1
|
ದೇವಜನರಿಗೋಸ್ಕರ ಹಣ ಸಂಗ್ರಹಿಸುವುದರ ವಿಷಯವಾಗಿ ಈಗ ನಾನು ಬರೆಯುತ್ತೇನೆ. ನಾನು ಗಲಾತ್ಯ ಸಭೆಗಳಿಗೆ ಹೇಳಿಕೊಟ್ಟಂತೆ ನೀವೂ ಮಾಡಿರಿ. |
2
|
ನಿಮ್ಮಲ್ಲಿ ಪ್ರತಿಯೊಬ್ಬನು ತನಗಾದ ಅಭಿವೃದ್ಧಿಗೆ ತಕ್ಕಂತೆ ನಿಮ್ಮಿಂದ ಸಾಧ್ಯವಾದಷ್ಟು ಹಣವನ್ನು ಪ್ರತಿವಾರದ ಮೊದಲನೆಯ ದಿನವೇ ಪ್ರತ್ಯೇಕಿಸಿ, ವಿಶೇಷವಾದ ಸ್ಥಳವೊಂದರಲ್ಲಿ ಇಟ್ಟಿರಬೇಕು. ಆಗ ನಾನು ನಿಮ್ಮಲ್ಲಿಗೆ ಬಂದ ನಂತರ ಹಣವನ್ನು ಸಂಗ್ರಹಿಸುವ ಅವಶ್ಯಕತೆಯಿರುವುದಿಲ್ಲ. |
3
|
ನಾನು ಬಂದಾಗ, ನಿಮ್ಮ ಕೊಡುಗೆಯನ್ನು ಕೆಲವರ ಮೂಲಕ ಜೆರುಸಲೇಮಿಗೆ ಕಳುಹಿಸುವೆನು. ನೀವೆಲ್ಲರೂ ಯಾರನ್ನು ಇಷ್ಟಪಡುತ್ತೀರೋ ಅವರಿಗೆ ನಾನು ಪರಿಚಯದ ಪತ್ರಗಳನ್ನು ಕೊಟ್ಟು ಕಳುಹಿಸುವೆನು. |
4
|
ಒಂದುವೇಳೆ, ನಾನು ಸಹ ಹೋಗುವುದು ಒಳ್ಳೆಯದೆನಿಸಿದರೆ, ಆ ಜನರು ನನ್ನೊಂದಿಗೆ ಬರಲಿ. |
5
|
ನಾನು ಮಕೆದೋನಿಯದ ಮೂಲಕ ಹೋಗಬೇಕೆಂದಿರುವೆ. ಆದ್ದರಿಂದ ಮಕೆದೋನಿಯದ ಪ್ರವಾಸವನ್ನು ಮುಗಿಸಿಕೊಂಡು ನಿಮ್ಮಲ್ಲಿಗೆ ಬರುವೆನು. |
6
|
ನಾನು ನಿಮ್ಮೊಂದಿಗೆ ಸ್ವಲ್ಪಕಾಲ ಇಳಿದುಕೊಳ್ಳಬಹುದು. ಒಂದುವೇಳೆ ಚಳಿಗಾಲವನ್ನು ಪೂರ್ತಿಯಾಗಿ ನಿಮ್ಮಲ್ಲಿ ಕಳೆಯಬೇಕಾಗಬಹುದು. ಬಳಿಕ ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಕಳುಹಿಸಿ ಕೊಡಬೇಕು. |
7
|
ಈಗ ನಿಮ್ಮ ಬಳಿಗೆ ಬರಲು ನನಗೆ ಇಷ್ಟವಿಲ್ಲ. ಏಕೆಂದರೆ ನಾನು ಬೇರೆ ಸ್ಥಳಗಳಿಗೆ ಹೋಗಬೇಕಾಗಿರುವುದರಿಂದ ನಿಮ್ಮೊಂದಿಗೆ ಬಹಳ ಕಾಲವಿರಲು ಸಾಧ್ಯವಿಲ್ಲ. ಪ್ರಭುವು ಅವಕಾಶಕೊಡುವುದಾದರೆ, ನಾನು ನಿಮ್ಮೊಂದಿಗೆ ದೀರ್ಘಕಾಲ ತಂಗುವ ನಿರೀಕ್ಷೆಯಿಂದಿದ್ದೇನೆ. |
8
|
ಆದರೆ ನಾನು ಪಂಚಾಶತ್ತಮ ಹಬ್ಬದವರೆಗೆ ಎಫೆಸದಲ್ಲಿ ಇರುತ್ತೇನೆ. |
9
|
ಯಾಕೆಂದರೆ ಮಹತ್ವವಾದ ಮತ್ತು ಫಲಭರಿತವಾದ ಸೇವೆಯನ್ನು ಮಾಡಲು ಇಲ್ಲಿ ನನಗೆ ಒಳ್ಳೆಯ ಅವಕಾಶಗಳಿವೆ. ಆದರೂ ಇಲ್ಲಿ ನನಗೆ ಅನೇಕ ವಿರೋಧಿಗಳಿದ್ದಾರೆ. |
10
|
ತಿಮೊಥೆಯನು ನಿಮ್ಮ ಬಳಿಗೆ ಬರಬಹುದು. ಅವನು ನಿಮ್ಮೊಂದಿಗಿರುವಾಗ ಅವನಿಗೆ ಚಿಂತೆಯಾಗದಂತೆ ನೋಡಿಕೊಳ್ಳಿರಿ. ನಾನು ಪ್ರಭುವಿಗೋಸ್ಕರ ಕೆಲಸ ಮಾಡುತ್ತಿರುವಂತೆ ಅವನು ಸಹ ಮಾಡುತ್ತಿದ್ದಾನೆ. |
11
|
ಆದ್ದರಿಂದ ನಿಮ್ಮಲ್ಲಿ ಯಾರೂ ಅವನನ್ನು ತಿರಸ್ಕರಿಸಬಾರದು. ಅವನನ್ನು ನನ್ನ ಬಳಿಗೆ ಸಮಾಧಾನದಿಂದ ಕಳುಹಿಸಿಕೊಡಿರಿ. ಅವನು ಸಹೋದರರೊಂದಿಗೆ ಬರುವುದನ್ನು ನಾನು ಎದುರು ನೋಡುತ್ತಿದ್ದೇನೆ. |
12
|
ನಮ್ಮ ಸಹೋದರನಾದ ಅಪೊಲ್ಲೋಸನ ಬಗ್ಗೆ ನಾನು ಹೇಳುವುದೇನೆಂದರೆ, ಇತರ ಸಹೋದರರೊಂದಿಗೆ ನಿಮ್ಮನ್ನು ಸಂದರ್ಶಿಸಲು ನಾನು ಅವನನ್ನು ಬಹಳವಾಗಿ ಪ್ರೋತ್ಸಾಹಿಸಿದ್ದೇನೆ. ಆದರೆ ಈಗ ಬರುವುದಕ್ಕೆ ಅವನಿಗೆ ನಿಶ್ಚಯವಾಗಿ ಇಷ್ಟವಿರಲಿಲ್ಲ. ಆದರೆ ಅವಕಾಶ ಸಿಕ್ಕಿದಾಗ ಅವನು ನಿಮ್ಮ ಬಳಿಗೆ ಬರುವನು. |
13
|
ಜಾಗರೂಕರಾಗಿರಿ, ನಂಬಿಕೆಯಲ್ಲಿ ದೃಢವಾಗಿರಿ. ಧೈರ್ಯದಿಂದಿರಿ ಮತ್ತು ಬಲಿಷ್ಠರಾಗಿರಿ. |
14
|
ಪ್ರತಿಯೊಂದನ್ನು ಪ್ರೀತಿಯಿಂದ ಮಾಡಿರಿ. |
15
|
ಅಖಾಯದಲ್ಲಿ ಪ್ರಥಮ ವಿಶ್ವಾಸಿಗಳಾದ ಸ್ತೆಫನನನ್ನು ಮತ್ತು ಅವನ ಕುಟುಂಬದವರನ್ನು ನೀವು ಬಲ್ಲಿರಿ. ಅವರು ದೇವರ ಸೇವೆಗಾಗಿ ತಮ್ಮನ್ನು ಒಪ್ಪಿಸಿಕೊಂಡಿದ್ದಾರೆ. ಸಹೋದರ ಸಹೋದರಿಯರೇ, ನಾನು ನಿಮ್ಮನ್ನು ಕೇಳಿಕೊಳ್ಳುವುದೇನಂದರೆ, |
16
|
ಈ ರೀತಿಯ ಮುಂದಾಳುಗಳನ್ನು ಮತ್ತು ಅವರೊಂದಿಗೆ ಕೆಲಸ ಮಾಡುವವರನ್ನು ಹಾಗೂ ಸೇವೆ ಮಾಡುವವರನ್ನು ಹಿಂಬಾಲಿಸಿರಿ. |
17
|
ಸ್ತೆಫನನು, ಪೊರ್ತುನಾತನು ಮತ್ತು ಅಖಾಯಿಕನು ಬಂದುದರಿಂದ ನನಗೆ ಸಂತೋಷವಾಯಿತು. ನೀವು ಇಲ್ಲದ್ದರಿಂದ ನನಗುಂಟಾದ ಕೊರತೆಯನ್ನು ಅವರು ನೀಗಿಸಿದ್ದಾರೆ. |
18
|
ಅವರು ನನ್ನ ಆತ್ಮಕ್ಕೂ ನಿಮ್ಮ ಆತ್ಮಗಳಿಗೂ ವಿಶ್ರಾಂತಿಯನ್ನು ಕೊಟ್ಟಿದ್ದಾರೆ. ಇಂಥ ಜನರ ಮೌಲ್ಯವನ್ನು ನೀವು ಗುರುತಿಸಬೇಕು. |
19
|
ಏಷ್ಯಾದ ಸಭೆಗಳವರು ನಿಮಗೆ ವಂದನೆಗಳನ್ನು ತಿಳಿಸಿದ್ದಾರೆ. ಅಕ್ವಿಲನು ಮತ್ತು ಪ್ರಿಸ್ಕಿಲ್ಲಳು ಪ್ರಭುವಿನ ಹೆಸರಿನಲ್ಲಿ ನಿಮಗೆ ಬಹಳ ವಂದನೆಗಳನ್ನು ತಿಳಿಸಿದ್ದಾರೆ. ಆದರೆ ಅವರ ಮನೆಯಲ್ಲಿ ಸೇರಿಬರುವ ಸಭೆಯವರು ನಿಮಗೆ ವಂದನೆ ತಿಳಿಸಿದ್ದಾರೆ. |
20
|
ಇಲ್ಲಿರುವ ಎಲ್ಲಾ ಸಹೋದರ ಸಹೋದರಿಯರು ನಿಮಗೆ ವಂದನೆ ತಿಳಿಸಿದ್ದಾರೆ. ನೀವು ಒಬ್ಬರನ್ನೊಬ್ಬರು ಭೇಟಿಯಾಗುವಾಗ ಪವಿತ್ರವಾದ ಮುದ್ದಿಟ್ಟು ವಂದಿಸಿರಿ. |
21
|
ಪೌಲನಾದ ನಾನು ನನ್ನ ಕೈಯಾರೆ ಈ ವಂದನೆಗಳನ್ನು ಬರೆಯುತ್ತಿದ್ದೇನೆ. |
22
|
ಯಾವನಾದರೂ ಪ್ರಭುವನ್ನು ಪ್ರೀತಿಸದಿದ್ದರೆ, ಅವನು ಜೀವದಿಂದ ಬೇರ್ಪಟ್ಟು ನಿತ್ಯನಾಶನ ಹೊಂದಲಿ! ಪ್ರಭುವೇ ಬಾ! |
23
|
ಪ್ರಭುವಾದ ಯೇಸುವಿನ ಕೃಪೆಯು ನಿಮ್ಮೊಂದಿಗಿರಲಿ. |
24
|
ಕ್ರಿಸ್ತ ಯೇಸುವಿನಲ್ಲಿ ನಿಮ್ಮೆಲ್ಲರೊಂದಿಗೆ ನನ್ನ ಪ್ರೀತಿಯಿರಲಿ! |
1-Corinthians 16:2 Kannada Language Bible Words basic statistical display
COMING SOON ...