರುವ ಎಲ್ಲಾ ಮೀನುಗಳ ಮೇಲೆ, ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳ ಮೇಲೆ ಮತ್ತು ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳ ಮೇಲೆ ದೊರೆತನ ಮಾಡಲಿ” ಅಂದನು.
ದೇವರು ಅವರನ್ನು ಆಶೀರ್ವದಿಸಿ, “ನೀವು ಅನೇಕ ಮಕ್ಕಳನ್ನು ಪಡೆದು ಭೂಮಿಯಲ್ಲೆಲ್ಲಾ ಹರಡಿಕೊಂಡು ಅದನ್ನು ಸ್ವಾಧೀನಪಡಿಸಿಕೊಳ್ಳಿರಿ. ಸಮುದ್ರದಲ್ಲಿರುವ ಮೀನುಗಳ ಮೇಲೆ, ಆಕಾಶದಲ್ಲಿರುವ ಪಕ್ಷಿಗಳ ಮೇಲೆ ಮತ್ತು ಭೂಮಿಯ ಮೇಲೆ ಚಲಿಸುವ ಪ್ರತಿಯೊಂದು ಜೀವಿಯ ಮೇಲೆ ದೊರೆತನ ಮಾಡಿರಿ” ಅಂದನು.
ಭೂಮಿಯ ಮೇಲಿರುವ ಪ್ರಾಣಿಗಳಿಗೆಲ್ಲಾ ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆಲ್ಲಾ ಭೂಮಿಯ ಮೇಲೆ ಹರಿದಾಡುವ ಕ್ರಿಮಿಕೀಟಗಳಿಗೆಲ್ಲಾ ಆಹಾರಕ್ಕಾಗಿ ಸಸ್ಯರಾಶಿಯನ್ನು ಕೊಟ್ಟಿದ್ದೇನೆ” ಅಂದನು. ಹಾಗೆಯೇ ಆಯಿತು.