1
|
ನಾನೇ ನಿಜವಾದ ದ್ರಾಕ್ಷೇ ಬಳ್ಳಿ ನನ್ನ ತಂದೆ ವ್ಯವಸಾಯಗಾರನು. |
2
|
ನನ್ನಲ್ಲಿ ಫಲಫಲಿಸದ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚಾಗಿ ಫಲಕೊಡುವ ಹಾಗೆ ಅದನ್ನು ಶುದ್ಧಿ ಮಾಡುತ್ತಾನೆ. |
3
|
ನಾನು ನಿಮಗೆ ಹೇಳಿದ ಮಾತಿನ ದೆಸೆಯಿಂದ ನೀವು ಈಗ ಶುದ್ಧರಾಗಿದ್ದೀರಿ. |
4
|
ನನ್ನಲ್ಲಿ ನೆಲೆಗೊಂಡಿರ್ರಿ, ನಾನು ನಿಮ್ಮಲ್ಲಿ ನೆಲೆ ಗೊಂಡಿರುವೆನು. ಕೊಂಬೆಯು ದ್ರಾಕ್ಷೇಯಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲ ಕೊಡಲಾರದೋ ಹಾಗೆಯೇ ನೀವೂ ನನ್ನಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ. |
5
|
ನಾನೇ ದ್ರಾಕ್ಷೇಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿ ಮತ್ತು ನಾನು ಅವನಲ್ಲಿ ನೆಲೆಗೊಂಡಿದ್ದರೆ ಅವನೇ ಬಹಳ ಫಲವನ್ನು ಕೊಡುವನು; ಯಾಕಂದರೆ ನಾನಿಲ್ಲದೆ ನೀವು ಏನೂ ಮಾಡಲಾರಿರಿ. |
6
|
ಒಬ್ಬನು ನನ್ನಲ್ಲಿ ನೆಲೆಗೊಂಡಿರದಿದ್ದರೆ ಅವನು ಕೊಂಬೆಯಂತೆ ಬಿಸಾಡಲ್ಪಟ್ಟು ಒಣಗಿ ಹೋಗುವದರಿಂದ ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು; ಅವು ಸುಡಲ್ಪಡುವವು. |
7
|
ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನಿಮಗೆ ಬೇಕಾದದ್ದನ್ನು ಬೇಡಿಕೊಳ್ಳಿರಿ, ನಿಮಗೆ ಅದು ದೊರೆ ಯುವದು. |
8
|
ನೀವು ಬಹಳ ಫಲವನ್ನು ಕೊಡುವ ದರಿಂದ ನನ್ನ ತಂದೆಗೆ ಮಹಿಮೆ ಉಂಟಾಗುವದು; ಹೀಗೆ ನೀವು ನನ್ನ ಶಿಷ್ಯರಾಗುವಿರಿ. |
9
|
ತಂದೆಯು ನನ್ನನ್ನು ಪ್ರೀತಿಸಿದ ಹಾಗೆಯೇ ನಾನು ನಿಮ್ಮನ್ನು ಪ್ರೀತಿಸಿದ್ದೇನೆ; ನೀವು ನನ್ನ ಪ್ರೀತಿಯಲ್ಲಿ ನೆಲೆಯಾಗಿರ್ರಿ. |
10
|
ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಕೊಂಡು ಆತನ ಪ್ರೀತಿಯಲ್ಲಿ ನೆಲೆಯಾಗಿರು ವಂತೆಯೇ ನೀವು ನನ್ನ ಆಜ್ಞೆಗಳನ್ನು ಕೈಕೊಂಡರೆ ನನ್ನ ಪ್ರೀತಿಯಲ್ಲಿ ನೆಲೆಯಾಗಿರುವಿರಿ. |
11
|
ನನ್ನ ಆನಂದವು ನಿಮ್ಮಲ್ಲಿರುವ ಹಾಗೆಯೂ ನಿಮ್ಮ ಆನಂದವು ಸಂಪೂರ್ಣವಾಗುವ ಹಾಗೆಯೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ. |
12
|
ನಾನು ನಿಮ್ಮನ್ನು ಪ್ರೀತಿಸಿದ ಮೇರೆಗೆ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ ನನ್ನ ಆಜ್ಞೆಯಾಗಿದೆ. |
13
|
ಒಬ್ಬನು ತನ್ನ ಸ್ನೇಹಿತರಿ ಗೋಸ್ಕರ ತನ್ನ ಪ್ರಾಣವನ್ನು ಕೊಡುವ ಪ್ರೀತಿಗಿಂತ ಹೆಚ್ಚಿನದು ಯಾವದೂ ಇಲ್ಲ. |
14
|
ನಾನು ನಿಮಗೆ ಆಜ್ಞಾಪಿಸಿರುವವುಗಳನ್ನು ಮಾಡಿದರೆ ನೀವು ನನ್ನ ಸ್ನೇಹಿತರಾಗಿರುವಿರಿ. |
15
|
ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವದಿಲ್ಲ; ಯಾಕಂದರೆ ತನ್ನ ದಣಿಯು ಮಾಡುವಂಥದ್ದು ಆಳಿಗೆ ತಿಳಿಯುವದಿಲ್ಲ; ಆದರೆ ನಾನು ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ; ಯಾಕಂದರೆ ನನ್ನ ತಂದೆಯಿಂದ ಕೇಳಿದವುಗಳನ್ನೆಲ್ಲಾ ನಾನು ನಿಮಗೆ ತಿಳಿಯಪಡಿಸಿದ್ದೇನೆ. |
16
|
ನೀವು ನನ್ನನ್ನು ಆರಿಸಿಕೊಂಡಿಲ್ಲ; ಆದರೆ ನಾನು ನಿಮ್ಮನ್ನು ಆರಿಸಿ ಕೊಂಡು, ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ನೆಲೆಗೊಂಡಿರುವಂತೆಯೂ ನಿಮ್ಮನ್ನು ನೇಮಿಸಿದ್ದೇನೆ. ಆದಕಾರಣ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಆತನು ಅದನ್ನು ನಿಮಗೆ ಕೊಡುವನು. |
17
|
ನೀವು ಒಬ್ಬರನ್ನೊಬ್ಬರು ಪ್ರೀತಿ ಮಾಡಬೇಕೆಂದು ನಾನು ಇವುಗಳನ್ನು ನಿಮಗೆ ಆಜ್ಞಾಪಿಸುತ್ತೇನೆ. |
18
|
ಲೋಕವು ನಿಮ್ಮನ್ನು ದ್ವೇಷಮಾಡಿದರೆ ನಿಮಗಿಂತ ಮೊದಲು ಅದು ನನ್ನನ್ನು ದ್ವೇಷಮಾಡಿದೆ ಎಂದು ನಿಮಗೆ ತಿಳಿದದೆ. |
19
|
ನೀವು ಲೋಕದವರಾಗಿದ್ದರೆ ಲೋಕವು ತನ್ನವರನ್ನು ಪ್ರೀತಿಸುತ್ತಿತ್ತು; ಆದರೆ ನೀವು ಲೋಕದವರಲ್ಲದೆ ಇರುವದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಮಾಡುತ್ತದೆ. |
20
|
ತನ್ನ ದಣಿಗಿಂತ ಆಳು ದೊಡ್ಡವನಲ್ಲ ಎಂದು ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ನನ್ನನ್ನು ಹಿಂಸಿಸಿದರೆ ನಿಮ್ಮನ್ನು ಸಹ ಹಿಂಸಿಸುವರು. ಅವರು ನನ್ನ ಮಾತನ್ನು ಕೈ ಕೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಕೊಳ್ಳುವರು. |
21
|
ಆದರೆ ಅವರು ನನ್ನನ್ನು ಕಳುಹಿಸಿದಾತನನ್ನು ತಿಳಿಯದಿರುವದರಿಂದ ನನ್ನ ಹೆಸ ರಿನ ನಿಮಿತ್ತ ಇವುಗಳನ್ನೆಲ್ಲಾ ನಿಮಗೆ ಮಾಡುವರು. |
22
|
ನಾನು ಬಂದು ಅವರಿಗೆ ಹೇಳದಿದ್ದರೆ ಅವರಲ್ಲಿ ಪಾಪವು ಇರುತ್ತಿದ್ದಿಲ್ಲ; ಆದರೆ ಈಗ ಅವರ ಪಾಪಕ್ಕೆ ನೆವವಿಲ್ಲ. |
23
|
ನನ್ನನ್ನು ದ್ವೇಷಮಾಡುವವನು ನನ್ನ ತಂದೆಯನ್ನು ಸಹ ದ್ವೇಷಮಾಡುತ್ತಾನೆ. |
24
|
ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರೊಳಗೆ ಮಾಡದಿದ್ದರೆ ಅವರಿಗೆ ಪಾಪವು ಇರು ತ್ತಿರಲಿಲ್ಲ; ಆದರೆ ಈಗ ಅವರು ನನ್ನನ್ನು ಮತ್ತು ನನ್ನ ತಂದೆಯನ್ನು ನೋಡಿ ದ್ವೇಷಮಾಡಿದ್ದಾರೆ. |
25
|
ಆದರೆ--ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷ ಮಾಡಿದರೆಂದು ಅವರ ನ್ಯಾಯಪ್ರಮಾಣದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು. |
26
|
ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಆದರಿಕನು ಅಂದರೆ ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ ಆತನು ನನ್ನ ವಿಷಯವಾಗಿ ಸಾಕ್ಷಿ ಕೊಡುವನು. |
27
|
ನೀವು ಮೊದಲಿನಿಂದಲೂ ನನ್ನ ಸಂಗಡ ಇದ್ದದರಿಂದ ನೀವು ಸಹ ಸಾಕ್ಷಿ ಕೊಡುವಿರಿ. |
John 15:12 English Language Bible Words basic statistical display
COMING SOON ...