1
|
ಅರಸನ ಸೈನ್ಯದಲ್ಲಿ ಸೇವೆಮಾಡಿದವರ ಪಟ್ಟಿ. ಒಂದೊಂದು ತಂಡದವರು, ಇಸ್ರೇಲಿನ ಸೈನ್ಯಾಧಿಕಾರಿಗಳು, ಸಹಸ್ರಾಧಿಪತಿಗಳು ಮತ್ತು ಇತರ ಅಧಿಕಾರಿಗಳು ವರ್ಷದ ಆಯಾ ತಿಂಗಳಲ್ಲಿ ತಮ್ಮ ತಂಡದ ಸರದಿಯ ಪ್ರಕಾರ ಅರಸನ ವಿವಿಧ ಸೇವೆಮಾಡುತ್ತಿದ್ದರು. ಸೈನ್ಯದ ಪ್ರತಿಯೊಂದು ತಂಡದಲ್ಲಿ ಇಪ್ಪತ್ನಾಲ್ಕು ಸಾವಿರ ಪುರುಷರಿದ್ದರು. |
2
|
ಮೊದಲನೆಯ ತಿಂಗಳಲ್ಲಿ ಕಾರ್ಯಾಚರಣೆಯಲ್ಲಿರಬೇಕಾದ ತಂಡಕ್ಕೆ ಯಾಷೊಬ್ಬಾಮನು ಮುಖ್ಯಸ್ತನಾಗಿದ್ದನು. ಇವನು ಜಬ್ದೀಯೇಲನ ಮಗನಾಗಿದ್ದನು. ಇವನ ಕೈಕೆಳಗೆ ಇಪ್ಪತ್ತನಾಲ್ಕು ಸಾವಿರ ಮಂದಿ ಇದ್ದರು. |
3
|
ಯಾಷೊಬ್ಬಾಮನು ಪೆರೆಚನ ಸಂತತಿಯವನಾಗಿದ್ದನು. ಇವನು ವರ್ಷದ ಮೊದಲನೆಯ ತಿಂಗಳಲ್ಲಿ ಸೇವೆಮಾಡುವ ಸೈನ್ಯಾಧಿಕಾರಿಯಾಗಿದ್ದನು. |
4
|
ಎರಡನೆಯ ತಿಂಗಳಿನ ಸೈನ್ಯಾಧಿಕಾರಿ ಅಹೋಹೀಯನಾದ ದೋದೈ. ಮಿಕ್ಲೋತ್ ಎಂಬವನು ಈ ತಂಡದ ನಾಯಕನಾಗಿದ್ದನು. ಒಟ್ಟು ಇಪ್ಪತ್ತನಾಲ್ಕು ಸಾವಿರ ಮಂದಿ ದೋದೈನ ತಂಡದಲ್ಲಿದ್ದರು. |
5
|
ಮೂರನೆಯ ಸೈನ್ಯಾಧಿಪತಿಯು ಬೆನಾಯ. ಇವನು ಯೆಹೋಯಾದನ ಮಗನಾಗಿದ್ದನು. ಇವನು ಮಹಾಯಾಜಕನಾಗಿದ್ದನು. ಇವನೊಂದಿಗೆ ಇಪ್ಪತ್ತನಾಲ್ಕು ಸಾವಿರ ಮಂದಿ ಕಾಲಾಳುಗಳು ಇದ್ದರು. |
6
|
ಮೂವತ್ತು ವೀರರಲ್ಲಿ ಒಬ್ಬನಾದ ಬೆನಾಯನೇ ಇವನು. ಬೆನಾಯನು ಅವರ ನಾಯಕನಾಗಿದ್ದನು. ಬೆನಾಯನ ಮಗ ಅಮ್ಮೀಜಾಬಾದನು ಬೆನಾಯನ ತಂಡದ ಅಧಿಪತಿಯಾಗಿದ್ದನು. |
7
|
ನಾಲ್ಕನೆಯ ಸೇನಾಪತಿಯು ಅಸಾಹೇಲ. ಇವನು ವರುಷದ ನಾಲ್ಕನೆಯ ತಿಂಗಳಿನಲ್ಲಿ ರಾಜ್ಯದ ಸೈನ್ಯದ ಅಧಿಪತಿಯಾಗಿದ್ದನು. ಇವನು ಯೋವಾಬನ ಸೋದರ. ಇವನ ನಂತರ ಅಸಾಹೇಲನ ಮಗನಾದ ಜೆಬದ್ಯನು ಸೈನ್ಯಾಧಿಕಾರಿಯಾದನು. ಅಸಾಹೇಲನ ತಂಡದಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಇದ್ದರು. |
8
|
ಐದನೆಯ ಸೈನ್ಯಾಧಿಕಾರಿಯು ಶಮ್ಹೂತ. ಇವನು ಇಜ್ರಾಹ್ಯನ ಸಂತತಿಯವನಾಗಿದ್ದನು. ವರುಷದ ಐದನೆಯ ತಿಂಗಳಿನ ಸೈನ್ಯದ ಮುಖ್ಯಾಧಿಕಾರಿಯಾಗಿದ್ದನು. ಇವನ ಕೈಕೆಳಗೆ ಇಪ್ಪತ್ತನಾಲ್ಕು ಸಾವಿರ ಮಂದಿ ಸೈನಿಕರಿದ್ದರು. |
9
|
ಆರನೆಯ ಸೈನ್ಯಾಧಿಪತಿಯು ಐರನು. ಇವನು ವರುಷದ ಆರನೆಯ ತಿಂಗಳಲ್ಲಿ ಸೈನ್ಯಾಧಿಕಾರಿಯಾಗಿದ್ದನು. ಇವನು ತೆಕೋವನದ ಇಕ್ಕೇಷನ ಮಗ. ಇವನ ಕೈಕೆಳಗೆ ಇಪ್ಪತ್ತನಾಲ್ಕು ಸಾವಿರ ಮಂದಿ ಸೈನಿಕರಿದ್ದರು. |
10
|
ಹೆಲೆಚನು ಏಳನೆಯ ಸೈನ್ಯಾಧಿಕಾರಿ. ವರುಷದ ಏಳನೆಯ ತಿಂಗಳಲ್ಲಿ ಇವನು ಸೈನ್ಯಾಧಿಕಾರಿಯಾಗಿದ್ದನು. ಇವನು ಎಫ್ರಾಯೀಮ್ ಸಂತತಿಯ ಪೆಲೋನ್ಯನಾಗಿದ್ದನು. ಇವನ ತಂಡದಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಸೈನಿಕರಿದ್ದರು. |
11
|
ಎಂಟನೆಯ ಸೇನಾಧಿಪತಿಯ ಹೆಸರು ಸಿಬ್ಬಕೈ. ಇವನು ಹುಷ ಊರಿನ ಜೆರಹನ ಸಂತತಿಯವನು. ವರುಷದ ಎಂಟನೆಯ ತಿಂಗಳಿನ ಸೇನಾಧಿಪತಿ. ಇವನ ಕೈ ಕೆಳಗೆ ಇಪ್ಪತ್ತನಾಲ್ಕು ಸಾವಿರ ಮಂದಿ ಸೈನಿಕರಿದ್ದರು. |
12
|
ಒಂಭತ್ತನೆಯ ಸೇನಾಪತಿ ಅಬೀಯೆಜೆರ್. ಇವನು ಅನತೋತ್ ಊರಿನ ಬೆನ್ಯಾಮೀನ್ ಕುಲದವನು. ವರುಷದ ಒಂಭತ್ತನೆಯ ತಿಂಗಳಲ್ಲಿ ಸೈನ್ಯಾಧಿಕಾರಿಯಾಗಿದ್ದನು. ಇವನ ಕೈಕೆಳಗೆ ಇಪ್ಪತ್ತನಾಲ್ಕು ಸಾವಿರ ಮಂದಿ ಸೈನಿಕರಿದ್ದರು. |
13
|
ಹತ್ತನೆಯ ಸೇನಾಪತಿ ಮಹರೈ. ಇವನು ನೆಟೋಫದ ಜೆರಹನ ಸಂತತಿಯವನು. ವರುಷದ ಹತ್ತನೆಯ ತಿಂಗಳಿಗೆ ಇವನು ಸೈನ್ಯಾಧಿಕಾರಿಯಾಗಿದ್ದನು. ಇವನ ಕೈಕೆಳಗೆ ಇಪ್ಪತ್ತನಾಲ್ಕು ಸಾವಿರ ಮಂದಿ ಸೈನಿಕರಿದ್ದರು. |
14
|
ಹನ್ನೊಂದನೆಯ ಸೇನಾಪತಿ ಪಿರ್ರಾತೋನ್ಯನಾದ ಬೆನಾಯ. ಇವನು ಎಫ್ರಾಯೀಮ್ ಕುಲದ ಪಿರ್ರಾತೋನ್ ಎಂಬಲ್ಲಿಂದ ಬಂದವನು. ವರುಷದ ಹನ್ನೊಂದನೆಯ ತಿಂಗಳಿಗೆ ಇವನು ಸೇನಾಪತಿಯಾಗಿದ್ದನು. ಇವನ ಕೈಕೆಳಗೆ ಇಪ್ಪತ್ತನಾಲ್ಕು ಸಾವಿರ ಸೈನಿಕರಿದ್ದರು. |
15
|
ಹನ್ನೆರಡನೆಯ ಸೇನಾಪತಿ ಹೆಲ್ದೈ. ಇವನು ನೆಟೋಫ ಊರಿನ ಒತ್ನೀಯೇಲನ ಸಂತತಿಯವನು. ವರುಷದ ಹನ್ನೆರಡನೆಯ ತಿಂಗಳಿನಲ್ಲಿ ಇವನು ಸೇನಾಪತಿಯಾಗಿದ್ದನು. ಇವನ ಕೈಕೆಳಗೆ ಇಪ್ಪತ್ತನಾಲ್ಕು ಸಾವಿರ ಸೈನಿಕರಿದ್ದರು. |
16
|
ಇಸ್ರೇಲ್ ಕುಲಗಳ ನಾಯಕರು ಯಾರೆಂದರೆ: ರೂಬೇನ್ಯರಲ್ಲಿ ಜಿಕ್ರೀಯ ಮಗ ಎಲೀಯೆಜರ್. ಸಿಮೆಯೋನ್ಯರಲ್ಲಿ ಮಾಕನ ಮಗನಾದ ಶೆಫಟ್ಯ. |
17
|
ಲೇವಿಯರಲ್ಲಿ ಕೆಮುವೇಲನ ಮಗನಾದ ಹಷಬ್ಯ. ಆರೋನ್ಯರಲ್ಲಿ ಚಾದೋಕ್. |
18
|
ಯೆಹೂದ್ಯರಲ್ಲಿ ಎಲೀಹು (ದಾವೀದನ ಅಣ್ಣಂದಿರಲ್ಲೊಬ್ಬನು.) ಇಸ್ಸಾಕಾರರಲ್ಲಿ ಮೀಕಾಯೇಲನ ಮಗ ಒಮ್ರಿ. |
19
|
ಜೆಬೂಲೂನ್ಯರಲ್ಲಿ ಓಬದ್ಯನ ಮಗನಾದ ಇಷ್ಮಾಯ. ನಫ್ತಾಲ್ಯರಲ್ಲಿ ಅಜ್ರೀಯೇಲನ ಮಗನಾದ ಯೆರೀಮೋತ್. |
20
|
ಎಫ್ರಾಯೀಮ್ಯರಲ್ಲಿ ಅಜಜ್ಯನ ಮಗನಾದ ಹೊಷೇಯನು. ಪಶ್ಚಿಮ ಮನಸ್ಸೆಯವರಲ್ಲಿ ಪೆದಾಯನ ಮಗ ಯೋವೇಲ್. |
21
|
ಪೂರ್ವ ಮನಸ್ಸೆಯವರಲ್ಲಿ ಜೆಕರ್ಯನ ಮಗ ಇದ್ದೋ. ಬೆನ್ಯಾಮೀನ್ಯರಲ್ಲಿ ಅಬ್ನೇರನ ಮಗ ಯಗಸೀಯೇಲ್. |
22
|
ದಾನ್ಯರಲ್ಲಿ ಯೆರೋಹಾಮನ ಮಗ ಅಜರೇಲ್. ಇವರು ಇಸ್ರೇಲ್ ಗೋತ್ರ ಪ್ರಧಾನರು. |
23
|
ದೇವರು ಇಸ್ರೇಲರನ್ನು ಆಕಾಶದ ನಕ್ಷತ್ರದಷ್ಟು ಹೆಚ್ಚಿಸುವೆನೆಂದು ವಾಗ್ದಾನ ಮಾಡಿದ್ದ ಪ್ರಕಾರ ಇಸ್ರೇಲರ ಸಂಖ್ಯೆ ಅಪರಿಮಿತವಾಗಿತ್ತು. ಆದುದರಿಂದ ದಾವೀದನು ಇಪ್ಪತ್ತು ವರ್ಷ ಪ್ರಾಯದ ಮೇಲ್ಪಟ್ಟ ಗಂಡಸರನ್ನು ಮಾತ್ರ ಲೆಕ್ಕಿಸುವ ಆಲೋಚನೆ ಮಾಡಿದನು. |
24
|
ಚೆರೂಯಳ ಮಗನಾದ ಯೋವಾಬನು ಲೆಕ್ಕಿಸುವ ಕಾರ್ಯ ಪ್ರಾರಂಭಿಸಿದನು. ಆದರೆ ಅವನು ಪೂರ್ಣಗೊಳಿಸಲಿಲ್ಲ. ದೇವರು ಇಸ್ರೇಲರ ಮೇಲೆ ಕೋಪಗೊಂಡನು. ಇದರಿಂದಾಗಿ ಇಸ್ರೇಲರ ಜನಸಂಖ್ಯೆಯನ್ನು ದಾವೀದನ ಚರಿತ್ರಾ ಪುಸ್ತಕದಲ್ಲಿ ದಾಖಲೆ ಮಾಡಲಿಲ್ಲ. |
25
|
ಅರಸನ ಆಸ್ತಿಗೆ ಜವಾಬ್ದಾರರಾಗಿದ್ದವರ ಪಟ್ಟಿ: ಅದೀಯೇಲನ ಮಗನಾದ ಅಜ್ಮಾವೆತ್. ಇವನು ರಾಜನ ಉಗ್ರಾಣಗಳ ಅಧಿಕಾರಿಯಾಗಿದ್ದನು. ಉಜ್ಜೀಯನ ಮಗನಾದ ಯೋನಾತಾನ್; ಇವನು ಚಿಕ್ಕ ಊರುಗಳಲ್ಲಿ, ಹಳ್ಳಿಗಳಲ್ಲಿ, ಹೊಲಗಳಲ್ಲಿ ಮತ್ತು ಗೋಪುರಗಳಲ್ಲಿ ಇದ್ದ ಉಗ್ರಾಣಗಳಿಗೆ ಅಧಿಕಾರಿಯಾಗಿದ್ದನು. |
26
|
ಕೆಲೂಬನ ಮಗನಾದ ಎಜ್ರೀಯು ರಾಜನ ವ್ಯವಸಾಯಗಾರರಿಗೆ ಅಧಿಕಾರಿಯಾಗಿದ್ದನು. |
27
|
ರಾಮಾದ ಶಿಮ್ಮಾಯು ರಾಜನ ದ್ರಾಕ್ಷಿತೋಟಗಳ ಅಧಿಕಾರಿಯಾಗಿದ್ದನು. ಶಿಷ್ಮೀಯದ ಜಬ್ದೀಯು ರಾಜನ ದ್ರಾಕ್ಷಿತೋಟಗಳಿಂದ ದೊರಕಿದ ದ್ರಾಕ್ಷಾರಸದ ಉಗ್ರಾಣಗಳಿಗೆ ಅಧಿಕಾರಿಯಾಗಿದ್ದನು. |
28
|
ಗೆದೆರಿನ ಬಾಳ್ಹಾನಾನ್ ಪಶ್ಚಿಮದ ಬೆಟ್ಟಪ್ರದೇಶದಲ್ಲಿ ಆಲಿವ್ ಮರಗಳ ಮತ್ತು ಸಿಖಮೊರ್ ಮರಗಳ ತೋಪುಗಳಿಗೆ ಅಧಿಕಾರಿಯಾಗಿದ್ದನು. ಯೋವಾಷನು ಆಲಿವ್ ಎಣ್ಣೆಯ ಉಗ್ರಾಣಗಳಿಗೆ ಅಧಿಕಾರಿಯಾಗಿದ್ದನು. |
29
|
ಶಾರೋನಿನ ಶಿಟ್ರೈಯು ಶಾರೋನಿನ ಸುತ್ತಮುತ್ತಲಿದ್ದ ರಾಜನ ಕುರಿದನಗಳ ಹಿಂಡುಗಳ ಅಧಿಕಾರಿಯಾಗಿದ್ದನು. ತಗ್ಗು ಪ್ರದೇಶಗಳಲ್ಲಿದ್ದ ರಾಜನ ಪಶುಗಳ ಹಿಂಡುಗಳಿಗೆ ಅದ್ಲ್ಯೆಯ ಮಗ ಶಾಫಾಟನು ಅಧಿಕಾರಿಯಾಗಿದ್ದನು. |
30
|
ಇಷ್ಮಾಯೇಲ್ಯನಾದ ಓಬೀಲನು ಒಂಟೆಗಳ ಮೇಲೆ ಅಧಿಕಾರಿಯಾಗಿದ್ದನು. ಮೇರೊನೋತ್ಯನಾದ ಯೆಹ್ದೆಯು ರಾಜನ ಕತ್ತೆಗಳ ಹಿಂಡಿಗೆ ಅಧಿಕಾರಿಯಾಗಿದ್ದನು. |
31
|
ಹಗ್ರೀಯನಾದ ಯಾಜೀಜನು ರಾಜನ ಕುರಿಹಿಂಡುಗಳ ಮೇಲೆ ಅಧಿಕಾರಿಯಾಗಿದ್ದನು. ಇವರೆಲ್ಲರೂ ರಾಜನ ಆಸ್ತಿಪಾಸ್ತಿಗಳ ಮೇಲ್ವಿಚಾರಕರಾಗಿದ್ದರು. |
32
|
ದಾವೀದನ ಚಿಕ್ಕಪ್ಪನಾದ ಯೋನಾತಾನನು ಉತ್ತಮ ಸಲಹೆಗಾರನಾಗಿದ್ದನು. ಹಕ್ಮೋನಿಯ ಮಗನಾದ ಯೆಹೀಯೇಲನು ರಾಜನ ಗಂಡುಮಕ್ಕಳನ್ನು ಪಾಲನೆ ಮಾಡುತ್ತಿದ್ದನು. 33ಅಹೀತೋಫೆಲನು ರಾಜನ ಮಂತ್ರಾಲೋಚಕನಾಗಿದ್ದನು. ಹೂಷೈ ರಾಜನ ಮಿತ್ರನಾಗಿದ್ದನು. ಇವನು ಅರ್ಕೀಯ ಜನರಿಗೆ ಸೇರಿದವನಾಗಿದ್ದನು. |
33
|
ಬೆನಾಯನ ಮಗನಾದ ಯೆಹೋಯಾದವನೂ ಎಬ್ಯಾತಾರನೂ ಅಹೀತೋಫೆಲನ ತರುವಾಯ ರಾಜನ ಮಂತ್ರಾಲೋಚಕರಾದರು. ರಾಜನ ಸೈನ್ಯಕ್ಕೆ ಯೋವಾಬನು ಪ್ರಧಾನಸೇನಾಪತಿಯಾಗಿದ್ದನು. |
34
|
[This verse may not be a part of this translation] |
1-Chronicles 27:34 Kannada Language Bible Words basic statistical display
COMING SOON ...