1
|
ಇಸ್ರಾಯೇಲಿನ ಮನೆತನದವರೇ,ಕರ್ತನು ನಿಮಗೆ ಹೇಳುವ ವಾಕ್ಯವನ್ನು ಕೇಳಿರಿ; |
2
|
ಕರ್ತನು ಹೀಗೆ ಹೇಳುತ್ತಾನೆ, ಅನ್ಯರ ಆಚ ರಣೆಯನ್ನು ಕಲಿತುಕೊಳ್ಳಬೇಡಿರಿ, ಆಕಾಶದ ಗುರುತುಗಳಿಗೆ ದಿಗ್ಭ್ರಮೆಗೊಳ್ಳಬೇಡಿರಿ. ಅನ್ಯರು ಅವುಗಳಿಗೆ ದಿಗ್ಭ್ರಮೆಗೊಳ್ಳುತ್ತಾರೆ, |
3
|
ಜನಗಳ ಪದ್ಧತಿಗಳು ವ್ಯರ್ಥ ವಾಗಿವೆ. ಹೇಗಂದರೆ ಅಡವಿಯಲ್ಲಿ ಒಬ್ಬನು ಮರವನ್ನು ಕಡಿಯುತ್ತಾನೆ; ಅದು ಕೊಡಲಿಯಿಂದ ಬಡಿಗೆಯವನ ಕೈ ಕೆಲಸವೇ |
4
|
ಬೆಳ್ಳಿಯಿಂದಲೂ ಬಂಗಾರದಿಂದಲೂ ಅದನ್ನು ಅಲಂಕರಿಸುತ್ತಾರೆ; ಮೊಳೆಗಳಿಂದಲೂ ಸುತ್ತಿಗೆ ಗಳಿಂದಲೂ ಚಲಿಸದ ಹಾಗೆ ಅದನ್ನು ಬಿಗಿಸುತ್ತಾರೆ. |
5
|
ಅವು ಖರ್ಜೂರ ಮರದಂತೆ ನೆಟ್ಟಗೆ ಇವೆ. ಅವು ಮಾತನಾಡುವದಿಲ್ಲ; ಅವುಗಳನ್ನು ಹೊತ್ತುಕೊಳ್ಳ ತಕ್ಕದ್ದು, ಅವು ನಡೆಯಲಾರವು. ಅವುಗಳಿಗೆ ಭಯ ಪಡಬೇಡಿರಿ. ಅವು ಕೆಟ್ಟದ್ದನ್ನು ಮಾಡಲಾರವು ಇಲ್ಲವೆ ಒಳ್ಳೇದು ಮಾಡುವದು ಸಹ ಅವುಗಳಲ್ಲಿಲ್ಲ. |
6
|
ಓ ಕರ್ತನೇ, ನಿನ್ನ ಹಾಗೆ ಯಾರೂ ಇಲ್ಲ; ನೀನು ಮಹೋ ತ್ತಮನು, ನಿನ್ನ ಹೆಸರು ಪರಾಕ್ರಮದಲ್ಲಿ ದೊಡ್ಡದು. |
7
|
ಓ ಜನಾಂಗಗಳ ಅರಸನೇ, ನಿನಗೆ ಭಯಪಡದವ ನಾರು? ಅದು ನಿನಗೆ ಸಲ್ಲತಕ್ಕದ್ದು; ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ ಅವುಗಳ ಎಲ್ಲಾ ರಾಜ್ಯಗ ಳಲ್ಲಿಯೂ ನಿನ್ನ ಹಾಗೆ ಯಾರೂ ಇಲ್ಲ. |
8
|
ಅವರು ಒಟ್ಟಾರೆ ಕ್ರೂರಿಗಳೂ ಮೂರ್ಖರೂ ಆಗಿದ್ದಾರೆ; ಮರವು ವ್ಯರ್ಥವಾದ ಬೋಧನೆಯಾಗಿವೆ. |
9
|
ಬೆಳ್ಳಿಯ ತಗಡುಗಳನ್ನು ತಾರ್ಷೀಷಿನಿಂದಲೂ ಬಂಗಾರವನ್ನು ಊಫಜಿನಿಂದಲೂ ತರುತ್ತಾರೆ; ಅದು ಕೆತ್ತನೆಯವನ ಕೆಲಸ, ಎರಕ ಹೊಯ್ಯುವವನ ಕೈಯಿಂದ ಉಂಟಾ ದದ್ದು. ನೀಲಿಯೂ ಧೂಮ್ರ ವರ್ಣವೂ ಅವುಗಳ ವಸ್ತ್ರವಾಗಿದೆ; ಅವುಗಳೆಲ್ಲಾ ಕೌಶಲ್ಯಗಾರರ ಕೆಲಸವೇ. |
10
|
ಆದರೆ ಕರ್ತನು ನಿಜವಾದ ದೇವರಾಗಿದ್ದಾನೆ, ಆತನು ಜೀವವುಳ್ಳ ದೇವರೂ ನಿತ್ಯವಾದ ಅರಸನೂ ಆಗಿದ್ದಾನೆ; ಆತನ ರೌದ್ರದಿಂದ ಭೂಮಿ ಕಂಪಿಸುವದು ಆತನ ಉಗ್ರತೆಯನ್ನು ಜನಾಂಗಗಳು ತಾಳಲಾರವು. |
11
|
ನೀವು ಅವರಿಗೆ ಹೀಗೆ ಹೇಳಬೇಕು--ಆಕಾಶ ಗಳನ್ನೂ ಭೂಮಿಯನ್ನೂ ಸೃಷ್ಟಿಸದ ದೇವರುಗಳು ಭೂಮಿಯ ಮೇಲಿನಿಂದಲೂ ಈ ಆಕಾಶಗಳ ಕೆಳಗಿ ನಿಂದಲೂ ನಾಶವಾಗುವವು. |
12
|
ಆತನು ಭೂಮಿಯನ್ನು ತನ್ನ ಶಕ್ತಿಯಿಂದ ಉಂಟು ಮಾಡಿದನು, ಭೂಲೋಕವನ್ನು ತನ್ನ ಜ್ಞಾನದಿಂದ ಸ್ಥಾಪಿಸಿದನು, ಆಕಾಶಗಳನ್ನು ತನ್ನ ವಿವೇಕದಿಂದ ಹಾಸಿ ದನು; |
13
|
ಆತನು ತನ್ನ ಶಬ್ದ ಮಾಡುವಾಗಲೇ ಆಕಾಶ ಗಳಲ್ಲಿ ನೀರುಗಳ ಸಮೂಹವಿರುವದು. ಆತನು ಭೂಮಿಯ ಅಂತ್ಯದಿಂದ ಹಬೆಯನ್ನು ಏಳಮಾಡುತ್ತಾನೆ; ಮಳೆಯ ಸಂಗಡ ಮಿಂಚನ್ನು ಉಂಟು ಮಾಡುತ್ತಾನೆ; ತನ್ನ ಭಂಡಾರಗಳೊಳಗಿಂದ ಗಾಳಿಯನ್ನು ಹೊರಗೆ ತರುತ್ತಾನೆ. |
14
|
ಪ್ರತಿ ಮನುಷ್ಯನು ತನ್ನ ಜ್ಞಾನದಲ್ಲಿ ಪಶುವಾಗಿದ್ದಾನೆ; ಎರಕ ಹೊಯ್ಯುವವರೆಲ್ಲಾ ಕೆತ್ತಿದ ವಿಗ್ರಹಕ್ಕೋಸ್ಕರ ನಾಚಿಕೆಪಡುತ್ತಾರೆ; ಅವರ ಎರಕ ವಿಗ್ರಹವು ಸುಳ್ಳಾದದ್ದು; ಅವುಗಳಲ್ಲಿ ಉಸಿರು ಇಲ್ಲ. |
15
|
ಅವು ವ್ಯರ್ಥವೇ, ತಪ್ಪಾದ ಕೆಲಸವೇ; ಅವು ವಿಚಾ ರಿಸಲ್ಪಡುವ ಕಾಲದಲ್ಲಿ ನಾಶವಾಗುವವು. |
16
|
ಯಾಕೋ ಬ್ಯರ ಪಾಲು ಇವುಗಳ ಹಾಗಲ್ಲ; ಆತನು ಸಮಸ್ತ ವನ್ನು ರೂಪಿಸಿದಾತನೇ; ಇಸ್ರಾಯೇಲ್ ಆತನ ಸ್ವಾಸ್ತ್ಯದ ಕೋಲು; ಸೈನ್ಯಗಳ ಕರ್ತನು ಎಂಬದು ಆತನ ಹೆಸರಾಗಿದೆ. |
17
|
ಕೋಟೆಯಲ್ಲಿ ವಾಸವಾಗಿರುವವನೇ, ದೇಶದೊಳ ಗಿಂದ ನಿನ್ನ ಸರಕುಗಳನ್ನು ಕೂಡಿಸು. |
18
|
ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಒಂದೇ ಸಾರಿ ದೇಶದ ನಿವಾಸಿಗಳನ್ನು ಕವಣಿಯಿಂದ ಎಸೆದು ಬಿಡುತ್ತೇನೆ; ಅವರಿಗೆ ತಗಲುವ ಹಾಗೆ ಅವರನ್ನು ಸಂಕಟಪಡಿಸುತ್ತೇನೆ. |
19
|
ನನ್ನ ನೋವಿನ ನಿಮಿತ್ತ ನನಗೆ ಅಯ್ಯೋ, ನನ್ನ ಗಾಯವು ಕಠಿಣವಾಗಿದೆ; ಆದರೆ ನಾನು--ನಿಶ್ಚಯ ವಾಗಿ ಇದು ಸಂತಾಪವಾಗಿದೆ; ನಾನು ತಾಳಲೇಬೇಕು ಅಂದೆನು. |
20
|
ನನ್ನ ಗುಡಾರವು ಸೂರೆಯಾಯಿತು; ನನ್ನ ಹಗ್ಗಗಳೆಲ್ಲಾ ಹರಿದಿವೆ; ನನ್ನ ಮಕ್ಕಳು ನನ್ನನ್ನು ಬಿಟ್ಟು ಹೋಗಿದ್ದಾರೆ, ಅವರು ಇಲ್ಲ; ಇನ್ನು ಮೇಲೆ ನನ್ನ ಡೇರೆಯನ್ನು ಹರಡುವದಕ್ಕೂ ನನ್ನ ಪರದೆಗಳನ್ನು ನಿಲ್ಲಿಸುವದಕ್ಕೂ ಒಬ್ಬನೂ ಇಲ್ಲ. |
21
|
ಕುರುಬರು ಪಶು ಗಳಂತಾದರು; ಅವರು ಕರ್ತನನ್ನು ಹುಡುಕಲಿಲ್ಲ, ಆದದರಿಂದ ಅವರು ಸಫಲವಾಗುವದಿಲ್ಲ; ಅವರ ಮಂದೆಗಳೆಲ್ಲಾ ಚದರಿಸಲ್ಪಡುವವು. |
22
|
ಇಗೋ, ಯೆಹೂದದ ಪಟ್ಟಣಗಳನ್ನು ಹಾಳು ಮಾಡುವದಕ್ಕೂ ಘಟಸರ್ಪದ ಗುಹೆಯನ್ನಾಗಿ ಮಾಡು ವದಕ್ಕೂ ಸುದ್ದಿಯ ಶಬ್ದವೂ ಉತ್ತರ ದೇಶದಿಂದ ಮಹಾ ಗಲಭೆಯೂ ಬರುತ್ತದೆ. |
23
|
ಕರ್ತನೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ ತನ್ನ ಹೆಜ್ಜೆ ನೆಟ್ಟಗೆ ಮಾಡುವದು ನಡೆಯುವ ಮನುಷ್ಯನದಲ್ಲವೆಂದೂ ಬಲ್ಲೆನು. |
24
|
ಕರ್ತನೇ, ನನ್ನನ್ನು ತಿದ್ದು, ನ್ಯಾಯದಿಂದ ನನ್ನನ್ನು ಇಲ್ಲದಂತೆ ಮಾಡುವ ಹಾಗೆ ನಿನ್ನ ಕೋಪದಲ್ಲಿ ಅಲ್ಲ. |
25
|
ನಿನ್ನನ್ನು ತಿಳಿಯದ ಅನ್ಯರ ಮೇಲೆಯೂ ನಿನ್ನ ಹೆಸರನ್ನು ಕರೆಯದ ಕುಟುಂಬಗಳ ಮೇಲೆಯೂ ನಿನ್ನ ರೌದ್ರವನ್ನು ಹೊಯಿದುಬಿಡು; ಅವರು ಯಾಕೋ ಬ್ಯರನ್ನು ತಿಂದು ಬಿಟ್ಟಿದ್ದಾರೆ; ಅವರನ್ನು ನುಂಗಿ ಇಲ್ಲದಾಗಿ ಮಾಡಿ ಅವರ ನಿವಾಸವನ್ನು ಹಾಳುಮಾಡಿದ್ದಾರೆ. |
Jeremiah 10:19 English Language Bible Words basic statistical display
COMING SOON ...