English Bible Languages

Indian Language Bible Word Collections

Bible Versions

English

Tamil

Hebrew

Greek

Malayalam

Hindi

Telugu

Kannada

Gujarati

Punjabi

Urdu

Bengali

Oriya

Marathi

Books

Zechariah Chapters

1 ದಾರ್ಯಾವೆಷನ ಎರಡನೆಯ ವರುಷದ ಎಂಟನೆಯ ತಿಂಗಳಲ್ಲಿ ಕರ್ತನ ವಾಕ್ಯವು ಇದ್ದೋನನ ಮಗನಾದ ಬೆರಕ್ಯನ ಮಗನಾದ ಜೆಕರ್ಯ ನೆಂಬ ಪ್ರವಾದಿಗೆ ಉಂಟಾಯಿತು. ಹೇಗಂದರೆ--
2 ಕರ್ತನು ನಿಮ್ಮ ಪಿತೃಗಳ ಮೇಲೆ ಬಹು ಕೋಪಗೊಂಡಿ ದ್ದಾನೆ.
3 ಆದದರಿಂದ ನೀನು ಅವರಿಗೆ ಹೇಳತಕ್ಕದ್ದೇ ನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಕಡೆಗೆ ತಿರುಗಿ ಕೊಳ್ಳಿರಿ, ಆಗ ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
4 ನೀವು ನಿಮ್ಮ ಪಿತೃಗಳ ಹಾಗಿರಬೇಡಿರಿ; ಅವರಿಗೆ ಪೂರ್ವದ ಪ್ರವಾದಿಗಳು ಕೂಗಿ--ನಿಮ್ಮ ಕೆಟ್ಟ ಮಾರ್ಗಗಳನ್ನೂ ನಿಮ್ಮ ಕೆಟ್ಟ ಕ್ರಿಯೆಗಳನ್ನೂ ಬಿಟ್ಟು ತಿರುಗಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆಂದು ಹೇಳಿದರು; ಆದರೆ ಅವರು ಕೇಳಲಿಲ್ಲ; ನನ್ನಲ್ಲಿ ಲಕ್ಷ್ಯ ವಿಡಲಿಲ್ಲವೆಂದು ಕರ್ತನು ಅನ್ನುತ್ತಾನೆ.
5 ನಿಮ್ಮ ಪಿತೃ ಗಳೋ, ಅವರು ಎಲ್ಲಿ? ಪ್ರವಾದಿಗಳು, ಅವರು ನಿತ್ಯವಾಗಿ ಬದುಕುತ್ತಾರೋ?
6 ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯ ಗಳೂ ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿ ಲ್ಲವೋ? ಆಗ ಅವರು ತಿರುಗಿಕೊಂಡು--ಸೈನ್ಯಗಳ ಕರ್ತನು ಯೋಚಿಸಿದ ಹಾಗೆಯೇ ನಮ್ಮ ಮಾರ್ಗಗಳ ಪ್ರಕಾರವಾಗಿಯೂ ನಮ್ಮ ಕ್ರಿಯೆಗಳ ಪ್ರಕಾರವಾ ಗಿಯೂ ನಮಗೆ ಮಾಡಿದ್ದಾನೆಂದು ಹೇಳಿದರು ಎಂಬದು.
7 ದಾರ್ಯಾವೆಷನ ಎರಡನೆಯ ವರುಷದ ಹನ್ನೊಂ ದನೆ ತಿಂಗಳಾದ ಶೆಬಾಟ್‌ ಎಂಬ ತಿಂಗಳಿನ ಇಪ್ಪತ್ತ ನಾಲ್ಕನೆಯ ದಿನದಲ್ಲಿ ಕರ್ತನ ವಾಕ್ಯವು ಇದ್ದೋನಿನ ಮಗನಾದ ಬೆರೆಕ್ಯನ ಮಗನಾದ ಪ್ರವಾದಿಯಾದ ಜೆಕರ್ಯನಿಗೆ ಉಂಟಾಯಿತು. ಹೇಗೆಂದರೆ,
8 ನಾನು ರಾತ್ರಿಯಲ್ಲಿ ನೋಡಿದಾಗ ಇಗೋ, ಕೆಂಪು ಕುದುರೆಯ ಮೇಲೆ ಸವಾರಿ ಮಾಡುವ ಒಬ್ಬ ಮನುಷ್ಯನು; ಅವನು ತಗ್ಗಿನಲ್ಲಿದ್ದ ಗಂಧದ ಗಿಡಗಳ ನಡುವೆ ನಿಂತಿದ್ದನು; ಅವನ ಹಿಂದೆ ಕೆಂಪು ಕಪಿಲ ಬಿಳೀ ಕುದುರೆಗಳು ಇದ್ದವು.
9 ಆಗ ನಾನು--ಓ ನನ್ನ ಒಡೆಯನೇ, ಇವೇನು ಅಂದೆನು. ಆಗ ನನ್ನ ಸಂಗಡ ಮಾತನಾಡಿದ ದೂತ ನು--ಇವೇನೆಂದು ನಿನಗೆ ತೋರಿಸುತ್ತೇನೆ ಅಂದೆನು.
10 ಆಗ ಗಂಧದ ಗಿಡಗಳ ನಡುವೆ ನಿಂತ ಮನುಷ್ಯನು ಉತ್ತರಕೊಟ್ಟು ಹೇಳಿದ್ದೇನಂದರೆ--ಇವರು ಭೂಮಿ ಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ ನಡೆದಾಡುವದಕ್ಕೆ ಕರ್ತನು ಕಳುಹಿಸಿದವರು ಅಂದನು.
11 ಆಗ ಅವರು ಗಂಧದ ಗಿಡಗಳ ನಡುವೆ ನಿಂತ ಕರ್ತನ ದೂತನಿಗೆ ಉತ್ತರಕೊಟ್ಟು ಹೇಳಿದ್ದೇನಂದರೆ -- ಭೂಮಿಯಲ್ಲಿ ಇತ್ತಿಂದ ಅತ್ತ ಅತ್ತಿಂದ ಇತ್ತ ನಡೆದಾಡಿದ್ದೇವೆ; ಇಗೋ, ಭೂಮಿಯೆಲ್ಲಾ ಸುಮ್ಮನಿದ್ದು ಶಾಂತಿಯಾಗಿದೆ ಅಂದರು.
12 ಆಗ ಕರ್ತನ ದೂತನು ಉತ್ತರಕೊಟ್ಟು ಹೀಗಂ ದನು--ಓ ಸೈನ್ಯಗಳ ಕರ್ತನೇ, ನೀನು ಯೆರೂಸಲೇ ಮನ್ನೂ ಯೆಹೂದದ ಪಟ್ಟಣಗಳನ್ನೂ ಎಷ್ಟರ ವರೆಗೆ ಕನಿಕರಿಸದೆ ಇರುವಿ? ಅವುಗಳ ಮೇಲೆ ಈ ಎಪ್ಪತ್ತು ವರುಷಗಳು ಸಿಟ್ಟು ಮಾಡಿದ್ದೀಯಲ್ಲವೋ ಅಂದನು.
13 ಆಗ ಕರ್ತನು ನನ್ನ ಸಂಗಡ ಮಾತನಾಡಿದ ದೂತನಿಗೆ ಒಳ್ಳೇ ಮಾತುಗಳಿಂದಲೂ ಆದರಣೆಯ ಮಾತು ಗಳಿಂದಲೂ ಉತ್ತರಕೊಟ್ಟನು.
14 ನನ್ನ ಸಂಗಡ ಮಾತ ನಾಡಿದ ದೂತನು ನನಗೆ ಹೇಳಿದ್ದೇನಂದರೆ--ಕೂಗಿ ಹೇಳು; ಏನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಾನು ಯೆರೂಸಲೇಮಿಗಾಗಿಯೂ ಚೀಯೋನಿ ಗಾಗಿಯೂ ಬಹುರೋಷವುಳ್ಳವನಾಗಿದ್ದೇನೆ.
15 ನಿಶ್ಚಿಂತೆ ಯುಳ್ಳವರಾಗಿರುವ ಅನ್ಯಜನಾಂಗದ ಮೇಲೆ ನಾನು ಬಹಳ ಕೋಪಿಸಿಕೊಂಡಿದ್ದೇನೆ. ನಾನು ಸ್ವಲ್ಪ ಕೋಪ ಮಾಡಿಕೊಂಡಾಗ ಅವರು ಸಂಕಟಕ್ಕೆ ಸಹಾಯಮಾಡಿ ದರು.
16 ಆದದರಿಂದ ಕರ್ತನು ಹೀಗೆ ಹೇಳುತ್ತಾನೆ --ನಾನು ಕನಿಕರದಿಂದ ಯೆರೂಸಲೇಮಿನ ಕಡೆಗೆ ತಿರುಗಿಕೊಂಡಿದ್ದೇನೆ; ನನ್ನ ಆಲಯವು ಅದರಲ್ಲಿ ಕಟ್ಟ ಲ್ಪಡುವದೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಯೆರೂ ಸಲೇಮಿನ ಮೇಲೆ ಅಳತೆ ನೂಲು ಚಾಚಲ್ಪಡುವದು.
17 ಇನ್ನೂ ಕೂಗಿ ಹೇಳು, ಏನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಪಟ್ಟಣಗಳು ಇನ್ನು ಅಭಿವೃದ್ಧಿಯಾಗಿ ಹರಡುವವು; ಕರ್ತನು ಚೀಯೋನನ್ನು ಇನ್ನು ಆದರಿಸುವನು; ಯೆರೂಸಲೇಮನ್ನು ಇನ್ನು ಆದುಕೊಳ್ಳುವನು.
18 ನಾನು ನನ್ನ ಕಣ್ಣುಗಳನ್ನು ಎತ್ತಿದಾಗ ಇಗೋ, ನಾಲ್ಕು ಕೊಂಬುಗಳನ್ನು ನೋಡಿದೆನು.
19 ಆಗ ನನ್ನ ಕೂಡ ಮಾತನಾಡಿದ ದೂತನಿಗೆ ನಾನು--ಇದೇನು ಅಂದೆನು. ಅದಕ್ಕೆ ಅವನು ನನಗೆ ಉತ್ತರಕೊಟ್ಟು--ಇವು ಯೆಹೂದವನ್ನೂ ಇಸ್ರಾಯೇಲನ್ನೂ ಯೆರೂಸ ಲೇಮನ್ನೂ ಚದರಿಸಿದ ಕೊಂಬುಗಳು ಅಂದನು.
20 ಆಗ ಕರ್ತನು ನನಗೆ ನಾಲ್ಕು ಬಡಗಿಯವರನ್ನು ತೋರಿಸಿದನು.
21 ಆಗ ನಾನು--ಇವರು ಏನು ಮಾಡುವದಕ್ಕೆ ಬರುತ್ತಾರೆ ಅಂದೆನು. ಅದಕ್ಕೆ ಆತನು ಮಾತನಾಡಿ ಹೇಳಿದ್ದೇನಂದರೆ--ಯಾವನಾದರೂ ತಲೆಯನ್ನು ಎತ್ತದ ಹಾಗೆ ಯೆಹೂದವನ್ನು ಚದರಿಸಿದ ಕೊಂಬುಗಳು. ಆದರೆ ಇವರು ಅವರನ್ನು ಹೆದರಿಸಿ ಯೆಹೂದ ದೇಶದ ಮೇಲೆ ಅದನ್ನು ಚದರಿಸುವದಕ್ಕೆ ಕೊಂಬನ್ನು ಎತ್ತಿದ ಅನ್ಯಜನಾಂಗಗಳ ಕೊಂಬುಗಳನ್ನು ಕೆಳಗೆ ಹಾಕುವದಕ್ಕೆ ಬಂದಿದ್ದಾರೆ ಅಂದನು.
×

Alert

×