ಯೂದನು ತನ್ನ ಸಹೋದರನಾದ ಸಿಮೆಯೋನನಿಗೆ--ನೀನು ನನ್ನ ಸಂಗಡ ನನ್ನ ಭಾಗಕ್ಕೆ ಬಾ, ಕಾನಾನ್ಯರ ಮೇಲೆ ಯುದ್ಧಮಾಡೋಣ; ನಾನು ಹಾಗೆಯೇ ನಿನ್ನ ಸಂಗಡ ನಿನ್ನ ಭಾಗಕ್ಕೆ ಬರುವೆನು ಅಂದನು. ಹೀಗೆ ಸಿಮೆಯೋನನು ಅವನ ಸಂಗಡ ಹೋದನು.
ಆಗ ಅದೋನೀಬೆಜೆಕನು--ನಾನು ಕೈಕಾಲು ಗಳ ಹೆಬ್ಬೆರಳುಗಳನ್ನು ಕತ್ತರಿಸಿದ ಎಪ್ಪತ್ತು ಮಂದಿ ಅರಸುಗಳು ನನ್ನ ಮೇಜಿನ ಕೆಳಗೆ ತಮ್ಮ ಆಹಾರ ವನ್ನು ಕೂಡಿಸಿದರು; ನಾನು ಹೇಗೆ ಮಾಡಿದೆನೋ ಹಾಗಾಯೇ ದೇವರು ನನಗೆ ಮುಯ್ಯಿಗೆ ಮುಯ್ಯಿಮಾಡಿದ್ದಾನೆ ಅಂದನು. ಅವನನ್ನು ಯೆರೂಸಲೇಮಿಗೆ ತಕ್ಕೊಂಡು ಬಂದರು; ಅವನು ಅಲ್ಲಿ ಸತ್ತನು.
ಅವಳು ಅವನಿಗೆ--ನನಗೆ ಆಶೀರ್ವಾದಕೊಡು; ನೀನು ದಕ್ಷಿಣ ಭೂಮಿಯನ್ನು ನನಗೆ ಕೊಟ್ಟುಬಿಟ್ಟೆ ಯಲ್ಲಾ, ನೀರು ಬುಗ್ಗೆಗಳನ್ನು ಸಹ ಕೊಡು ಅಂದಳು. ಕಾಲೇಬನು ಮೇಲಿನ ಬುಗ್ಗೆಗಳನ್ನೂ ಕೆಳಗಿನ ಬುಗ್ಗೆಗಳನ್ನೂ ಅವಳಿಗೆ ಕೊಟ್ಟನು.
ಯೆಹೂದ್ಯರು ತಮ್ಮ ಸಹೋದರರಾದ ಸಿಮೆ ಯೋನ್ಯರ ಸಂಗಡ ಹೊರಟು ಚೆಫತ್‌ನಲ್ಲಿ ವಾಸವಾಗಿ ರುವ ಕಾನಾನ್ಯರನ್ನು ಕೊಂದು ಆ ಪಟ್ಟಣವನ್ನು ನಿರ್ಮೂಲ ಮಾಡಿದರು. ಆ ಪಟ್ಟಣವು ಹೋರ್ಮಾ ಎಂದು ಕರೆಯಲ್ಪಟ್ಟಿತು.
ಮನಸ್ಸೆಯವರು ಬೇತ್‌ಷೆಯಾನ್ ತಾನಾಕ್ ದೋರ್ ಇಬ್ಲೆಯಾಮ್ ಮೆಗಿದ್ದೋ ಎಂಬ ಪಟ್ಟಣ ಗಳನ್ನು ಅವುಗಳ ಗ್ರಾಮಗಳನ್ನು ಸ್ವಾಧೀನಮಾಡಿ ಕೊಳ್ಳಲಿಲ್ಲ. ಆದದರಿಂದ ಕಾನಾನ್ಯರು ಆ ಪ್ರಾಂತ ಗಳಲ್ಲೇ ವಾಸಿಸುವದಕ್ಕೆ ದೃಢಮಾಡಿದರು.
ನಫ್ತಾಲ್ಯರು ಬೇತ್‌ಷೆಮೆಷಿನ ವಾಸಿಗಳನ್ನೂ ಬೇತ ನಾತಿನ ವಾಸಿಗಳನ್ನೂ ಹೊರಡಿಸಿಬಿಡದೆ ಆ ದೇಶ ವಾಸಿಗಳಾದ ಕಾನಾನ್ಯರ ಮಧ್ಯದಲ್ಲಿ ವಾಸಿಸಿದ್ದರು. ಆದರೆ ಬೇತ್‌ಷೆಮೆಷ್ ಬೇತನಾತನ ಪಟ್ಟಣವಾಸಿಗಳು ಅವರಿಗೆ ಕಪ್ಪಕೊಡುವವರಾದರು.
ಹೀಗೆಯೇ ಅಮೋರಿಯರ ಮೇರೆಯು ಅಕ್ರಬ್ಬೀಮು ಹಿಡಿದು ಬಂಡೆಯಿಂದ ಮೇಲ್ಗಡೆಗೆ ಹಾದುಹೋಗುವದಾಗಿತ್ತು. 1 ಯೆಹೋಶುವನು ಸತ್ತ ತರುವಾಯ ಆದದ್ದೇನಂದರೆ, ಇಸ್ರಾಯೇಲ್ ಮಕ್ಕಳು ಕರ್ತನಿಗೆ--ಕಾನಾನ್ಯರ ಮೇಲೆ ಮೊದಲು ನಮಗಾಗಿ ಯುದ್ಧಕ್ಕೆ ಹೋಗುವವರು ಯಾರು ಎಂದು ಕೇಳಿದರು.