ಆಗ ಪೌಲನು--ನಿಜವಾಗಿಯೂ ಯೋಹಾನನು ತನ್ನ ಹಿಂದೆ ಬರುವಾತ ನನ್ನು ಅಂದರೆ ಕ್ರಿಸ್ತ ಯೇಸುವನ್ನು ನಂಬಬೇಕೆಂದು ಜನರಿಗೆ ಹೇಳಿ ಮಾನಸಾಂತರದ ಬಾಪ್ತಿಸ್ಮದಿಂದ ಬಾಪ್ತಿಸ್ಮ ಮಾಡಿಸಿದನು ಎಂದು ಹೇಳಿದನು.
ಕೆಲವರು ತಮ್ಮ ಮನಸ್ಸುಗಳನ್ನು ಕಠಿಣ ಮಾಡಿಕೊಂಡು ನಂಬದೆ ಸಮೂಹದ ಮುಂದೆ ಆ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟು ಶಿಷ್ಯರನ್ನು ಬೇರೆ ಮಾಡಿ ತುರನ್ನನ ಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.
ಆಗ ದೆವ್ವ ಬಿಡಿಸುವವರಾಗಿ ದೇಶಸಂಚಾರ ಮಾಡುತ್ತಿದ್ದ ಯೆಹೂದ್ಯರಲ್ಲಿ ಕೆಲವರು ದುರಾತ್ಮ ಹಿಡಿದವ ರಿಗೆ--ಪೌಲನು ಸಾರುವ ಯೇಸುವಿನ ಆಣೆ ಎಂದು ನಾವು ನಿಮಗೆ ಹೇಳುತ್ತೇವೆ ಎಂದು ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗ ಮಾಡುವದಕ್ಕೆ ತೊಡಗಿದರು.
ಇದಲ್ಲದೆ ಮಾಟ ಮಂತ್ರಗಳನ್ನು ನಡಿಸಿದ ವರಲ್ಲಿ ಅನೇಕರು ಸಹ ಬಂದು ತಮ್ಮ ಪುಸ್ತಕಗಳನ್ನು ತಂದು ಕೂಡಿಸಿ ಎಲ್ಲರ ಮುಂದೆ ಸುಟ್ಟುಬಿಟ್ಟರು. ಅವು ಗಳ ಕ್ರಯವನ್ನು ಲೆಕ್ಕಮಾಡಿ ಐವತ್ತು ಸಾವಿರ ಬೆಳ್ಳಿ ನಾಣ್ಯ ಎಂದು ತಿಳಿದು ಕೊಂಡರು.
ಇವುಗಳಾದ ಮೇಲೆ ಪೌಲನು ತಾನು ಮಕೆದೋನ್ಯವನ್ನೂ ಅಖಾಯವನ್ನೂ ಹಾಯ್ದು ಯೆರೂಸಲೇಮಿಗೆ ಹೋಗಬೇಕೆಂದು ಆತ್ಮದಲ್ಲಿ ಉದ್ದೇಶಿಸಿ--ಅಲ್ಲಿಗೆ ಹೋದಮೇಲೆ ನಾನು ರೋಮ್ ವನ್ನು ಸಹ ನೋಡಲೇಬೇಕು ಎಂದು ಹೇಳಿದನು.
ಆದರೆ ಕೈಯಿಂದ ಮಾಡಿದವುಗಳು ದೇವರುಗಳಲ್ಲವೆಂದು ಈ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯ ಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿ ಬಿಟ್ಟಿದ್ದಾನೆಂಬದನ್ನು ನೀವು ನೋಡುತ್ತೀರಿ
ಇದರಿಂದ ನಮ್ಮ ಈ ಉದ್ಯೋಗಕ್ಕೆ ಅಪಾಯ ಬರುವ ಹಾಗಿರುವದಲ್ಲದೆ ಡಯಾನಿ ಮಹಾದೇವಿಯ ಗುಡಿಯು ಗಣನೆಗೆ ಬಾರದೆ ಹೋಗುವ ಹಾಗೆ ಎಲ್ಲಾ ಆಸ್ಯಸೀಮೆ ಮತ್ತು ಲೊಕವು ಪೂಜಿಸುವ ಈಕೆಯ ವೈಭವವು ನಾಶವಾಗ ತಕ್ಕದೆಂದು ಹೇಳಿದನು.
ಯಾಕಂದರೆ ಕೆಲವರು ಒಂದು ಬಗೆಯಾಗಿ ಮತ್ತೆ ಕೆಲವರು ಇನ್ನೊಂದು ಬಗೆಯಾಗಿ ಕೂಗುತ್ತಿದ್ದರು. ಸಭೆಯು ಗಲಿಬಿಲಿಯಾಗಿತ್ತು ಮತ್ತು ಹೆಚ್ಚಾದ ಜನರಿಗೆ ತಾವು ಕೂಡಿಬಂದಿದ್ದ ಕಾರಣವು ಗೊತ್ತಿರಲಿಲ್ಲ.
ಆಗ ಪುರಸಭೆಯ ಕಾರ್ಯದರ್ಶಿಯು ಜನರನ್ನು ಸಮಾಧಾನಪಡಿಸಿ ಹೇಳಿದ್ದೇನಂದರೆ--ಎಫೆಸದ ಜನರೇ, ಎಫೆಸದವರ ಈ ಪಟ್ಟಣವು ಮಹಾದೇವತೆಯಾದ ಡಯಾನಿಯನ್ನೂ ಬೃಹಸ್ಪತಿಯಿಂದ ಕೆಳಗೆ ಬಿದ್ದ ಪ್ರತಿಮೆಯನ್ನೂ ಹೇಗೆ ಆರಾದ್ಧಿಸುವದೆಂದು ತಿಳಿಯದ ಮನುಷ್ಯನು ಯಾವನು?
ಹೀಗಿರುವದರಿಂದ ದೇಮೇತ್ರಿಯನಿಗೂ ಅವನ ಪಕ್ಷವನ್ನು ಹಿಡಿದಿರುವ ಕಸಬಿನವರಿಗೂ ಯಾವನ ಮೇಲಾದರೂ ವ್ಯವಹಾರವಿದ್ದರೆ ಕಾನೂನು ಇದೆ, ಅಧಿಪತಿಗಳಿದ್ದಾರೆ, ಒಬ್ಬರ ಮೇಲೊಬ್ಬರು ವ್ಯಾಜ್ಯ ವಾಡಿಕೊಳ್ಳಲಿ.