Indian Language Bible Word Collections
Psalms 12:8
Psalms Chapters
Psalms 12 Verses
Books
Old Testament
New Testament
Bible Versions
English
Tamil
Hebrew
Greek
Malayalam
Hindi
Telugu
Kannada
Gujarati
Punjabi
Urdu
Bengali
Oriya
Marathi
Assamese
Books
Old Testament
New Testament
Psalms Chapters
Psalms 12 Verses
1
|
ಕರ್ತನೇ, ಸಹಾಯಮಾಡು; ಯಾಕಂದರೆ ಭಕ್ತನು ಮುಗಿದು ಹೋಗುತ್ತಾನೆ; ನಂಬಿಗಸ್ತರು ಮನುಷ್ಯನ ಮಕ್ಕಳೊಳಗಿಂದ ಇಲ್ಲದೆ ಹೋಗುತ್ತಾರೆ. |
2
|
ಒಬ್ಬೊಬ್ಬನು ತನ್ನ ನೆರೆಯವನ ಸಂಗಡ ವ್ಯರ್ಥವಾದ ಮಾತನ್ನು ಆಡುತ್ತಾನೆ; ಮುಖಸ್ತುತಿಯ ತುಟಿಯಿಂದಲೂ ವಂಚನೆಯ ಹೃದಯದಿಂದಲೂ ಅವರು ಮಾತನಾಡುತ್ತಾರೆ. |
3
|
ಮುಖಸ್ತುತಿಯ ಎಲ್ಲಾ ತುಟಿಗಳನ್ನೂ ಗರ್ವದಿಂದ ಮಾತನಾಡುವ ನಾಲಿಗೆಯನ್ನೂ ಕರ್ತನು ಕಡಿದು ಬಿಡುವನು. |
4
|
ಅವರು--ನಮ್ಮ ನಾಲಿಗೆಯಿಂದ ನಾವು ಬಲಗೊಳ್ಳುವೆವು; ನಮ್ಮ ತುಟಿಗಳು ನಮ್ಮವೇ; ನಮಗೆ ಪ್ರಭುವು ಯಾರು ಅನ್ನುತ್ತಾರೆ. |
5
|
ಬಡವರ ವ್ಯಥೆಗೋಸ್ಕರವೂ ಗತಿಯಿಲ್ಲದವರ ನರ ಳುವಿಕೆಗೋಸ್ಕರವೂ ಈಗ ನಾನು ಏಳುವೆನು ಎಂದು ಕರ್ತನು ಹೇಳುತ್ತಾನೆ; ಉಬ್ಬಿಕೊಂಡವನಿಂದ ನಾನು ಬಡವನನ್ನು ಕಾಪಾಡುವೆನು. |
6
|
ಕರ್ತನ ವಾಕ್ಯಗಳು ಶುದ್ಧವಾಕ್ಯಗಳಾಗಿವೆ: ಮಣ್ಣಿನ ಕುಲುಮೆಯಲ್ಲಿ ಏಳು ಸಾರಿ ಕರಗಿ ಪುಟಕ್ಕೆ ಹಾಕಿದ ಬೆಳ್ಳಿಯಂತೆ ಇವೆ. |
7
|
ಓ ಕರ್ತನೇ, ನೀನು ಅವರನ್ನು ಕಾಪಾಡಿ ಯುಗ ಯುಗಕ್ಕೂ ಈ ಸಂತತಿಯಿಂದ ಅವರನ್ನು ಬಿಡಿಸಿ ಕಾಯುವಿ. |
8
|
ಅತಿ ನೀಚರು ಹೆಚ್ಚಿಸಲ್ಪಟ್ಟಾಗ ದುಷ್ಟರು ಪ್ರತಿಯೊಂದು ಕಡೆಗೂ ತಿರುಗಾಡುತ್ತಾರೆ. |