ಯೆರೆವಿಾಯನ ಮುಖಾಂತರ ಕರ್ತನು ಹೇಳಿದ ವಾಕ್ಯವು ಈಡೇರುವ ಹಾಗೆ ಪಾರಸಿಯ ಅರಸನಾದ ಕೋರೆಷನ ಮೊದಲನೇ ವರುಷದಲ್ಲಿ ಕರ್ತನು ಪಾರಸಿಯ ಅರಸನಾದ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲಿ ಎಲ್ಲೆಲ್ಲಿಯೂ ಸಾರೋಣದಿಂದಲೂ ಬರಹದಿಂದಲೂ ಹೇಳಿದ್ದೇನಂದರೆ--
ಪಾರಸಿಯ ಅರಸನಾದ ಕೋರೆಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾಗಿರುವ ಕರ್ತನು ಭೂಮಿಯ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದಲ್ಲಿರುವ ಯೆರೂಸಲೇಮಿನಲ್ಲಿ ತನಗೆ ಮನೆಯನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ.
ಆತನ ಸಮಸ್ತ ಜನರಾದ ನಿಮ್ಮೊಳಗೆ ಯಾರಿದ್ದೀರಿ? ಅವನ ಸಂಗಡ ಅವನ ದೇವರು ಇರಲಿ. ಅವನು ಯೆಹೂದದಲ್ಲಿ ರುವ ಯೆರೂಸಲೇಮಿಗೆ ಹೋಗಲಿ. ಯೆರೂಸಲೇಮಿನಲ್ಲಿರುವ ಇಸ್ರಾಯೇಲಿನ ದೇವರಾದ ಕರ್ತನ ಆಲಯವನ್ನು ಕಟ್ಟಲಿ (ಆತನೇ ದೇವರು).
ಇದಲ್ಲದೆ ಯಾವ ಸ್ಥಳದಲ್ಲಾದರೂ ಯಾವನಾದರೂ ಪರದೇಶಸ್ಥ ನಾಗಿ ಉಳಿದಿದ್ದರೆ ಅವನ ಸ್ಥಳದ ಮನುಷ್ಯರು ಯೆರೂ ಸಲೇಮಿನಲ್ಲಿರುವ ದೇವರ ಆಲಯಕ್ಕೆ ಕೊಡುವ ಉಚಿತವಾದ ಕಾಣಿಕೆ ಅಲ್ಲದೆ ಅವನಿಗೆ ಬೆಳ್ಳಿಯಿಂದ ಲೂ ಬಂಗಾರದಿಂದಲೂ ವಸ್ತುಗಳಿಂದಲೂ ಪಶುಗ ಳಿಂದಲೂ ಸಹಾಯಮಾಡಲಿ ಅಂದನು.
ಅವರ ಸುತ್ತಲಿರುವವರೆಲ್ಲರೂ ಮನಃ ಪೂರ್ವಕವಾದ ಎಲ್ಲಾ ಕಾಣಿಕೆಗಳ ಹೊರತಾಗಿ ಬೆಳ್ಳಿಯ ಸಾಮಾನು ಗಳಿಂದಲೂ ಬಂಗಾರದಿಂದಲೂ ವಸ್ತುಗಳಿಂದಲೂ ಪಶುಗಳಿಂದಲೂ ಬೆಲೆಯುಳ್ಳವುಗಳಿಂದಲೂ ಅವರಿಗೆ ಸಹಾಯ ಮಾಡಿದರು.