Bible Languages

Indian Language Bible Word Collections

Bible Versions

Books

1 Chronicles Chapters

1 Chronicles 22 Verses

Bible Versions

Books

1 Chronicles Chapters

1 Chronicles 22 Verses

1 ಆಗ ದಾವೀದನು, “ದೇವರ ಆಲಯವೂ ಆತನ ಯಜ್ಞವೇದಿಕೆಯೂ ಇದೇ ಸ್ಥಳದಲ್ಲಿ ಕಟ್ಟಲ್ಪಡುವದು” ಅಂದನು.
2 ಇಸ್ರೇಲಿನಲ್ಲಿ ವಾಸಿಸುತ್ತಿದ್ದ ಪರದೇಶಸ್ಥರನ್ನೆಲ್ಲಾ ದಾವೀದನು ಬರಹೇಳಿ ಅವರಲ್ಲಿಂದ ಕಲ್ಲುಕುಟಿಗರನ್ನು ಆರಿಸಿ ತೆಗೆದುಕೊಂಡನು. ದೇವಾಲಯವನ್ನು ಕಟ್ಟಲು ಕಲ್ಲುಗಳನ್ನು ಕೆತ್ತಿ ತಯಾರಿಸುವ ಕೆಲಸ ಅವರದಾಗಿತ್ತು.
3 ದೇವಾಲಯದ ಬಾಗಿಲುಗಳಿಗೆ ಬೇಕಾದ ಮೊಳೆಗಳಿಗೆ ಮತ್ತು ಕೀಲುಗಳಿಗೆ ಬೇಕಾದ ಕಬ್ಬಿಣವನ್ನು ಶೇಖರಿಸಿಟ್ಟನು. ಅವನು ತನ್ನ ಬಳಿಯಲ್ಲಿ ತೂಕಮಾಡಲು ಸಾಧ್ಯವಾಗದಷ್ಟು ತಾಮ್ರವನ್ನು ಶೇಖರಿಸಿಟ್ಟಿದ್ದನು.
4 ಅಲ್ಲದೆ ಲೆಕ್ಕಮಾಡಲು ಅಸಾಧ್ಯವಾದಷ್ಟು ದೇವದಾರು ಮರಗಳ ದಿಮ್ಮಿಯನ್ನು ಕೂಡಿಸಿಟ್ಟಿದ್ದನು. ತೂರ್ಯರು ಮತ್ತು ಚೀದೋನಿನವರು ಆ ದಿಮ್ಮಿಗಳನ್ನು ದಾವೀದನಿಗೆ ತಂದು ಕೊಟ್ಟಿದ್ದರು.
5 ದಾವೀದನು, “ನಾವು ನಮ್ಮ ದೇವರಿಗೆ ಮಹಾದೊಡ್ಡ ಆಲಯವನ್ನು ಕಟ್ಟಿಸಬೇಕು. ಆದರೆ ನನ್ನ ಮಗನಾದ ಸೊಲೊಮೋನನು ಇನ್ನೂ ಎಳೆಪ್ರಾಯದವನು; ಅವನು ಕಲಿಯ ಬೇಕಾದದ್ದು ಇನ್ನೂ ಬೇಕಾದಷ್ಟಿದೆ. ದೇವಾಲಯವು ಎಲ್ಲಾ ಜನಾಂಗಗಳಲ್ಲಿ ಪ್ರಸಿದ್ಧವಾಗಿದ್ದು ಅದರ ಸೌಂದರ್ಯ ಮತ್ತು ವಿನ್ಯಾಸವು ಹೆಸರುವಾಸಿಯಾಗಿರಬೇಕು. ಅದಕ್ಕಾಗಿಯೇ ನಾನು ಆ ದೇವಾಲಯಕ್ಕಾಗಿ ಸಮಸ್ತವನ್ನು ಸಿದ್ಧಪಡಿಸುತ್ತೇನೆ” ಅಂದುಕೊಂಡನು. ಅಲ್ಲದೆ ಅವನು ಸಾಯುವುದಕ್ಕಿಂತ ಮುಂಚೆ ದೇವಾಲಯವನ್ನು ಕಟ್ಟುವುದಕ್ಕೆ ಬೇಕಾಗಿರುವವುಗಳನ್ನೆಲ್ಲಾ ಕೂಡಿಸಿಟ್ಟನು.
6 ದಾವೀದನು ತನ್ನ ಮಗನಾದ ಸೊಲೊಮೋನನನ್ನು ಕರೆದು ಇಸ್ರೇಲಿನ ದೇವರಾದ ಯೆಹೋವನಿಗೆ ಆಲಯವನ್ನು ಕಟ್ಟುವಂತೆ ಹೇಳಿದನು.
7 ದಾವೀದನು ಸೊಲೊಮೋನನಿಗೆ, “ನನ್ನ ಮಗನೇ, ನಾನು ನನ್ನ ದೇವರ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಬೇಕೆಂದಿದ್ದೆನು.
8 ಆದರೆ ಯೆಹೋವನು ನನಗೆ, ‘ದಾವೀದನೇ, ನೀನು ಅನೇಕ ಯುದ್ಧಗಳನ್ನು ಮಾಡಿ ಅನೇಕರನ್ನು ಕೊಂದಿರುತ್ತೀ. ಹೀಗಿರುವದರಿಂದ ನೀನು ನನಗೆ ಆಲಯವನ್ನು ಕಟ್ಟಬಾರದು.
9 ಆದರೆ ನಿನ್ನ ನಂತರ ಬರುವ ನಿನ್ನ ಮಗನು ಸಮಾಧಾನ ಪುರುಷನಾಗಿರುವನು. ಅವನ ರಾಜ್ಯದಲ್ಲಿ ನಾನು ಶಾಂತಿಯನ್ನು ನೆಲೆಗೊಳಿಸುವೆನು. ಅವನ ಸುತ್ತಮುತ್ತಲಿರುವ ವೈರಿಗಳಿಂದ ಅವನಿಗೆ ಯಾವ ಕೇಡೂ ಉಂಟಾಗದು. ಅವನೇ ಸೊಲೊಮೋನನು. ಅವನ ಕಾಲದಲ್ಲಿ ಇಸ್ರೇಲರು ಸಮಾಧಾನದಿಂದ ವಾಸಿಸುವರು.
10 ಅವನು ನನ್ನ ಹೆಸರಿಗಾಗಿ ಆಲಯವನ್ನು ಕಟ್ಟುವನು. ಅವನು ನನ್ನ ಮಗನಾಗಿರುವನು; ನಾನು ಅವನಿಗೆ ತಂದೆಯಾಗಿರುವೆನು. ನಾನು ಅವನ ರಾಜ್ಯವನ್ನು ಬಲಗೊಳಿಸುವೆನು; ಅವನ ಸಂತಾನದವರು ಇಸ್ರೇಲ್ ರಾಜ್ಯವನ್ನು ನಿರಂತರಕ್ಕೂ ಆಳುವರು”‘ ಎಂದು ಹೇಳಿದನು.
11 “ಮಗನೇ, ನೀನು ದೇವಾಲಯವನ್ನು ಕಟ್ಟುವಾಗ ಯೆಹೋವನು ನಿನ್ನ ಸಂಗಡವಿದ್ದು ನಿನಗೆ ಯಶಸ್ಸನ್ನು ದಯಪಾಲಿಸಲಿ.
12 ಯೆಹೋವನು ನಿನ್ನನ್ನು ಇಸ್ರೇಲರಿಗೆ ಅರಸನನ್ನಾಗಿ ಮಾಡುವನು. ನೀನು ಆತನ ಆಜ್ಞೆಗಳನ್ನು ಅನುಸರಿಸಿ, ದಕ್ಷತೆಯಿಂದ ರಾಜ್ಯಭಾರ ಮಾಡುವದಕ್ಕೆ ಬೇಕಾದ ಜ್ಞಾನವನ್ನು ನಿನಗೆ ದಯಪಾಲಿಸಲಿ.
13 ಯೆಹೋವನು ಮೋಶೆಗೆ ಕೊಟ್ಟಿರುವ ಕಟ್ಟಳೆಗಳನ್ನು ನೀನು ಜಾಗ್ರತೆಯಾಗಿ ಅನುಸರಿಸಿ ನಡೆದರೆ ನಿನಗೆ ಯಶಸ್ಸು ಪ್ರಾಪ್ತವಾಗುವುದು. ಸ್ಥಿರಚಿತ್ತನಾಗಿರು; ಧೈರ್ಯದಿಂದಿರು; ಹೆದರಬೇಡ; ಕಳವಳಪಡಬೇಡ.
14 “ಸೊಲೊಮೋನನೇ, ನಾನು ಬಹು ಪ್ರಯಾಸಪಟ್ಟು ಯೆಹೋವನ ಆಲಯಕ್ಕೋಸ್ಕರ ಮೂರು ಸಾವಿರದ ಏಳುನೂರೈವತ್ತು ಟನ್ ಬಂಗಾರ, ಮೂವತ್ತೇಳು ಸಾವಿರದ ಐನೂರು ಟನ್ ಬೆಳ್ಳಿ ಮತ್ತು ತೂಕ ಮಾಡಲಾಗದಷ್ಟು ತಾಮ್ರ ಮತ್ತು ಕಬ್ಬಿಣವನ್ನು ಕೂಡಿಸಿಟ್ಟಿದ್ದೇನೆ. ಅಲ್ಲದೆ ಮರಗಳನ್ನು ಮತ್ತು ಕಲ್ಲುಗಳನ್ನು ಕೊಟ್ಟಿರುತ್ತೇನೆ. ಸೊಲೊಮೋನನೇ, ನೀನು ಇವುಗಳಿಗೆ ಇನ್ನೂ ಕೂಡಿಸು.
15 ನಿನ್ನ ಬಳಿಯಲ್ಲಿ ಅನೇಕ ಬಡಗಿಗಳು ಮತ್ತು ಕಲ್ಲುಕುಟಿಗರು ಇದ್ದಾರೆ. ಬೇರೆ ಕೆಲಸಗಳ ಕುಶಲಕರ್ಮಿಗಳೂ
16 ಬಂಗಾರದ ಕೆಲಸಗಾರರೂ ಬೆಳ್ಳಿ, ತಾಮ್ರ, ಕಬ್ಬಿಣದ ಕೆಲಸಗಾರರೂ ಲೆಕ್ಕವಿಲ್ಲದಷ್ಟು ಇದ್ದಾರೆ. ಈಗ ನೀನು ಕೆಲಸ ಪ್ರಾರಂಭಿಸು. ದೇವರು ನಿನ್ನ ಸಂಗಡವಿರಲಿ” ಎಂದು ಹೇಳಿದನು.
17 ಬಳಿಕ ತನ್ನ ಮಗನಾದ ಸೊಲೊಮೋನನೊಂದಿಗೆ ಸಹಕರಿಸಲು ಇಸ್ರೇಲರ ಮುಖಂಡರಿಗೆ ಆಜ್ಞಾಪಿಸಿದನು.
18 ಬಳಿಕ ತನ್ನ ಮಾತನ್ನು ಮುಂದುವರಿಸಿ, “ದೇವರಾದ ಯೆಹೋವನು ನಿಮ್ಮೊಂದಿಗಿದ್ದಾನೆ. ಆತನು ನಿಮಗೆ ಸಮಾಧಾನವನ್ನು ಅನುಗ್ರಹಿಸಿರುತ್ತಾನೆ. ನಮ್ಮ ಸುತ್ತಮುತ್ತಲಿನ ಶತ್ರುಗಳನ್ನು ಸೋಲಿಸಲು ಆತನು ನಮಗೆ ಸಹಾಯಮಾಡಿದ್ದಾನೆ. ಈಗ ಯೆಹೋವನೂ ಆತನ ಜನರೂ ಈ ದೇಶವನ್ನು ತಮ್ಮ ವಶದಲ್ಲಿಟ್ಟುಕೊಂಡಿದ್ದಾರೆ.
19 ಈಗ ನಿಮ್ಮ ಹೃದಯಗಳನ್ನೂ ಆತ್ಮಗಳನ್ನೂ ನಿಮ್ಮ ದೇವರಾದ ಯೆಹೋವನಿಗೆ ಕೊಡಿರಿ. ಆತನಿಗೆ ಪರಿಶುದ್ಧ ನಿವಾಸವನ್ನು ಆತನ ಹೆಸರಿಗಾಗಿ ಕಟ್ಟಿರಿ; ಒಡಂಬಡಿಕೆಯ ಪೆಟ್ಟಿಗೆಯನ್ನೂ ಇತರ ಪವಿತ್ರ ಸಾಮಾಗ್ರಿಗಳನ್ನೂ ಆತನ ಆಲಯಕ್ಕೆ ತನ್ನಿರಿ” ಎಂದು ಹೇಳಿದನು.

1-Chronicles 22:11 Kannada Language Bible Words basic statistical display

COMING SOON ...

×

Alert

×