ಇದಲ್ಲದೆ ನೀನು ನಿನ್ನ ಕೈಯಲ್ಲಿ ಹತ್ತು ರೊಟ್ಟಿಗಳನ್ನೂ ಭಕ್ಷ್ಯಗಳನ್ನೂ ಒಂದು ಮಡಕೆ ಜೇನು ತುಪ್ಪವನ್ನೂ ತೆಗೆದುಕೊಂಡು ಅವನ ಬಳಿಗೆ ಹೋಗು. ಅವನು ಮಗುವಿಗೆ ಆಗುವದನ್ನು ನಿನಗೆ ತಿಳಿಸುವನು ಅಂದನು.
ಆದರೆ ಕರ್ತನು ಅಹೀಯನಿಗೆಇಗೋ, ಯಾರೊಬ್ಬಾಮನ ಪತ್ನಿಯು ತನ್ನ ಮಗನಿ ಗೋಸ್ಕರ ನಿನ್ನನ್ನು ವಿಚಾರಿಸುವುದಕ್ಕಾಗಿ ಬರುತ್ತಾಳೆ. ಯಾಕಂದರೆ ಅವನು ರೋಗದಲ್ಲಿದ್ದಾನೆ. ನೀನು ಅವ ಳಿಗೆ ಹೀಗೆ ಹೇಳು, ಅವಳು ಒಳಗೆ ಬರುವಾಗ ಮತ್ತೊ ಬ್ಬಳ ಹಾಗೆ ವೇಷ ಹಾಕಿಕೊಂಡು ಬರುವಳು ಅಂದನು.
ಅವಳು ಬಾಗಲಲ್ಲಿ ಪ್ರವೇಶಿಸುವಾಗ ಅಹೀಯನು ಅವಳ ಪಾದಗಳ ಶಬ್ದವನ್ನು ಕೇಳುತ್ತಲೇ--ಯಾರೊ ಬ್ಬಾಮನ ಪತ್ನಿಯೇ ಒಳಗೆ ಬಾ; ನೀನು ಮತ್ತೊಬ್ಬಳೆಂದು ತೋರಮಾಡುವದು ಯಾಕೆ? ಕಠಿಣವಾದ ಮಾತು ಗಳನ್ನು ತಿಳಿಸಲು ನನಗೆ ಅಪ್ಪಣೆಯಾಗಿದೆ.
ನೀನು ಹೋಗಿ ಯಾರೊಬ್ಬಾಮನಿಗೆ ಹೇಳಬೇಕಾದದ್ದು-- ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇ ನಂದರೆ--ನಾನು ಜನರೊಳಗಿಂದ ಎತ್ತಿ, ನಿನ್ನನ್ನು ಹೆಚ್ಚಿಸಿ ನನ್ನ ಜನರಾದ ಇಸ್ರಾಯೇಲ್ಯರ ಮೇಲೆ ನಾಯಕನಾಗ ಮಾಡಿ ದಾವೀದನ ಮನೆಯಿಂದ ರಾಜ್ಯವನ್ನು ಕಿತ್ತು ಕೊಂಡು ನಿನಗೆ ಕೊಟ್ಟೆನು.
ಆದರೆ ನನ್ನ ಆಜ್ಞೆಗಳನ್ನು ಕೈಕೊಂಡು ನನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದದ್ದನ್ನು ಮಾಡಿ ತನ್ನ ಸಂಪೂರ್ಣವಾದ ಹೃದಯದಿಂದ ನನ್ನನ್ನು ಹಿಂಬಾಲಿಸಿದ ನನ್ನ ಸೇವಕನಾದ ದಾವೀದನ ಹಾಗೆ ನೀನು ಇರದೆ ನಿನಗೆ ಮುಂಚೆ ಇದ್ದವರೆಲ್ಲರಿಗಿಂತ ಕೆಟ್ಟದ್ದನ್ನು ಮಾಡಿದಿ.
ಆದದರಿಂದ ಇಗೋ, ನಾನು ಯಾರೊಬ್ಬಾಮನ ಮನೆಯ ಮೇಲೆ ಕೇಡನ್ನು ಬರಮಾಡಿ ಯಾರೊಬ್ಬಾಮನ ಕಡೆಯಿಂದ ಸಮಸ್ತ ಗಂಡಸರನ್ನೂ ಇಸ್ರಾಯೇಲಿನಲ್ಲಿ ಉಳಿದು ಬಚ್ಚಿಟ್ಟು ಕೊಂಡವರನ್ನೂ ಕಡಿದು ಬಿಟ್ಟು ಅದು ತೀರುವ ವರೆಗೆ ಮನುಷ್ಯನು ಕಸವನ್ನು ಹೇಗೆ ತೆಗೆದು ಹಾಕುತ್ತಾನೋ ಹಾಗೆಯೇ ನಾನು ಯಾರೊಬ್ಬಾಮನ ಮನೆಯ ಜನಶೇಷವನ್ನು ತೆಗೆದು ಹಾಕುತ್ತೇನೆ.
ಆದರೆ ಈಗಲೇ ಏನು ಆಗುವದು? ನೀರಿನಲ್ಲಿರುವ ದಂಟು ಅಲ್ಲಾಡುವ ಹಾಗೆ ಕರ್ತನು ಇಸ್ರಾಯೇಲ್ಯರನ್ನು ಹೊಡೆಯುವನು. ಇಸ್ರಾ ಯೇಲ್ಯರು ಕರ್ತನಿಗೆ ಕೋಪವನ್ನು ಎಬ್ಬಿಸಲು ತಮ್ಮ ವಿಗ್ರಹಾರಾಧನೆಗೋಸ್ಕರ ತೋಪುಗಳನ್ನು ಹಾಕಿದ್ದ ರಿಂದ ಆತನು ಅವರ ತಂದೆಗಳಿಗೆ ಕೊಟ್ಟ ಈ ಉತ್ತಮ ದೇಶದಲ್ಲಿಂದ ಅವರನ್ನು ನಿರ್ಮೂಲ ಮಾಡಿ ನದಿಯ ಆಚೆಯಲ್ಲಿ ಅವರನ್ನು ಚದರುವಂತೆ ಮಾಡುವನು.
ಆಗ ಯಾರೊಬ್ಬಾಮನ ಪತ್ನಿ ಎದ್ದು ಹೊರಟು ತಿರ್ಚಕ್ಕೆ ಬಂದಳು. ಕರ್ತನು ಪ್ರವಾದಿಯಾದ ತನ್ನ ಸೇವಕನಾಗಿರುವ ಅಹೀಯನ ಮುಖಾಂತರ ತಿಳಿಸಿದ ವಾಕ್ಯದ ಪ್ರಕಾರವೇ ಅವಳು ಬಾಗಿಲ ಹೊಸ್ತಿಲ ಬಳಿಗೆ ಬಂದಾಗ ಮಗನು ಸತ್ತನು.
ಅವರು ಎತ್ತರವಾದ ಪ್ರತಿ ಗುಡ್ಡದ ಮೇಲೆಯೂ ಹಸುರಾದ ಪ್ರತಿ ಗಿಡದ ಕೆಳಗೂ ತೋಪು ಗಳನ್ನು ವಿಗ್ರಹಗಳನ್ನು ಉನ್ನತ ಸ್ಥಳಗಳನ್ನು ತಮಗಾಗಿ ಮಾಡಿಕೊಂಡರು. ಇದಲ್ಲದೆ ದೇಶದಲ್ಲಿ ಪುರುಷ ಸಂಗಮರಿದ್ದರು.
ರೆಹಬ್ಬಾಮನು ತನ್ನ ಪಿತೃಗಳ ಸಂಗಡ ಮಲಗಿದನು. ದಾವೀದನ ಪಟ್ಟಣದಲ್ಲಿ ಅವನು ಹೂಣಿಡಲ್ಪಟ್ಟನು. ಅವನ ತಾಯಿ ಅಮ್ಮೋನ್ಯಳಾದ ನಯಮಾಳೆಂಬ ಹೆಸರುಳ್ಳವಳಾ ಗಿದ್ದಳು. ಅವನ ಮಗನಾದ ಅಬೀಯಾಮನು ಅವನಿಗೆ ಬದಲಾಗಿ ಆಳಿದನು.