Indian Language Bible Word Collections
Psalms 6:10
Psalms Chapters
Psalms 6 Verses
Books
Old Testament
New Testament
Bible Versions
English
Tamil
Hebrew
Greek
Malayalam
Hindi
Telugu
Kannada
Gujarati
Punjabi
Urdu
Bengali
Oriya
Marathi
Books
Old Testament
New Testament
Psalms Chapters
Psalms 6 Verses
1
|
ಓ ಕರ್ತನೇ, ನಿನ್ನ ಕೋಪದಿಂದ ನನ್ನನ್ನು ಗದರಿಸಬೇಡ; ನಿನ್ನ ಉಗ್ರತೆಯಿಂದ ನನ್ನನ್ನು ದಂಡಿಸಬೇಡ. |
2
|
ಓ ಕರ್ತನೇ, ನನ್ನ ಮೇಲೆ ದಯವಿಡು; ಯಾಕಂದರೆ ನಾನು ಬಲಹೀನನಾಗಿದ್ದೇನೆ. ಓ ಕರ್ತನೇ, ನನ್ನನ್ನು ಸ್ವಸ್ಥಮಾಡು, ನನ್ನ ಎಲುಬುಗಳು ತಲ್ಲಣಿಸುತ್ತವೆ. |
3
|
ನನ್ನ ಪ್ರಾಣವು ಸಹ ಬಹಳವಾಗಿ ತಲ್ಲಣಿಸುತ್ತದೆ; ಆದರೆ ಓ ಕರ್ತನೇ, ಇದು ಎಲ್ಲಿಯ ವರೆಗೆ? |
4
|
ಓ ಕರ್ತನೇ, ಹಿಂತಿರುಗಿ ನನ್ನ ಪ್ರಾಣವನ್ನು ತಪ್ಪಿಸಿಬಿಡು. ಹಾ! ನಿನ್ನ ಕರುಣೆಯ ನಿಮಿತ್ತ ನನ್ನನ್ನು ರಕ್ಷಿಸು. |
5
|
ಮರಣದಲ್ಲಿ ನಿನ್ನ ಜ್ಞಾಪಕವಿಲ್ಲ; ಸಮಾಧಿ ಯಲ್ಲಿ ನಿನಗೆ ಉಪಕಾರಸ್ತುತಿ ಮಾಡುವವರು ಯಾರು? |
6
|
ನಾನು ನರನರಳಿ ದಣಿದಿದ್ದೇನೆ; ಪ್ರತಿ ರಾತ್ರಿಯೂ ನನ್ನ ಕಣ್ಣೀರಿನಿಂದ ಮಂಚವು ತೇಲಾ ಡುತ್ತದೆ. ಹಾಸಿಗೆಯು ಕಣ್ಣೀರಿನಿಂದ ನೆನೆದು ಹೋಗುತ್ತದೆ. |
7
|
ದುಃಖದಿಂದ ನನ್ನ ಕಣ್ಣು ಬತ್ತಿ ಹೋಗಿದೆ. ನನ್ನ ಸಕಲ ವೈರಿಗಳಿಂದ ಅದು ಡೊಗರುಬಿದ್ದಿದೆ. |
8
|
ಅಕ್ರಮ ಮಾಡುವವರೇ, ನನ್ನ ಬಳಿಯಿಂದ ತೊಲ ಗಿರಿ; ಅಳುವ ನನ್ನ ಸ್ವರವನ್ನು ಕರ್ತನು ಕೇಳಿದ್ದಾನೆ; |
9
|
ಕರ್ತನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನೆ; ಕರ್ತನು ನನ್ನ ಪ್ರಾರ್ಥನೆಯನ್ನು ಅಂಗೀಕರಿಸುವನು. |
10
|
ನನ್ನ ಶತ್ರುಗಳೆಲ್ಲರು ನಾಚಿಕೆಪಟ್ಟು ಬಹಳವಾಗಿ ಕಳವಳ ಗೊಳ್ಳಲಿ; ಅವರು ತಿರುಗಿಕೊಂಡು ಕ್ಷಣಮಾತ್ರದಲ್ಲಿ ನಾಚಿಕೆಪಡಲಿ. |