Bible Languages

Indian Language Bible Word Collections

Bible Versions

Books

1 Chronicles Chapters

1 Chronicles 13 Verses

Bible Versions

Books

1 Chronicles Chapters

1 Chronicles 13 Verses

1 ದಾವೀದನು ತನ್ನ ಎಲ್ಲಾ ಸೇನಾಧಿಪತಿಗಳೊಂದಿಗೆ ಮಾತನಾಡಿದನು. ಅವನು ಸಹಸ್ರಾಧಿಪತಿಗಳೊಂದಿಗೆ, ಶತಾಧಿಪತಿಗಳೊಂದಿಗೆ ಮತ್ತು ಪ್ರತಿಯೊಬ್ಬ ನಾಯಕನೊಂದಿಗೆ ಚರ್ಚಿಸಿದನು.
2 ಆಮೇಲೆ ಇಸ್ರೇಲ್ ಜನರನ್ನು ಕರೆದು ಅವರಿಗೆ ಹೀಗಂದನು, “ಇದು ನಿಮಗೆ ಒಳ್ಳೆಯ ಆಲೋಚನೆ ಎನಿಸಿದರೆ ಮತ್ತು ಇದು ಯೆಹೋವನ ಚಿತ್ತಕ್ಕನುಸಾರವಾಗಿದ್ದರೆ, ಇಸ್ರೇಲಿನ ಎಲ್ಲಾ ಸ್ಥಳಗಳಲ್ಲಿರುವ ನಮ್ಮ ಸಹೋದರರಿಗೆ ಒಂದು ಸಂದೇಶವನ್ನು ಕಳುಹಿಸೋಣ. ನಮ್ಮ ಸಹೋದರರೊಂದಿಗೆ ಊರುಗಳಲ್ಲಿಯೂ ಊರುಗಳ ಸಮೀಪದಲ್ಲಿರುವ ಹೊಲಗಳಲ್ಲಿಯೂ ವಾಸವಾಗಿರುವ ಯಾಜಕರಿಗೂ ಲೇವಿಯರಿಗೂ ಈ ಸಂದೇಶವನ್ನು ಕಳುಹಿಸಿಕೊಡೋಣ: ‘ನೀವು ಬಂದು ನಮ್ಮೊಂದಿಗೆ ಸೇರಿಕೊಳ್ಳಿ.
3 ನಾವೆಲ್ಲರೂ ಹೋಗಿ ಒಡಂಬಡಿಕೆಯ ಪೆಟ್ಟಿಗೆಯನ್ನು ಜೆರುಸಲೇಮಿಗೆ ತರೋಣ. ಸೌಲನು ಅರಸನಾಗಿದ್ದಾಗ ನಾವು ಒಡಂಬಡಿಕೆಯ ಪೆಟ್ಟಿಗೆಯ ಬಗ್ಗೆ ಆಸಕ್ತಿವಹಿಸಲಿಲ್ಲ. “
4 ಆದ್ದರಿಂದ ಇಸ್ರೇಲರೆಲ್ಲರೂ ದಾವೀದನ ಸಲಹೆಗೆ ಒಪ್ಪಿದರು ಮತ್ತು ಅದು ಯೋಗ್ಯವಾದದ್ದೆಂದು ತೀರ್ಮಾನಿಸಿದರು.
5 ಆಗ ದಾವೀದನು ಈಜಿಪ್ಟಿನ ಶೀಹೋರ್ ನದಿಯಿಂದ ಹಿಡಿದು ಲೆಬೊಹಮಾತ್ ಪಟ್ಟಣದ ತನಕ ಇದ್ದ ಇಸ್ರೇಲರನ್ನೆಲ್ಲಾ ಒಟ್ಟು ಸೇರಿಸಿದನು; ಅವರೆಲ್ಲರೂ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಕಿರ್ಯತ್ಯಾರೀಮಿನಿಂದ ತರಲು ಹೊರಟರು.
6 ಇಸ್ರೇಲಿನ ಎಲ್ಲಾ ಜನರು ದಾವೀದನೊಂದಿಗೆ ಯೆಹೂದದ ಬಾಳಾ ಎಂಬ ಸ್ಥಳಕ್ಕೆ (ಕೀರ್ಯಾತ್ಯಾರೀಮಿನ ಇನ್ನೊಂದು ಹೆಸರು ಬಾಳಾ.) ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ತರಲು ನಡೆದರು. ಆತನು ಕೆರೂಬಿಗಳ ನಡುವೆ ಆಸೀನನಾಗಿರುತ್ತಾನೆ. ಆ ಪೆಟ್ಟಿಗೆಯು ಯೆಹೋವನ ಹೆಸರಿನಲ್ಲಿ ಕರೆಯಲ್ಪಡುತ್ತದೆ.
7 ಅಬೀನಾದಾಬನ ಮನೆಯಲ್ಲಿದ್ದ ಒಡಂಬಡಿಕೆಯ ಪೆಟ್ಟಿಗೆಯನ್ನು ಜನರು ಎತ್ತಿ ಒಂದು ಹೊಸ ಬಂಡಿಯಲ್ಲಿಟ್ಟರು. ಉಜ್ಜನೂ ಅಹಿಯೋವನೂ ಆ ಬಂಡಿಯನ್ನು ನಡೆಸಿದರು.
8 ದಾವೀದನೂ ಎಲ್ಲಾ ಇಸ್ರೇಲರೂ ದೇವರ ಮುಂದೆ ಸಂತೋಷದಿಂದ ಹಾಡುತ್ತಾ ಕುಣಿಯುತ್ತಾ ಹೋದರು. ಹಾರ್ಪ್‌ವಾದ್ಯವನ್ನು, ಲೈರ್‌ವಾದ್ಯವನ್ನು, ತಬಲವನ್ನು, ತಾಳವನ್ನು ಮತ್ತು ತುತ್ತೂರಿಯನ್ನು ಬಾರಿಸುತ್ತಾ ಹಾಡುತ್ತಾ ದೇವರಿಗೆ ಸ್ತೋತ್ರ ಮಾಡಿದರು.
9 ಅವರು ಕೀದೋನನ ಕಣಕ್ಕೆ ಬಂದಾಗ ಗಾಡಿ ಎಳೆಯುತ್ತಿದ್ದ ಎತ್ತುಗಳು ಮುಗ್ಗರಿಸಿದವು. ಆಗ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯು ಬೀಳುವುದರಲ್ಲಿತ್ತು. ಉಜ್ಜನು ತನ್ನ ಕೈಯನ್ನು ಚಾಚಿ ಪೆಟ್ಟಿಗೆಯನ್ನು ಹಿಡಿಯಲು ಹೋದನು.
10 ಆದರೆ ಯೆಹೋವನು ಅವನ ಮೇಲೆ ಕೋಪಗೊಂಡು ಆ ಪವಿತ್ರವಾದ ಪೆಟ್ಟಿಗೆಯನ್ನು ಮುಟ್ಟಿದ್ದಕ್ಕೆ ಅವನನ್ನು ಅಲ್ಲಿಯೇ ಸಾಯಿಸಿದನು.
11 ದಾವೀದನು ಇದನ್ನು ನೋಡಿ ತುಂಬಾ ಬೇಸರಗೊಂಡನು. ಆ ಸಮಯದಿಂದ ಈ ತನಕವೂ ಆ ಸ್ಥಳಕ್ಕೆ, “ಪೆರೆಚ್‌ಉಜ್ಜ” ಎಂಬ ಹೆಸರೇ ಇದೆ.
12 ಆ ದಿವಸದಲ್ಲಿ ದಾವೀದನು ಯೆಹೋವನಿಗೆ ತುಂಬಾ ಭಯಪಟ್ಟು, “ನಾನು ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಜೆರುಸಲೇಮಿಗೆ ತರಲು ಆಗುವುದಿಲ್ಲ” ಅಂದುಕೊಂಡನು.
13 ದಾವೀದನು ದೇವರಿಗೆ ಭಯಪಟ್ಟನು. ದೇವರ ಒಡಂಬಡಿಕೆಯ ಪೆಟ್ಟಿಗೆಯನ್ನು ಓಬೇದೆದೋಮನ ಮನಯಲ್ಲಿಯೇ ಬಿಟ್ಟನು. ಓಬೇದೆದೋಮನು ಗತ್ ಊರಿನವನು.
14 ಆ ಮನೆಯಲ್ಲಿ ದೇವರ ಒಡಂಬಡಿಕೆಯ ಪೆಟ್ಟಿಗೆಯು ಮೂರು ತಿಂಗಳ ಕಾಲವಿತ್ತು. ಯೆಹೋವನು ಆ ಮನೆಯನ್ನು ಆಶೀರ್ವದಿಸಿ ಅಭಿವೃದ್ಧಿಪಡಿಸಿದನು.

1-Chronicles 13:1 Kannada Language Bible Words basic statistical display

COMING SOON ...

×

Alert

×