1
|
ಅನಂತರ ದಾವೀದನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೋದನು. ಅವರನ್ನು ಸೋಲಿಸಿ ಗತ್ ಪಟ್ಟಣ ಮತ್ತು ಅದರ ಸುತ್ತುಮುತ್ತಲಿದ್ದ ಊರುಗಳನ್ನು ವಶಪಡಿಸಿಕೊಂಡನು. |
2
|
ಅನಂತರ ದಾವೀದನು ಮೋವಾಬ್ಯರ ಸಂಗಡ ಯುದ್ಧಮಾಡಿ ಸೋಲಿಸಿದನು. ಅವರು ದಾವೀದನ ಸೇವಕರಾಗಿ ಕಪ್ಪ ಕೊಡಬೇಕಾಯಿತು. |
3
|
ದಾವೀದನು ಚೋಬದ ಅರಸನಾದ ಹದದೆಜರನ ಸೈನ್ಯದೊಡನೆ ಕಾದಾಡಿ ಅವರನ್ನು ಹಮಾತಿನ ತನಕ ಹಿಂದಟ್ಟಿದನು. ಹದದೆಜರನು ತನ್ನ ರಾಜ್ಯವನ್ನು ಯೂಫ್ರೇಟೀಸ್ ನದಿಯ ತನಕ ವಿಸ್ತರಿಸಲು ಪ್ರಯತ್ನಿಸುತ್ತಿದ್ದನು. |
4
|
ಹದದೆಜರನಿಂದ ದಾವೀದನು ಒಂದು ಸಾವಿರ ರಥಗಳನ್ನೂ ಏಳು ಸಾವಿರ ಮಂದಿ ರಾಹುತರನ್ನೂ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದು ಹದದೆಜರನ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದು ಆ ಕುದುರೆಗಳು ರಥಗಳನ್ನು ಎಳೆಯದಂತೆ ಮಾಡಿದನು. ಆದರೆ ನೂರು ರಥಗಳನ್ನು ಎಳೆಯಲು ಬೇಕಾಗುವಷ್ಟು ಕುದುರೆಗಳನ್ನು ಉಳಿಸಿದನು. |
5
|
ಹದದೆಜರನಿಗೆ ದಮಸ್ಕದಲ್ಲಿರುವ ಅರಾಮ್ಯರು ಸಹಾಯಕ್ಕೆ ಬಂದರು. ಆದರೆ ದಾವೀದನು ಅರಾಮ್ಯರ ಸೈನ್ಯವನ್ನು ಸೋಲಿಸಿ ಅವರ ಇಪ್ಪತ್ತೆರಡು ಸಾವಿರ ಮಂದಿ ಸೈನಿಕರನ್ನು ಕೊಂದನು. |
6
|
ನಂತರ ಅರಾಮ್ಯರ ದಮಸ್ಕದಲ್ಲಿ ತನ್ನ ಕೋಟೆಯನ್ನು ಸ್ಥಾಪಿಸಿದನು. ಅರಾಮ್ಯರು ದಾವೀದನ ಸೇವಕರಾಗಿ ಅವನಿಗೆ ಕಪ್ಪವನ್ನು ತಂದೊಪ್ಪಿಸುತ್ತಿದ್ದರು. ಹೀಗೆ ದಾವೀದನು ಹೋದ ಕಡೆಯಲ್ಲೆಲ್ಲಾ ಯೆಹೋವನು ಅವನಿಗೆ ಜಯವನ್ನು ಕೊಟ್ಟನು. |
7
|
ಹದದೆಜರನ ಸೇನಾಧಿಪತಿಗಳು ಉಪಯೋಗಿಸುತ್ತಿದ್ದ ಬಂಗಾರದ ಗುರಾಣಿಗಳನ್ನು ತೆಗೆದುಕೊಂಡು ಜೆರುಸಲೇಮಿಗೆ ತಂದನು. |
8
|
8ಅಲ್ಲದೆ ಟಿಭತ್ ಮತ್ತು ಕೂನ್ ಪಟ್ಟಣಗಳಿಂದ ಬಹಳ ತಾಮ್ರವನ್ನು ತೆಗೆದುಕೊಂಡನು. ಇವುಗಳಿಂದ ಸೊಲೊಮೋನನು ತಾಮ್ರದ ತೊಟ್ಟಿ, ತಾಮ್ರದ ಕಂಬ ಮತ್ತು ದೇವಾಲಯದ ಬೇರೆ ಸಾಮಾಗ್ರಿಗಳನ್ನು ಮಾಡಿಸಿದನು. |
9
|
ದಾವೀದನು ಹದದೆಜರನನ್ನು ಸದೆಬಡಿದನೆಂದು ತಿಳಿದ ಹಮಾತಿನ ಅರಸನಾದ ತೋವನು |
10
|
ತನ್ನ ಮಗನಾದ ಹದೋರಾಮನನ್ನು ದಾವೀದನ ಬಳಿಗೆ ಸಮಾಧಾನಕ್ಕಾಗಿಯೂ ಆಶೀರ್ವದಿಸುವುದಕ್ಕಾಗಿಯೂ ಕಳುಹಿಸಿದನು; ಯಾಕಂದರೆ ದಾವೀದನು ಹದದೆಜರನ ವಿರುದ್ಧ ಹೋರಾಡಿ ಅವನನ್ನು ಸೋಲಿಸಿದ್ದನು. ಹದದೆಜರನು ತೋವನೊಂದಿಗೆ ಯುದ್ಧ ಮಾಡಿದ್ದನು. ಹದೋರಾಮನು ಬೆಳ್ಳಿಬಂಗಾರಗಳ ಮತ್ತು ತಾಮ್ರಗಳ ವಸ್ತುಗಳನ್ನು ದಾವೀದನಿಗೆ ಕೊಟ್ಟನು. |
11
|
ದಾವೀದ ರಾಜನು ಅವುಗಳನ್ನು ಶುದ್ಧೀಕರಿಸಿ ಯೆಹೋವನಿಗೆ ಪ್ರತಿಷ್ಠಿಸಿದನು. ಅದೇ ರೀತಿಯಾಗಿ ಎದೋಮ್ಯರಿಂದ, ಮೋವಾಬ್ಯರಿಂದ, ಫಿಲಿಷ್ಟಿಯರಿಂದ, ಅಮಾಲೇಕ್ಯರಿಂದ ಮತ್ತು ಅಮ್ಮೋನಿಯರಿಂದ ತೆಗೆದುಕೊಂಡಿದ್ದ ಬೆಳ್ಳಿಬಂಗಾರದ ವಸ್ತುಗಳನ್ನು ಶುದ್ಧಿಮಾಡಿ ದೇವರಿಗೆ ಪ್ರತಿಷ್ಠಿಸಿದನು. |
12
|
ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಒಮ್ಮೆ ಹದಿನೆಂಟು ಸಾವಿರ ಮಂದಿ ಎದೋಮ್ಯರನ್ನು ಕೊಂದುಹಾಕಿದನು. |
13
|
ಅಬ್ಷೈಯು ಎದೋಮಿನಲ್ಲಿ ಕೋಟೆಯನ್ನು ಕಟ್ಟಿ ಎದೋಮ್ಯರೆಲ್ಲರನ್ನು ದಾವೀದನ ಸೇವಕರನ್ನಾಗಿ ಮಾಡಿದನು. ದಾವೀದನು ಹೋದಕಡೆಗಳಲ್ಲೆಲ್ಲಾ ಯೆಹೋವನು ಅವನಿಗೆ ಜಯವನ್ನು ಕೊಟ್ಟನು. |
14
|
ಇಸ್ರೇಲರೆಲ್ಲರಿಗೆ ಅರಸನಾಗಿದ್ದ ದಾವೀದನು ಪಕ್ಷಪಾತವಿಲ್ಲದೆ ನ್ಯಾಯತೀರಿಸುತ್ತಿದ್ದನು. |
15
|
ಚೆರೂಯಳ ಮಗನಾದ ಯೋವಾಬನು ಅವನ ಪ್ರಧಾನ ಸೇನಾಪತಿಯಾಗಿದ್ದನು. ಅಹೀಲೂದನ ಮಗನಾದ ಯೆಹೋಷಾಫಾಟನು ಲೇಖಕನಾಗಿದ್ದು ದಾವೀದನ ಚರಿತ್ರೆಯನ್ನು ಬರೆದಿಟ್ಟನು. |
16
|
ಅಹೀಟೂಬನ ಮಗನಾದ ಚಾದೋಕನೂ ಎಬ್ಯಾತಾರನ ಮಗನಾದ ಅಬೀಮೆಲೆಕನೂ ಯಾಜಕರಾಗಿದ್ದರು. ಶವ್ಷನು ಲೇಖಕನಾಗಿದ್ದನು. |
17
|
ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳಿಗೆ ಬೆನಾಯನು ಅಧಿಕಾರಿಯಾಗಿದ್ದನು. ಬೆನಾಯನು ಯೆಹೋಯಾದನ ಮಗ. ದಾವೀದನ ಗಂಡುಮಕ್ಕಳು ಮುಖ್ಯ ಸ್ಥಾನಗಳಲ್ಲಿದ್ದು ದಾವೀದನ ಸೇವೆ ಮಾಡುತ್ತಿದ್ದರು. |
1-Chronicles 18:9 Kannada Language Bible Words basic statistical display
COMING SOON ...