ತರುವಾಯ ದೇವರು--ಭೂಮಿಯು ಹುಲ್ಲನ್ನೂ ಬೀಜಕೊಡುವ ಪಲ್ಯವನ್ನೂ ತನ್ನೊಳಗೆ ಬೀಜವಿದ್ದು ತನ್ನ ಜಾತಿಯ ಪ್ರಕಾರ ಫಲಫಲಿಸುವ ಹಣ್ಣಿನ ಮರವನ್ನೂ ಭೂಮಿಯ ಮೇಲೆ ಮೊಳೆಯಿಸಲಿ ಎಂದು ಹೇಳಿದನು; ಅದು ಹಾಗೆಯೇ ಆಯಿತು.
ಭೂಮಿಯು ಹುಲ್ಲನ್ನೂ ತನ್ನ ಜಾತಿಯ ಪ್ರಕಾರ ಬೀಜಕೊಡುವ ಪಲ್ಯವನ್ನೂ ತನ್ನ ಜಾತಿಯ ಪ್ರಕಾರ ತನ್ನೊಳಗೆ ಬೀಜವಿರುವ ಹಣ್ಣಿನ ಮರವನ್ನೂ ಮೊಳೆ ಯಿಸಿತು. ದೇವರು ಅದನ್ನು ಒಳ್ಳೆಯದೆಂದು ನೋಡಿ ದನು.
ಇದಲ್ಲದೆ ತಮ್ಮ ಜಾತಿಯ ಪ್ರಕಾರ ನೀರುಗಳು ಸಮೃದ್ಧಿಯಾಗಿ ಬರಮಾಡಿದ ದೊಡ್ಡ ತಿಮಿಂಗಿಲಗಳನ್ನೂ ಚಲಿಸುವ ಪ್ರತಿಯೊಂದು ಜೀವ ಜಂತುಗಳನ್ನೂ ತನ್ನ ಜಾತಿಗನುಸಾರವಾದ ರೆಕ್ಕೆಗಳಿದ್ದ ಪ್ರತಿಯೊಂದು ಪಕ್ಷಿಯನ್ನೂ ದೇವರು ಸೃಷ್ಟಿಸಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.
ದೇವರು ಅದರ ಜಾತಿಗನುಸಾರವಾಗಿ ಭೂಮೃಗಗಳನ್ನೂ ಅವುಗಳ ಜಾತಿಗನುಸಾರವಾಗಿ ಪಶುಗಳನ್ನೂ ತನ್ನ ಜಾತಿಗನುಸಾರವಾಗಿ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದನ್ನೂ ಮಾಡಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.
ತರುವಾಯ ದೇವರು--ನಮ್ಮ ರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯನನ್ನು ಮಾಡೋಣ; ಅವರು ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯ ಮೇಲೆಯೂ ದೊರೆತನಮಾಡಲಿ ಅಂದನು.
ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿದನು. ದೇವರು--ಅಭಿವೃದ್ಧಿಯಾಗಿ ಹೆಚ್ಚಿ ಭೂಮಿಯನ್ನು ತುಂಬಿಕೊಂಡು ಅದನ್ನು ವಶಮಾಡಿ ಕೊಳ್ಳಿರಿ; ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಚಲಿಸುವ ಪ್ರತಿಯೊಂದು ಜೀವಿಯ ಮೇಲೆಯೂ ದೊರೆತನಮಾಡಿರಿ ಎಂದು ಅವರಿಗೆ ಹೇಳಿದನು.
ಇದಲ್ಲದೆ ನಾನು ಭೂಮಿಯ ಪ್ರತಿ ಯೊಂದು ಮೃಗಕ್ಕೂ ಆಕಾಶದ ಪ್ರತಿಯೊಂದು ಪಕ್ಷಿಗೂ ಭೂಮಿಯ ಮೇಲೆ ಹರಿದಾಡುವ ಜೀವವುಳ್ಳ ಪ್ರತಿ ಯೊಂದಕ್ಕೂ ಹಸುರಾದ ಪ್ರತಿಯೊಂದು ಪಲ್ಯವನ್ನು ಆಹಾರಕ್ಕಾಗಿ ಕೊಟ್ಟಿದ್ದೇನೆ ಅಂದನು; ಅದು ಹಾಗೆಯೇ ಆಯಿತು.