1
|
ಓ ಇಸ್ರಾಯೇಲೇ, ಬೇರೆ ಜನರು ಉಲ್ಲಾ ಸಿಸುವ ಪ್ರಕಾರ ಸಂತೋಷಪಡಬೇಡ; ನಿನ್ನ ದೇವರನ್ನು ನೀನು ಬಿಟ್ಟು ವ್ಯಭಿಚಾರ ಮಾಡಿದ್ದೀ, ಎಲ್ಲಾ ಧಾನ್ಯದ ಕಣಗಳಲ್ಲಿ ಕೂಲಿಯನ್ನು ಪ್ರೀತಿ ಮಾಡಿದ್ದೀ. |
2
|
ಕಣವು ಮತ್ತು ದ್ರಾಕ್ಷೆಯ ತೋಟವು ಅವರನ್ನು ಪೋಷಿಸುವದಿಲ್ಲ; ಹೊಸ ದ್ರಾಕ್ಷಾರಸವು ಅವಳಲ್ಲಿ ನಿಂತುಹೋಗುವದು. |
3
|
ಅವರು ಕರ್ತನ ದೇಶದಲ್ಲಿ ನೆಲೆಸುವದಿಲ್ಲ; ಆದರೆ ಎಫ್ರಾಯಾಮು ಐಗುಪ್ತಕ್ಕೆ ತಿರುಗುವದು; ಅವರು ಅಶ್ಯೂರಿನಲ್ಲಿ ಅಶುದ್ಧ ವಾದವುಗಳನ್ನು ತಿನ್ನುವರು. |
4
|
ಅವರು ದ್ರಾಕ್ಷಾರಸ ವನ್ನು ಕಾಣಿಕೆಯಾಗಿ ಕರ್ತನಿಗೆ ಅರ್ಪಿಸುವದಿಲ್ಲ, ಇಲ್ಲವೆ ಅವರು ಆತನಿಗೆ ಮೆಚ್ಚಿಕೆಯಾಗಿರುವದಿಲ್ಲ; ಅವರ ಬಲಿಗಳು ಅವರಿಗೆ ದುಃಖಿಸುವವರ ರೊಟ್ಟಿಯ ಹಾಗಿ ರುವವು; ಅದನ್ನು ತಿನ್ನುವವರೆಲ್ಲರೂ ಅಪವಿತ್ರ ರಾಗುವರು. ಅವರ ಪ್ರಾಣಕ್ಕಾಗಿರುವ ಅವರ ರೊಟ್ಟಿಯು ಕರ್ತನ ಆಲಯಕ್ಕೆ ಬರುವದಿಲ್ಲ. |
5
|
ಪರಿಶುದ್ಧದಿನದ ಲ್ಲಿಯೂ ಕರ್ತನ ಹಬ್ಬದ ದಿನದಲ್ಲಿಯೂ ನೀವು ಏನು ಮಾಡುತ್ತೀರಿ? |
6
|
ಅವರು ಹಾಳಾದ ದೇಶವನ್ನು ಬಿಟ್ಟು ಹೋಗುವರು; ಐಗುಪ್ತವು ಅವರನ್ನು ಕೂಡಿಸುವದು, ಮೋಫ್ ಪಟ್ಟಣವು ಅವರನ್ನು ಹೂಣುವದು; ಅಪೇಕ್ಷಿ ಸಲ್ಪಟ್ಟ ಅವರ ಬೆಳ್ಳಿಯ ಒಡವೆಗಳು ದಬ್ಬೆಗಳ್ಳಿಗಳ ಪಾಲಾಗುವವು. ತುರುಚಿಯ ಗಿಡಗಳು ಅವರನ್ನು ಆವರಿಸಿಕೊಂಡಿವೆ; ಮುಳ್ಳುಗಳು ಅವರ ಗುಡಾರಗಳಲ್ಲಿ ಇರುವವು. |
7
|
ವಿಚಾರಣೆಯ ದಿನಗಳು ಬಂದಿವೆ, ಮುಯ್ಯಿ ತೀರಿಸುವ ದಿನಗಳೂ ಬಂದಿವೆ. ಇಸ್ರಾ ಯೇಲು ಅದನ್ನು ತಿಳಿದುಕೊಳ್ಳುವದು, ನಿನ್ನ ಅಕ್ರಮ ಗಳು ಬಹಳವಾಗಿರುವದರಿಂದಲೂ ಹಗೆತನವು ಹೆಚ್ಚಾ ಗಿರುವದರಿಂದಲೂ ಪ್ರವಾದಿ ಮೂರ್ಖನೂ ಆತ್ಮೀಯ ಮನುಷ್ಯನೂ ಹುಚ್ಚನೂ ಎಂದು ಇಸ್ರಾಯೇಲು ತಿಳಿದುಕೊಳ್ಳುತ್ತದೆ. |
8
|
ಎಫ್ರಾಯಾಮಿನ ಕಾವಲುಗಾ ರನು ನನ್ನ ದೇವರೊಂದಿಗೆ ಇದ್ದನು; ಆದರೆ ಪ್ರವಾ ದಿಯು ತನ್ನ ಎಲ್ಲಾ ದಾರಿಗಳಲ್ಲಿ ಬೇಟೆಯ ಬಲೆಯಾಗಿ ದ್ದಾನೆ; ಅವನ ದೇವರ ಆಲಯದಲ್ಲಿ ಹಗೆತನವು ಉಂಟು. |
9
|
ಗಿಬ್ಯದ ದಿನಗಳಲ್ಲಿ ಆದ ಹಾಗೆ ತಮ್ಮನ್ನು ಬಹಳವಾಗಿ ಕೆಡಿಸಿಕೊಂಡಿದ್ದಾರೆ; ಆದದರಿಂದ ಅವರ ಅಕ್ರಮವನ್ನು ಆತನು ಜ್ಞಾಪಕಮಾಡಿಕೊಳ್ಳುವನು, ಅವರ ಪಾಪಗಳನ್ನು ವಿಚಾರಿಸುವನು. |
10
|
ನಾನು ಅರಣ್ಯದಲ್ಲಿ ದ್ರಾಕ್ಷೆಯ ಫಲದ ಹಾಗೆ ಇಸ್ರಾಯೇಲನ್ನು ಕಂಡುಕೊಂಡೆನು. ಅಂಜೂರದ ಗಿಡ ದಲ್ಲಿ ಮೊದಲನೆಯ ಹಣ್ಣುಗಳ ಹಾಗೆ ನಿಮ್ಮ ಪಿತೃಗಳನ್ನು ನೋಡಿದೆನು; ಆದರೆ ಅವರು ಬಾಳ್ ಪೆಗೋರಿಗೆ ಹತ್ತಿರ ಬಂದು ನಾಚಿಕೆಯಾದದ್ದಕ್ಕೆ ತಮ್ಮನ್ನು ಪ್ರತ್ಯೇ ಕಿಸಿಕೊಂಡರು; ಅವರು ಪ್ರೀತಿಮಾಡಿದ್ದರ ಹಾಗೆ ಅಸಹ್ಯರಾದರು. |
11
|
ಎಫ್ರಾಯಾಮ್ಯರ ಘನತೆಯು ಹಾರಿಹೋಗುವ ಪಕ್ಷಿಯ ಹಾಗೆ ಇದೆ. ಜನ್ಮವಾಗಲಿ, ಗರ್ಭಧರಿಸುವದಾಗಲಿ ಉತ್ಪತ್ತಿಯಾಗಲಿ ಅವರಿಗೆ ಇರು ವದಿಲ್ಲ. |
12
|
ಅವರು ತಮ್ಮ ಮಕ್ಕಳನ್ನು ಬೆಳೆಸಿದಾಗ್ಯೂ ಒಬ್ಬ ಮನುಷ್ಯನು ಉಳಿಯದ ಹಾಗೆ ನಾನು ಅವರನ್ನು ಅನಾಥರನ್ನಾಗಿ ಮಾಡುವೆನು. ಹೌದು, ನಾನು ಅವ ರನ್ನು ಬಿಟ್ಟು ಹೋಗುವಾಗ ಅವರಿಗೆ ಅಯ್ಯೋ! |
13
|
ನಾನು ತೂರನ್ನು ನೊಡಿದಂತೆ ಎಫ್ರಾಯಾಮು ರಮ್ಯ ಸ್ಥಳದಲ್ಲಿ ನೆಡಲ್ಪಟ್ಟಿದೆ; ಆದರೆ ಎಫ್ರಾಯಾಮು ಕೊಲ್ಲುವವನಿಗೆ ತನ್ನ ಮಕ್ಕಳನ್ನು ಹೊರಗೆ ತರುವದು. |
14
|
ಓ ಕರ್ತನೇ, ಅವರಿಗೆ ಕೊಡು; ಅವರಿಗೆ ನೀನು ಏನು ಕೊಡುತ್ತೀ? ಗರ್ಭಸ್ರಾವವನ್ನು ಮಾಡು ಮತ್ತು ಬತ್ತಿದ ಸ್ತನಗಳನ್ನು ಅವರಿಗೆ ಕೊಡು. |
15
|
ಅವರ ಕೆಟ್ಟತನ ವೆಲ್ಲಾ ಗಿಲ್ಗಾಲಿನಲ್ಲಿದೆ. ಅಲ್ಲಿ ನಾನು ಅವರನ್ನು ಹಗೆ ಮಾಡಿದ್ದೇನೆ. ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರನ್ನು ನನ್ನ ಆಲಯದೊಳಗಿಂದ ಹೊರಡಿಸಿ ಅವ ರನ್ನು ಇನ್ನು ಪ್ರೀತಿಮಾಡುವದೇ ಇಲ್ಲ; ಅವರ ಪ್ರಭು ಗಳೆಲ್ಲಾ ತಿರುಗಿ ಬೀಳುವವರೇ. |
16
|
ಎಫ್ರಾಯಾಮ್ಯರು ಹೊಡೆಯಲ್ಪಟ್ಟಿದ್ದಾರೆ, ಅವರ ಬೇರು ಒಣಗಿ ಹೋಗಿದೆ, ಅವರು ಫಲವನ್ನು ಕೊಡುವದಿಲ್ಲ; ಹೌದು, ಅವರು ಹೆತ್ತರೂ ಅವರ ಗರ್ಭದ ಪ್ರಿಯಕರವಾದ ಫಲವನ್ನು ಸಹ ನಾನು ಕೊಲ್ಲುವೆನು. |
17
|
ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನಿಗೆ ಕಿವಿಗೊಡಲಿಲ್ಲ; ಅವರು ಜನಾಂಗಗಳಲ್ಲಿ ಅಲೆದಾಡುವವರಾಗಿರುವರು. |
Hosea 9:1 English Language Bible Words basic statistical display
COMING SOON ...