ಮೂರು ಸಾವಿರ ಜನರಲ್ಲಿ ಎರಡು ಸಾವಿರ ಜನರು ಸೌಲನು ಇರುವ ಮಿಕ್ಮಾಷಿ ನಲ್ಲಿಯೂ ಬೇತೇಲಿನ ಪರ್ವತದಲ್ಲಿಯೂ ಇದ್ದರು; ಸಾವಿರ ಜನರು ಯೋನಾತಾನನ ಸಂಗಡ ಬೆನ್ಯಾವಿಾನ್ ದೇಶದ ಗಿಬೆಯದಲ್ಲಿದ್ದರು. ಉಳಿದ ಜನರನ್ನು ಅವರ ವರ ಡೇರೆಗಳಿಗೆ ಕಳುಹಿಸಿಬಿಟ್ಟನು.
ಆಗ ಇಸ್ರಾಯೇಲ್ಯರ ಸಂಗಡ ಯುದ್ಧಮಾಡಲು ಫಿಲಿಷ್ಟಿಯರ ಮೂವತ್ತು ಸಾವಿರ ರಥಗಳೂ ಆರು ಸಾವಿರ ಕುದುರೆ ರಾಹುತರೂ ಸಮುದ್ರತೀರದ ಮರಳಷ್ಟು ಜನವೂ ಕೂಡಿಕೊಂಡು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಇಳುಕೊಂಡರು.
ಆಗ ಇಸ್ರಾಯೇಲ್ ಜನರು ತಮಗೆ ಶ್ರಮೆ ಉಂಟಾದ್ದದರಿಂದ ತಾವು ಇಕ್ಕಟ್ಟಿನಲ್ಲಿ ಇರುವದನ್ನು ನೋಡಿ ಗವಿಗಳಲ್ಲಿಯೂ ಮುಳ್ಳಿನ ಪೊದೆಗಳಲ್ಲಿಯೂ ಗುಡ್ಡಗಳಲ್ಲಿಯೂ ದುರ್ಗಗಳಲ್ಲಿಯೂ ಕುಣಿಗಳಲ್ಲಿಯೂ ಅಡಗಿಕೊಂಡರು.
ಇದಲ್ಲದೆ ಇಬ್ರಿಯರಲ್ಲಿರುವ ಕೆಲವರು ಯೊರ್ದನನ್ನು ದಾಟಿ ಗಾದ್ ದೇಶಕ್ಕೂ ಗಿಲ್ಯಾದಿಗೂ ಹೋದರು. ಆದರೆ ಸೌಲನು ಇನ್ನೂ ಗಿಲ್ಗಾಲಿನಲ್ಲಿದ್ದನು; ಜನರೆಲ್ಲರು ನಡುಗಿದವರಾಗಿ ಅವನನ್ನು ಹಿಂಬಾಲಿಸಿದರು.
ಸಮುವೇಲನುನೀನೇನು ಮಾಡಿದಿ ಎಂದು ಸೌಲನನ್ನು ಕೇಳಿದಾಗ ಅವನು--ಜನರು ನನ್ನನ್ನು ಬಿಟ್ಟು ಚದರಿಹೋದದ್ದನ್ನೂ ನೇಮಿಸಿದ ದಿವಸಗಳ ಪ್ರಕಾರಕ್ಕೆ ನೀನು ಬಾರದ್ದನ್ನೂ ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಕೂಡಿಕೊಂಡಿರುವದನ್ನೂ
ಸಮು ವೇಲನು ಸೌಲನಿಗೆ--ನೀನು ಬುದ್ಧಿಹೀನವಾದ ಕೆಲಸ ಮಾಡಿದ್ದೀ; ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನು ಕೈಕೊಳ್ಳಲಿಲ್ಲ. ಕರ್ತನು ಇಸ್ರಾಯೇಲ್ಯರಲ್ಲಿ ನಿನ್ನ ರಾಜ್ಯವನ್ನು ಎಂದೆಂದಿಗೂ ಸ್ಥಿರಪಡಿಸುವದಕ್ಕೆ ಇದ್ದನು.
ಆದರೆ ಈಗ ನಿನ್ನ ರಾಜ್ಯವು ನಿಲ್ಲಲಾರದು. ಕರ್ತನು ನಿನಗೆ ಆಜ್ಞಾಪಿಸಿ ದ್ದನ್ನು ನೀನು ಕೈಕೊಳ್ಳದೆ ಹೋದದರಿಂದ ಆತನು ತನ್ನ ಹೃದಯಕ್ಕೆ ಅನುಸರಣೆಯಾದ ಒಬ್ಬ ಮನುಷ್ಯ ನನ್ನು ಹುಡುಕಿ ಅವನನ್ನು ತನ್ನ ಜನರ ಮೇಲೆ ನಾಯಕನನ್ನಾಗಿ ನೇಮಿಸಿದ್ದಾನೆ ಅಂದನು.
ಯುದ್ಧದ ದಿವಸದಲ್ಲಿ ಸೌಲನ ಸಂಗಡ ಯೋನಾ ತಾನನ ಸಂಗಡ ಇರುವ ಸಮಸ್ತ ಜನರ ಕೈಯಲ್ಲಿ ಕತ್ತಿಯಾದರೂ ಈಟಿಯಾದರೂ ಇಲ್ಲದೆ ಇತ್ತು. ಆದರೆ ಸೌಲನಿಗೂ ಅವನ ಕುಮಾರನಾದ ಯೋನಾತಾನ ನಿಗೂ ಮಾತ್ರವೇ ಇತ್ತು.