ತೋಲನ ಗಂಡುಮಕ್ಕಳು: ಉಜ್ಜೀ, ರೆಫಾಯ, ಯೆರೀಯೇಲ್, ಯಹ್ಮೈ, ಇಬ್ಸಾಮ್ ಮತ್ತು ಸಮುವೇಲ್. ಇವರೆಲ್ಲಾ ಕುಲಪ್ರಧಾನರಾಗಿದ್ದರು. ಇವರೂ ಇವರ ಸಂತತಿಯವರೂ ರಣವೀರರಾಗಿದ್ದರು. ಅವರ ಸಂತತಿಯು ವೃದ್ಧಿಯಾದ ಕಾರಣ ಅರಸನಾದ ದಾವೀದನ ಸಮಯದಲ್ಲಿ ಅವರಲ್ಲಿ ಇಪ್ಪತ್ತೆರಡು ಸಾವಿರದ ಆರುನೂರು ಮಂದಿ ಕಾಲಾಳುಗಳು ಯುದ್ಧಕ್ಕೆ ತಯಾರಾಗಿದ್ದರು.
ಇವರ ಚರಿತ್ರೆಯ ಪ್ರಕಾರ ಇವರಲ್ಲಿ ಮೂವತ್ತಾರು ಸಾವಿರ ಮಂದಿ ಯುದ್ಧಕ್ಕೆ ಹೋಗಲು ಸಮರ್ಥರಾಗಿದ್ದರು. ಇವರಿಗೆಲ್ಲಾ ಅನೇಕ ಹೆಂಡತಿಯರು ಮತ್ತು ಮಕ್ಕಳು ಇದ್ದದ್ದರಿಂದ ಇವರ ಕುಲವು ದೊಡ್ಡದಾಗಿತ್ತು.
ಬೆಳನಿಗೆ ಐದು ಮಂದಿ ಗಂಡುಮಕ್ಕಳು. ಅವರು ಯಾರೆಂದರೆ: ಎಚ್ಬೋನ್, ಉಜ್ಜೀ, ಉಜ್ಜೀಯೇಲ್, ಯೆರೀಮೋತ್ ಮತ್ತು ಈರೀ. ಇವರೆಲ್ಲಾ ತಮ್ಮ ಗೋತ್ರಗಳಿಗೆ ನಾಯಕರಾಗಿದ್ದರು. ಇವರಲ್ಲಿ ಸಿದ್ಧರಾಗಿದ್ದ ಯುದ್ಧವೀರರು ಇಪ್ಪತ್ತೆರಡು ಸಾವಿರದ ಮೂವತ್ನಾಲ್ಕು ಮಂದಿ.
ತಹತನ ಮಗನು ಜಾಬಾದ್ ಮತ್ತು ಜಾಬಾದನ ಮಕ್ಕಳು ಶೂತೆಲಹ, ಎಜೆರ್, ಎಲ್ಲಾದ್ ಎಂಬುವರು. ಗತ್ ನಗರದ ಮೂಲನಿವಾಸಿಗಳು ಎಜೆರನನ್ನು ಮತ್ತು ಎಲ್ಲಾದನನ್ನು ಕೊಂದುಹಾಕಿದರು. ಯಾಕೆಂದರೆ ಎಜೆರನು ಮತ್ತು ಎಲ್ಲಾದನು ಗತ್ ಊರಿನವರ ದನಕುರಿಗಳನ್ನು ಕದ್ದುಕೊಳ್ಳಲು ಹೋಗಿದ್ದರು.
ಎಫ್ರಾಯೀಮನ ಸಂತತಿಯವರು ವಾಸಿಸಿದ ಪಟ್ಟಣಗಳು ಯಾವುವೆಂದರೆ: ಬೇತೇಲ್ ಮತ್ತು ಅದರ ಪಕ್ಕದಲ್ಲಿದ್ದ ಹಳ್ಳಿಗಳು; ಪೂರ್ವದಲ್ಲಿ ನಾರಾನ್; ಪಶ್ಚಿಮದಲ್ಲಿ ಗೆಜೆರ್ ಪಟ್ಟಣ ಮತ್ತು ಅದರ ಪಕ್ಕದಲ್ಲಿದ್ದ ಹಳ್ಳಿಗಳು; ಶೆಕೆಮ್ ಪಟ್ಟಣ ಮತ್ತು ಅದರ ಸಮೀಪದಲ್ಲಿದ್ದ ಹಳ್ಳಿಗಳು, ಅಯ್ಯಾ ಪಟ್ಟಣ ಮತ್ತು ಅದರ ಸಮೀಪದಲ್ಲಿದ್ದ ಹಳ್ಳಿಗಳು;
ಇವರೆಲ್ಲರೂ ಆಶೇರನ ಸಂತತಿಯವರು. ಇವರೆಲ್ಲರೂ ಕುಲಪ್ರಧಾನರಾಗಿದ್ದರು. ಅವರು ಸೈನಿಕರೂ ನಾಯಕರುಗಳೂ ಆಗಿದ್ದರು. ಅವರ ಕುಲದ ಇತಿಹಾಸದ ಪ್ರಕಾರ, ಒಟ್ಟು ಇಪ್ಪತ್ತಾರು ಸಾವಿರ ಮಂದಿ ಯುದ್ಧಕ್ಕೆ ಸಿದ್ಧರಾಗಿದ್ದ ಸೈನಿಕರಿದ್ದರು.