ಯೆಹೂದದ ಅರಸನಾದ ಯೋಷೀಯನ ಮಗನಾಗಿರುವ ಯೆಹೋಯಾ ಕೀಮನ ದಿನಗಳಲ್ಲಿಯೂ ಕೂಡ ಯೆಹೂದದ ಅರಸ ನಾದ ಯೋಷೀಯನ ಮಗನಾಗಿರುವ ಚಿದ್ಕೀಯನ ಹನ್ನೊಂದನೇ ವರುಷದ ಅಂತ್ಯದ ವರೆಗೂ ಐದನೇ ತಿಂಗಳಲ್ಲಿ ಯೆರೂಸಲೇಮು ಸೆರೆಯಾಗಿ ಒಯ್ಯಲ್ಪಡು ವವರೆಗೂ ಕರ್ತನ ವಾಕ್ಯವು ಉಂಟಾಯಿತು.
ನಾನು ನಿನ್ನನ್ನು ಹೊಟ್ಟೆಯಲ್ಲಿ ನಿರ್ಮಿಸುವದಕ್ಕಿಂತ ಮುಂಚೆ ನಿನ್ನನ್ನು ತಿಳಿದಿದ್ದೆನು. ನೀನು ಗರ್ಭದಿಂದ ಹೊರಗೆ ಬರುವದಕ್ಕಿಂತ ಮುಂಚೆ ನಿನ್ನನ್ನು ಪರಿಶುದ್ಧ ಮಾಡಿದೆನು; ನಿನ್ನನ್ನು ಜನಾಂಗಗಳಿಗೆ ಪ್ರವಾದಿಯನ್ನಾಗಿ ನೇಮಿಸಿದೆನು ಅಂದನು.
ನೋಡು, ನಿನ್ನನ್ನು ಕೀಳುವದಕ್ಕೂ ಕೆಳಗೆ ಹಾಕಿ ಬಿಡುವದಕ್ಕೂ ನಾಶಮಾಡುವದಕ್ಕೂ ಕೆಡವಿಹಾಕುವದಕ್ಕೂ ಕಟ್ಟುವದಕ್ಕೂ ನೆಡುವದಕ್ಕೂ ಜನಾಂಗಗಳ ಮೇಲೆಯೂ ರಾಜ್ಯಗಳ ಮೇಲೆಯೂ ಈ ದಿನ ನಿನ್ನನ್ನು ನೇಮಿಸಿದ್ದೇನೆ ಅಂದನು.
ಇಗೋ, ನಾನು ಉತ್ತರದಲ್ಲಿರುವ ರಾಜ್ಯಗಳ ಕುಟುಂಬಗಳನ್ನೆಲ್ಲಾ ಕರೆಯುತ್ತೇನೆಂದು ಕರ್ತನು ಅನ್ನು ತ್ತಾನೆ; ಅವರು ಬಂದು ತಮ್ಮ ತಮ್ಮ ಸಿಂಹಾಸನಗಳನ್ನು ಯೆರೂಸಲೇಮಿನ ಬಾಗಿಲುಗಳ ಪ್ರವೇಶದಲ್ಲಿಯೂ ಅದರ ಸುತ್ತಲಾಗಿರುವ ಗೋಡೆಗಳಿಗೆ ಎದುರಾಗಿಯೂ ಯೆಹೂದದ ಎಲ್ಲಾ ಪಟ್ಟಣಗಳಿಗೆ ಎದುರಾಗಿಯೂ ಇರಿಸುವರು.
ನನ್ನನ್ನು ಬಿಟ್ಟು ಬೇರೆ ದೇವರುಗಳಿಗೆ ಧೂಪವನ್ನರ್ಪಿಸಿ ತಮ್ಮ ಸ್ವಂತ ಕೈಕೆಲಸಗಳಿಗೆ ಅಡ್ಡಬಿದ್ದಿ ದ್ದಾರೆ. ಅವರ ಎಲ್ಲಾ ಕೆಟ್ಟತನದ ನಿಮಿತ್ತ ಅವರಿಗೆ ವಿರೋಧವಾಗಿ ನನ್ನ ನ್ಯಾಯತೀರ್ಪುಗಳನ್ನು ನುಡಿಯು ವೆನು.
ಆದದರಿಂದ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಅವರ ಸಂಗಡ ಮಾತನಾಡು; ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಂದ ನಿರಾಶೆಪಡಬೇಡ.
ಇಗೋ, ಸಮಸ್ತ ದೇಶಕ್ಕೆ ವಿರೋಧವಾಗಿ ಯೆಹೂದದ ಅರಸರಿಗೆ ವಿರೋಧ ವಾಗಿಯೂ ಅದರ ಪ್ರಧಾನರಿಗೆ ವಿರೋಧವಾಗಿಯೂ ಅದರ ಯಾಜಕರಿಗೆ ವಿರೋಧವಾಗಿಯೂ ದೇಶದ ಜನರಿಗೆ ವಿರೋಧವಾಗಿಯೂ ನಾನೇ ಈ ಹೊತು ನಿನ್ನನ್ನು ಕೋಟೆಯುಳ್ಳ ಪಟ್ಟಣವಾಗಿಯೂ ಕಬ್ಬಿಣದ ಸ್ತಂಭವಾಗಿಯೂ ಹಿತ್ತಾಳೆಯ ಗೋಡೆಗಳಾಗಿಯೂ ಮಾಡಿದ್ದೇನೆ.