(6-7) ಇವರು ಏಹೂದನ ಸಂತತಿಯವರು. ಇವರು ಗೆಬ ಗೋತ್ರಗಳ ನಾಯಕರುಗಳಾಗಿದ್ದರು. ಇವರನ್ನು ಇವರ ಮನೆಗಳಿಂದ ಬಲವಂತದಿಂದ ಹೊರಡಿಸಿ ಮಾನಹತಿಗೆ ಕಳುಹಿಸಲಾಯಿತು. ಏಹೂದನ ಸಂತತಿಯವರು ಯಾರೆಂದರೆ: ನಾಮಾನ್, ಅಹೀಯ ಮತ್ತು ಗೇರ. ಗೇರನು ಉಚ್ಚನ ಮತ್ತು ಅಹೀಹುದನ ತಂದೆ.
(9-10) ಶಹರಯಿಮನಿಗೆ ಯೋವಾಬ್, ಬ್ಯ, ಮೇಷ, ಮಲ್ಕಾಮ್, ಯೆಯೂಚ್, ಸಾಕ್ಯ ಮತ್ತು ವಿರ್ಮ ಎಂಬ ಗಂಡುಮಕ್ಕಳನ್ನು ತನ್ನ ಹೆಂಡತಿಯಾದ ಹೋದೆಷಳಿಂದ ಪಡೆದುಕೊಂಡನು. ಇವರೆಲ್ಲರೂ ತಮ್ಮ ಕುಲ ಪ್ರಧಾನರಾಗಿದ್ದರು.
(12-13) ಎಲ್ಪಾಲನ ಮಕ್ಕಳು ಯಾರೆಂದರೆ: ಏಬೆರ್, ಮಿಷ್ಬಾಮ್, ಶೆಮೆದ್, ಬೆರೀಯ ಮತ್ತು ಶಮ. ಶೆಮೆದನು ಓನೋ ಮತ್ತು ಲೋದ್ ಎಂಬ ಪಟ್ಟಣಗಳನ್ನೂ ಅವುಗಳ ಸುತ್ತಮುತ್ತಲಿನ ಊರುಗಳನ್ನೂ ಕಟ್ಟಿಸಿದನು. ಅಯ್ಯಾಲೋನಿನಲ್ಲಿ ವಾಸಿಸುತ್ತಿದ್ದ ಕುಲದವರಿಗೆ ಬೆರೀಯ ಮತ್ತು ಶಮ ಕುಲ ಪ್ರಧಾನರಾಗಿದ್ದರು. ಇವರು ಗತ್‌ನಲ್ಲಿ ವಾಸಿಸುತ್ತಿದ್ದ ಜನರನ್ನು ಓಡಿಸಿದರು.
ಊಲಾಮನ ಗಂಡುಮಕ್ಕಳೆಲ್ಲರೂ ರಣವೀರರು; ಬಿಲ್ಲುಬಾಣಗಳನ್ನು ಉಪಯೋಗಿಸುವುದರಲ್ಲಿ ನಿಪುಣರು. ಅವರಿಗೆ ಅನೇಕ ಗಂಡುಮಕ್ಕಳು ಮತ್ತು ಗಂಡುಮೊಮ್ಮಕ್ಕಳಿದ್ದರು. ಅವರಿಗೆ ಒಟ್ಟು ನೂರೈವತ್ತು ಮಂದಿ ಗಂಡುಮಕ್ಕಳು ಮತ್ತು ಗಂಡು ಮೊಮ್ಮಕ್ಕಳು ಇದ್ದರು. ಇವರೆಲ್ಲಾ ಬೆನ್ಯಾಮೀನನ ಸಂತತಿಯವರು.