ಆತನು ಶ್ರಮೆಯನ್ನನುಭವಿಸಿದ ಮೇಲೆ ದೃಢವಾದ ಅನೇಕ ಪ್ರಮಾಣಗಳಿಂದ ತಾನು ಜೀವಂತನಾಗಿ ದ್ದನೆಂದು ಅಪೊಸ್ತಲರಿಗೆ ತನ್ನನ್ನು ತೋರಿಸಿಕೊಂಡು ನಾಲ್ವತ್ತು ದಿವಸಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯಕ್ಕೆ ಸಂಬಂಧಪಟ್ಟ ವಿಷಯಗಳನ್ನು ಮಾತನಾಡುತ್ತಿದ್ದನು.
ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.
ಅವರು--ಗಲಿಲಾಯದವರೇ, ನೀವು ಯಾಕೆ ಆಕಾಶದ ಕಡೆಗೆ ದೃಷ್ಟಿಸುತ್ತಾ ನಿಂತಿದ್ದೀರಿ? ನಿಮ್ಮಿಂದ ಪರಲೋಕಕ್ಕೆ ಎತ್ತಲ್ಪಟ್ಟ ಈ ಯೇಸುವು ಯಾವ ರೀತಿಯಿಂದ ಪರಲೋಕದೊಳಗೆ ಹೋಗಿರುವದನ್ನು ನೀವು ಕಂಡಿರೋ ಅದೇ ರೀತಿಯಲ್ಲಿ ಬರುವನು ಎಂದು ಹೇಳಿದರು.
ಪೇತ್ರ, ಯಾಕೋಬ, ಯೋಹಾನ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾ ಯನ ಮಗನಾದ ಯಾಕೋಬ, ಜೆಲೋತನೆಂಬ ಸೀಮೋನ ಮತ್ತು ಯಾಕೋಬನ ಸಹೋದರನಾದ ಯೂದಾ ಇವರು (ಪಟ್ಟಣದ) ಒಳಕ್ಕೆ ಬಂದು ತಾವು ಇರುತ್ತಿದ್ದ ಮೇಲಂತಸ್ತಿನ ಕೊಠಡಿಯೊಳಕ್ಕೆ ಹೋದರು.
ಯಾಕಂ ದರೆ--ಅವನ ನಿವಾಸವು ಹಾಳುಬೀಳಲಿ; ಯಾವ ಮನುಷ್ಯನೂ ಅಲ್ಲಿ ವಾಸಮಾಡದಿರಲಿ; ಇನ್ನು ಅವನ ಅಧ್ಯಕ್ಷತೆಯನ್ನು ಬೇರೊಬ್ಬನು ತೆಗೆದುಕೊಳ್ಳಲಿ ಎಂದು ಕೀರ್ತನೆಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿದೆ.
ಯೂದನು ತನ್ನ ಸ್ವಸ್ಥಳಕ್ಕೆ ಹೋಗುವ ದಕ್ಕಾಗಿ ಅಪರಾಧದ ನಿಮಿತ್ತ ಈ ಸೇವೆಯಿಂದಲೂ ಅಪೊಸ್ತಲತನದಿಂದಲೂ ಬಿದ್ದು ಹೋದನು. ಈಗ ಈ ಸೇವೆಯಲ್ಲಿಯೂ ಅಪೊಸ್ತಲತನದಿಂದಲೂ ಒಬ್ಬನು ಪಾಲುಹೊಂದುವಂತೆ ಈ ಇಬ್ಬರಲ್ಲಿ ಯಾರನ್ನು ನೀನು ಆರಿಸಿಕೊಳ್ಳುತ್ತೀಯೋ ತೋರಿಸು ಎಂದು ಹೇಳಿದರು.