1
|
ಓ ಕರ್ತನೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಮೊರೆಯು ನಿನ್ನ ಬಳಿಗೆ ಸೇರಲಿ. |
2
|
ನನಗೆ ಇಕ್ಕಟ್ಟು ಇರುವ ದಿವಸದಲ್ಲಿ ನಿನ್ನ ಮುಖವನ್ನು ನನಗೆ ಮರೆಮಾಡಬೇಡ; ನಿನ್ನ ಕಿವಿಯನ್ನು ನನ್ನ ಕಡೆಗೆ ತಿರುಗಿಸು; ನಾನು ಕರೆಯುವ ದಿವಸದಲ್ಲಿ ಬೇಗ ನನಗೆ ಉತ್ತರ ಕೊಡು. |
3
|
ನನ್ನ ದಿವಸಗಳು ಹೊಗೆಯಂತೆ ಕಳೆದುಹೋಗು ತ್ತವೆ; ನನ್ನ ಎಲುಬುಗಳು ಕೊಳ್ಳಿಯ ಹಾಗೆ ಸುಟ್ಟು ಹೋಗಿವೆ. |
4
|
ನನ್ನ ಹೃದಯವು ಹೊಡೆಯಲ್ಪಟ್ಟ ಹುಲ್ಲಿನ ಹಾಗೆ ಒಣಗಿಹೋಗಿದೆ; ಆದದರಿಂದ ನಾನು ನನ್ನ ರೊಟ್ಟಿಯನ್ನು ತಿನ್ನುವದಕ್ಕೆ ಮರೆತುಬಿಡುತ್ತೇನೆ. |
5
|
ನನ್ನ ಮೂಲುಗುವಿಕೆಯ ಸ್ವರದಿಂದ ಎಲುಬುಗಳು ನನ್ನ ಮಾಂಸಕ್ಕೆ ಅಂಟುತ್ತವೆ. |
6
|
ನಾನು ಅರಣ್ಯದ ಬಕಕ್ಕೆ ಸಮಾನನಾಗಿದ್ದೇನೆ; ನಾನು ಅರಣ್ಯದ ಗೂಬೆಯ ಹಾಗಿದ್ದೇನೆ. |
7
|
ನಾನು ಎಚ್ಚರವಾಗಿದ್ದೂ; ಮಾಳಿಗೆಯ ಮೇಲಿರುವ ಒಂಟಿಯಾದ ಪಕ್ಷಿಯ ಹಾಗಿದ್ದೇನೆ. |
8
|
ದಿನವೆಲ್ಲಾ ನನ್ನ ಶತ್ರುಗಳು ನನ್ನನ್ನು ನಿಂದಿಸುತ್ತಾರೆ; ನನ್ನ ಮೇಲೆ ಕೋಪಿಸಿಕೊಳ್ಳುವವರು ನನಗೆ ವಿರೋಧ ವಾಗಿ ಆಣೆ ಇಡುತ್ತಾರೆ. |
9
|
ನಿನ್ನ ರೋಷದ ಮತ್ತು ನಿನ್ನ ರೌದ್ರದ ನಿಮಿತ್ತವೇ ಬೂದಿಯನ್ನು ರೊಟ್ಟಿಯಂತೆ ತಿಂದಿದ್ದೇನೆ; ನನ್ನ ಪಾನವನ್ನು ಕಣ್ಣೀರಿನಿಂದ ಬೆರೆಸಿ ದ್ದೇನೆ. |
10
|
ನನ್ನನ್ನು ನೀನು ಎತ್ತಿ ಕೆಡವಿ ಹಾಕಿದ್ದೀ; |
11
|
ನನ್ನ ದಿವಸಗಳು ನೀಳದ ನೆರಳಿನ ಹಾಗಿವೆ; ನಾನು ಹುಲ್ಲಿನ ಹಾಗೆ ಒಣಗುತ್ತೇನೆ. |
12
|
ಆದರೆ ಓ ಕರ್ತನೇ, ನೀನು ಎಂದೆಂದಿಗೂ ಇರುವವನಾಗಿದ್ದೀ, ನಿನ್ನ ಸ್ಮರಣೆಯು ತಲತಲಾಂತ ರಕ್ಕೂ ಅದೆ. |
13
|
ನೀನು ಎದ್ದು, ಚೀಯೋನನ್ನು ಕನಿ ಕರಿಸುವಿ; ಯಾಕಂದರೆ ಅದನ್ನು ಕರುಣಿಸುವದಕ್ಕೆ ಕಾಲವಾಯಿತು; ಹೌದು ನಿರ್ಣಯಿಸಿದ ಸಮಯವು ಬಂದಿದೆ. |
14
|
ನಿನ್ನ ಸೇವಕರು ಅದರ ಕಲ್ಲುಗಳಲ್ಲಿ ಇಷ್ಟಪಡುತ್ತಾರೆ. ಅದರ ಧೂಳನ್ನು ಕರುಣಿಸುತ್ತಾರೆ. |
15
|
ಜನಾಂಗವು ಕರ್ತನ ಹೆಸರಿಗೂ ಭೂರಾಜರೆಲ್ಲರು ನಿನ್ನ ಮಹಿಮೆಗೂ ಭಯಪಡುವರು. |
16
|
ಕರ್ತನು ಚೀಯೋನನ್ನು ಕಟ್ಟುವನು; ಆತನು ತನ್ನ ಮಹಿಮೆಯಲ್ಲಿ ಕಾಣಿಸಿಕೊಳ್ಳುವನು. |
17
|
ದಿಕ್ಕಿಲ್ಲದವನ ಪ್ರಾರ್ಥನೆಗೆ ಕಿವಿಗೊಡುತ್ತಾನೆ; ಅವರ ಪ್ರಾರ್ಥನೆಯನ್ನು ತಿರಸ್ಕರಿ ಸುವದಿಲ್ಲ. |
18
|
ಇದು ಮುಂದಿನ ಸಂತತಿಗೋಸ್ಕರ ಬರೆಯಲ್ಪಡುವದು; ಹುಟ್ಟಲಿಕ್ಕಿರುವ ಜನರು ಕರ್ತನನ್ನು ಸ್ತುತಿಸುವರು. |
19
|
ಜನಾಂಗಗಳೂ ರಾಜ್ಯಗಳೂ ಕರ್ತ ನನ್ನು ಸೇವಿಸುವದಕ್ಕೆ ಒಟ್ಟಾಗಿ ಕೂಡಿ ಬರುವಾಗ |
20
|
ಚೀಯೋನಿನಲ್ಲಿ ಕರ್ತನ ಹೆಸರೂ ಯೆರೂಸಲೇಮಿ ನಲ್ಲಿ ಆತನ ಸ್ತೋತ್ರವೂ ಸಾರಲ್ಪಡುವ ಹಾಗೆ. |
21
|
ಕರ್ತನು ಸೆರೆಯವರ ನರಳುವಿಕೆಯನ್ನು ಕೇಳುವ ದಕ್ಕೂ ಮರಣಕ್ಕೆ ನೇಮಕವಾದವರನ್ನು ಬಿಡಿಸು ವದಕ್ಕೂ |
22
|
ತನ್ನ ಪರಿಶುದ್ಧವಾದ ಉನ್ನತ ಸ್ಥಳದಿಂದ ಕಣ್ಣಿಟ್ಟು ಆಕಾಶದಿಂದ ಭೂಮಿಯನ್ನು ನೋಡಿದ್ದಾನೆ. |
23
|
ಆತನು ನನ್ನ ಶಕ್ತಿಯನ್ನು ಮಾರ್ಗದಲ್ಲಿ ಕುಂದಿಸಿ ನನ್ನ ದಿವಸಗಳನ್ನು ಕಡಿಮೆ ಮಾಡಿದನು. |
24
|
ಓ ನನ್ನ ದೇವರೇ, ನನ್ನ ದಿವಸಗಳ ಮಧ್ಯದಲ್ಲಿ ನನ್ನನ್ನು ಒಯ್ಯಬೇಡ; ನಿನ್ನ ವರುಷಗಳು ತಲತಲಾಂತರಗಳಿಗೂ ಅವೆ ಅಂದೆನು. |
25
|
ನೀನು ಪೂರ್ವಕಾಲದಲ್ಲಿ ಭೂಮಿ ಯನ್ನು ಸ್ಥಾಪಿಸಿದಿ; ಆಕಾಶಗಳು ನಿನ್ನ ಕೈ ಕೆಲಸಗಳಾ ಗಿವೆ. |
26
|
ಅವು ನಾಶವಾಗುವವು; ಆದರೆ ನೀನು ಸ್ಥಿರ ವಾಗಿರುತ್ತೀ; ಹೌದು, ಅವುಗಳೆಲ್ಲಾ ವಸ್ತ್ರದ ಹಾಗೆ ಜೀರ್ಣವಾಗುವವು; ಉಡುಪಿನ ಹಾಗೆ ಅವುಗ ಳನ್ನು ಬದಲಾಯಿಸುವಿ; ಆಗ ಅವು ಬದಲಾಗುವವು. |
27
|
ಆದರೆ ನೀನು ಏಕ ರೀತಿಯಾಗಿರುತ್ತೀ; ನಿನ್ನ ವರುಷಗಳು ಮುಗಿಯವು. |
28
|
ನಿನ್ನ ಸೇವಕರ ಮಕ್ಕಳು ನೆಲೆಯಾಗಿದ್ದು ಅವರ ಸಂತತಿಯು ನಿನ್ನ ಮುಂದೆ ಸ್ಥಾಪಿಸಲ್ಪಡುವದು. |
Psalms 102:27 English Language Bible Words basic statistical display
COMING SOON ...