Bible Languages

Indian Language Bible Word Collections

Bible Versions

Books

1 Chronicles Chapters

1 Chronicles 25 Verses

Bible Versions

Books

1 Chronicles Chapters

1 Chronicles 25 Verses

1 ದಾವೀದನೂ ಸೇನಾಪತಿಗಳೂ ಆಸಾಫನ ಸಂತತಿಯವರನ್ನು ವಿಶೇಷವಾದ ಸೇವೆಗೆ ಪ್ರತ್ಯೇಕಿಸಿದರು. ಆಸಾಫನ ಗಂಡುಮಕ್ಕಳು ಹೇಮಾನ್ ಮತ್ತು ಯೆದುತೂನ್. ಹಾರ್ಪ್ ವಾದ್ಯಗಳನ್ನು, ಲೈರ್ ವಾದ್ಯಗಳನ್ನು ಮತ್ತು ತಾಳಗಳನ್ನು ಬಾರಿಸುತ್ತಾ ದೇವರ ಸಂದೇಶವನ್ನು ಪ್ರವಾದಿಸುವುದೇ ಇವರ ಸೇವೆಯಾಗಿತ್ತು. ಈ ರೀತಿಯಾಗಿ ದೇವರ ಸೇವೆಯನ್ನು ಮಾಡಿದವರು ಯಾರೆಂದರೆ:
2 ಆಸಾಫನ ಸಂತತಿಯಲ್ಲಿ: ಜಕ್ಕೂರ, ಯೋಸೇಫ್, ನೆತನ್ಯ ಮತ್ತು ಅಶರೇಲ, ಅರಸನಾದ ದಾವೀದನು ಆಸಾಫನನ್ನು ಪ್ರವಾದಿಸುವುದಕ್ಕಾಗಿ ಆರಿಸಿಕೊಂಡನು. ಆಸಾಫನು ತನ್ನ ಮಕ್ಕಳಿಗೂ ಮಾರ್ಗದರ್ಶನ ನೀಡಿದನು.
3 ಯೆದುತೂನನ ಸಂತತಿಯವರಲ್ಲಿ: ಗೆದಲ್ಯ, ಜೇರಿ, ಯೆಶಾಯ, ಶಿಮ್ಮೀ, ಹಷಬ್ಯ ಮತ್ತು ಮತ್ತಿತ್ಯ. ಒಟ್ಟು ಅವನ ಆರು ಮಂದಿ ಮಕ್ಕಳು ತಮ್ಮ ತಂದೆಯಾದ ಯೆದುತೂನನೊಂದಿಗೆ ಹಾರ್ಪ್ ವಾದ್ಯಗಳನ್ನು ಬಾರಿಸಿ ದೇವರ ಸಂದೇಶವನ್ನು ತಿಳಿಸಿದರು ಮತ್ತು ದೇವರಿಗೆ ಕೃತಜ್ಞತಾಸ್ತುತಿಯನ್ನು ಅರ್ಪಿಸಿದರು.
4 ಹೇಮಾನನ ಸಂತತಿಯವರಲ್ಲಿ ಗಾಯನವೃಂದದಲ್ಲಿ ಸೇವೆ ಮಾಡಿದವರು ಯಾರೆಂದರೆ: ಬುಕ್ಕೀಯ, ಮತ್ತನ್ಯ, ಉಜ್ಜೀಯೇಲ್, ಶೂಬಾಯೇಲ್ ಮತ್ತು ಯೆರೀಮೋತ; ಹನನ್ಯ, ಹನಾನೀ, ಎಲೀಯಾತ, ಗಿದ್ದಲ್ತಿ ಮತ್ತು ರೋಮಮ್ತಿ ಯೆಜೆರ್; ಯೊಷ್ಬೆಕಾಷ, ಮಲ್ಲೋತೀ, ಹೋತೀರ್ ಮತ್ತು ಮಹಜೀಯೋತ್.
5 ಇವರೆಲ್ಲರೂ ಹೇಮಾನನ ಮಕ್ಕಳು. ಹೇಮಾನನು ದಾವೀದನ ಪ್ರವಾದಿಯಾಗಿದ್ದನು. ಅವನನ್ನು ಬಲಿಷ್ಠನನ್ನಾಗಿ ಮಾಡುವುದಾಗಿ ದೇವರು ವಾಗ್ದಾನ ಮಾಡಿದ್ದನು. ಆದುದರಿಂದ ಅವನಿಗೆ ಹದಿನಾಲ್ಕು ಮಂದಿ ಗಂಡುಮಕ್ಕಳೂ ಮೂವರು ಹೆಣ್ಣುಮಕ್ಕಳೂ ಹುಟ್ಟಿದರು.
6 ಹೇಮಾನನು ತನ್ನ ಮಕ್ಕಳೆಲ್ಲರನ್ನು ದೇವಾಲಯದಲ್ಲಿ ಹಾಡುವದಕ್ಕಾಗಿ ಬಳಸಿಕೊಂಡನು. ಅವರು ಹಾರ್ಪ್ ಮತ್ತು ಲೈರ್ ವಾದ್ಯಗಳನ್ನೂ ತಾಳಗಳನ್ನೂ ಬಾರಿಸಿದರು. ಹೀಗೆ ದೇವಾಲಯದಲ್ಲಿ ಸೇವೆಮಾಡುವುದಕ್ಕಾಗಿ ಅರಸನಾದ ದಾವೀದನು ಅವರನ್ನು ಆರಿಸಿಕೊಂಡನು.
7 ಅವರೂ ಅವರ ಸಂಬಂಧಿಕರೂ ಹಾಡುಗಳನ್ನು ಹಾಡಲು ತರಬೇತಿ ಹೊಂದಿದವರಾಗಿದ್ದರು. ಒಟ್ಟು ಇನ್ನೂರ ಎಂಭತ್ತೆಂಟು ಮಂದಿ ಗಾಯಕರು ದೇವರಿಗೆ ಸ್ತುತಿಗೀತೆ ಹಾಡಲು ತರಬೇತಿ ಹೊಂದಿದವರಾಗಿದ್ದರು.
8 ಪ್ರತಿಯೊಬ್ಬರಿಗೂ ಕೆಲಸಗಳನ್ನು ಗೊತ್ತುಪಡಿಸಲು ಚೀಟುಹಾಕಿ ನೇಮಕ ಮಾಡಿದರು. ಅವರು ಯಾವ ಪಕ್ಷಪಾತವನ್ನೂ ಮಾಡಲಿಲ್ಲ. ದೊಡ್ಡವರು, ಚಿಕ್ಕವರು, ಉಪಾಧ್ಯಾಯರು, ವಿದ್ಯಾರ್ಥಿಗಳು ಎಂಬ ಬೇಧಭಾವವಿಲ್ಲದೆ ಆರಿಸಲ್ಪಟ್ಟರು.
9 ಮೊದಲನೆಯದಾಗಿ, ಆಸಾಫ್ಯನ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ. ಎರಡನೆಯದಾಗಿ, ಗೆದಲ್ಯನ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.
10 ಮೂರನೆಯದಾಗಿ, ಜಕ್ಕೂರನ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.
11 ನಾಲ್ಕನೆಯದಾಗಿ, ಇಚ್ರೀಯ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.
12 ಐದನೆಯದಾಗಿ, ನೆತನ್ಯನ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.
13 ಆರನೆಯದಾಗಿ, ಬುಕ್ಕೀಯನ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.
14 ಏಳನೆಯದಾಗಿ, ಯೆಸರೇಲನ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.
15 ಎಂಟನೆಯದಾಗಿ, ಯೆಶಾಯನ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.
16 ಒಂಭತ್ತನೆಯದಾಗಿ, ಮತ್ತನ್ಯನ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.
17 ಹತ್ತನೆಯದಾಗಿ, ಶಿಮ್ಮೀಯನ ಗಂಡುಮಕ್ಕಳಲ್ಲಿ ಮತ್ತು ಅವನ ಸಂಬಂಧಿಕರಲ್ಲಿ ಹನ್ನೆರಡು ಮಂದಿ.
18 ಹನ್ನೊಂದನೆಯದಾಗಿ, ಅಜರೇಲನ ಗಂಡುಮಕ್ಕಳಲ್ಲಿ ಮತ್ತು ಅವನ ಸಂಬಂಧಿಕರಲ್ಲಿ ಹನ್ನೆರಡು ಮಂದಿ.
19 ಹನ್ನೆರಡನೆಯದಾಗಿ, ಹಷಬ್ಯನ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.
20 ಹದಿಮೂರನೆಯದಾಗಿ, ಶೂಬಾಯೇಲನ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.
21 ಹದಿನಾಲ್ಕನೆಯದಾಗಿ, ಮತ್ತಿತ್ಯನ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.
22 ಹದಿನೈದನೆಯದಾಗಿ, ಯೆರೆಮೋತನ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.
23 ಹದಿನಾರನೆಯದಾಗಿ, ಹನನ್ಯನ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.
24 ಹದಿನೇಳನೆಯದಾಗಿ, ಯೊಷ್ಬೆಕಾಷನ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.
25 ಹದಿನೆಂಟನೆಯದಾಗಿ, ಹನಾನೀಯ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.
26 ಹತ್ತೊಂಭತ್ತನೆಯದಾಗಿ, ಮಲ್ಲೋತಿಯ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.
27 ಇಪ್ಪತ್ತನೆಯದಾಗಿ, ಎಲೀಯಾತನ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.
28 ಇಪ್ಪತ್ತೊಂದನೆಯದಾಗಿ, ಹೋತೀರನ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.
29 ಇಪ್ಪತ್ತೆರಡನೆಯದಾಗಿ, ಗಿದ್ದಲ್ತಿಯನ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.
30 ಇಪ್ಪತ್ತಮೂರನೆಯದಾಗಿ, ಮಹಜೀಯೋತನ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.
31 ಇಪ್ಪತ್ತನಾಲ್ಕನೆಯದಾಗಿ, ರೋಮಮ್ತಿಯೆಜೆರನ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.

1-Chronicles 25:25 Kannada Language Bible Words basic statistical display

COMING SOON ...

×

Alert

×