ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನು, ದೇವಾಲಯದ ಕೆಲವು ಪಾತ್ರೆಗಳನ್ನು ಅವನಿಗೆ ಒಪ್ಪಿಸಿದನು. ಅವನು ಅವುಗಳನ್ನು ಶಿನಾರ್ ದೇಶಕ್ಕೂ ತನ್ನ ದೇವರ ಆಲಯಕ್ಕೂ ತಂದು ಪಾತ್ರೆಗಳನ್ನು ತನ್ನ ದೇವರ ಬೊಕ್ಕಸದ ಮನೆಯಲ್ಲಿ ಇರಿಸಿದನು.
ಕಳಂಕ ಇಲ್ಲ ದವರಾಗಿಯೂ ಸುಂದರರಾಗಿಯೂ ಸಕಲ ಜ್ಞಾನದಲ್ಲಿ ಪ್ರವೀಣರಾಗಿಯೂ ತಿಳುವಳಿಕೆಯಲ್ಲಿ ನಿಪುಣರಾ ಗಿಯೂ ಮತ್ತು ವಿಜ್ಞಾನದಲ್ಲಿ ತಿಳುವಳಿಕೆಯುಳ್ಳವ ರಾಗಿಯೂ ಅರಸನ ಅರಮನೆಯಲ್ಲಿ ಸೇವೆಮಾಡಲು ಸಾಮರ್ಥ್ಯವುಳ್ಳವರಾಗಿಯೂ ಇರುವ ಯೌವನಸ್ಥರನ್ನು ತಂದು ಕಸ್ದೀಯರ ವಿದ್ಯೆಯನ್ನೂ ಭಾಷೆಯನ್ನೂ ಅವರಿಗೆ ಬೋಧಿಸಬೇಕೆಂದು ಆಜ್ಞಾಪಿಸಿದನು.
ಅರಸನು ರಾಜ ಭೋಜನದಲ್ಲಿಯೂ ತಾನು ಕುಡಿಯುವ ದ್ರಾಕ್ಷಾರಸ ದಲ್ಲಿಯೂ ಪ್ರತಿದಿನವೂ ಅವರಿಗೆ ಪಾಲನ್ನು ನೇಮಿ ಸಿದನು; ಹೀಗೆ ಅವರು ಮೂರು ವರುಷಗಳ ಕಾಲ ಪೋಷಿಸಲ್ಪಟ್ಟ ಮೇಲೆ ಅರಸನ ಮುಂದೆ ನಿಲ್ಲತಕ್ಕವರಾಗುವರು.
ಆದರೆ ದಾನಿಯೇಲನು ತಾನು ಅರಸನ ಭೋಜನದ ಪಾಲಿನಿಂದಲಾದರೂ ಅವನು ಕುಡಿಯುವ ದ್ರಾಕ್ಷಾರಸದಿಂದಾದರೂ ತನ್ನನ್ನು ಅಶುದ್ಧಪಡಿಸಿಕೊಳ್ಳುವದಿಲ್ಲವೆಂದು ತನ್ನ ಹೃದಯದಲ್ಲಿ ನಿಶ್ಚಯಿಸಿಕೊಂಡನು; ಆದುದರಿಂದ ತಾನು ಅಶುದ್ಧ ವಾಗದ ಹಾಗೆ ಕಂಚುಕಿಯರ ಯಜಮಾನನ್ನು ಬೇಡಿ ಕೊಂಡನು.
ಕಂಚುಕಿಯ ಯಜಮಾ ನನು ಹೇಳಿದ್ದೇನಂದರೆ--ನಿಮ್ಮ ಅನ್ನಪಾನಾದಿಗಳನ್ನು ನೇಮಿಸಿದ ನನ್ನ ಒಡೆಯನಾದ ಅರಸನಿಗೆ ನಾನು ಭಯಪಡುತ್ತೇನೆ; ಅವನು ಯಾಕೆ ನಿಮ್ಮ ಮುಖಗಳನ್ನು ನಿಮ್ಮ ಸ್ಥಿತಿಯಲ್ಲಿಯೇ ಇರುವ ಯೌವನಸ್ಥರಿಗಿಂತ ಕಳೆಗುಂದಿದವುಗಳನ್ನಾಗಿ ನೋಡಬೇಕು? ಈ ಪ್ರಕಾರ ನೀವು ಅರಸನ ಹತ್ತಿರ ನನ್ನ ತಲೆಗೆ ಅಪಾಯವನ್ನು ಬರಮಾಡುತ್ತೀರಿ ಅಂದನು.
ಈ ನಾಲ್ಕು ಯೌವನಸ್ಥರ ವಿಷಯವು: ದೇವರು ಅವರಿಗೆ ಎಲ್ಲಾ ವಿದ್ಯೆಯಲ್ಲಿಯೂ ಜ್ಞಾನದಲ್ಲಿಯೂ ತಿಳುವಳಿಕೆಯನ್ನೂ ವಿವೇಕವನ್ನೂ ಕೊಟ್ಟನು; ದಾನಿಯೇಲನು ಸಕಲ ದರ್ಶನಗಳಲ್ಲಿಯೂ ಕನಸುಗಳಲ್ಲಿಯೂ ತಿಳುವಳಿಕೆ ಯುಳ್ಳವನಾಗಿದ್ದನು.