1
|
ಇಸ್ರೇಲ್ ಜನರ ಎಲ್ಲಾ ಹೆಸರುಗಳು ಅವರವರ ವಂಶಾವಳಿ ಪಟ್ಟಿಯಲ್ಲಿ ಬರೆಯಲ್ಪಟ್ಟಿದೆ. ಈ ವಂಶಾವಳಿಗಳು ಇಸ್ರೇಲ್ ರಾಜರ ಇತಿಹಾಸದಲ್ಲಿ ಸೇರಿಸಲ್ಪಟ್ಟಿದೆ. ಯೆಹೂದ ಪ್ರಾಂತ್ಯದ ಜನರನ್ನು ಸೆರೆಹಿಡಿದು ಬಾಬಿಲೋನಿಗೆ ಒಯ್ಯಲಾಯಿತು. ಅವರು ದೇವರಿಗೆ ಅವಿಧೇಯರಾದ್ದರಿಂದ ಅವರಿಗೆ ಇಂಥ ಸ್ಥಿತಿ ಬಂದೊದಗಿತು. |
2
|
ಅಲ್ಲಿಂದ ಹಿಂತಿರುಗಿಬಂದು ತಮ್ಮ ಸ್ವನಾಡಿನಲ್ಲಿ ನೆಲೆಸಿದವರಲ್ಲಿ ಮೊದಲನೆಯವರು ಯಾರೆಂದರೆ: ಕೆಲವು ಇಸ್ರೇಲರು, ಯಾಜಕರು, ಲೇವಿಯರು ಮತ್ತು ದೇವಾಲಯದ ಸೇವಕರು. |
3
|
ಯೆಹೂದ, ಬೆನ್ಯಾಮೀನ್, ಎಫ್ರಾಯೀಮ್ ಮತ್ತು ಮನಸ್ಸೆ ಗೋತ್ರದವರಾದ ಇವರು ಜೆರುಸಲೇಮಿನಲ್ಲಿ ವಾಸವಾಗಿದ್ದರು. ಇವರು ಯಾರೆಂದರೆ: |
4
|
ಊತ್ಯೆ ಅಮ್ಮೀಹೂದನ ಮಗ, ಅಮ್ಮೀಹೂದನು ಒಮ್ರಿಯ ಮಗ, ಒಮ್ರಿಯು ಇಮ್ರಿಯ ಮಗ, ಇಮ್ರಿಯು ಬಾನೀಯ ಮಗ, ಬಾನೀಯು ಪೆರೆಚನ ಸಂತತಿಯವನು, ಪೆರೆಚನು ಯೆಹೂದನ ಮಗ. |
5
|
ಜೆರುಸಲೇಮಿನಲ್ಲಿ ವಾಸಿಸಿದ ಶೇಲಾಹದವರು ಯಾರೆಂದರೆ: ಚೊಚ್ಚಲಮಗನಾದ ಅಸಾಯನು. ಅಸಾಯನಿಗೂ ಗಂಡುಮಕ್ಕಳಿದ್ದರು. |
6
|
ಜೆರಹಳ ಸಂತತಿಯ ಯೆಯೂವೇಲ್ ಮತ್ತು ಅವನ ಆರು ನೂರ ತೊಂಭತ್ತು ಮಂದಿ ಸಂಬಂಧಿಕರು ಜೆರುಸಲೇಮಿನಲ್ಲಿ ವಾಸಿಸಿದರು. |
7
|
ಜೆರುಸಲೇಮಿನಲ್ಲಿ ವಾಸಿಸಿದ ಬೆನ್ಯಾಮೀನನ ಗೋತ್ರದವರು ಯಾರೆಂದರೆ: ಮೆಷುಲ್ಲಾಮನ ಮಗನಾದ ಸಲ್ಲೂ. ಮೆಷುಲ್ಲಾಮನು ಹೋದವ್ಯನ ಮಗ. ಹೋದವ್ಯನು ಹಸ್ಸೆನುವಾಹನ ಮಗ. |
8
|
ಇಬ್ನೆಯಾಹನು ಯೆರೋಹಾಮನ ಮಗ. ಏಲಾನು ಉಜ್ಜೀಯ ಮಗ. ಉಜ್ಜೀಯನು ಮಿಕ್ರೀಯ ಮಗ ಮತ್ತು ಮೆಷುಲ್ಲಾಮನು ಶೆಫಟ್ಯನ ಮಗ. ಶೆಫಟ್ಯನು ರೆಯೂವೇಲನ ಮಗ. ರೆಯೂವೇಲನು ಇಬ್ನಿಯಾಹನ ಮಗ. |
9
|
[This verse may not be a part of this translation] |
10
|
ಜೆರುಸಲೇಮಿನಲ್ಲಿ ವಾಸಿಸಿದ ಯಾಜಕರು ಯಾರೆಂದರೆ: ಯೆದಾಯ, ಯೆಹೋಯಾರೀಬ್, ಯಾಕೀನ್ ಮತ್ತು |
11
|
ಅಜರ್ಯ. ಅಜರ್ಯನು ಹಿಲ್ಕೀಯನ ಮಗ; ಹಿಲ್ಕೀಯನು ಮೆಷುಲ್ಲಾಮನ ಮಗ; ಮೆಷುಲ್ಲಾಮನು ಚಾದೋಕನ ಮಗ; ಚಾದೋಕನು ಮೆರಾಯೋತನ ಮಗ; ಮೆರಾಯೋತನು ಅಹೀಟೂಬನ ಮಗ. ಅಹೀಟೂಬನು ದೇವಾಲಯದ ಒಬ್ಬ ವಿಶೇಷ ಅಧಿಕಾರಿಯಾಗಿದ್ದನು. |
12
|
ಇವರಲ್ಲದೆ, ಯೆರೋಹಾಮನ ಮಗನಾದ ಅದಾಯನು ಸಹ ಇದ್ದನು. ಯೆರೋಹಾಮನು ಪಶ್ಹೂರನ ಮಗ; ಪಶ್ಹೂರನು ಮಲ್ಕೀಯನ ಮಗ; ಇವರಲ್ಲದೆ, ಅದೀಯೇಲನ ಮಗನಾದ ಮಾಸೈ ಸಹ ಇದ್ದನು. ಅದೀಯೇಲನು ಯಹ್ಜೇರನ ಮಗ. ಯಹ್ಜೇರನು ಮೆಷುಲ್ಲಾಮನ ಮಗ. ಮೆಷುಲ್ಲಾಮನು ಮೆಷಿಲ್ಲೇಮೋತನ ಮಗ. ಮೆಷಿಲ್ಲೇಮೋತನು ಇಮ್ಮೇರನ ಮಗ. |
13
|
ಒಟ್ಟು ಒಂದು ಸಾವಿರದ ಏಳುನೂರ ಅರವತ್ತು ಮಂದಿ ಯಾಜಕರಿದ್ದರು. ಇವರೆಲ್ಲರೂ ತಮ್ಮ ಕುಟುಂಬಗಳಿಗೆ ಪ್ರಧಾನರಾಗಿದ್ದರು. ದೇವಾಲಯದ ಕೆಲಸ ಕಾರ್ಯಗಳ ಜವಾಬ್ದಾರಿಕೆಯನ್ನು ಇವರು ಹೊತ್ತು ಕೊಂಡಿದ್ದರು. |
14
|
ಜೆರುಸಲೇಮಿನಲ್ಲಿ ವಾಸಿಸಿದ ಲೇವಿ ಕುಲದ ಜನರು ಯಾರೆಂದರೆ: ಹಷ್ಷೂಬನ ಮಗನಾದ ಶೆಮಾಯ. ಹಷ್ಷೂಬನು ಅಜ್ರೀಕಾಮನ ಮಗ. ಅಜ್ರೀಕಾಮನು ಹಷಬ್ಯನ ಮಗ. ಹಷಬ್ಯನು ಮೆರಾರೀಯ ಸಂತತಿಯವನು. |
15
|
ಜೆರುಸಲೇಮಿನಲ್ಲಿ ವಾಸಿಸಿದ ಇತರರು ಯಾರೆಂದರೆ: ಬಕ್ಬಕ್ಕರ್, ಹೆರೆಷ್, ಗಾಲಾಲ್ ಮತ್ತು ಮತ್ತನ್ಯ. ಮತ್ತನ್ಯನು ಮೀಕನ ಮಗ. ಮೀಕನು ಜಿಕ್ರೀಯ ಮಗ. ಜಿಕ್ರೀಯು ಆಸಾಫನ ಮಗ. |
16
|
ಓಬದ್ಯನು ಶೆಮಾಯನ ಮಗ. ಶೆಮಾಯನು ಗಾಲಾಲನ ಮಗ. ಗಾಲಾಲನು ಯೆದೂತೂನನ ಮಗ. ಆಸನ ಮಗನಾದ ಬೆರೆಕ್ಯನು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದನು. ಆಸನು ಎಲ್ಕಾನನ ಮಗ. ಎಲ್ಕಾನನು ನೆಟೋಫ ಜನರ ಸಮೀಪದ ಗ್ರಾಮದಲ್ಲಿ ವಾಸಿಸುತ್ತಿದ್ದನು. |
17
|
ಜೆರುಸಲೇಮಿನಲ್ಲಿ ವಾಸಿಸುತ್ತಿದ್ದ ದ್ವಾರಪಾಲಕರು ಯಾರೆಂದರೆ: ಶಲ್ಲೂಮ್, ಅಕ್ಕೂಬ್, ಟಲ್ಮೋನ್, ಅಹೀಮಾನ್ ಮತ್ತು ಅವರ ಕುಟುಂಬದವರು. ಶಲ್ಲೂಮನು ಅವರ ನಾಯಕನಾಗಿದ್ದನು. |
18
|
ಇವರೆಲ್ಲರೂ ಪೂರ್ವದಿಕ್ಕಿನಲ್ಲಿರುವ ರಾಜನ ಹೆಬ್ಬಾಗಿಲನ್ನು ಕಾಯುತ್ತಿರುತ್ತಾರೆ. ಇವರೆಲ್ಲಾ ಲೇವಿ ಕುಲಕ್ಕೆ ಸೇರಿದವರು. |
19
|
ಶಲ್ಲೂಮನು ಕೋರೇಯ ಮಗನು. ಕೋರೇಯ ಎಬ್ಯಾಸಾಫನ ಮಗನು. ಎಬ್ಯಾಸಾಫನು ಕೋರಹನ ಮಗನು. ಶಲ್ಲೂಮನೂ ಅವನ ಸಹೋದರರೂ ದ್ವಾರಪಾಲಕರಾಗಿದ್ದರು. ಅವರೆಲ್ಲರೂ ಕೋರಹನ ಸಂತತಿಯವರು. ಪವಿತ್ರಗುಡಾರದ ಬಾಗಿಲುಗಳನ್ನು ಕಾಯುವ ಜವಾಬ್ದಾರಿಕೆ ಇವರದಾಗಿತ್ತು. ತಮ್ಮ ಪೂರ್ವಿಕರು ಮಾಡಿದ್ದಂತೆಯೇ ಅವರು ಈ ಕೆಲಸವನ್ನು ಮಾಡಿದರು. ಯೆಹೋವನ ಪಾಳೆಯದ ಪ್ರವೇಶದ್ವಾರವನ್ನು ಕಾಯುವುದು ಅವರ ಪೂರ್ವಿಕರ ಉದ್ಯೋಗವಾಗಿತ್ತು. |
20
|
ಹಿಂದೆ ಫೀನೆಹಾಸನು ದ್ವಾರಪಾಲಕರ ನಾಯಕನಾಗಿದ್ದನು. ಫೀನೆಹಾಸನು ಎಲ್ಲಾಜಾರನ ಮಗ. ದೇವರು ಫೀನೆಹಾಸನೊಂದಿಗಿದ್ದನು. |
21
|
ಮೆಷಲೆಮ್ಯೆನ ಮಗನಾದ ಜೆಕರ್ಯನು ಪವಿತ್ರಗುಡಾರದ ಪ್ರವೇಶದ್ವಾರಕ್ಕೆ ಪಾಲಕನಾಗಿದ್ದನು. |
22
|
ಒಟ್ಟು ಇನ್ನೂರ ಹನ್ನೆರಡು ಮಂದಿ ಪವಿತ್ರಗುಡಾರದ ಬಾಗಿಲನ್ನು ಕಾಯುವುದಕ್ಕೆ ಆರಿಸಲ್ಪಟ್ಟಿದ್ದರು. ಅವರ ಹೆಸರುಗಳು ವಂಶದ ಚರಿತ್ರೆಯಲ್ಲಿ ಬರೆಯಲ್ಪಟ್ಟಿರುತ್ತವೆ. ದಾವೀದನೂ ದೇವರ ಮನುಷ್ಯನಾದ ಸಮುವೇಲನೂ ಇವರನ್ನು ಆರಿಸಿಕೊಂಡರು. ಯಾಕೆಂದರೆ ಇವರೆಲ್ಲರೂ ನಂಬಿಗಸ್ತರಾಗಿದ್ದರು. |
23
|
ಅವರೂ ಅವರ ಸಂತತಿಯವರೂ ದೇವದರ್ಶನಗುಡಾರದ ದ್ವಾರಪಾಲರಾಗಿದ್ದರು. |
24
|
ಅದಕ್ಕೆ ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ದಿಕ್ಕುಗಳಲ್ಲಿ ನಾಲ್ಕು ಬಾಗಿಲುಗಳಿದ್ದವು. |
25
|
ಗ್ರಾಮಗಳಲ್ಲಿ ನೆಲೆಸಿದ ದ್ವಾರಪಾಲಕರ ಕುಟುಂಬದವರು ತಮ್ಮ ಸರದಿಗನುಗುಣವಾಗಿ ಏಳು ದಿವಸದ ಕರ್ತವ್ಯ ಮುಗಿಸಿ ಹೋಗುತ್ತಿದ್ದರು. |
26
|
ಲೇವಿಕುಲದ ನಾಲ್ಕು ಮಂದಿ ಎಲ್ಲಾ ದ್ವಾರಪಾಲಕರಿಗೆ ನಾಯಕರಾಗಿದ್ದರು. ದೇವಾಲಯದ ಕೋಣೆಗಳನ್ನೂ ಅಲ್ಲಿಟ್ಟಿರುವ ಹಣದ ಪೆಟ್ಟಿಗೆಗಳನ್ನೂ ಅವರು ಕಾಯುತ್ತಿದ್ದರು. |
27
|
ಅವರು ರಾತ್ರಿಯಲ್ಲಿ ಕಾವಲು ಕಾಯುತ್ತಿದ್ದರು ಮತ್ತು ಪ್ರತಿಮುಂಜಾನೆ ದೇವಾಲಯದ ಬಾಗಿಲನ್ನು ತೆರೆಯುತ್ತಿದ್ದರು. |
28
|
ಅವರಲ್ಲಿ ಕೆಲವರು ದೇವಾಲಯದ ಪಾತ್ರೆಗಳಿಗೆ ಮೇಲ್ವಿಚಾರಕರಾಗಿದ್ದು ಅವುಗಳನ್ನು ಒಳಗೆ ತರುವಾಗಲೂ ಹೊರಗೆ ತೆಗೆದುಕೊಂಡು ಹೋಗುವಾಗಲೂ ಲೆಕ್ಕಮಾಡುತ್ತಿದ್ದರು. |
29
|
ಇನ್ನು ಕೆಲವರು ಮರದ ಸಾಮಾನುಗಳಿಗೂ ವಿಶೇಷವಾದ ಪಾತ್ರೆಗಳಿಗೂ ಮೇಲ್ವಿಚಾರಕರಾಗಿದ್ದು ಗೋಧಿಹಿಟ್ಟು, ದ್ರಾಕ್ಷಾರಸ, ಎಣ್ಣೆ, ಧೂಪ ಮತ್ತು ಪರಿಮಳದ್ರವ್ಯ ಇವುಗಳ ಪಾರುಪತ್ಯಗಾರರಾಗಿದ್ದರು. |
30
|
ಯಾಜಕರ ಸಂತಾನದವರಲ್ಲಿ ಕೆಲವರು ಪರಿಮಳ ದ್ರವ್ಯಗಳಿಂದ ತೈಲಮಾಡುತ್ತಿದ್ದರು. |
31
|
ಮತ್ತಿತ್ಯ ಎಂಬ ಲೇವಿಯು ದೇವರಿಗೆ ಸಮರ್ಪಿಸುವ ರೊಟ್ಟಿಯನ್ನು ತಯಾರು ಮಾಡುತ್ತಿದ್ದನು. ಇವನು ಶಲ್ಲೂಮನ ಚೊಚ್ಚಲಮಗ. ಶಲ್ಲೂಮನು ಕೋರಹನ ಕುಲದವನಾಗಿದ್ದನು. |
32
|
ಕೋರಹನ ಕುಲದ ಕೆಲವರಿಗೆ, ಪ್ರತಿ ಸಬ್ಬತ್ದಿವಸ ದೇವರ ಸನ್ನಿಧಾನದಲ್ಲಿ ಇಡುವ ನೈವೇದ್ಯದ ರೊಟ್ಟಿಯನ್ನು ತಯಾರಿಸುವ ಕೆಲಸವಿತ್ತು. |
33
|
ಗಾಯಕರು ಮತ್ತು ತಮ್ಮ ಕುಟುಂಬಗಳಿಗೆ ನಾಯಕರಾಗಿದ್ದ ಲೇವಿಯರು ದೇವಾಲಯದ ಕೋಣೆಗಳಲ್ಲಿ ಇರುತ್ತಿದ್ದರು. ಅವರು ಇತರ ಕೆಲಸಗಳನ್ನು ಮಾಡಬೇಕಾಗಿರಲಿಲ್ಲ; ಯಾಕೆಂದರೆ ದೇವಾಲಯದ ಹಗಲಿರುಳಿನ ಕೆಲಸಕಾರ್ಯಗಳ ಜವಾಬ್ದಾರಿಕೆ ಇವರದಾಗಿತ್ತು. |
34
|
ಈ ಲೇವಿಯರೆಲ್ಲಾ ತಮ್ಮತಮ್ಮ ಕುಟುಂಬಗಳಿಗೆ ಪ್ರಧಾನರಾಗಿದ್ದರು. ಇವರ ಹೆಸರುಗಳು ಅವರ ಕುಟುಂಬ ಚರಿತ್ರೆಯಲ್ಲಿ ಬರೆಯಲ್ಪಟ್ಟಿರುತ್ತದೆ. ಅವರು ಜೆರುಸಲೇಮಿನಲ್ಲಿ ವಾಸಿಸಿದರು. |
35
|
ಯೆಯೂವೇಲನು ಗಿಬ್ಯೋನನ ತಂದೆ. ಯೆಯೂವೇಲನು ಗಿಬ್ಯೋನ್ ಪಟ್ಟಣದಲ್ಲಿ ವಾಸಮಾಡುತ್ತಿದ್ದನು. ಯೆಯೂವೇಲನ ಹೆಂಡತಿಯ ಹೆಸರು ಮಾಕ. |
36
|
ಯೆಯೂವೇಲನ ಚೊಚ್ಚಲ ಮಗನು ಅಬ್ದೋನ. ಅವನ ಇತರ ಗಂಡುಮಕ್ಕಳು ಯಾರೆಂದರೆ: |
37
|
ಚೂರ್, ಕೀಷ್, ಬಾಳ್, ನೇರ್, ನಾದಾಬ್, ಗೆದೋರ್, ಅಹ್ಯೊ, ಜಕರ್ಯ ಮತ್ತು ಮಿಕ್ಲೋತ್. |
38
|
ಮಿಕ್ಲೋತನು ಶಿಮಾಮನ ತಂದೆ. ಯೆಯೂವೇಲನ ಕುಟುಂಬದವರೆಲ್ಲಾ ತಮ್ಮ ಸಂಬಂಧಿಕರೊಂದಿಗೆ ಜೆರುಸಲೇಮಿನಲ್ಲಿ ವಾಸಿಸುತ್ತಿದ್ದರು. |
39
|
ನೇರನು ಕೀಷನ ತಂದೆ. ಕೀಷನು ಸೌಲನ ತಂದೆ. ಸೌಲನ ಗಂಡುಮಕ್ಕಳು ಯಾರೆಂದರೆ: ಯೋನಾತಾನ್, ಮಲ್ಕೀಷೂವ, ಅಬೀನಾದಾಬ್ ಮತ್ತು ಎಷ್ಬಾಳ್. |
40
|
ಯೋನಾತಾನನ ಮಗನಾದ ಮೆರೀಬ್ಬಾಳನು ಮೀಕನ ತಂದೆ. |
41
|
ಮೀಕನ ಗಂಡುಮಕ್ಕಳು ಯಾರೆಂದರೆ: ಪೀತೋನ್, ಮೆಲೆಕ್, ತಹ್ರೇಯ ಮತ್ತು ಆಹಾಜ್. |
42
|
ಆಹಾಜನು ಯಗ್ರಾಹನ ತಂದೆ. ಯಗ್ರಾಹನು ಜಾರಹನ ತಂದೆ. ಜಾರಹನು ಆಲೆಮೆತ್, ಅಜ್ಮಾವೆತ್ ಮತ್ತು ಜಿಮ್ರೀ ಇವರ ತಂದೆ. ಜಿಮ್ರೀಯು ಮೋಚನ ತಂದೆ. |
43
|
ಮೋಚನು ಬಿನ್ನನ ತಂದೆ. ರೆಫಾಯನು ಬಿನ್ನನ ಮಗ. ಎಲ್ಲಾಸನು ರೆಫಾಯನ ಮಗ. ಆಚೇಲನು ಎಲ್ಲಾಸನ ಮಗ. |
44
|
ಆಚೇಲನಿಗೆ ಆರು ಮಂದಿ ಗಂಡುಮಕ್ಕಳಿದ್ದರು. ಅವರು ಯಾರೆಂದರೆ: ಅಜ್ರೀಕಾಮ್, ಬೋಕೆರೂ, ಇಷ್ಮಾಯೇಲ್, ಶೆಯರ್ಯ, ಓಬದ್ಯ ಮತ್ತು ಹಾನಾನ್. |
1-Chronicles 9:7 Kannada Language Bible Words basic statistical display
COMING SOON ...