Indian Language Bible Word Collections
Ephesians 3:16
Ephesians Chapters
Ephesians 3 Verses
Books
Old Testament
New Testament
Bible Versions
English
Tamil
Hebrew
Greek
Malayalam
Hindi
Telugu
Kannada
Gujarati
Punjabi
Urdu
Bengali
Oriya
Marathi
Books
Old Testament
New Testament
Ephesians Chapters
Ephesians 3 Verses
1
|
ಈ ಕಾರಣದಿಂದ ಅನ್ಯಜನರಾಗಿರುವ ನಿಮ್ಮ ನಿಮಿತ್ತ ಯೇಸು ಕ್ರಿಸ್ತನ ಸೆರೆಯವನಾದ ಪೌಲನೆಂಬ ನಾನು |
2
|
ನಿಮಗೋಸ್ಕರ ವಾಗಿ ನನಗೆ ಕೊಡಲ್ಪಟ್ಟ ದೇವರ ಕೃಪಾಯುಗದ ವಿಷಯದಲ್ಲಿ ನೀವು ಕೇಳಿರುವದಾದರೆ |
3
|
ಇದುವರೆಗೆ ಗುಪ್ತವಾಗಿದ್ದದನ್ನು ಆತನು ಪ್ರಕಟನೆಯಿಂದ ನನಗೆ ಹೇಗೆ ತಿಳಿಸಿದನೆಂಬದನ್ನು ಮೊದಲು ನಾನು ನಿಮಗೆ ಸಂಕ್ಷೇಪವಾಗಿ ಬರೆದೆನು; |
4
|
(ಬರೆದದ್ದನ್ನು ನೀವು ಓದಿ ನೋಡಿದರೆ ಕ್ರಿಸ್ತನ ವಿಷಯವಾದ ಮರ್ಮವನ್ನು ಕುರಿತು ನನಗಿರುವ ಗ್ರಹಿಕೆಯನ್ನು ನೀವು ತಿಳುಕೊಳ್ಳ ಬಹುದು.) |
5
|
ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಆತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿ ಮನುಷ್ಯ ಪುತ್ರರಿಗೆ ತಿಳಿಸಲ್ಪಡಲಿಲ್ಲ. |
6
|
ಅದೇನಂದರೆ, ಅನ್ಯಜನರು (ಯೆಹೂದ್ಯರೊಂದಿಗೆ) ಸಹ ಬಾಧ್ಯರೂ ಒಂದೇ ದೇಹದವರೂ ಸುವಾರ್ತೆಯಿಂದ ಕ್ರಿಸ್ತನ ಮೂಲಕ ಆತನ ವಾಗ್ದಾನದಲ್ಲಿ ಪಾಲುಗಾರರೂ ಆಗಿರಬೇಕೆಂ ಬದೇ. |
7
|
ದೇವರು ತನ್ನ ಶಕ್ತಿಯ ಪ್ರಯೋಗದಲ್ಲಿ ನನಗೆ ಅನುಗ್ರಹಿಸಿದ ಕೃಪಾದಾನಕ್ಕನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು. |
8
|
ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು. |
9
|
ಸಮಸ್ತ ವನ್ನು ಯೇಸು ಕ್ರಿಸ್ತನಿಂದ ಸೃಷ್ಟಿಸಿದ ದೇವರಲ್ಲಿ ಲೋಕಾದಿ ಯಿಂದ ಮರೆಯಾಗಿದ್ದ ಮರ್ಮದ ಅನ್ಯೋನ್ಯತೆಯು ಎಲ್ಲರಿಗೂ ತೋರುವಂತೆ ಮಾಡುವ ಹಾಗೆಯೂ |
10
|
ನಾನಾ ವಿಧವಾದ ದೇವರ ಜ್ಞಾನವು ಪರಲೋಕದಲ್ಲಿ ಈಗ ರಾಜತ್ವಗಳಿಗೂ ಅಧಿಕಾರಗಳಿಗೂ ಸಭೆಯ ಮೂಲಕ ಗೊತ್ತಾಗಬೇಕೆಂಬದಾಗಿಯೂ ಆತನು ಉದ್ದೇಶಿಸಿದ್ದನು. |
11
|
ನಮ್ಮ ಕರ್ತನಾದ ಕ್ರಿಸ್ತ ಯೇಸು ವಿನಲ್ಲಿ ಆತನು ಸಂಕಲ್ಪಿಸಿದ ಶಾಶ್ವತವಾದ ಸಂಕಲ್ಪದಂತೆ ಇದಾಯಿತು. |
12
|
ಆತನಿಂದಾದ ನಂಬಿಕೆಯ ಮೂಲಕ ನಮಗೆ ಧೈರ್ಯವೂ ಭರವಸವುಳ್ಳ ಪ್ರವೇಶವೂ ಉಂಟಾಯಿತು. |
13
|
ಆದದರಿಂದ ನಿಮ್ಮ ನಿಮಿತ್ತ ನನ ಗುಂಟಾದ ಕಷ್ಟಗಳಿಗಾಗಿ ನೀವು ಧೈರ್ಯಗೆಡಬಾರ ದೆಂದು ನಾನು ಅಪೇಕ್ಷಿಸುತ್ತೇನೆ. ಅವು ನಿಮ್ಮ ಗೌರವವಾಗಿವೆ. |
14
|
ಈ ಕಾರಣದಿಂದ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯ ಮುಂದೆ ನನ್ನ ಮೊಣ ಕಾಲೂರಿ |
15
|
ಯಾವ ತಂದೆಯ ಹೆಸರನ್ನು ಪರಲೋಕ ಭೂಲೋಕಗಳಲ್ಲಿರುವ ಕುಟುಂಬವೆಲ್ಲಾ ತೆಗೆದುಕೊಳ್ಳು ತ್ತದೋ, ಆ ತಂದೆಯು |
16
|
ನಿಮಗೆ ತನ್ನ ಮಹಿಮೆಯ ಐಶ್ವರ್ಯಕ್ಕನುಸಾರವಾಗಿ ಆತನ ಆತ್ಮನ ಮೂಲಕ ಆಂತರ್ಯದಲ್ಲಿ ವಿಶೇಷ ಬಲವನ್ನು ಅನುಗ್ರಹಿಸುವ ಹಾಗೆಯೂ |
17
|
ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ನಂಬಿಕೆಯ ಮೂಲಕ ವಾಸಿಸುವಂತೆಯೂ ನೀವು ಪ್ರೀತಿಯಲಿ ಬೇರೂರಿ ನೆಲೆಗೊಂಡು ನಿಂತು |
18
|
ಪರಿಶುದ್ಧರೆಲ್ಲ ರೊಂದಿಗೆ ಅದರ ಅಗಲ ಉದ್ದ ಆಳ ಮತ್ತು ಎತ್ತರವನ್ನು ಗ್ರಹಿಸುವಂತೆಯೂ |
19
|
ಜ್ಞಾನಕ್ಕೆ ವಿಾರುವ ಕ್ರಿಸ್ತನ ಪ್ರೀತಿ ಯನ್ನು ತಿಳಿದುಕೊಂಡು ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆಯೂ ನಿಮಗೆ ದಯ ಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ. |
20
|
ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದಾತನಿಗೆ |
21
|
ಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತ ರಕ್ಕೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ. ಆಮೆನ್. |