ಹೆರೋದನು [*ಹೆರೋದ ಜುದೇಯವನ್ನು ಆಳಿದ 1ನೇ ಹೆರೋದನು ಕ್ರಿ.ಪೂ. 40-4.] ಜುದೇಯವನ್ನು ಆಳುತ್ತಿದ್ದ ಕಾಲದಲ್ಲಿ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಜಕರೀಯನು ಅಬೀಯನ ವರ್ಗಕ್ಕೆ [†ಅಬೀಯನ ವರ್ಗ ಯೆಹೂದ್ಯಯಾಜಕರು 24 ವರ್ಗಗಳಾಗಿ ವಿಂಗಡಿಸಲ್ಪಟ್ಟಿದ್ದರು. ನೋಡಿರಿ: 1 ಪೂ.ಕಾ.ವೃ. 24.] ಸೇರಿದವನು. ಜಕರೀಯನ ಹೆಂಡತಿ ಆರೋನನ ಕುಟುಂಬದವಳು. ಆಕೆಯ ಹೆಸರು ಎಲಿಜಬೇತ್.
ಜಕರೀಯನು ಮತ್ತು ಎಲಿಜಬೇತಳು ನಿಜವಾಗಿಯೂ ದೇವರ ದೃಷ್ಟಿಯಲ್ಲಿ ಒಳ್ಳೆಯವರಾಗಿದ್ದರು. ಪ್ರಭುವಿನ (ದೇವರ) ಆಜ್ಞೆಗಳನ್ನೆಲ್ಲಾ ಕೈಕೊಂಡು ನಡೆಯುತ್ತಿದ್ದ ಅವರು, ಅದೇರೀತಿ ಬಾಳಲು ಇತರರಿಗೂ ಉಪದೇಶಿಸುತ್ತಿದ್ದರು. ಅವರು ತಪ್ಪಿಲ್ಲದವರಾಗಿದ್ದರು.
ಯಾಜಕರು ಧೂಪವನು ಅರ್ಪಿಸುವುದಕ್ಕಾಗಿ ತಮ್ಮ ಸಂಪ್ರದಾಯದ ಪ್ರಕಾರ ಚೀಟಿಹಾಕಿ ಒಬ್ಬ ಯಾಜಕನನ್ನು ಆರಿಸುತ್ತಿದ್ದರು. ಈ ಸಲ ಅದು ಜಕರೀಯನ ಪಾಲಿಗೆ ಬಂದಿತು. ಆದ್ದರಿಂದ ಜಕರೀಯನು ಧೂಪ ಅರ್ಪಿಸುವುದಕ್ಕಾಗಿ ಪ್ರಭುವಿನ ಆಲಯದೊಳಗೆ ಹೋದನು.
ಆದರೆ ದೇವದೂತನು ಅವನಿಗೆ, “ಜಕರೀಯನೇ, ಹೆದರಬೇಡ. ನಿನ್ನ ಪ್ರಾರ್ಥನೆ ದೇವರಿಗೆ ಕೇಳಿಸಿತು. ನಿನ್ನ ಹೆಂಡತಿಯಾದ ಎಲಿಜಬೇತಳು ಒಂದು ಗಂಡುಮಗುವನ್ನು ಹೆರುವಳು. ನೀನು ಅವನಿಗೆ ಯೋಹಾನ ಎಂದು ಹೆಸರಿಡಬೇಕು.
ಪ್ರಭುವಿನ ದೃಷ್ಟಿಯಲ್ಲಿ ಯೋಹಾನನು ಮಹಾಪುರುಷನಾಗಿರುವನು. ಅವನು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿಯುವುದಿಲ್ಲ. ಯೋಹಾನನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು. [‡ಪವಿತ್ರಾತ್ಮ ದೇವರ ಆತ್ಮನೆಂತಲೂ ಕ್ರಿಸ್ತನ ಆತ್ಮನೆಂತಲೂ ಸಂತೈಸುವವನೆಂತಲೂ ಕರೆಯಲ್ಪಟ್ಟಿದ್ದಾನೆ. ಆತನು ದೇವರೊಂದಿಗೆ ಮತ್ತು ಕ್ರಿಸ್ತನೊಂದಿಗೆ ಸೇರಿ, ಲೋಕದ ಜನರ ಮಧ್ಯದಲ್ಲಿ ದೇವರ ಕಾರ್ಯವನ್ನು ಮಾಡುತ್ತಾನೆ.]
ಅವನು ಪ್ರಭುವಿಗೆ ಮುಂದೂತನಾಗಿ ಹೋಗುವನು. ಅವನು ಎಲೀಯನ [§ಎಲೀಯ ಸುಮಾರು ಕ್ರಿ.ಪೂ. 850ರಲ್ಲಿ ಜೀವಿಸಿದ್ದ ಪ್ರವಾದಿ.] ಗುಣಶಕ್ತಿಗಳಿಂದ ಕೂಡಿದವನಾಗಿರುವನು; ತಂದೆ ಮತ್ತು ಮಕ್ಕಳ ನಡುವೆ ಸಮಾಧಾನವನ್ನು ಉಂಟುಮಾಡುವನು; ಅವಿಧೇಯರಾದ ಅನೇಕರನ್ನು ನೀತಿವಂತರ ಜ್ಞಾನದ ಕಡೆಗೆ ನಡೆಸುವನು; ಜನರನ್ನು ಪ್ರಭುವಿನ ಆಗಮನಕ್ಕೆ ಸಿದ್ಧಪಡಿಸುವನು” ಎಂದು ಹೇಳಿದನು.
ಈಗ ಕೇಳು! ಈ ಸಂಗತಿಗಳು ನೆರವೇರುವ ತನಕ ನೀನು ಮೂಕನಾಗಿರುವೆ. ಏಕೆಂದರೆ ನೀನು ನನ್ನ ಮಾತನ್ನು ನಂಬಲಿಲ್ಲ. ಆದರೆ ನಾನು ಹೇಳಿದ ಈ ಸಂಗತಿಗಳು ಖಂಡಿತವಾಗಿ ನೆರವೇರುತ್ತವೆ” ಎಂದು ಹೇಳಿದನು.
ಬಳಿಕ ಜಕರೀಯನು ಹೊರಗೆ ಬಂದಾಗ, ಅವನಿಗೆ ಅವರೊಡನೆ ಮಾತಾಡಲಾಗಲಿಲ್ಲ. ಆದ್ದರಿಂದ ಅವನಿಗೆ ದೇವಾಲಯದಲ್ಲಿ ದರ್ಶನವಾಗಿರಬೇಕೆಂದು ಅವರು ತಿಳಿದುಕೊಂಡರು. ಅಂದಿನಿಂದ ಅವನು ಮಾತಾಡಲಾಗದೆ ಕೇವಲ ಸನ್ನೆಗಳ ಮೂಲಕ ತಿಳಿಸುತ್ತಿದ್ದನು.
(26-27) ಎಲಿಜಬೇತಳು ಆರು ತಿಂಗಳ ಗರ್ಭಿಣಿಯಾಗಿದ್ದಾಗ, ದೇವರು ತನ್ನ ದೂತನಾದ ಗಬ್ರಿಯೇಲನನ್ನು ಗಲಿಲೇಯ ಪ್ರಾಂತ್ಯದ ನಜರೇತ್ ಎಂಬ ಊರಿನಲ್ಲಿ ವಾಸಿಸುತ್ತಿದ್ದ ಒಬ್ಬ ಕನ್ಯೆಯ ಬಳಿಗೆ ಕಳುಹಿಸಿದನು. ಆಕೆಗೆ ದಾವೀದನ ಮನೆತನದ ಯೋಸೇಫನೊಂದಿಗೆ ನಿಶ್ಚಿತಾರ್ಥವಾಗಿತ್ತು. ಆಕೆಯ ಹೆಸರು ಮರಿಯಳು.
ದೇವದೂತನು ಮರಿಯಳಿಗೆ, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸುವುದು. ಈ ಕಾರಣದಿಂದ ನಿನ್ನಲ್ಲಿ ಹುಟ್ಟುವ ಈ ಪವಿತ್ರಮಗುವು ‘ದೇವರ ಮಗ’ ಎನಿಸಿಕೊಳ್ಳುವನು.
ಇದಲ್ಲದೆ, ನಿನ್ನ ಬಂಧುವಾದ ಎಲಿಜಬೇತಳು ಗರ್ಭಿಣಿಯಾಗಿದ್ದಾಳೆ. ಆಕೆಯು ಬಹಳ ಮುಪ್ಪಿನವಳಾಗಿದ್ದರೂ ಆಕೆಗೊಬ್ಬ ಮಗ ಹುಟ್ಟುವನು. ಜನರಿಂದ ಬಂಜೆ ಎನಿಸಿಕೊಂಡಿದ್ದ ಆಕೆ ಈಗ ಆರು ತಿಂಗಳ ಗರ್ಭಿಣಿಯಾಗಿದ್ದಾಳೆ.
ಹರ್ಷೋದ್ಗಾರದಿಂದ ಹೀಗೆಂದಳು: “ದೇವರು ನಿನ್ನನ್ನು (ಮರಿಯ) ಬೇರೆಲ್ಲಾ ಸ್ತ್ರೀಯರಿಗಿಂತ ಹೆಚ್ಚಾಗಿ ಆಶೀರ್ವದಿಸಿದ್ದಾನೆ. ನಿನ್ನಲ್ಲಿ ಜನಿಸಲಿರುವ ಮಗುವನ್ನು ದೇವರು ಆಶೀರ್ವದಿಸಿದ್ದಾನೆ.
ಈ ಸಂಗತಿಗಳನ್ನು ಕೇಳಿದ ಜನರೆಲ್ಲರು ಆಶ್ಚರ್ಯಪಟ್ಟು “ಈ ಮಗು (ಯೋಹಾನ) ಬೆಳೆದು ದೊಡ್ಡವನಾದ ಮೇಲೆ ಎಂಥ ವ್ಯಕ್ತಿಯಾಗುವನೋ?” ಎಂದು ಯೋಚಿಸತೊಡಗಿದರು. ಏಕೆಂದರೆ ಪ್ರಭುವು ಈ ಮಗುವಿನ ಸಂಗಡವಿದ್ದನು.