ನೀವು ಆ ಸಂದೇಶದ ಮೂಲಕ ರಕ್ಷಣೆ ಹೊಂದಿದ್ದೀರಿ. ನಾನು ನಿಮಗೆ ತಿಳಿಸಿದ ಸಂದೇಶದಲ್ಲಿ ನಿಮಗೆ ದೃಢವಾದ ನಂಬಿಕೆ ಇರಲೇಬೇಕು. ನೀವು ಹೀಗೆ ಮಾಡದಿದ್ದರೆ, ನಿಮ್ಮ ನಂಬಿಕೆಯು ನಿರರ್ಥಕವಾಗುವುದು.
ಉಳಿದೆಲ್ಲಾ ಅಪೊಸ್ತಲರು ನನಗಿಂತಲೂ ಶ್ರೇಷ್ಠರಾಗಿದ್ದಾರೆ. ಇದಕ್ಕೆ ಕಾರಣವೇನೆಂದರೆ, ನಾನು ದೇವರ ಸಭೆಯನ್ನು ಹಿಂಸಿಸಿದೆನು. ಆದ್ದರಿಂದ ಅಪೊಸ್ತಲನೆಂದು ಕರೆಸಿಕೊಳ್ಳುವುದಕ್ಕೂ ನಾನು ಯೋಗ್ಯನಲ್ಲ.
ಆದರೆ, ದೇವರ ಕೃಪೆಯಿಂದ ನಾನು ಅಪೊಸ್ತಲನಾಗಿದ್ದೇನೆ. ಆತನು ನನಗೆ ತೋರಿದ ಕೃಪೆಯು ನಿಷ್ಛಲವಾಗಲಿಲ್ಲ. ಉಳಿದೆಲ್ಲ ಅಪೊಸ್ತಲರಿಗಿಂತ ನಾನು ಹೆಚ್ಚು ಕಷ್ಟಪಟ್ಟು ಸೇವೆ ಮಾಡಿದ್ದೇನೆ. (ಆದರೆ ಸೇವೆ ಮಾಡುತ್ತಿದ್ದವನು ನಿಜವಾಗಿಯೂ ನಾನಲ್ಲ ದೇವರ ಕೃಪೆಯೇ ನನ್ನೊಂದಿಗಿತ್ತು.)
ಅಲ್ಲದೆ, ದೇವರ ಬಗ್ಗೆ ನಾವು ಸುಳ್ಳುಸಾಕ್ಷಿ ಹೇಳಿದಂತಾಗುವುದು. ಏಕೆಂದರೆ, ದೇವರು ಕ್ರಿಸ್ತನನ್ನು ಜೀವಂತವಾಗಿ ಎಬ್ಬಿಸಿದನೆಂದು ನಾವು ದೇವರ ಬಗ್ಗೆ ಬೋಧಿಸಿದೆವು. ಜನರು ಜೀವಂತವಾಗಿ ಎದ್ದುಬರದಿದ್ದರೆ, ದೇವರು ಕ್ರಿಸ್ತನನ್ನು ಜೀವಂತವಾಗಿ ಎಬ್ಬಿಸಲೇ ಇಲ್ಲ.
ಆದರೆ ಪ್ರತಿಯೊಬ್ಬನು ಕ್ರಮಬದ್ಧ ರೀತಿಯಲ್ಲಿ ಜೀವಂತವಾಗಿ ಎದ್ದುಬರುವನು. ಮೊಟ್ಟಮೊದಲನೆಯದಾಗಿ ಕ್ರಿಸ್ತನೇ ಎದ್ದುಬಂದನು. ಕ್ರಿಸ್ತನು ಮತ್ತೆ ಬರುವಾಗ ಕ್ರಿಸ್ತನಿಗೆ ಸೇರಿದ ಜನರು ಜೀವಂತವಾಗಿ ಎದ್ದುಬರುವರು.
“ದೇವರು ಸಮಸ್ತವನ್ನು ಆತನಿಗೆ ಅಧೀನಗೊಳಿಸುತ್ತಾನೆ” [✡ಉಲ್ಲೇಖನ: ಕೀರ್ತನೆ. 8:6.] ಎಂದು ಪವಿತ್ರಗ್ರಂಥವು ಹೇಳುತ್ತದೆ. “ಸಮಸ್ತವನ್ನು” ಕ್ರಿಸ್ತನಿಗೆ ಅಧೀನಗೊಳಿಸುತ್ತಾನೆಂದು ಹೇಳುವಾಗ, ಅದು ದೇವರನ್ನು ಒಳಗೊಂಡಿಲ್ಲ ಎಂಬುದು ಸ್ಪಷ್ಟವಾಗಿದೆ. ಸಮಸ್ತವನ್ನು ಕ್ರಿಸ್ತನಿಗೆ ಅಧೀನಗೊಳಿಸಿದಾತನು ದೇವರೇ.
ಸಮಸ್ತವು ತನ್ನ ಅಧೀನಕ್ಕೆ ಬಂದ ಮೇಲೆ, ಕ್ರಿಸ್ತನು ತನ್ನನ್ನೇ ದೇವರಿಗೆ ಅಧೀನಪಡಿಸಿಕೊಳ್ಳುವನು. ಸಮಸ್ತವನ್ನು ಕ್ರಿಸ್ತನಿಗೆ ಅಧೀನಪಡಿಸಿದಾತನು ದೇವರೇ. ಹೀಗೆ ದೇವರು ಸಮಸ್ತಕ್ಕೂ ಸರ್ವಾಧಿಪತಿಯಾಗುವನು.
ಸತ್ತವರಿಗೆ ಪುನರುತ್ಥಾನವಿಲ್ಲವಾದರೆ ಸತ್ತುಹೋದವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಂಡ ಜನರು ಏನು ಮಾಡುವರು? ಸತ್ತವರಿಗೆ ಪುನರುತ್ಥಾನವಿಲ್ಲವಾದರೆ, ಜನರು ಅವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವುದೇಕೆ?
ಕೇವಲ ನನ್ನ ಮಾನುಷ ಸ್ವಭಾವದಿಂದ ನಾನು ಎಫೆಸದಲ್ಲಿ ದುಷ್ಟಮೃಗಗಳೊಂದಿಗೆ ಹೋರಾಡಿದ್ದರೆ, ಅದರಿಂದ ನನಗೇನು ಪ್ರಯೋಜನ? ಸತ್ತವರಿಗೆ ಪುನರುತ್ಥಾನವಿಲ್ಲದಿದ್ದರೆ, “ತಿನ್ನೋಣ, ಕುಡಿಯೋಣ, ಏಕೆಂದರೆ ನಾವು ನಾಳೆ ಸಾಯುತ್ತೇವೆ.”
ಸ್ವಸ್ಥಚಿತ್ತರಾಗಿರಿ ಮತ್ತು ಪಾಪಮಾಡುವುದನ್ನು ನಿಲ್ಲಿಸಿರಿ. ನಿಮ್ಮಲ್ಲಿ ಕೆಲವರು ದೇವರನ್ನು ಅರಿತುಕೊಂಡಿಲ್ಲ. ನಿಮಗೆ ನಾಚಿಕೆ ಆಗಲೆಂದು ಇದನ್ನು ಹೇಳುತ್ತಿದ್ದೇನೆ. ಯಾವ ಬಗೆಯ ದೇಹವನ್ನು ನಾವು ಹೊಂದಿಕೊಳ್ಳುವೆವು?
ನೀವು ಬೀಜವನ್ನು ಬಿತ್ತುವಾಗ, ಆ ಬೀಜವು ಕೇವಲ ಕಾಳಾಗಿರುತ್ತದೆಯೇ ಹೊರತು ಮುಂದೆ ಹುಟ್ಟಿ ಬರಲಿರುವ ಗಿಡವಾಗಿರುವುದಿಲ್ಲ. ನೀವು ಬಿತ್ತುವ ಬೀಜವು ಕೇವಲ ಕಾಳಷ್ಟೆ. ಅದು ಗೋಧಿಯಾಗಿರಬಹುದು ಅಥವಾ ಬೇರೆ ಕಾಳಾಗಿರಬಹುದು.
ಎಲ್ಲಾ ಶರೀರಗಳು ಒಂದೇ ರೀತಿಯ ಮಾಂಸವನ್ನು ಹೊಂದಿರುವುದಿಲ್ಲ. ಜನರಿಗೆ ಒಂದು ಬಗೆಯ ಮಾಂಸವಿರುತ್ತದೆ; ಪ್ರಾಣಿಗಳಿಗೆ ಮತ್ತೊಂದು ಬಗೆಯ ಮಾಂಸವಿರುತ್ತದೆ; ಪಕ್ಷಿಗಳಿಗೆ ಇನ್ನೊಂದು ಬಗೆಯ ಮಾಂಸವಿರುತ್ತದೆ. ಮೀನುಗಳು ಬೇರೊಂದು ರೀತಿಯ ಮಾಂಸವನ್ನು ಹೊಂದಿರುತ್ತವೆ.
ಸೂರ್ಯನಿಗೆ ಒಂದು ಬಗೆಯ ಸೌಂದರ್ಯವಿದೆ; ಚಂದ್ರನಿಗೆ ಮತ್ತೊಂದು ಬಗೆಯ ಸೌಂದರ್ಯವಿದೆ. ನಕ್ಷತ್ರಗಳಿಗೆ ಇನ್ನೊಂದು ಬಗೆಯ ಸೌಂದರ್ಯವಿದೆ. ಪ್ರತಿಯೊಂದು ನಕ್ಷತ್ರವು ತನ್ನದೇ ಆದ ಸೌಂದರ್ಯವನ್ನು ಹೊಂದಿದೆ.
ಸತ್ತವರಿಗಾಗುವ ಪುನರುತ್ಥಾನವು ಅದೇ ರೀತಿಯಾಗಿರುವುದು. ಬಿತ್ತಲ್ಪಟ್ಟ ದೇಹವು ಹಾಳಾಗುವುದು ಮತ್ತು ಕೊಳೆತು ಹೋಗುವುದು. ಆದರೆ ಜೀವಂತವಾಗಿ ಎದ್ದುಬರುವ ಆ ದೇಹವನ್ನು ನಾಶಮಾಡಲು ಸಾಧ್ಯವೇ ಇಲ್ಲ.
ದೇಹವು ಹೀನಾವಸ್ಥೆಯಲ್ಲಿ ಬಿತ್ತಲ್ಪಡುವುದು, ಆದರೆ ಮಹಿಮೆಯೊಡನೆ ಎದ್ದುಬರುವುದು. ದೇಹವು ಬಿತ್ತಲ್ಪಟ್ಟಾಗ, ಅದು ಬಲಹೀನವಾಗಿರುತ್ತದೆ. ಆದರೆ ಅದು ಎದ್ದುಬಂದಾಗ ಅದಕ್ಕೆ ಶಕ್ತಿಯಿರುತ್ತದೆ.
“ಮೊದಲನೆ ಮನುಷ್ಯನಾದ ಆದಾಮನು ಜೀವಿಸುವ ವ್ಯಕ್ತಿಯಾದನು” [✡ಉಲ್ಲೇಖನ: ಆದಿಕಾಂಡ 2:7.] ಎಂದು ಪವಿತ್ರ ಗ್ರಂಥದಲ್ಲಿ ಬರೆಯಲಾಗಿದೆ. ಆದರೆ ಕೊನೆಯ ಆದಾಮನು (ಕ್ರಿಸ್ತನು) ಜೀವಕೊಡುವ ಜೀವಾತ್ಮನಾದನು.
ಸಹೋದರ ಸಹೋದರಿಯರೇ, ನಾನು ಹೇಳುವುದೇನೆಂದರೆ, ಮಾಂಸ ಮತ್ತು ರಕ್ತ (ಭೌತಿಕ ದೇಹ) ಪರಲೋಕ ರಾಜ್ಯದಲ್ಲಿ ಪಾಲುಹೊಂದಲು ಸಾಧ್ಯವಿಲ್ಲ. ನಾಶವಾಗುವಂಥದ್ದು ಎಂದಿಗೂ ನಾಶವಾಗದ ಒಂದರಲ್ಲಿ ಪಾಲುಹೊಂದಲು ಸಾಧ್ಯವಿಲ್ಲ.
ಇದಕ್ಕೆ ಕೇವಲ ಒಂದು ಕ್ಷಣಕಾಲ ಸಾಕು. ರೆಪ್ಪೆಬಡಿಯುವಷ್ಟು ವೇಗವಾಗಿ ನಾವು ಮಾರ್ಪಾಟಾಗುವೆವು. ಕಡೇ ತುತ್ತೂರಿಯನ್ನು ಊದಿದಾಗ ಇದು ಸಂಭವಿಸುವುದು. ತುತ್ತೂರಿಯನ್ನು ಊದಲಾಗುವುದು; ಆಗ ಸತ್ತುಹೋಗಿದ್ದ ವಿಶ್ವಾಸಿಗಳು ಸದಾಕಾಲ ಜೀವಿಸುವುದಕ್ಕಾಗಿ ಎಬ್ಬಿಸಲ್ಪಡುವರು ಮತ್ತು ನಾವು ಮಾರ್ಪಾಟಾಗುವೆವು.
ಆದ್ದರಿಂದ, ನನ್ನ ಪ್ರಿಯ ಸಹೋದರ ಸಹೋದರಿಯರೇ, ದೃಢವಾಗಿರಿ, ನಿಶ್ಚಲರಾಗಿರಿ. ಪ್ರಭುವಿನ ಸೇವೆಗಾಗಿ ನಿಮ್ಮನ್ನು ಯಾವಾಗಲೂ ಸಂಪೂರ್ಣವಾಗಿ ಪ್ರತಿಷ್ಠಿಸಿಕೊಳ್ಳಿರಿ. ನೀವು ಪ್ರಭುವಿಗಾಗಿ ಪಡುವ ಪ್ರಯಾಸವು ಎಂದಿಗೂ ವ್ಯರ್ಥವಾಗುವುದಿಲ್ಲ.