ಅವನನ್ನು ಇನ್ನು ಬಚ್ಚಿಡುವದಕ್ಕಾಗದೆ ಇದ್ದಾಗ ಅವನಿಗಾಗಿ ಆಪಿನ ಪೆಟ್ಟಿಗೆ ಯನ್ನು ತಕ್ಕೊಂಡು ಜೇಡಿಮಣ್ಣನ್ನೂ ರಾಳವನ್ನೂ ಹಚ್ಚಿ ಕೂಸನ್ನು ಅದರಲ್ಲಿ ಇಟ್ಟು ನದಿಯ ಅಂಚಿನಲ್ಲಿ ಇದ್ದ ಹುಲ್ಲಿನಲ್ಲಿ ಇಟ್ಟರು.
ಆಗ ಫರೋಹನ ಮಗಳು ನದಿಯಲ್ಲಿ ಸ್ನಾನ ಮಾಡುವದಕ್ಕೆ ಇಳಿದು ಬಂದಳು; ಆಕೆಯ ದಾಸಿಯರು ನದಿಯ ಅಂಚಿನಲ್ಲಿ ತಿರುಗಾಡುತ್ತಿದ್ದರು. ಫರೋಹನ ಮಗಳು ಹುಲ್ಲಿನಲ್ಲಿದ್ದ ಪೆಟ್ಟಿಗೆಯನ್ನು ನೋಡಿ ತನ್ನ ದಾಸಿಯನ್ನು ಕಳುಹಿಸಿ ಅದನ್ನು ತರಿಸಿದಳು.
ಆ ದಿನಗಳಲ್ಲಿ ಮೋಶೆಯು ದೊಡ್ಡವನಾದ ಮೇಲೆ ತನ್ನ ಸಹೋದರರ ಬಳಿಗೆ ಹೋಗಿ ಅವರ ಬಿಟ್ಟೀ ಕೆಲಸಗಳನ್ನು ನೋಡುತ್ತಿದ್ದನು. ಆಗ ತನ್ನ ಸಹೋದರರಲ್ಲಿ ಒಬ್ಬನಾದ ಇಬ್ರಿಯನನ್ನು ಒಬ್ಬ ಐಗುಪ್ತ್ಯನು ಹೊಡೆಯುವದನ್ನು ಕಂಡನು.
ಅದಕ್ಕ ವನು--ಯಾರು ನಿನ್ನನ್ನು ನಮ್ಮ ಮೇಲೆ ಪ್ರಭುವ ನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ನೇಮಿಸಿ ದ್ದಾರೆ? ಆ ಐಗುಪ್ತ್ಯನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದೀಯೋ ಅಂದನು. ಆಗ ಮೋಶೆಯು ಭಯಪಟ್ಟು--ನಿಶ್ಚಯವಾಗಿ ಈ ಕಾರ್ಯವು ತಿಳಿದುಬಂತು ಎಂದು ಅಂದುಕೊಂಡನು.
ಹೀಗಿರಲಾಗಿ ಬಹಳ ದಿನಗಳಾದ ಮೇಲೆ ಐಗುಪ್ತದ ಅರಸನು ಸತ್ತನು. ಇಸ್ರಾಯೇಲ್ ಮಕ್ಕಳು ದಾಸತ್ವದ ಕಾರಣದಿಂದ ನಿಟ್ಟುಸುರುಬಿಟ್ಟು ಕೂಗು ತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಬಂತು.