English Bible Languages

Indian Language Bible Word Collections

Bible Versions

English

Tamil

Hebrew

Greek

Malayalam

Hindi

Telugu

Kannada

Gujarati

Punjabi

Urdu

Bengali

Oriya

Marathi

Assamese

Books

1 Corinthians Chapters

1 Corinthians 16 Verses

1 ದೇವಜನರಿಗೋಸ್ಕರ ಹಣ ಸಂಗ್ರಹಿಸುವುದರ ವಿಷಯವಾಗಿ ಈಗ ನಾನು ಬರೆಯುತ್ತೇನೆ. ನಾನು ಗಲಾತ್ಯ ಸಭೆಗಳಿಗೆ ಹೇಳಿಕೊಟ್ಟಂತೆ ನೀವೂ ಮಾಡಿರಿ.
2 ನಿಮ್ಮಲ್ಲಿ ಪ್ರತಿಯೊಬ್ಬನು ತನಗಾದ ಅಭಿವೃದ್ಧಿಗೆ ತಕ್ಕಂತೆ ನಿಮ್ಮಿಂದ ಸಾಧ್ಯವಾದಷ್ಟು ಹಣವನ್ನು ಪ್ರತಿವಾರದ ಮೊದಲನೆಯ ದಿನವೇ ಪ್ರತ್ಯೇಕಿಸಿ, ವಿಶೇಷವಾದ ಸ್ಥಳವೊಂದರಲ್ಲಿ ಇಟ್ಟಿರಬೇಕು. ಆಗ ನಾನು ನಿಮ್ಮಲ್ಲಿಗೆ ಬಂದ ನಂತರ ಹಣವನ್ನು ಸಂಗ್ರಹಿಸುವ ಅವಶ್ಯಕತೆಯಿರುವುದಿಲ್ಲ.
3 ನಾನು ಬಂದಾಗ, ನಿಮ್ಮ ಕೊಡುಗೆಯನ್ನು ಕೆಲವರ ಮೂಲಕ ಜೆರುಸಲೇಮಿಗೆ ಕಳುಹಿಸುವೆನು. ನೀವೆಲ್ಲರೂ ಯಾರನ್ನು ಇಷ್ಟಪಡುತ್ತೀರೋ ಅವರಿಗೆ ನಾನು ಪರಿಚಯದ ಪತ್ರಗಳನ್ನು ಕೊಟ್ಟು ಕಳುಹಿಸುವೆನು.
4 ಒಂದುವೇಳೆ, ನಾನು ಸಹ ಹೋಗುವುದು ಒಳ್ಳೆಯದೆನಿಸಿದರೆ, ಆ ಜನರು ನನ್ನೊಂದಿಗೆ ಬರಲಿ.
5 ನಾನು ಮಕೆದೋನಿಯದ ಮೂಲಕ ಹೋಗಬೇಕೆಂದಿರುವೆ. ಆದ್ದರಿಂದ ಮಕೆದೋನಿಯದ ಪ್ರವಾಸವನ್ನು ಮುಗಿಸಿಕೊಂಡು ನಿಮ್ಮಲ್ಲಿಗೆ ಬರುವೆನು.
6 ನಾನು ನಿಮ್ಮೊಂದಿಗೆ ಸ್ವಲ್ಪಕಾಲ ಇಳಿದುಕೊಳ್ಳಬಹುದು. ಒಂದುವೇಳೆ ಚಳಿಗಾಲವನ್ನು ಪೂರ್ತಿಯಾಗಿ ನಿಮ್ಮಲ್ಲಿ ಕಳೆಯಬೇಕಾಗಬಹುದು. ಬಳಿಕ ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಕಳುಹಿಸಿಕೊಡಬೇಕು.
7 ಈಗ ನಿಮ್ಮ ಬಳಿಗೆ ಬರಲು ನನಗೆ ಇಷ್ಟವಿಲ್ಲ. ಏಕೆಂದರೆ ನಾನು ಬೇರೆ ಸ್ಥಳಗಳಿಗೆ ಹೋಗಬೇಕಾಗಿರುವುದರಿಂದ ನಿಮ್ಮೊಂದಿಗೆ ಬಹಳ ಕಾಲವಿರಲು ಸಾಧ್ಯವಿಲ್ಲ. ಪ್ರಭುವು ಅವಕಾಶಕೊಡುವುದಾದರೆ, ನಾನು ನಿಮ್ಮೊಂದಿಗೆ ದೀರ್ಘಕಾಲ ತಂಗುವ ನಿರೀಕ್ಷೆಯಿಂದಿದ್ದೇನೆ.
8 ಆದರೆ ನಾನು ಪಂಚಾಶತ್ತಮ ಹಬ್ಬದವರೆಗೆ ಎಫೆಸದಲ್ಲಿ ಇರುತ್ತೇನೆ.
9 ಯಾಕೆಂದರೆ ಮಹತ್ವವಾದ ಮತ್ತು ಫಲಭರಿತವಾದ ಸೇವೆಯನ್ನು ಮಾಡಲು ಇಲ್ಲಿ ನನಗೆ ಒಳ್ಳೆಯ ಅವಕಾಶಗಳಿವೆ. ಆದರೂ ಇಲ್ಲಿ ನನಗೆ ಅನೇಕ ವಿರೋಧಿಗಳಿದ್ದಾರೆ.
10 ತಿಮೊಥೆಯನು ನಿಮ್ಮ ಬಳಿಗೆ ಬರಬಹುದು. ಅವನು ನಿಮ್ಮೊಂದಿಗಿರುವಾಗ ಅವನಿಗೆ ಚಿಂತೆಯಾಗದಂತೆ ನೋಡಿಕೊಳ್ಳಿರಿ. ನಾನು ಪ್ರಭುವಿಗೋಸ್ಕರ ಕೆಲಸ ಮಾಡುತ್ತಿರುವಂತೆ ಅವನು ಸಹ ಮಾಡುತ್ತಿದ್ದಾನೆ.
11 ಆದ್ದರಿಂದ ನಿಮ್ಮಲ್ಲಿ ಯಾರೂ ಅವನನ್ನು ತಿರಸ್ಕರಿಸಬಾರದು. ಅವನನ್ನು ನನ್ನ ಬಳಿಗೆ ಸಮಾಧಾನದಿಂದ ಕಳುಹಿಸಿಕೊಡಿರಿ. ಅವನು ಸಹೋದರರೊಂದಿಗೆ ಬರುವುದನ್ನು ನಾನು ಎದುರು ನೋಡುತ್ತಿದ್ದೇನೆ.
12 ನಮ್ಮ ಸಹೋದರನಾದ ಅಪೊಲ್ಲೋಸನ ಬಗ್ಗೆ ನಾನು ಹೇಳುವುದೇನೆಂದರೆ, ಇತರ ಸಹೋದರರೊಂದಿಗೆ ನಿಮ್ಮನ್ನು ಸಂದರ್ಶಿಸಲು ನಾನು ಅವನನ್ನು ಬಹಳವಾಗಿ ಪ್ರೋತ್ಸಾಹಿಸಿದ್ದೇನೆ. ಆದರೆ ಈಗ ಬರುವುದಕ್ಕೆ ಅವನಿಗೆ ನಿಶ್ಚಯವಾಗಿ ಇಷ್ಟವಿರಲಿಲ್ಲ. ಆದರೆ ಅವಕಾಶ ಸಿಕ್ಕಿದಾಗ ಅವನು ನಿಮ್ಮ ಬಳಿಗೆ ಬರುವನು.
13 ಜಾಗರೂಕರಾಗಿರಿ, ನಂಬಿಕೆಯಲ್ಲಿ ದೃಢವಾಗಿರಿ. ಧೈರ್ಯದಿಂದಿರಿ ಮತ್ತು ಬಲಿಷ್ಠರಾಗಿರಿ.
14 ಪ್ರತಿಯೊಂದನ್ನು ಪ್ರೀತಿಯಿಂದ ಮಾಡಿರಿ.
15 ಅಖಾಯದಲ್ಲಿ ಪ್ರಥಮ ವಿಶ್ವಾಸಿಗಳಾದ ಸ್ತೆಫನನನ್ನು ಮತ್ತು ಅವನ ಕುಟುಂಬದವರನ್ನು ನೀವು ಬಲ್ಲಿರಿ. ಅವರು ದೇವರ ಸೇವೆಗಾಗಿ ತಮ್ಮನ್ನು ಒಪ್ಪಿಸಿಕೊಂಡಿದ್ದಾರೆ. ಸಹೋದರ ಸಹೋದರಿಯರೇ, ನಾನು ನಿಮ್ಮನ್ನು ಕೇಳಿಕೊಳ್ಳುವುದೇನೆಂದರೆ,
16 ಈ ರೀತಿಯ ಮುಂದಾಳುಗಳನ್ನು ಮತ್ತು ಅವರೊಂದಿಗೆ ಕೆಲಸ ಮಾಡುವವರನ್ನು ಹಾಗೂ ಸೇವೆ ಮಾಡುವವರನ್ನು ಹಿಂಬಾಲಿಸಿರಿ.
17 ಸ್ತೆಫನನು, ಪೊರ್ತುನಾತನು ಮತ್ತು ಅಖಾಯಿಕನು ಬಂದುದರಿಂದ ನನಗೆ ಸಂತೋಷವಾಯಿತು. ನೀವು ಇಲ್ಲದ್ದರಿಂದ ನನಗುಂಟಾದ ಕೊರತೆಯನ್ನು ಅವರು ನೀಗಿಸಿದ್ದಾರೆ.
18 ಅವರು ನನ್ನ ಆತ್ಮಕ್ಕೂ ನಿಮ್ಮ ಆತ್ಮಗಳಿಗೂ ವಿಶ್ರಾಂತಿಯನ್ನು ಕೊಟ್ಟಿದ್ದಾರೆ. ಇಂಥ ಜನರ ಮೌಲ್ಯವನ್ನು ನೀವು ಗುರುತಿಸಬೇಕು.
19 ಏಷ್ಯಾದ ಸಭೆಗಳವರು ನಿಮಗೆ ವಂದನೆಗಳನ್ನು ತಿಳಿಸಿದ್ದಾರೆ. ಅಕ್ವಿಲನು ಮತ್ತು ಪ್ರಿಸ್ಕಿಲ್ಲಳು ಪ್ರಭುವಿನ ಹೆಸರಿನಲ್ಲಿ ನಿಮಗೆ ಬಹಳ ವಂದನೆಗಳನ್ನು ತಿಳಿಸಿದ್ದಾರೆ. ಅವರ ಮನೆಯಲ್ಲಿ ಸೇರಿಬರುವ ಸಭೆಯವರು ಸಹ ನಿಮಗೆ ವಂದನೆ ತಿಳಿಸಿದ್ದಾರೆ.
20 ಇಲ್ಲಿರುವ ಎಲ್ಲಾ ಸಹೋದರ ಸಹೋದರಿಯರು ನಿಮಗೆ ವಂದನೆ ತಿಳಿಸಿದ್ದಾರೆ. ನೀವು ಒಬ್ಬರನ್ನೊಬ್ಬರು ಭೇಟಿಯಾಗುವಾಗ ಪವಿತ್ರವಾದ ಮುದ್ದಿಟ್ಟು ವಂದಿಸಿರಿ.
21 ಪೌಲನಾದ ನಾನು ನನ್ನ ಕೈಯಾರೆ ಈ ವಂದನೆಗಳನ್ನು ಬರೆಯುತ್ತಿದ್ದೇನೆ.
22 ಯಾವನಾದರೂ ಪ್ರಭುವನ್ನು ಪ್ರೀತಿಸದಿದ್ದರೆ, ಅವನು ಜೀವದಿಂದ ಬೇರ್ಪಟ್ಟು ನಿತ್ಯನಾಶನ ಹೊಂದಲಿ! ಪ್ರಭುವೇ ಬಾ!
23 ಪ್ರಭುವಾದ ಯೇಸುವಿನ ಕೃಪೆಯು ನಿಮ್ಮೊಂದಿಗಿರಲಿ.
24 ಕ್ರಿಸ್ತ ಯೇಸುವಿನಲ್ಲಿ ನಿಮ್ಮೆಲ್ಲರೊಂದಿಗೆ ನನ್ನ ಪ್ರೀತಿಯಿರಲಿ!
×

Alert

×