Indian Language Bible Word Collections
Job 4:10
Job Chapters
Job 4 Verses
Books
Old Testament
New Testament
Bible Versions
English
Tamil
Hebrew
Greek
Malayalam
Hindi
Telugu
Kannada
Gujarati
Punjabi
Urdu
Bengali
Oriya
Marathi
Books
Old Testament
New Testament
Job Chapters
Job 4 Verses
1
|
ತೇಮಾನ್ಯನಾದ ಎಲೀಫಜನು ಉತ್ತರ ಕೊಟ್ಟು-- |
2
|
ನಿನಗೆ ಮಾತನ್ನು ಹೇಳತೊಡ ಗಿದರೆ ನಿನಗೆ ದುಃಖವೋ? ಆದಾಗ್ಯೂ ಮಾತನಾಡು ವದನ್ನು ಯಾವನು ಬಿಗಿ ಹಿಡಿಯಬಲ್ಲನು? |
3
|
ಇಗೋ, ಅನೇಕರನ್ನು ಶಿಕ್ಷಿಸಿದಿ; ಬಲಹೀನವಾದ ಕೈಗಳನ್ನು ಬಲ ಪಡಿಸಿದಿ. |
4
|
ಎಡವಿ ಬೀಳುವವನನ್ನು ನಿನ್ನ ನುಡಿಗಳು ನಿಲ್ಲಿಸಿದವು. ಬಲಹೀನವಾದ ಮೊಣಕಾಲುಗಳನ್ನು ಬಲ ಪಡಿಸಿದಿ. |
5
|
ಈಗ ಅದು ನಿನ್ನ ಮೇಲೆ ಬಂದದ್ದರಿಂದ ನೀನು ದಣಿಯುತ್ತೀ; ನಿನ್ನನ್ನೂ ಅದು ಮುಟ್ಟಿದ್ದರಿಂದ ಕಳವಳಪಡುತ್ತೀ; |
6
|
ನಿನ್ನ ಭಯವೂ ಭರವಸೆಯೂ ನಿನ್ನ ನಿರೀಕ್ಷೆಯೂ ನಿನ್ನ ಮಾರ್ಗಗಳ ಯಥಾರ್ಥ ತೆಯೂ ಇವೇ ಅಲ್ಲವೋ? |
7
|
ನೆನಪುಮಾಡಿಕೋ, ನಿರಪರಾಧಿಯಾಗಿ ನಾಶವಾದವನು ಯಾವನು? ನೀತಿ ವಂತರು ಕಡಿಯಲ್ಪಟ್ಟದ್ದು ಎಲ್ಲಿ? |
8
|
ನಾನು ಕಂಡ ಹಾಗೆ ದುಷ್ಟತನವನ್ನು ಉಳುವವರೂ ದುಷ್ಟತನವನ್ನು ಬಿತ್ತುವ ವರೂ ಅದನ್ನೇ ಕೊಯ್ಯುತ್ತಾರೆ. |
9
|
ದೇವರ ಸಿಡಿತದಿಂದ ಅವರು ನಾಶವಾಗುತ್ತಾರೆ. ಆತನ ಮೂಗಿನ ಉಸಿರಿ ನಿಂದ ಅವರು ಕ್ಷಯಿಸಿಹೋಗುತ್ತಾರೆ, |
10
|
ಸಿಂಹದ ಘರ್ಜನೆಯೂ ಕ್ರೂರಸಿಂಹದ ಶಬ್ದವೂ ಸಿಂಹದ ಮರಿ ಗಳ ಹಲ್ಲುಗಳೂ ಮುರಿಯಲ್ಪಟ್ಟಿವೆ. |
11
|
ಪ್ರಾಯದ ಸಿಂಹವು ಕೊಳ್ಳೆ ಇಲ್ಲದರಿಂದ ನಾಶವಾಗುತ್ತದೆ. ಸಿಂಹದ ಮರಿಗಳು ಚದುರಿಸಲ್ಪಡುತ್ತವೆ. |
12
|
ಒಂದು ಮಾತು ನನಗೆ ಗುಪ್ತವಾಗಿ ಬಂದಿತು. ಅದರಿಂದ ಸ್ವಲ್ಪ ಮಾತ್ರ ನನ್ನ ಕಿವಿಗೆ ಬಿದ್ದಿತು. |
13
|
ರಾತ್ರಿಯ ದರ್ಶನಗಳ ಆಲೋಚನೆಗಳಲ್ಲಿ ಗಾಢ ನಿದ್ರೆಯು ಜನರ ಮೇಲೆ ಬೀಳುವಾಗ |
14
|
ಭಯವೂ ನಡುಗೂ ನನ್ನನ್ನು ಹಿಡಿದವು; ನನ್ನ ಎಲ್ಲಾ ಎಲುಬು ಗಳನ್ನು ನಡುಗಿಸಿತು. |
15
|
ಒಂದು ಆತ್ಮವು ನನ್ನ ಮುಂದೆ ಹಾದುಹೋಯಿತು. ನನ್ನ ಕೂದಲು ನೆಟ್ಟಗಾಯಿತು. |
16
|
ಅದು ಸುಮ್ಮನೆ ನಿಂತಿತು. ಅದರ ರೂಪವನ್ನು ನಾನು ತಿಳುಕೊಳ್ಳಲಿಲ್ಲ. ನನ್ನ ಕಣ್ಣುಗಳ ಮುಂದೆ ವಿಗ್ರಹವಿತ್ತು; ಅಲ್ಲಿ ನಿಶ್ಯಬ್ಧವಿತ್ತು. ಆಗ ಒಂದು ವಾಣಿ ಯಾಯಿತು-- |
17
|
ದೇವರಿಗಿಂತ ಮನುಷ್ಯನು ಹೆಚ್ಚು ನೀತಿವಂತನೋ? ಪುರುಷನು ತನ್ನನ್ನು ಉಂಟು ಮಾಡಿ ದಾತನಿಗಿಂತಲೂ ಹೆಚ್ಚು ನಿರ್ಮಲನೋ? |
18
|
ಇಗೋ, ತನ್ನ ಸೇವಕರಲ್ಲಿ ಆತನು ನಂಬಿಕೆ ಇಡುವದಿಲ್ಲ; ತನ್ನ ದೂತರಲ್ಲಿ ತಪ್ಪನ್ನೆಣಿಸುತ್ತಾನೆ. |
19
|
ಧೂಳಿನಲ್ಲಿ ಅಸ್ತಿವಾರ ಇರುವ ಮಣ್ಣಿನ ಮನೆಗಳ ನಿವಾಸಿಗಳು ಎಷ್ಟು ಕಡಿಮೆ? ನುಸಿಯ ಮುಂದೆ ಅವರು ಜಜ್ಜಲ್ಪಡುತ್ತಾರೆ. |
20
|
ಬೆಳಗಿ ನಿಂದ ಸಂಜೆಯ ವರೆಗೆ ಅವರು ನಾಶವಾಗುತ್ತಾರೆ. ಅವರು ಲಕ್ಷ್ಯವಿಲ್ಲದೆ ನಿತ್ಯ ನಾಶವಾಗುತ್ತಾರೆ. |
21
|
ಅವ ರಲ್ಲಿರುವ ಅವರ ಶ್ರೇಷ್ಠತೆ ಹೊರಟು ಹೋಗುವ ದಿಲ್ಲವೋ? ಅವರು ಜ್ಞಾನವಿಲ್ಲದೆ ಸಾಯುತ್ತಾರೆ. |