1
|
ಆದಕಾರಣ ಸಾಕ್ಷಿಯವರ ಇಷ್ಟು ದೊಡ್ಡ ಮೇಘವು ನಮ್ಮ ಸುತ್ತಲು ಇರುವದರಿಂದ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿ ಕೊಳ್ಳುವ ಪಾಪವನ್ನೂ ನಾವು ತೆಗೆದಿಟ್ಟು |
2
|
ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ. |
3
|
ನೀವು ಮನಗುಂದಿದವರಾಗಿ ಬೇಸರಗೊಳ್ಳ ದಂತೆ ಆತನು ತಾನೇ ಪಾಪಿಗಳಿಂದ ಎಷ್ಟೋ ವಿರೋಧ ವನ್ನು ಸಹಿಸಿ ಕೊಂಡನೆಂಬದನ್ನು ನೀವು ಆಲೋಚಿಸಿರಿ. |
4
|
ನೀವು ಪಾಪಕ್ಕೆ ವಿರೋಧವಾಗಿ ಹೋರಾಡುವದರಲ್ಲಿ ರಕ್ತದ ಮಟ್ಟಿಗೂ ಇನ್ನೂ ಅದನ್ನು ಎದುರಿಸಲಿಲ್ಲ. |
5
|
ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತನ್ನು ಮರೆತುಬಿಟ್ಟಿದ್ದೀರೋ? ಏನಂದರೆ--ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಇಲ್ಲವೆ ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳ ಬೇಡ; |
6
|
ಕರ್ತನು ತಾನು ಪ್ರೀತಿಸುವವನನ್ನೇ ಶಿಕ್ಷಿಸು ತ್ತಾನೆ; ತಾನು ಸೇರಿಸಿಕೊಳ್ಳುವ ಪ್ರತಿಯೊಬ್ಬ ಮಗನನ್ನು ಹೊಡೆಯುತ್ತಾನೆ ಎಂಬದು. |
7
|
ನೀವು ಶಿಕ್ಷೆಯನ್ನು ತಾಳಿಕೊಂಡರೆ ದೇವರು ನಿಮ್ಮನ್ನು ಪುತ್ರರೆಂದು ನಡಿಸು ತ್ತಾನೆ. ತಂದೆಯಿಂದ ಶಿಕ್ಷೆ ಹೊಂದದ ಮಗನೆಲ್ಲಿ? |
8
|
ನೀವು ಶಿಕ್ಷೆ ಹೊಂದುವವರೆಲ್ಲರೊಂದಿಗೆ ಪಾಲುಗಾರ ರಾಗಿರದಿದ್ದರೆ ನೀವು ಹಾದರದಿಂದ ಹುಟ್ಟಿದವರೇ ಹೊರತು ಪುತ್ರರಲ್ಲ. |
9
|
ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದಂಥ ಶರೀರ ಸಂಬಂಧವಾದ ತಂದೆಗಳನ್ನು ಸನ್ಮಾನಿ ಸಿದೆವಷ್ಟೆ; ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಒಳಪಟ್ಟು ಜೀವಿಸಬೇಕಲ್ಲವೇ? |
10
|
ಅವರು ನಿಜವಾಗಿಯೂ ಕೆಲವು ದಿವಸಗಳ ಪ್ರಯೋ ಜನವನ್ನು ಲಕ್ಷ್ಯಕ್ಕೆ ತೆಗೆದುಕೊಂಡು ತಮ್ಮ ಮನಸ್ಸಿಗೆ ತೋರಿದಂತೆ ನಮ್ಮನ್ನು ಶಿಕ್ಷಿಸಿದರು; ಆತನಾದರೋ ನಾವು ತನ್ನ ಪರಿಶುದ್ಧತೆಯಲ್ಲಿ ಪಾಲುಗಾರರಾಗ ಬೇಕೆಂದು ನಮ್ಮ ಪ್ರಯೋಜನಕ್ಕಾಗಿಯೇ ಶಿಕ್ಷಿಸುತ್ತಾನೆ. |
11
|
ಯಾವ ಶಿಕ್ಷೆಯಾದರೂ ತತ್ಕಾಲಕ್ಕೆ ಸಂತೋಷಕರ ವಾಗಿ ತೋಚದೆ ಕ್ರೂರವಾಗಿ ತೋಚುತ್ತದೆ; ಆದರೂ ತರುವಾಯ ಅದು ಶಿಕ್ಷೆ ಹೊಂದಿದವರಿಗೆ ಸಮಾಧಾನ ವುಳ್ಳ ನೀತಿಯ ಫಲವನ್ನು ಕೊಡುತ್ತದೆ. |
12
|
ಹೀಗಿರುವದ ರಿಂದ ಜೋಲು ಬಿದ್ದ ಕೈಗಳನ್ನೂ ಬಲಹೀನವಾದ ಮೊಣಕಾಲುಗಳನ್ನೂ ನೆಟ್ಟಗೆ ಮಾಡಿರಿ. |
13
|
ನಿಮ್ಮ ಪಾದ ಗಳಿಗೆ ನೀಟಾದ ದಾರಿಗಳನ್ನು ಮಾಡಿರಿ; ಹೀಗೆ ಮಾಡಿದರೆ ಕುಂಟಕಾಲು ಉಳುಕಿ ಹೋಗದೆ ವಾಸಿಯಾಗುವದು. |
14
|
ಎಲ್ಲರ ಸಂಗಡ ಸಮಾಧಾನದಿಂದಿರುವದನ್ನೂ ಪರಿಶುದ್ಧತೆಯನ್ನೂ ಅನುಸರಿಸಿರಿ; ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ. |
15
|
ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹೋಗ ದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಕಳವಳ ಹುಟ್ಟಿಸಿ ಅದರಿಂದ ಅನೇಕರು ಅಶುದ್ಧರಾಗ ದಂತೆಯೂ |
16
|
ಯಾವ ಜಾರನಾಗಲಿ--ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆಯೂ ಜಾಗ್ರತೆ ಯಿಂದ ನೋಡಿಕೊಳ್ಳಿರಿ. ಆ ಏಸಾವನು ಒಂದು ತುತ್ತನ್ನಕ್ಕಾಗಿ ತನ್ನ ಚೊಚ್ಚಲತನದ ಹಕ್ಕನ್ನು ಮಾರಿ ಬಿಟ್ಟನು; |
17
|
ತರುವಾಯ ಅವನು (ತನ್ನ ತಂದೆಯ) ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಕಣ್ಣೀರು ಸುರಿಸುತ್ತಾ ಬೇಡಿಕೊಂಡರೂ ಪಶ್ಚಾತ್ತಾಪಕ್ಕೆ ಮಾರ್ಗವಿಲ್ಲದೆ ನಿರಾಕರಿಸಲ್ಪಟ್ಟನೆಂದು ನೀವು ಬಲ್ಲಿರಿ. |
18
|
ಮುಟ್ಟಬಹುದಾದ ಮತ್ತು ಬೆಂಕಿ ಹತ್ತಿದಂಥ ಬೆಟ್ಟಕ್ಕೂ ಮೊಬ್ಬಿಗೂ ಕತ್ತಲೆಗೂ ಬಿರುಗಾಳಿಗೂ |
19
|
ತುತೂರಿಯ ಧ್ವನಿಗೂ ಮಾತುಗಳ ಶಬ್ದಕ್ಕೂ ಬಂದವರಲ್ಲ. ಆ ಶಬ್ದವನ್ನು ಕೇಳಿದವರು ತಮಗೆ ಇನ್ನು ಒಂದು ಮಾತನ್ನಾದರೂ ಹೇಳಬಾರದೆಂದು ಬೇಡಿಕೊಂಡರು; |
20
|
(ಯಾಕಂದರೆ ಯಾವ ಮೃಗವಾ ದರೂ ಬೆಟ್ಟವನ್ನು ಮುಟ್ಟಿದರೆ ಅದನ್ನು ಕಲ್ಲೆಸೆದು ಕೊಲ್ಲ ಬೇಕು, ಇಲ್ಲವೆ ಈಟಿಯಿಂದ ತಿವಿಯಬೇಕೆಂದು ಅವರು ಆಜ್ಞಾಪಿಸಿದ್ದನ್ನು ತಾಳಲಾರದೆ ಇದ್ದರು. |
21
|
ಇದಲ್ಲದೆ ಅಲ್ಲಿ ತೋರಿದ್ದು ಅಷ್ಟು ಭಯಂಕರವಾಗಿದ್ದದರಿಂದ ಮೋಶೆಯು--ನನಗೆ ಬಹು ಭಯವಾಗುತ್ತದೆ, ನಡು ಗುತ್ತೇನೆ ಎಂದು ಹೇಳಿದನು). |
22
|
ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಎಣಿಸಲಸಾಧ್ಯವಾದ ದೂತ ಗಣಗಳ ಬಳಿಗೂ |
23
|
ಪರ ಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಸಾರ್ವತ್ರಿಕ ಸಂಘಕ್ಕೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೆ ನ್ಯಾಯಾ ಧಿಪತಿಯಾಗಿರುವ ದೇವರ ಬಳಿಗೂ ಸಿದ್ದಿಗೆ ಬಂದಿರುವ ನೀತಿವಂತರ ಆತ್ಮಗಳ ಬಳಿಗೂ |
24
|
ಹೊಸಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ. |
25
|
ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು. |
26
|
ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು; ಈಗಲಾದರೋ ಆತನು--ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆಂದು ವಾಗ್ದಾನ ಮಾಡಿ ಹೇಳಿದ್ದಾನೆ. |
27
|
ಇದಲ್ಲದೆ ಇನ್ನೊಂದೇ ಸಾರಿ ಎಂಬ ಮಾತು ಕದಲಿ ಸಿರುವ ವಸ್ತುಗಳು ನಿರ್ಮಿತವಾದವುಗಳಾದದರಿಂದ ತೆಗೆದುಹಾಕಲ್ಪಡ ಬೇಕೆಂಬದನ್ನು ಸೂಚಿಸುತ್ತದೆ; ಆಗ ಕದಲಿಸದೆ ಇರುವ ವಸ್ತುಗಳು ಸ್ಥಿರವಾಗಿ ನಿಲ್ಲುವವು. |
28
|
ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆಯುವವರಾದ ನಾವು ವಿನಯದಿಂದಲೂ ದೇವರ ಭಯದಿಂದಲೂ ದೇವರನ್ನು ಯೋಗ್ಯವಾಗಿ ಸೇವಿಸು ವಂತೆ ಕೃಪೆಯನ್ನು ಹೊಂದಿಕೊಳ್ಳೋಣ. |
29
|
ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ. |
Hebrews 12:27 English Language Bible Words basic statistical display
COMING SOON ...