English Bible Languages

Indian Language Bible Word Collections

Bible Versions

English

Tamil

Hebrew

Greek

Malayalam

Hindi

Telugu

Kannada

Gujarati

Punjabi

Urdu

Bengali

Oriya

Marathi

Assamese

Books

Jonah Chapters

1 ಆಮಿತ್ತೈಯ ಮಗನಾದ ಯೋನನಿಗೆ ಯೆಹೋವನು ಹೇಳಿದ್ದೇನೆಂದರೆ,
2 “ನಿನೆವೆಯು ಮಹಾದೊಡ್ಡ ನಗರ. ಅಲ್ಲಿಯ ಜನರ ಅನೇಕ ತರದ ದುಷ್ಕೃತ್ಯಗಳನ್ನು ನೋಡಿದ್ದೇನೆ. ಆದ್ದರಿಂದ ನೀನು ಆ ನಗರಕ್ಕೆ ಹೋಗಿ ಅಲ್ಲಿಯ ಜನರಿಗೆ ದುಷ್ಟತನವನ್ನು ನಿಲ್ಲಿಸಿರಿ ಎಂದು ಹೇಳು.”
3 ಯೆಹೋವನಿಗೆ ವಿಧೇಯನಾಗಲು ಯೋನನು ಇಷ್ಟಪಡದೆ ಆತನಿಂದ ತಪ್ಪಿಸಿಕೊಂಡು ಓಡಿಹೋಗಲು ಪ್ರಯತ್ನಿಸಿ ಯೊಪ್ಪಕ್ಕೆ ಹೋದನು. ಅಲ್ಲಿ ಬಹುದೂರದ ಪಟ್ಟಣವಾದ ತಾರ್ಷೀಷಿಗೆ ಹೋಗುವ ಹಡಗು ಹೊರಡಲು ಸಿದ್ಧವಾಗಿತ್ತು. ಅವನು ಪ್ರಯಾಣದರವನ್ನು ಕೊಟ್ಟು ಹಡಗನ್ನು ಹತ್ತಿದನು. ಆ ಜನರೊಂದಿಗೆ ತಾರ್ಷೀಷಿಗೆ ಪ್ರಯಾಣಮಾಡಿ ಯೆಹೋವನಿಂದ ದೂರಹೋಗಬೇಕೆಂಬುದೇ ಅವನ ಬಯಕೆಯಾಗಿತ್ತು.
4 ಆದರೆ ಯೆಹೋವನು ಸಮುದ್ರದ ಮೇಲೆ ದೊಡ್ಡ ಬಿರುಗಾಳಿ ಬೀಸುವಂತೆ ಮಾಡಿದನು. ಬಿರುಗಾಳಿಯು ಸಮುದ್ರದಲ್ಲಿ ದೊಡ್ಡ ಅಲೆಗಳನ್ನು ಎಬ್ಬಿಸಿತು. ಬಿರುಗಾಳಿಯು ಬಲವಾಗಿದ್ದುದರಿಂದ ಹಡಗು ಒಡೆದುಹೋಗುವುದರಲ್ಲಿತ್ತು.
5 ಹಡಗು ಮುಳುಗಿಹೋಗದಂತೆ ಅದನ್ನು ಹಗುರ ಮಾಡಲು ಜನರು ಅದರೊಳಗಿದ್ದ ವಸ್ತುಗಳನ್ನು ಸಮುದ್ರಕ್ಕೆ ಎಸೆದರು. ನಾವಿಕರು ತುಂಬಾ ಭಯಪಟ್ಟಿದ್ದರು. ಪ್ರತಿಯೊಬ್ಬರು ತಮ್ಮತಮ್ಮ ದೇವರುಗಳಿಗೆ ಪ್ರಾರ್ಥನೆ ಮಾಡಿದರು. ಆದರೆ ಯೋನನು ಹಡಗಿನ ಕೆಳಭಾಗಕ್ಕೆ ಹೋಗಿ ಅಲ್ಲಿ ಮಲಗಿ ನಿದ್ರೆ ಮಾಡತೊಡಗಿದನು.
6 ಹಡಗಿನ ಯಜಮಾನನು ಯೋನನನ್ನು ನೋಡಿ, “ಏಳು, ಯಾಕೆ ಮಲಗಿಕೊಂಡಿದ್ದೀಯಾ? ನಿನ್ನ ದೇವರಿಗೆ ಪ್ರಾರ್ಥಿಸು. ಒಂದುವೇಳೆ ನಿನ್ನ ದೇವರು ನಿನ್ನ ಪ್ರಾರ್ಥನೆಯನ್ನು ಕೇಳಿ ನಮ್ಮನ್ನು ರಕ್ಷಿಸಬಹುದು” ಎಂದು ಹೇಳಿದನು. ಆ ಬಿರುಗಾಳಿಗೆ ಕಾರಣವೇನು?
7 ಆಗ ಪ್ರಯಾಣಿಕರು, “ಯಾರ ನಿಮಿತ್ತ ನಮಗೆ ಈ ಆಪತ್ತು ಬಂತೆಂದು ತಿಳಿದುಕೊಳ್ಳಲು ಚೀಟು ಹಾಕೋಣ” ಅಂದರು. ಅವರು ಚೀಟು ಹಾಕಿದಾಗ ಆ ಚೀಟು ಯೋನನಿಗೆ ಬಂದಿತು; ಅವನೇ ಅವರ ಸಂಕಟಗಳಿಗೆ ಕಾರಣನೆಂಬುದು ನಿಶ್ಚಯವಾಯಿತು.
8 ಆಗ ಅವರು ಯೋನನಿಗೆ, “ನೋಡು, ನಿನ್ನಿಂದಾಗಿ ನಮಗೆ ಈ ಸಂಕಟ ಬಂದಿದೆ. ನೀನು ಏನು ಮಾಡಿದಿ ಎಂದು ನಮಗೆ ಹೇಳು. ನಿನ್ನ ಕೆಲಸವೇನು? ನೀನು ಎಲ್ಲಿಂದ ಬಂದಿ? ನಿನ್ನ ದೇಶ ಯಾವುದು? ನಿನ್ನ ಜನರು ಯಾರು?” ಎಂದೆಲ್ಲಾ ವಿಚಾರಿಸಿದರು.
9 ಆಗ ಯೋನನು, “ನಾನು ಇಬ್ರಿಯನು, ನಾನು ಭೂಪರಲೋಕಗಳ ದೇವರಾದ ಯೆಹೋವನನ್ನು ಆರಾಧಿಸುವವನು. ಆತನು ಭೂಮಿಯನ್ನೂ ಸಾಗರಗಳನ್ನೂ ನಿರ್ಮಿಸಿದಾತನು” ಎಂದನು.
10 ತಾನು ಯೆಹೋವನಿಂದ ದೂರ ಓಡಿಹೋಗುತ್ತಿರುವದಾಗಿ ಯೋನನು ಜನರಿಗೆ ತಿಳಿಸಿದನು. ಆಗ ಅವರು ಬಹಳವಾಗಿ ಹೆದರಿದರು. “ನಿನ್ನ ದೇವರಿಗೆ ವಿರುದ್ಧವಾಗಿ ಎಂಥಾ ಭಯಂಕರ ಕೃತ್ಯ ಮಾಡಿರುವೆ?” ಎಂದು ಕೇಳಿದರು.
11 ಬಿರುಗಾಳಿಯೂ ಸಮುದ್ರದ ತೆರೆಗಳೂ ಇನ್ನೂ ಬಲವಾಗಿ ಬೀಸತೊಡಗಿದವು. ಆಗ ಅವರು ಯೋನನಿಗೆ, “ನಮ್ಮನ್ನು ರಕ್ಷಿಸಿಕೊಳ್ಳಲು ನಾವು ಏನು ಮಾಡಬೇಕು? ಸಮುದ್ರವು ಶಾಂತವಾಗಬೇಕಾದರೆ ನಾವೀಗ ನಿನಗೆ ಏನು ಮಾಡಬೇಕು?” ಎಂದು ಕೇಳಿದಾಗ
12 ಯೋನನು, “ಈ ಬಿರುಗಾಳಿಗೆ ನಾನೇ ಕಾರಣ. ಈಗ ನನ್ನನ್ನೆತ್ತಿ ಸಮುದ್ರದೊಳಗೆ ಬಿಸಾಡಿರಿ. ಆಗ ಸಮುದ್ರವು ಶಾಂತವಾಗುವುದು” ಎಂದು ಹೇಳಿದನು.
13 ಆದರೆ ಅವರಿಗೆ ಯೋನನನ್ನು ಸಮುದ್ರಕ್ಕೆ ಬಿಸಾಡಲು ಮನಸ್ಸಿಲ್ಲದೆ ಹೋಯಿತು. ಅವರು ಹಡಗನ್ನು ದಡಕ್ಕೆ ನಡೆಸಿಕೊಂಡು ಹೋಗಲು ಪ್ರಯತ್ನಪಟ್ಟರು. ಆದರೆ ಅವರಿಂದ ಸಾಧ್ಯವಾಗಲಿಲ್ಲ. ಬಿರುಗಾಳಿಯೂ ಸಮುದ್ರದ ತೆರೆಗಳೂ ಹೆಚ್ಚೆಚ್ಚಾಗಿ ಬಲವಾಗುತ್ತಾ ಬಂದವು.
14 ಆಗ ಆ ಜನರು ಯೆಹೋವನಿಗೆ, “ಯೆಹೋವನೇ, ಈ ಮನುಷ್ಯನು ಕೆಟ್ಟಕಾರ್ಯ ಮಾಡಿದ್ದರಿಂದ ನಾವು ಇವನನ್ನು ಸಮುದ್ರಕ್ಕೆ ಬಿಸಾಡುತ್ತೇವೆ. ನಾವು ಒಬ್ಬ ನಿರಪರಾಧಿಯನ್ನು ಕೊಂದೆವು ಎಂಬ ಅಪರಾಧವನ್ನು ನಮ್ಮ ಮೇಲೆ ಹೊರಿಸಬೇಡ. ಅವನನ್ನು ಕೊಂದದ್ದಕ್ಕಾಗಿ ನಮ್ಮನ್ನು ಕೊಲ್ಲಬೇಡ. ನೀನು ಯೆಹೋವನೆಂದು ನಮಗೆ ಗೊತ್ತಿದೆ. ನಿನಗೆ ಇಷ್ಟಬಂದದ್ದನ್ನು ನೀನು ನೆರವೇರಿಸುವೆ. ಆದ್ದರಿಂದ ದಯವಿಟ್ಟು ನಮಗೆ ಕರುಣೆ ತೋರಿಸು” ಅಂದರು.
15 ಆ ಜನರು ಯೋನನನ್ನು ಸಮುದ್ರದೊಳಗೆ ಬಿಸಾಡಿಬಿಟ್ಟರು. ಆಗ ಬಿರುಗಾಳಿಯು ನಿಂತಿತು. ಸಮುದ್ರವು ಶಾಂತವಾಯಿತು.
16 ಜನರು ಇದನ್ನು ನೋಡಿದಾಗ ಅವರು ಯೆಹೋವನಿಗೆ ಭಯಪಟ್ಟು ಗೌರವಿಸಿದರು. ಅವರು ಆತನಿಗೆ ಯಜ್ಞವನ್ನರ್ಪಿಸಿ ಹರಕೆ ಹಾಕಿಕೊಂಡರು.
17 ಯೋನನು ಸಮುದ್ರದೊಳಗೆ ಬಿದ್ದಾಗ, ಅವನನ್ನು ನುಂಗಿಬಿಡಲು ಯೆಹೋವನು ಒಂದು ದೊಡ್ಡ ಮೀನಿಗೆ ಆಜ್ಞಾಪಿಸಿದನು. ಯೋನನು ಆ ಮೀನಿನ ಹೊಟ್ಟೆಯೊಳಗೆ ಮೂರು ಹಗಲು ಮೂರು ರಾತ್ರಿ ಇದ್ದನು.

Jonah Chapters

×

Alert

×