ಇದಲ್ಲದೆ ಬಾಷನು ಯಾರೂಬ್ಬಾಮನ ಮನೆ ಯವರ ಹಾಗಿದ್ದು ಅವನನ್ನು ಕೊಂದುಹಾಕಿ ತನ್ನ ದುಷ್ಕೃತ್ಯಗಳಿಂದ ಕರ್ತನಿಗೆ ಕೋಪವನ್ನು ಎಬ್ಬಿಸಿ ಕರ್ತನ ಸಮ್ಮುಖದಲ್ಲಿ ತಾನು ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ಅವನಿಗೆ ವಿರೋಧವಾಗಿಯೂ ಅವನ ಮನೆಗೆ ವಿರೋಧವಾಗಿಯೂ ಹನಾನೀಯ ಮಗನಾಗಿರುವ ಪ್ರವಾದಿಯಾದ ಯೇಹುವಿನ ಮುಖಾಂತರ ಕರ್ತನ ವಾಕ್ಯ ಉಂಟಾಯಿತು.
ಆದರೆ ತಿರ್ಚದಲ್ಲಿ ತನ್ನ ಮನೆಯ ಉಗ್ರಾಣಿಕ ನಾದ ಅರ್ಚನ ಮನೆಯಲ್ಲಿ ಅವನು ಕುಡಿದು ಮತ್ತನಾಗಿ ತಿರ್ಚದಲ್ಲಿರುವಾಗ ಅರ್ಧ ರಥಗಳಿಗೆ ಅಧಿಪತಿಯಾಗಿ ರುವ ಅವನ ಸೇವಕನಾದ ಜಿಮ್ರಿ ಅವನಿಗೆ ವಿರೋಧ ವಾಗಿ ಒಳಸಂಚು ಮಾಡಿದನು.
ಅವನು ಆಳಲು ಆರಂಭಿಸಿದಾಗ ಏನಾಯಿತಂದರೆ, ಅವನು ಸಿಂಹಾ ಸನದ ಮೇಲೆ ಕುಳಿತು ಕೊಳ್ಳುತ್ತಲೇ ಬಾಷನ ಮನೆ ಯವರನ್ನೆಲ್ಲಾ ಕೊಂದುಹಾಕಿದನು. ಅವನ ಬಂಧು ಗಳಲ್ಲಿಯೂ ಸ್ನೇಹಿತರಲ್ಲಿಯೂ ಗಂಡಸರಾದ ಒಬ್ಬ ನನ್ನೂ ಅವನಿಗೆ ಉಳಿಸಲಿಲ್ಲ.
ಹೀಗೆ ಭಾಷನೂ ಅವನ ಮಗನಾದ ಏಲನೂ ತಮ್ಮ ಎಲ್ಲಾ ಪಾಪಗಳಿಂದ ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸಿ ತಾವು ಮಾಡಿದ ಪಾಪಗಳಿಂದಲೂ ತಾವು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ್ದ ರಿಂದಲೂ
ಜಿಮ್ರಿಯು ಒಳಸಂಚು ಮಾಡಿ ಅರಸನನ್ನು ಕೊಂದು ಹಾಕಿದ್ದಾನೆಂದು ಅಲ್ಲಿ ಇಳಿದಿರುವ ದಂಡಿನವರು ಕೇಳಿ ದ್ದರಿಂದ ಇಸ್ರಾಯೇಲ್ಯರೆಲ್ಲರೂ ಅದೇ ದಿವಸದಲ್ಲಿ ದಂಡಿನೊಳಗೆ ದಂಡಿನ ಅಧಿಪತಿಯಾದ ಒಮ್ರಿಯನ್ನು ಇಸ್ರಾಯೇಲಿನ ಮೇಲೆ ಅರಸನಾಗ ಮಾಡಿದರು.
ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟತನಮಾಡಿ ತಾನು ಮಾಡಿದ ಪಾಪ ಗಳ ನಿಮಿತ್ತವಾಗಿಯೂ ಯಾರೊಬ್ಬಾಮನ ಮಾರ್ಗ ದಲ್ಲಿ ನಡೆದು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಅವನ ಪಾಪದ ನಿಮಿತ್ತವಾಗಿಯೂ ಇದು ಆಯಿತು.
ತಿರ್ಚದಲ್ಲಿ ಆರು ವರುಷ ಆಳಿದನು ಅವನು ಶೆಮೆರ್ ನಿಗೆ ಎರಡು ತಲಾಂತು ಬೆಳ್ಳಿಯನ್ನು ಕೊಟ್ಟು ಸಮಾರ್ಯ ವೆಂಬ ಬೆಟ್ಟವನ್ನು ಕೊಂಡುಕೊಂಡು ಆ ಬೆಟ್ಟದ ಮೇಲೆ ಪಟ್ಟಣವನ್ನು ಕಟ್ಟಿಸಿ ಶೆಮೆರನೆಂಬ ಬೆಟ್ಟದ ಯಜಮಾನನ ಹೆಸರಿನ ಹಾಗೆ ತಾನು ಕಟ್ಟಿಸಿದ ಪಟ್ಟಣಕ್ಕೆ ಸಮಾರ್ಯ ವೆಂದು ಹೆಸರಿಟ್ಟನು.
ಅದೇನಂದರೆ, ಅವನು ನೆಬಾಟನ ಮಗನಾದ ಯಾರೊಬ್ಬಾಮನ ಸಕಲ ಮಾರ್ಗಗಳಲ್ಲಿಯೂ ಇಸ್ರಾಯೇಲಿನ ದೇವ ರಾದ ಕರ್ತನಿಗೆ ತಮ್ಮ ವ್ಯರ್ಥವಾದವುಗಳಿಂದ ಕೋಪ ವನ್ನು ಎಬ್ಬಿಸಿದ ಹಾಗೆ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಪಾಪದಲ್ಲಿಯೂ ನಡೆದನು.
ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಲ್ಲಿ ನಡೆಯು ವದು ಅವನಿಗೆ ಅಲ್ಪವಾಗಿತ್ತು; ಅವನು ಚೀದೋನ್ಯರ ಅರಸನಾಗಿರುವ ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾಗಿ ಬಾಳನನ್ನು ಸೇವಿಸಿ ಅವನಿಗೆ ಅಡ್ಡ ಬಿದ್ದನು.
ಅಹಾಬನು ತೋಪನ್ನು ಹಾಕಿಸಿದನು. ಹೀಗೆಯೆ ಅಹಾಬನು ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸುವ ಹಾಗೆ ತನಗೆ ಮುಂಚಿನ ಇಸ್ರಾಯೇಲಿನ ಅರಸುಗಳೆಲ್ಲರಿಗಿಂತ ಅಧಿಕ ವಾಗಿ ಕೆಟ್ಟತನಮಾಡಿದನು.
ಅವನ ದಿವಸಗಳಲ್ಲಿ ಬೇತೇಲಿನವನಾದ ಹೀಯೇ ಲನು ಯೆರಿಕೋವನ್ನು ಕಟ್ಟಿಸಿದನು; ಕರ್ತನು ನೂನನ ಮಗನಾದ ಯೆಹೋಶುವನ ಮುಖಾಂತರ ಹೇಳಿದ್ದ ವಾಕ್ಯದ ಪ್ರಕಾರವೇ ಅವನು ಅದಕ್ಕೆ ಅಸ್ತಿವಾರವನ್ನು ಹಾಕಿದಾಗ ತನ್ನ ಚೊಚ್ಚಲ ಮಗನಾದ ಅಬೀರಾಮನೂ ಅದರ ಬಾಗಲುಗಳನ್ನು ಇಟ್ಟಾಗ ಅವನ ಚಿಕ್ಕಮಗನಾದ ಸೆಗೂಬನೂ ಸತ್ತರು.