ಈಗ, ಕೊನೆಯ ದಿನಗಳಲ್ಲಿ ದೇವರು ಮತ್ತೆ ನಮ್ಮ ಜೊತೆಯಲ್ಲಿ ತನ್ನ ಮಗನ ಮೂಲಕ ಮಾತನಾಡಿದನು. ದೇವರು ತನ್ನ ಮಗನ ಮೂಲಕ ಲೋಕವನ್ನೆಲ್ಲ ಸೃಷ್ಟಿಸಿ, ಸಮಸ್ತಕ್ಕೂ ಆತನನ್ನೇ ಬಾಧ್ಯಸ್ತನನ್ನಾಗಿ ಮಾಡಿದನು.
ದೇವರ ಮಹಿಮೆಯು ಆತನಲ್ಲಿ ತೋರಿಬಂದಿತು. ಆತನು ದೇವರ ಸ್ವಭಾವದ ಪ್ರತಿರೂಪವಾಗಿದ್ದಾನೆ. ಆತನು ತನ್ನ ಶಕ್ತಿಯ ಆಜ್ಞೆಯಿಂದ ಪರಿಪಾಲಿಸುತ್ತಿದ್ದಾನೆ. ಆತನು ಜನರನ್ನು ಅವರ ಪಾಪಗಳಿಂದ ಶುದ್ಧಿಮಾಡಿ, ಸ್ವರ್ಗದಲ್ಲಿ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು.
ದೇವರು ಯಾವ ದೂತರಿಗೂ ಈ ಸಂಗತಿಗಳನ್ನು ಎಂದೂ ಹೇಳಿಲ್ಲ: “ನೀನು ನನ್ನ ಮಗ; ಈ ದಿನ ನಾನು ನಿನ್ನ ತಂದೆಯಾದೆನು.” ಕೀರ್ತನೆ. 2:7 ದೇವರು ದೂತನೊಬ್ಬನಿಗೆ ಎಂದೂ ಹೀಗೆ ಹೇಳಿಲ್ಲ: “ನಾನು ಅವನ ತಂದೆಯಾಗಿರುವೆನು, ಅವನು ನನ್ನ ಮಗನಾಗಿರುವನು.” 2 ಸಮುವೇಲ 7:14
ನೀನು ಒಳ್ಳೆಯದನ್ನು ಪ್ರೀತಿಸುವೆ, ಕೆಟ್ಟದ್ದನ್ನು ದ್ವೇಷಿಸುವೆ. ಆದ್ದರಿಂದ ದೇವರು, ಹೌದು, ನಿನ್ನ ದೇವರೇ ನಿನ್ನನ್ನು ನಿನ್ನ ಸಂಗಡಿಗರಿಗಿಂತ ಉನ್ನತಸ್ಥಾನಕ್ಕೆ ಏರಿಸಿ ಪರಮಾನಂದದ ತೈಲದಿಂದ ಅಭಿಷೇಕಿಸಿದ್ದಾನೆ.” ಕೀರ್ತನೆ. 45:6-7
ನೀನು ಅವುಗಳನ್ನು ಮೇಲಂಗಿಯಂತೆ ಮಡಿಚಿಡುವೆ. ಅವು ವಸ್ತ್ರಗಳಂತೆ ಬದಲಾಗುತ್ತವೆ. ಆದರೆ ನೀನು ಎಂದೆಂದಿಗೂ ಬದಲಾಗುವುದಿಲ್ಲ. ನಿನ್ನ ಜೀವಕ್ಕೆ ಅಂತ್ಯವೆಂಬುದಿಲ್ಲ.” ಕೀರ್ತನೆ. 102:25-27