1
|
ಸಹೋದರರೇ, ಆತ್ಮಿಕ ವರಗಳನ್ನು ಕುರಿತು ನಿಮಗೆ ತಿಳಿಯದಿರಬಾರದೆಂದು ನಾನು ಅಪೇಕ್ಷಿಸುತ್ತೇನೆ. |
2
|
ನೀವು ಅನ್ಯರಾಗಿದ್ದಾಗ ನಿಮಗೆ ಪ್ರೇರಣೆಯಾದ ಹಾಗೆ ಮೂಕವಿಗ್ರಹಗಳ ಬಳಿಗೆ ಹೋಗುತ್ತಿದ್ದಿರೆಂದು ಬಲ್ಲಿರಿ. |
3
|
ಹೀಗಿರುವದರಿಂದ ನಾನು ನಿಮಗೆ ತಿಳಿಸುವದೇನಂದರೆ, ದೇವರಾತ್ಮನಿಂದ ಮಾತನಾಡುವ ಯಾವ ಮನುಷ್ಯನಾದರೂ ಯೇಸು ವನ್ನು ಶಾಪಗ್ರಸ್ತನೆಂದು ಹೇಳುವದಿಲ್ಲ; ಪವಿತ್ರಾತ್ಮ ನಿಂದಲೇ ಹೊರತು ಯಾವ ಮನುಷ್ಯನಾದರೂ ಯೇಸುವನ್ನು ಕರ್ತನೆಂದು ಹೇಳಲಾರನು. |
4
|
ವರಗಳಲ್ಲಿ ಬೇರೆ ಬೇರೆ ವಿಧಗಳುಂಟು. ಆದರೆ ಆತ್ಮನು ಒಬ್ಬನೇ; |
5
|
ಸೇವೆಗಳಲ್ಲಿ ಬೇರೆ ಬೇರೆ ವಿಧ ಗಳುಂಟು, ಆದರೆ ಕರ್ತನು ಒಬ್ಬನೇ; |
6
|
ಾರ್ಯಗಳಲ್ಲಿ ಬೇರೆ ಬೇರೆ ವಿಧಗಳುಂಟು, ಆದರೆ ಸರ್ವರಲ್ಲಿಯೂ ಸರ್ವಕಾರ್ಯಗಳನ್ನು ಸಾಧಿಸುವ ದೇವರು ಒಬ್ಬನೇ. |
7
|
ಆದರೆ ಪವಿತ್ರಾತ್ಮನ ಪ್ರಕಟನೆಯು ಪ್ರತಿಯೊಬ್ಬನ ಪ್ರಯೋಜನಕ್ಕಾಗಿ ಕೊಡಲ್ಪಟ್ಟಿದೆ. |
8
|
ಹೇಗಂದರೆ ಒಬ್ಬನಿಗೆ ಆತ್ಮನ ಮೂಲಕ ಜ್ಞಾನವಾಕ್ಯವು, ಒಬ್ಬನಿಗೆ ಅದೇ ಆತ್ಮನಿಗೆ ಅನುಗುಣವಾಗಿ ತಿಳುವಳಿಕೆಯ ವಾಕ್ಯವು, |
9
|
ಬೇರೊಬ್ಬನಿಗೆ ಆ ಆತ್ಮನಿಂದಲೇ ನಂಬಿಕೆಯು, ಮತ್ತೊಬ್ಬನಿಗೆ ಆ ಆತ್ಮನಿಂದಲೇ ರೋಗ ಗಳನ್ನು ವಾಸಿಮಾಡುವ ವರಗಳು, |
10
|
ಒಬ್ಬನಿಗೆ ಮಹತುಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಮತ್ತೊಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವು, ಇನ್ನೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಮತ್ತೊಬ್ಬನಿಗೆ ಭಾಷೆಗಳ ಅರ್ಥವನ್ನು ಹೇಳುವ ವರವು ಕೊಡಲ್ಪಡುತ್ತದೆ. |
11
|
ಆದರೆ ಈ ಎಲ್ಲಾ ಕಾರ್ಯ ಗಳನ್ನು ಮಾಡುವ ಆ ಒಬ್ಬ ಆತ್ಮನೇ ತನ್ನ ಚಿತ್ತಾನು ಸಾರವಾಗಿ ಒಬ್ಬೊಬ್ಬನಿಗೆ ಹಂಚಿಕೊಡುತ್ತಾನೆ. |
12
|
ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ಆ ದೇಹದ ಅಂಗಗಳೆಲ್ಲವು ಅನೇಕವಾಗಿದ್ದು ಒಂದೇ ದೇಹವಾಗಿ ರುವದೋ, ಹಾಗೆಯೇ ಕ್ರಿಸ್ತನು ಇದ್ದಾನೆ. |
13
|
ಯೆಹೂದ್ಯರಾಗಲಿ ಅನ್ಯರಾಗಲಿ ದಾಸರಾಗಲಿ ಸ್ವತಂತ್ರರಾಗಲಿ ನಾವೆಲ್ಲರು ಒಂದೇ ದೇಹವಾಗು ವದಕ್ಕಾಗಿ ಒಬ್ಬನೇ ಆತ್ಮನಿಂದ ಬಾಪ್ತಿಸ್ಮ ಮಾಡಿಸಿ ಕೊಂಡೆವು; ಆ ಒಬ್ಬನೇ ಆತ್ಮನು ನಮ್ಮೆಲ್ಲರಿಗೂ ಪಾನವಾಗಿ ಕೊಡಲ್ಪಟ್ಟಿದ್ದಾನೆ. |
14
|
ದೇಹವು ಒಂದೇ ಅಂಗವಲ್ಲ, ಆದರೆ ಅದು ಅನೇಕ ಅಂಗಗಳುಳ್ಳದ್ದಾಗಿದೆ. |
15
|
ಕಾಲು--ನಾನು ಕೈಯಲ್ಲದ ಕಾರಣ ದೇಹಕ್ಕೆ ಸೇರಲಿಲ್ಲವೆಂದು ಹೇಳಿದರೂ ಅದು ದೇಹಕ್ಕೆ ಸೇರದೆ ಇರುವದೋ? |
16
|
ಕಿವಿ--ನಾನು ಕಣ್ಣಲ್ಲದ ಕಾರಣ ದೇಹಕ್ಕೆ ಸೇರಲಿಲ್ಲವೆಂದು ಹೇಳಿದರೂ ಅದು ದೇಹಕ್ಕೆ ಸೇರದೆ ಇರುವದೋ? |
17
|
ದೇಹವೆಲ್ಲಾ ಕಣ್ಣಾದರೆ ಕೇಳುವದೆಲ್ಲಿ? ಅದೆಲ್ಲಾ ಕೇಳುವದಾದರೆ ಮೂಸಿ ನೋಡುವದೆಲ್ಲಿ? |
18
|
ಆದರೆ ದೇವರು ಆ ಅಂಗಗಳಲ್ಲಿ ಪ್ರತಿಯೊಂದನ್ನು ತನ್ನ ಇಷ್ಟಾನುಸಾರವಾಗಿ ದೇಹದಲ್ಲಿ ಇಟ್ಟಿದ್ದಾನೆ. |
19
|
ಅವೆಲ್ಲವೂ ಒಂದೇ ಅಂಗವಾಗಿದ್ದರೆ ದೇಹವೆಲ್ಲಿರುವದು? |
20
|
ಆದರೆ ಅಂಗಗಳೇನೋ ಅನೇಕ, ದೇಹವು ಒಂದೇ. |
21
|
ಕಣ್ಣು ಕೈಗೆ--ನೀನು ನನಗೆ ಅವಶ್ಯವಿಲ್ಲವೆಂದೂ ತಲೆಯು ಕಾಲು ಗಳಿಗೆ--ನೀವು ನನಗೆ ಅವಶ್ಯವಿಲ್ಲವೆಂದೂ ಹೇಳುವದ ಕ್ಕಾಗುವದಿಲ್ಲ. |
22
|
ಹೌದು, ಶರೀರದ ಅಂಗಗಳು ಬಹಳ ಬಲಹೀನವಾದವುಗಳೆಂದು ಕಂಡರೂ ಹೆಚ್ಚಾಗಿ ಅವಶ್ಯ ವಾಗಿವೆ. |
23
|
ಇದಲ್ಲದೆ ಅಲ್ಪ ಮಾನವುಳ್ಳವುಗಳೆಂದು ನಾವು ಎಣಿಸುವ ದೇಹದ ಅಂಗಗಳಿಗೆ ಹೆಚ್ಚಾದ ಗೌರವವನ್ನು ಕೊಡುತ್ತೇವೆ. ಆಗ ಅಂದವಿಲ್ಲದ ನಮ್ಮ ಅಂಗಗಳು ಹೆಚ್ಚು ಅಂದವಾಗಿರುತ್ತವೆ. |
24
|
ಅಂದವುಳ್ಳ ನಮ್ಮ ಅಂಗಗಳಿಗೆ ಯಾವ ಅವಶ್ಯಕತೆಯೂ ಇರುವದಿಲ್ಲ; ಆದರೆ ದೇವರು ಕೊರತೆಯುಳ್ಳ ಅಂಗ ವನ್ನು ಹೆಚ್ಚಾಗಿ ಗೌರವಿಸಿ ದೇಹವನ್ನು ಹದವಾಗಿ ಜೋಡಿಸಿದ್ದಾನೆ. |
25
|
ಹೀಗೆ ದೇಹದಲ್ಲಿ ಭೇದವಿರದೆ ಅಂಗಗಳು ಒಂದಕ್ಕೊಂದು ಚಿಂತಿಸುವವುಗಳಾಗಿ ರುತ್ತವೆ. |
26
|
ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ; ಇಲ್ಲವೆ ಒಂದು ಅಂಗಕ್ಕೆ ಮರ್ಯಾದೆ ಬಂದರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ. |
27
|
ಈಗ ನೀವು ಕ್ರಿಸ್ತನ ದೇಹವಾಗಿದ್ದು ವಿಶೇಷ ವಾಗಿ ಅಂಗಗಳಾಗಿದ್ದೀರಿ. |
28
|
ದೇವರು ಕೆಲವರನ್ನು ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಉಪದೇಶಕರನ್ನು ಇಟ್ಟಿದ್ದಾನೆ; ಆಮೇಲೆ ಮಹತ್ಕಾರ್ಯ ಗಳನ್ನೂ ವಾಸಿಮಾಡುವ ವರಗಳನ್ನೂ ಸಹಾಯ ಮಾಡುವದನ್ನೂ ಕಾರ್ಯಗಳನ್ನು ನಿರ್ವಹಿಸುವದನ್ನೂ ವಿವಿಧ ಭಾಷೆಗಳನಾ |
29
|
ಎಲ್ಲರೂ ಅಪೊಸ್ತಲರೋ? ಎಲ್ಲರೂ ಪ್ರವಾದಿ ಗಳೋ? ಎಲ್ಲರೂ ಉಪದೇಶಕರೋ? ಎಲ್ಲರೂ ಮಹತ್ಕಾರ್ಯಗಳನ್ನು ಮಾಡುವವರೋ? |
30
|
ವಾಸಿ ಮಾಡುವ ವರಗಳು ಎಲ್ಲರಿಗೂ ಉಂಟೋ? ಎಲ್ಲರೂ ಭಾಷೆಗಳನ್ನಾಡುವರೋ? ಭಾಷೆಗಳ ಅರ್ಥವನ್ನು ಎಲ್ಲರೂ ಹೇಳುವರೋ? |
31
|
ಆದರೆ ಶ್ರೇಷ್ಠ ವರಗಳನ್ನು ಆಸಕ್ತಿಯಿಂದ ಅಪೇಕ್ಷಿಸಿರಿ. ಆದಾಗ್ಯೂ ನಾನು ನಿಮಗೆ ಉತ್ಕೃಷ್ಟವಾದ ಮಾರ್ಗವನ್ನು ತೋರಿಸುತ್ತೇನೆ. |
1-Corinthians 12:30 English Language Bible Words basic statistical display
COMING SOON ...