ಯೆಹೂದ ಮತ್ತು ಜೆರುಸಲೇಮಿನ ಜನರು ಸೆರೆ ಒಯ್ಯಲ್ಪಟ್ಟಾಗ ಯೆಹೋಚಾದಾಕನೂ ಅವರೊಂದಿಗೆ ಪರದೇಶಕ್ಕೆ ಹೋಗಬೇಕಾಯಿತು. ಯೆಹೋವನು ಯೆಹೂದ್ಯರನ್ನು ಮತ್ತು ಜೆರುಸಲೇಮಿನವರನ್ನು ಪರದೇಶಕ್ಕೆ ಸೆರೆಯಾಳುಗಳಾಗಿ ಒಯ್ಯಲು ನೆಬೂಕದ್ನೆಚ್ಚರನನ್ನು ಉಪಯೋಗಿಸಿದನು.
ಮೆರಾರಿಯ ಗಂಡುಮಕ್ಕಳು: ಮಹ್ಲೀ ಮತ್ತು ಮುಷೀ. ಇತರ ಲೇವಿ ಕುಲದ ಕುಟುಂಬಗಳ ಪಟ್ಟಿ ಇಲ್ಲಿದೆ. ಈ ಪಟ್ಟಿಯಲ್ಲಿ ತಂದೆಗಳ ಹೆಸರನ್ನು ಮೊದಲು ತಿಳಿಸಿ, ಅವರ ಗಂಡುಮಕ್ಕಳ ಹೆಸರನ್ನು ನಂತರ ತಿಳಿಸಲಾಗಿದೆ.
ಹೇಮಾನ್ ಮತ್ತು ಆಸಾಫನ ಸಹೋದರರು ಲೇವಿಕುಲದವರು. ಲೇವಿಕುಲದವರನ್ನು ಲೇವಿಯರೆಂದು ಕರೆಯುತ್ತಾರೆ. ಲೇವಿಯರು ಪವಿತ್ರಗುಡಾರದ ಸೇವೆಯನ್ನು ಮಾಡಲು ಆರಿಸಲ್ಪಟ್ಟವರು. ಪವಿತ್ರ ಗುಡಾರವು ದೇವರ ನಿವಾಸವಾಗಿತ್ತು.
ಆದರೆ ಸರ್ವಾಂಗಹೋಮ ಅರ್ಪಿಸುವ ಯಜ್ಞವೇದಿಕೆಯ ಮೇಲೆ ಮತ್ತು ಧೂಪಾರ್ಪಣೆಯ ಯಜ್ಞವೇದಿಕೆಯ ಮೇಲೆ ಧೂಪವರ್ಪಿಸಲು ಆರೋನನ ಸಂತತಿಯವರನ್ನು ಮಾತ್ರ ಆರಿಸಿಕೊಳ್ಳಲಾಗಿತ್ತು. ದೇವರ ನಿವಾಸದ ಮಹಾಪವಿತ್ರ ಸ್ಥಳದಲ್ಲಿ ಆರೋನನ ಸಂತತಿಯವರೇ ಎಲ್ಲಾ ಕೆಲಸಕಾರ್ಯಗಳನ್ನು ಮಾಡುತ್ತಿದ್ದರು. ಅಲ್ಲದೆ ಇಸ್ರೇಲ್ ಜನರನ್ನು ಶುದ್ಧೀಕರಿಸಲು ಶುದ್ಧೀಕರಣ ಆಚಾರವನ್ನು ಅವರೇ ಮಾಡುತ್ತಿದ್ದರು. ದೇವರ ಸೇವಕನಾದ ಮೋಶೆಯು ಆಜ್ಞಾಪಿಸಿದ ಎಲ್ಲಾ ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ಅವರು ಅನುಸರಿಸುತ್ತಿದ್ದರು.
ಈ ಸ್ಥಳಗಳಲ್ಲಿ ಆರೋನನ ಸಂತತಿಯವರು ವಾಸಿಸಿದರು. ಅವರು ತಮಗೆ ಕೊಟ್ಟಿದ್ದ ಪ್ರದೇಶದಲ್ಲಿ ಪಾಳೆಯಗಳಲ್ಲಿ ವಾಸಮಾಡಿದರು. ಲೇವಿಯರಿಗೆ ಕೊಟ್ಟಿರುವ ಪ್ರಾಂತ್ಯದ ಮೊದಲನೆಯ ಪಾಲು ಕೆಹಾತ್ಯರಿಗೆ ಕೊಡಲ್ಪಟ್ಟಿತು.
ಆರೋನನ ಸಂತತಿಯವರಿಗೆ ಹೆಬ್ರೋನ್ ಪಟ್ಟಣವನ್ನೇ ಕೊಟ್ಟರು. ಹೆಬ್ರೋನು ಆಶ್ರಯಪಟ್ಟಣಗಳಲ್ಲಿ ಒಂದಾಗಿತ್ತು. ಅವರಿಗೆ ಬೇರೆ ನಗರಗಳೂ ಕೊಡಲ್ಪಟ್ಟವು: ಲಿಬ್ನ, ಯತ್ತೀರ್, ಎಷ್ಟೆಮೋವ, ಹೀಲ್ಲೇನ್, ದೆಬೀರ್,
ಬೆನ್ಯಾಮೀನ್ ಕುಲದ ಪ್ರಾಂತ್ಯದಿಂದ ಗಿಬೆಯೋನ್, ಗೆಬಾ, ಅಲೆಮೆತ್ ಮತ್ತು ಅನಾತೋತ್ ಪಟ್ಟಣಗಳೂ ಅದರ ಸುತ್ತಮುತ್ತಲಿದ್ದ ಹೊಲಗಳೂ ಅವರಿಗೆ ದೊರೆತವು. ಒಟ್ಟು ಹದಿಮೂರು ಪಟ್ಟಣಗಳನ್ನು ಕೆಹಾತ್ಯನ ಕುಲದವರಿಗೆ ಕೊಡಲ್ಪಟ್ಟಿತು.
ಗೇರ್ಷೋಮ್ಯನ ಸಂತತಿಯವರಿಗೆ ಹದಿಮೂರು ಪಟ್ಟಣಗಳು ದೊರಕಿದವು. ಇವು ಇಸ್ಸಾಕಾರ್, ಆಶೇರ್, ನಫ್ತಾಲಿ ಮತ್ತು ಬಾಷಾನ್ ಪ್ರದೇಶದಲ್ಲಿ ವಾಸವಾಗಿದ್ದ ಅರ್ಧ ಮನಸ್ಸೆ ಕುಲದವರಿಂದ ಆ ಪಟ್ಟಣಗಳು ದೊರೆತವು.
ಅವೆಲ್ಲಾ ಯೆಹೂದ, ಸಿಮೆಯೋನ್ ಮತ್ತು ಬೆನ್ಯಾಮೀನ್ ಕುಲದವರಿಂದ ದೊರಕಿತು. ಯೆಹೂದ ಪಟ್ಟಣಗಳು ಲೇವಿಕುಲದ ಯಾವ ಕುಟುಂಬಗಳಿಗೆ ಸಿಗಬೇಕು ಎಂಬುದನ್ನು ಚೀಟುಹಾಕುವುದರ ಮೂಲಕ ಗೊತ್ತುಪಡಿಸಿಕೊಂಡರು.
ಗೇರ್ಷೋಮ್ ಕುಟುಂಬದವರಿಗೆ ಗಲಿಲಾಯ ಪ್ರಾಂತ್ಯದ ಕಾದೇಶಿನಲ್ಲಿದ್ದ ಪಟ್ಟಣಗಳೂ ಹಮ್ಮೋನ್ ಮತ್ತು ಕಿರ್ಯಾತಯಿಮ್ ಎಂಬ ಪಟ್ಟಣಗಳೂ ಮತ್ತು ಅವುಗಳ ಸಮೀಪದಲ್ಲಿದ್ದ ಹೊಲಗಳೂ ನಫ್ತಾಲಿ ಕುಲದವರಿಂದ ದೊರಕಿದವು.
(78-79) ಮೆರಾರೀ ಸಂತತಿಯವರು ಮರುಭೂಮಿಯಲ್ಲಿದ್ದ ಬೆಚೆರ್, ಯಹಚ, ಕೆದೇಮೋತ್ ಮತ್ತು ಮೇಫಾತ್ ಎಂಬ ಊರುಗಳನ್ನೂ ಅವುಗಳ ಸಮೀಪದಲ್ಲಿದ್ದ ಹೊಲಗಳನ್ನೂ ರೂಬೇನ್ ಕುಲದವರಿಂದ ಪಡೆದುಕೊಂಡರು. ರೂಬೇನ್ ಕುಲದವರು ಜೆರಿಕೊ ಪಟ್ಟಣಕ್ಕೆ ಎದುರಾಗಿದ್ದ ಜೋರ್ಡನ್ ನದಿಯ ಪೂರ್ವ ಪ್ರಾಂತ್ಯದಲ್ಲಿ ವಾಸಿಸುತ್ತಿದ್ದರು.