1
|
ಕರ್ತನನ್ನು ಕೊಂಡಾಡಿರಿ, ಆತನು ಒಳ್ಳೆಯವನು; ಆತನ ಕರುಣೆಯು ಎಂದೆಂದಿಗೂ ಅದೆ. |
2
|
ದೇವರುಗಳ ದೇವರನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. |
3
|
ಕರ್ತರ ಕರ್ತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. |
4
|
ಒಬ್ಬನಾಗಿ ದೊಡ್ಡ ಅದ್ಭುತಗಳನ್ನು ಮಾಡುವಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. |
5
|
ಆಕಾಶ ವನ್ನು ಜ್ಞಾನದಿಂದ ಉಂಟುಮಾಡಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. |
6
|
ಭೂಮಿಯನ್ನು ನೀರಿನ ಮೇಲೆ ಹಾಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. |
7
|
ದೊಡ್ಡ ಬೆಳಕುಗಳನ್ನು ಉಂಟು ಮಾಡಿದಾತ ನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. |
8
|
ಹಗಲನ್ನು ಆಳುವದಕ್ಕೆ ಸೂರ್ಯನನ್ನು ಉಂಟು ಮಾಡಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. |
9
|
ಇರುಳನ್ನು ಆಳುವದಕ್ಕೆ ಚಂದ್ರ ನಕ್ಷತ್ರಗಳನ್ನು ಉಂಟು ಮಾಡಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. |
10
|
ಐಗುಪ್ತದ ಚೊಚ್ಚಲಾದವುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. |
11
|
ಇಸ್ರಾಯೇಲನನ್ನು ಅವರ ಮಧ್ಯದಲ್ಲಿಂದ ಹೊರಗೆ ಬರಮಾಡಿದಾತನನ್ನು ಕೊಂಡಾಡಿರಿ; ಆತನ ಕರು ಣೆಯು ಎಂದೆಂದಿಗೂ ಅದೆ. |
12
|
ಬಲವಾದ ಕೈಯಿಂ ದಲೂ ಚಾಚಿದ ತೋಳಿನಿಂದಲೂ ಅವರನ್ನು ಹೊರಗೆ ತಂದನು; ಆತನ ಕರುಣೆಯು ಎಂದೆಂದಿಗೂ ಅದೆ. |
13
|
ಕೆಂಪು ಸಮುದ್ರವನ್ನು ವಿಭಾಗಿಸಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. |
14
|
ಇಸ್ರಾಯೇಲನ್ನು ಅದರ ನಡುವೆ ನಡಿಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. |
15
|
ಫರೋಹನನ್ನೂ ಅವನ ಸೈನ್ಯವನ್ನೂ ಕೆಂಪು ಸಮು ದ್ರದಲ್ಲಿ ಕೆಡವಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. |
16
|
ತನ್ನ ಜನರನ್ನು ಅರಣ್ಯದಲ್ಲಿ ನಡೆಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. |
17
|
ದೊಡ್ಡ ಅರಸುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. |
18
|
ಪ್ರಸಿ ದ್ಧರಾದ ಅರಸುಗಳನ್ನು ಕೊಂದುಹಾಕಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. |
19
|
ಅಮೋರಿಯರ ಅರಸನಾದ ಸೀಹೋನನು ಒಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ. |
20
|
ಬಾಷಾ ನಿನ ಅರಸನಾದ ಓಗನೊಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ. |
21
|
ಅವರ ದೇಶವನ್ನು ಬಾಧ್ಯತೆ ಯಾಗಿ ಕೊಟ್ಟಾತನನ್ನು ಕೊಂಡಾಡಿರಿ; ಆತನ ಕರು ಣೆಯು ಎಂದೆಂದಿಗೂ ಅದೆ. |
22
|
ತನ್ನ ಸೇವಕನಾದ ಇಸ್ರಾಯೇಲಿಗೆ ಅದು ಬಾಧ್ಯತೆಯಾಗಿದೆ; ಆತನ ಕರುಣೆಯು ಎಂದೆಂದಿಗೂ ಅದೆ. |
23
|
ನಮ್ಮ ದೀನಸ್ಥಿತಿಯಲ್ಲಿ ನಮ್ಮನ್ನು ನೆನಸಿ ಕೊಂಡಾ ತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂ ದಿಗೂ ಅದೆ. |
24
|
ನಮ್ಮ ವೈರಿಗಳಿಂದ ನಮ್ಮನ್ನು ಬಿಡಿ ಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. |
25
|
ಮನುಷ್ಯರಿಗೆಲ್ಲಾ ಆಹಾರ ಕೊಡುವಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. |
26
|
ಪರಲೋಕದ ದೇವರನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. |
Psalms 136:4 English Language Bible Words basic statistical display
COMING SOON ...