1
|
ಪೆರೆಚ್, ಹೆಚ್ರೋನ್, ಕರ್ಮಿ, ಹೂರ್ ಮತ್ತು ಶೋಬಾಲರು. |
2
|
ಶೋಬಾಲನ ಮಗ ರೆವಾಯ. ರೆವಾಯನ ಮಗನು ಯಹತ್. ಯಹತನ ಗಂಡುಮಕ್ಕಳು ಅಹೂಮೈ ಮತ್ತು ಲಹದ್. ಅಹೂಮೈ ಮತ್ತು ಲಹದ್ರವರು ಚೊರ್ರರ ಸಂತತಿಯವರು. |
3
|
ಏಟಾಮನ ಗಂಡುಮಕ್ಕಳು ಯಾರೆಂದರೆ: ಇಜ್ರೆಯೇಲ್, ಇಷ್ಮ ಮತ್ತು ಇಬ್ಬಾಷ್. ಇವರ ಸಹೋದರಿ ಹಚೆಲೆಲ್ ಪೋನೀ. |
4
|
ಪೆನೂವೇಲನು ಗೆದೋರನ ತಂದೆ: ಏಜೆರನು ಹೂಷಾಹ್ಯನ ತಂದೆ. ಇವರು ಹೂರನ ಗಂಡುಮಕ್ಕಳು. ಹೂರನು ಎಫ್ರಾತಾಹಳ ಮೊದಲನೆಯ ಮಗನು. ಇವನೇ ಬೆತ್ಲೇಹೇಮ್ಯರ ಮೂಲಪಿತೃ. |
5
|
ತೆಕೋವನ ತಂದೆಯಾದ ಅಷ್ಹೂರನಿಗೆ ಇಬ್ಬರು ಹೆಂಡತಿಯರು. ಇವರ ಹೆಸರು ಹೆಲಾಹ ಮತ್ತು ನಾರ. |
6
|
ನಾರಳಲ್ಲಿ ಹುಟ್ಟಿದ ಗಂಡುಮಕ್ಕಳು: ಅಹುಜ್ಜಾಮ್, ಹೇಫೆರ್, ತೇಮಾನ್ ಮತ್ತು ಅಹಷ್ಟಾರ್ಯ. |
7
|
ಹೆಲಾಹಳ ಗಂಡುಮಕ್ಕಳು: ಚೆರೆತ್, ಇಚ್ಹಾರ್, ಎತ್ನಾನ್ ಮತ್ತು ಕೋಚ. |
8
|
ಕೋಚನು ಆನೂಬ್ ಮತ್ತು ಚೊಬೇಬನ ತಂದೆ. ಕೋಚನು ಅಹರ್ಹೇಲ್ ವಂಶದವರ ಮೂಲಪಿತೃ. ಅಹರ್ಹೇಲನು ಹಾರಮನ ಮಗನು. |
9
|
ಯಾಬೇಚನು ತುಂಬ ಒಳ್ಳೆಯ ವ್ಯಕ್ತಿಯಾಗಿದ್ದನು. ಅವನು ತನ್ನ ಅಣ್ಣತಮ್ಮಂದಿರಿಗಿಂತ ಉತ್ತಮನಾಗಿದ್ದನು. ಅವನ ತಾಯಿ, “ನಾನು ಅವನನ್ನು ಹೆರುವಾಗ ತುಂಬಾ ನೋವನ್ನು ಅನುಭವಿಸಿದ್ದರಿಂದ ನಾನು ಅವನಿಗೆ ಯಾಬೇಚ ಎಂದು ಹೆಸರಿಟ್ಟೆನು” ಎಂದು ಹೇಳಿದಳು. |
10
|
ಯಾಬೇಚನು ಇಸ್ರೇಲರ ದೇವರಿಗೆ ಹೀಗೆ ಪ್ರಾರ್ಥಿಸಿದನು: “ದೇವರೇ, ನೀನು ನನ್ನನ್ನು ನಿಜವಾಗಿಯೂ ಆಶೀರ್ವದಿಸು. ನನ್ನ ಪ್ರಾಂತ್ಯವನ್ನು ವಿಸ್ತರಿಸು. ನನ್ನ ಬಳಿಯಲ್ಲಿಯೇ ಇದ್ದು ನನಗಾರೂ ನೋವು ಮಾಡದಂತೆ ನೋಡಿಕೊಂಡು ನನ್ನನ್ನು ರಕ್ಷಿಸು” ಎಂಬ ಯಾಬೇಚನ ಕೋರಿಕೆಯನ್ನು ದೇವರು ಕೇಳಿದನು. |
11
|
ಕೆಲೂಬನು ಶೂಹನ ಸಹೋದರ. ಕೆಲೂಬನ ಮಗನು ಮೆಹೀರ್. ಮೆಹೀರನು ಎಷ್ಟೋನನ ತಂದೆ. |
12
|
ಎಷ್ಟೋನನು ಬೇತ್ರಾಫ, ಪಾಸೇಹ ಮತ್ತು ತೆಹಿನ್ನ ಇವರ ತಂದೆ. ತೆಹಿನ್ನ ಇರ್ನಾಹಷನ ತಂದೆ. ಇವರೆಲ್ಲರೂ ರೇಕಾಬದವರು. |
13
|
ಕೆನಜನ ಗಂಡುಮಕ್ಕಳು ಯಾರೆಂದರೆ: ಒತ್ನೀಯೇಲ್ ಮತ್ತು ಸೆರಾಯ. ಒತ್ನೀಯೇಲನ ಮಕ್ಕಳು: ಹತತ್ ಮತ್ತು ಮೆಯೋನೋತೈ. |
14
|
ಮೆಯೋನೋತೈ ಒಫ್ರಾಹನ ತಂದೆ. ಸೆರಾಯನು ಯೋವಾಬನ ತಂದೆ. ಯೋವಾಬನು ಗೇಹರಾಷೀಮ್ಯರ ಸ್ಥಾಪಕನು. ಇಲ್ಲಿಯವರು ನಿಪುಣ ಕುಶಲ ಕೆಲಸಗಾರರಾಗಿದ್ದುದರಿಂದ ಅವರಿಗೆ ಈ ಹೆಸರು ಬಂದಿತು. |
15
|
ಕಾಲೇಬನು ಯೆಫುನ್ನೆಯ ಮಗನು. ಕಾಲೇಬನ ಗಂಡುಮಕ್ಕಳು: ಈರು, ಏಲ, ನಾಮ್, ಏಲನ ಮಗನ ಹೆಸರು ಕೆನಜ್. |
16
|
ಯೆಹಲ್ಲೆಲೇಲನ ಗಂಡುಮಕ್ಕಳು ಯಾರೆಂದರೆ: ಜೀಪ್, ಜೀಫಾ, ತೀರ್ಯ ಮತ್ತು ಅಸರೇಲ್. |
17
|
[This verse may not be a part of this translation] |
18
|
[This verse may not be a part of this translation] |
19
|
ಮೆರೆದನ ಹೆಂಡತಿಯು ನೆಹಮನ ತಂಗಿ. ಮೆರೆದನ ಹೆಂಡತಿಯು ಯೂದಾಯದಿಂದ ಬಂದವಳು. ಮೆರೆದನ ಹೆಂಡತಿಯ ಗಂಡುಮಕ್ಕಳು: ಕೆಯೀಲ ಮತ್ತು ಎಷ್ಟೆಮೋ ಗೋತ್ರಗಳ ಮೂಲಪಿತೃಗಳು. ಕೆಯೀಲನು ಗರ್ಮ್ಯರಿಗೆ ಸೇರಿದವನು ಮತ್ತು ಎಷ್ಟೆಮೋವನು ಮಾಕಾತ್ಯರಿಗೆ ಸೇರಿದವನು. |
20
|
ಶೀಮೋನನ ಮಕ್ಕಳು ಯಾರೆಂದರೆ: ಅಮ್ನೋನ್, ರಿನ್ನ, ಬೆನ್ಹಾನಾನ್ ಮತ್ತು ತೀಲೋನ್. ಇಷ್ಷೀಯ ಮಕ್ಕಳು: ಜೋಹೇತ್ ಮತ್ತು ಬೆನ್ ಜೋಹೇತ್. |
21
|
[This verse may not be a part of this translation] |
22
|
[This verse may not be a part of this translation] |
23
|
ಶೇಲನ ಮಕ್ಕಳು ಮಣ್ಣಿನಿಂದ ವಸ್ತುಗಳನ್ನು ತಯಾರಿಸುತ್ತಿದ್ದರು. ನೆಟಾಯಿಮ್ ಮತ್ತು ಗೆದೇರ ಎಂಬ ಸ್ಥಳಗಳಲ್ಲಿ ವಾಸವಾಗಿದ್ದ ಅವರು ಅರಸನಿಗೋಸ್ಕರ ಕೆಲಸ ಮಾಡುತ್ತಿದ್ದರು. |
24
|
ಸಿಮೆಯೋನನ ಗಂಡುಮಕ್ಕಳು ಯಾರೆಂದರೆ: ನೆಮೂವೇಲ್, ಯಾಮೀನ್, ಯಾರೀದ್, ಜೆರಹ ಮತ್ತು ಸೌಲ. |
25
|
ಸೌಲನ ಮಗನು ಶಲ್ಲುಮ. ಶಲ್ಲುಮನ ಮಗನು ಮಿಬ್ಸಾಮ್; ಮಿಬ್ಸಾಮನ ಮಗನು ಮಿಷ್ಮ. |
26
|
ಮಿಷ್ಮನ ಮಗನು ಹಮ್ಮೂವೇಲ. ಹಮ್ಮೂವೇಲನ ಮಗನು. ಜಕ್ಕೂರ್. ಜಕ್ಕೂರನ ಮಗನು ಶಿಮ್ಮೀ. |
27
|
ಶಿಮ್ಮೀಗೆ ಹದಿನಾರು ಮಂದಿ ಗಂಡುಮಕ್ಕಳೂ ಆರು ಮಂದಿ ಹೆಣ್ಣುಮಕ್ಕಳೂ ಇದ್ದರು. ಶಿಮ್ಮೀಯ ಸಹೋದರರಿಗೆ ಹೆಚ್ಚು ಮಕ್ಕಳಿರಲಿಲ್ಲ. ಇವರ ಸಂತತಿಯವರ ಸಂಖ್ಯೆಯು ಯೆಹೂದದ ಸಂತತಿಯವರಷ್ಟು ಹೆಚ್ಚಾಗಿರಲಿಲ್ಲ. |
28
|
ಶಿಮ್ಮಿಯ ಗಂಡುಮಕ್ಕಳು ಬೇರ್ಷೆಬ, ಮೋಲಾದ್, ಹಚರ್ ಷೂವಾಲ್, |
30
|
ಬೆತೂವೇಲ್, ಹೊರ್ಮ, ಚಿಕ್ಲಗ್, |
31
|
ಬೇತ್ಮರ್ಕಾಬೋತ್, ಹಚರ್ ಸೂಸೀಮ್, ಬೇತ್ಬಿರೀ ಮತ್ತು ಶಾರಯಿಮ್ ಊರುಗಳಲ್ಲಿ ವಾಸಿಸಿದರು. ದಾವೀದನು ಅರಸನಾಗುವ ತನಕ ಅವರು ಆ ಊರುಗಳಲ್ಲಿ ನೆಲೆಸಿದರು. |
32
|
ಈ ಪಟ್ಟಣಗಳ ಹತ್ತಿರವಿರುವ ಐದು ಹಳ್ಳಿಗಳು ಯಾವುವೆಂದರೆ: ಏಟಾಮ್, ಅಯಿನ್, ರಿಮ್ಮೋನ್, ತೋಕೆನ್ ಮತ್ತು ಆಷಾನ್. |
33
|
ಬೇರೆ ಹಳ್ಳಿಗಳು ಬಾಲ್ ತನಕವೂ ಇದ್ದವು. ಅವರು ವಾಸವಾಗಿದ್ದದ್ದು ಅಲ್ಲಿಯೇ. ಇದಲ್ಲದೆ ಅವರು ತಮ್ಮ ವಂಶದ ಚರಿತ್ರೆಯನ್ನೂ ಬರೆದಿಟ್ಟರು. |
34
|
[This verse may not be a part of this translation] |
35
|
[This verse may not be a part of this translation] |
36
|
[This verse may not be a part of this translation] |
37
|
[This verse may not be a part of this translation] |
38
|
[This verse may not be a part of this translation] |
39
|
ಗೆದೋರ್ ಊರಿನ ಹೊರಭಾಗದಲ್ಲಿರುವ ತಗ್ಗಿನ ಪೂರ್ವ ದಿಕ್ಕಿನಲ್ಲಿ ಅವರು ನೆಲೆಸಿದರು. ತಮ್ಮ ದನಕುರಿಗಳಿಗಾಗಿ ಹುಲ್ಲುಗಾವಲನ್ನು ಹುಡುಕಿಕೊಂಡು ಅವರು ಅಲ್ಲಿಗೆ ಹೋಗಿದ್ದರು. |
40
|
ಅಲ್ಲಿ ಫಲವತ್ತಾದ ಭೂಮಿಯನ್ನೂ ಹಸಿರು ಹುಲ್ಲುಗಾವಲನ್ನೂ ಕಂಡು ಅಲ್ಲಿಯೇ ನೆಲೆಸಿದರು. ಆ ಪ್ರದೇಶವು ಪ್ರಶಾಂತವಾಗಿತ್ತು. ಹಿಂದಿನ ಕಾಲದಲ್ಲಿ ಹಾಮನ ಸಂತತಿಯವರು ಅಲ್ಲಿ ನೆಲೆಸಿದ್ದರು. |
41
|
ಯೆಹೂದದ ಅರಸನಾಗಿದ್ದ ಹಿಜ್ಕೀಯನ ಕಾಲದಲ್ಲಿ ಇದು ಆಯಿತು. ಇವರು ಗೆದೋರಿಗೆ ಬಂದು ಹಾಮನ ಸಂತತಿಯವರೊಂದಿಗೆ ಯುದ್ಧಮಾಡಿ ಅವರ ಗುಡಾರಗಳನ್ನು ನಾಶಮಾಡಿದರು. ಅಲ್ಲದೆ ಮೆಗೂನ್ಯರ ವಿರುದ್ಧವಾಗಿ ಯುದ್ಧಮಾಡಿ ಅಲ್ಲಿ ನೆಲೆಸಿದರು. ಇವರು ಮೆಗೂನ್ಯರನ್ನೆಲ್ಲಾ ನಾಶಮಾಡಿದರು. ಇಂದಿನವರೆಗೂ ಮೆಗೂನ್ಯರಲ್ಲಿ ಯಾರೂ ಉಳಿದಿಲ್ಲ. ಹೀಗೆ ಆ ಸ್ಥಳದಲ್ಲಿ ಅವರು ನೆಲೆಸಿದರು; ಯಾಕೆಂದರೆ ಅವರ ಪಶುಗಳಿಗೆ ಅಲ್ಲಿ ಸಾಕಷ್ಟು ಹುಲ್ಲಿತ್ತು. |
42
|
ಸಿಮೆಯೋನನ ಕುಲದ ಐನೂರು ಮಂದಿ ಸೇಯೀರ್ ಬೆಟ್ಟಪ್ರಾಂತ್ಯಕ್ಕೆ ಹೋದರು. ಇಷ್ಷೀಯ ಗಂಡುಮಕ್ಕಳು ಈ ಗುಂಪಿನ ನಾಯಕರಾಗಿದ್ದರು. ಅವರು ಯಾರೆಂದರೆ: ಪೆಲಟ್ಯ, ನೆಗರ್ಯ, ರೆಫಾಯ ಮತ್ತು ಉಜ್ಜೀಯೇಲ್. ಅಲ್ಲಿ ವಾಸಿಸುವ ಜನರೊಂದಿಗೆ ಇವರು ಕಾದಾಡಿದರು. |
43
|
ಆಗ ಅಲ್ಲಿ ಸ್ವಲ್ಪವೇ ಮಂದಿ ಅಮಾಲೇಕ್ಯರು ವಾಸಿಸುತ್ತಿದ್ದರು. ಈ ಸಿಮೆಯೋನರು ಅವರನ್ನು ಕೊಂದು ಆ ಸ್ಥಳದಲ್ಲಿ ನೆಲೆಸಿದರು. ಇಂದಿನವರೆಗೂ ಸಿಮೆಯೋನರು ಅಲ್ಲಿ ನೆಲೆಸಿದ್ದಾರೆ. |
1-Chronicles 4:43 Kannada Language Bible Words basic statistical display
COMING SOON ...