1
|
ಇಸ್ರೇಲಿನ ಜನರು ಈಜಿಪ್ಟನ್ನು ಬಿಟ್ಟ ನಾನೂರ ಎಂಭತ್ತನೆಯ ವರ್ಷದಲ್ಲಿ ಅಂದರೆ ರಾಜನಾದ ಸೊಲೊಮೋನನು ಇಸ್ರೇಲನ್ನು ಆಳಲಾರಂಭಿಸಿದ ನಾಲ್ಕನೆಯ ವರ್ಷದಲ್ಲಿ ದೇವಾಲಯದ ನಿರ್ಮಾಣವು ಆರಂಭಗೊಂಡಿತು. ಅದು ವರ್ಷದ ಎರಡನೆಯ ತಿಂಗಳಾದ ಜೀವ್ ತಿಂಗಳಲ್ಲಿ ಆರಂಭಗೊಂಡಿತು. |
2
|
ದೇವಾಲಯವು ತೊಂಭತ್ತು ಅಡ್ಡಿ ಉದ್ದ, ಮೂವತ್ತು ಅಡಿ ಅಗಲ ಮತ್ತು ನಲವತ್ತೈದು ಅಡಿ ಎತ್ತರವಾಗಿತ್ತು. |
3
|
ದೇವಾಲಯದ ಮುಂದಿನ ಮಂಟಪವು ಮೂವತ್ತು ಅಡಿ ಉದ್ದ ಮತ್ತು ನಲವತ್ತೈದು ಅಡಿ ಅಗಲವಾಗಿತ್ತು. ಮುಂದಿನ ಮಂಟಪವು ದೇವಾಲಯದ ಮುಖ್ಯಸ್ಥಳದುದ್ದಕ್ಕೂ ವ್ಯಾಪಿಸಿತ್ತು. ಮಂಟಪದ ಉದ್ದವು ದೇವಾಲಯದ ಅಗಲಕ್ಕೆ ಸಮನಾಗಿತ್ತು. |
4
|
ದೇವಾಲಯದಲ್ಲಿ ಕಿರಿದಾದ ಕಿಟಿಕಿಗಳಿದ್ದವು. ಈ ಕಿಟಕಿಗಳು ಹೊರಗಡೆಯಲ್ಲಿ ಕಿರಿದಾಗಿಯೂ ಮತ್ತು ಒಳಗಡೆ ದೊಡ್ಡದಾಗಿಯೂ ಇದ್ದವು. |
5
|
ನಂತರ ಸೊಲೊಮೋನನು ದೇವಾಲಯದ ಗೋಡೆಯ ಸುತ್ತಲೂ ಸಾಲಾಗಿ ಕೊಠಡಿಗಳನ್ನು ನಿರ್ಮಿಸಿದನು. ಈ ಕೊಠಡಿಗಳನ್ನು ಒಂದರ ಮೇಲೆ ಮತ್ತೊಂದನ್ನು ಕಟ್ಟಿಸಿದನು. ಈ ಸಾಲು ಕೊಠಡಿಗಳು ಮೂರು ಅಂತಸ್ತುಗಳನ್ನು ಹೊಂದಿದ್ದವು. |
6
|
ಈ ಕೊಠಡಿಗಳು ದೇವಾಲಯದ ಗೋಡೆಯನ್ನು ಸ್ಪರ್ಶಿಸಿದರೂ, ಅವುಗಳ ತೊಲೆಗಳು ಗೋಡೆಯಲ್ಲಿ ಸೇರಿಕೊಂಡಿರಲಿಲ್ಲ. ಆ ದೇವಾಲಯದ ಗೋಡೆಯ ಮೇಲ್ಭಾಗವು ತೆಳುವಾಗಿತ್ತು. ಆ ಕೊಠಡಿಗಳ ಒಂದು ಕಡೆಯ ಗೋಡೆಯು, ಅದರ ಕೆಳಭಾಗದ ಗೋಡೆಗಿಂತ ತೆಳುವಾಗಿತ್ತು. ಕೆಳ ಅಂತಸ್ತಿನ ಕೊಠಡಿಗಳ ಅಗಲ ಏಳುವರೆ ಅಡಿಗಳು. ಮಧ್ಯದ ಅಂತಸ್ತಿನ ಕೊಠಡಿಗಳ ಅಗಲ ಒಂಭತ್ತು ಅಡಿಗಳು. ಅದರ ಮೇಲಿನ ಕೊಠಡಿಗಳ ಅಗಲ ಹತ್ತೂವರೆ ಅಡಿಗಳು. |
7
|
ಈ ಗೋಡೆಗಳನ್ನು ಕಟ್ಟಲು ಕೆಲಸಗಾರರು ದೊಡ್ಡದೊಡ್ಡ ಕಲ್ಲುಗಳನ್ನು ಬಳಸಿದ್ದರು. ಕಲ್ಲುಗಣಿಯಿಂದ ಕಲ್ಲುಗಳನ್ನು ಹೊರಗೆ ತೆಗೆಯುವಾಗಲೇ ಕೆಲಸಗಾರರು ಈ ಕಲ್ಲುಗಳನ್ನು ಕೆತ್ತಿದ್ದರು. ಆದುದರಿಂದ ಸುತ್ತಿಗೆ, ಉಳಿ ಮುಂತಾದ ಕಬ್ಬಿಣದ ಉಪಕರಣಗಳ ಶಬ್ದವು ದೇವಾಲಯದಲ್ಲಿ ಕೇಳಿಸುತ್ತಿರಲಿಲ್ಲ. |
8
|
ಕೆಳಅಂತಸ್ತಿನ ಕೊಠಡಿಗಳ ಪ್ರವೇಶವು ದೇವಾಲಯದ ದಕ್ಷಿಣದ ಕಡೆಗಿತ್ತು. ಎರಡನೆಯ ಅಂತಸ್ತಿನ ಕೊಠಡಿಗಳಿಗೆ ಹೋಗುವ ಮೆಟ್ಟಿಲುಗಳು ಒಳಗಡೆಯಿದ್ದು, ಅಲ್ಲಿಂದ ಮೂರನೆಯ ಅಂತಸ್ತಿನ ಕೊಠಡಿಗಳಿಗೂ ಹೋಗಬಹುದಾಗಿತ್ತು. |
9
|
ಸೊಲೊಮೋನನು ದೇವಾಲಯದ ನಿರ್ಮಾಣವನ್ನು ಮುಗಿಸಿದನು. ದೇವಾಲಯದೊಳಗಿನ ಪ್ರತಿಯೊಂದು ಭಾಗವನ್ನು ದೇವದಾರು ಮರದ ಹಲಗೆಗಳಿಂದ ಹೊದಿಸಿದನು. |
10
|
ಸೊಲೊಮೋನನು ದೇವಾಲಯದ ಸುತ್ತಲಿನ ಕೊಠಡಿಗಳ ನಿರ್ಮಾಣವನ್ನೂ ಮುಗಿಸಿದನು. ಒಂದೊಂದು ಅಂತಸ್ತು ಏಳೂವರೆ ಅಡಿಗಳಷ್ಟು ಎತ್ತರವಾಗಿತ್ತು. ಈ ಕೊಠಡಿಗಳ ದೇವದಾರು ತೊಲೆಗಳು ದೇವಾಲಯವನ್ನು ಸ್ಪರ್ಶಿಸುತ್ತ್ತಿದ್ದವು. |
11
|
[This verse may not be a part of this translation] |
12
|
[This verse may not be a part of this translation] |
13
|
ನೀನು ನಿರ್ಮಿಸುತ್ತಿರುವ ಈ ದೇವಾಲಯದಲ್ಲಿ ನಾನು ಇಸ್ರೇಲರೊಂದಿಗೆ ವಾಸಿಸುತ್ತೇನೆ. ನಾನು ಅವರನ್ನು ಎಂದೆಂದಿಗೂ ಬಿಟ್ಟುಹೋಗುವುದಿಲ್ಲ” ಎಂದು ಹೇಳಿದನು. |
14
|
ಸೊಲೊಮೋನನು ದೇವಾಲಯದ ನಿರ್ಮಾಣವನ್ನು ಮುಗಿಸಿದನು. |
15
|
ದೇವಾಲಯದ ಒಳಗಿನ ಗೋಡೆಗಳಿಗೆ ದೇವದಾರು ಮರದ ಹಲಗೆಗಳನ್ನು ನೆಲದಿಂದ ಮಾಳಿಗೆಯವರೆಗೆ ಹೊದಿಸಿದ್ದರು. ಕಲ್ಲಿನ ನೆಲಕ್ಕೆ ತುರಾಯಿ ಮರದ ಹಲಗೆಗಳನ್ನು ಹಾಸಿದ್ದರು. |
16
|
ದೇವಾಲಯದ ಹಿಂಭಾಗದಲ್ಲಿ ಅವರು ಮೂವತ್ತು ಅಡಿ ಉದ್ದವಾಗಿರುವ ಒಂದು ಕೊಠಡಿಯನ್ನು ನಿರ್ಮಿಸಿದ್ದರು. ಈ ಕೊಠಡಿಯ ಗೋಡೆಗಳಿಗೂ ದೇವದಾರು ಮರದ ಹಲಗೆಗಳನ್ನು ನೆಲದಿಂದ ಮಾಳಿಗೆಯವರೆಗೆ ಹೊದಿಸಿದ್ದರು. ಈ ಕೊಠಡಿಯನ್ನು ಮಹಾ ಪವಿತ್ರಸ್ಥಳವೆಂದು ಕರೆದರು. |
17
|
ಈ ಮಹಾ ಪವಿತ್ರಸ್ಥಳದ ಎದುರಿನಲ್ಲಿ ದೇವಾಲಯದ ಮುಖ್ಯ ಭಾಗವಿದೆ. ಈ ಕೊಠಡಿಯ ಉದ್ದ ಅರವತ್ತು ಅಡಿ. |
18
|
ಈ ಕೊಠಡಿಯ ಗೋಡೆಗಳಿಗೆ ದೇವದಾರು ಮರದ ಹೊದಿಕೆಗಳನ್ನು ಹೊದಿಸಲಾಗಿದ್ದು ಈ ಗೋಡೆಗಳಲ್ಲಿದ್ದ ಯಾವುದೇ ಕಲ್ಲುಗಳು ಕಂಡು ಬರುತ್ತಿರಲಿಲ್ಲ. ಈ ದೇವದಾರು ಮರದ ಹಲಗೆಗಳ ಮೇಲೆ ಹೂಗಳ ಮತ್ತು ಬಳ್ಳಿಗಳ ಚಿತ್ರಗಳನ್ನು ಕೆತ್ತಲಾಗಿತ್ತು. |
19
|
ಸೊಲೊಮೋನನು ದೇವಾಲಯದ ಹಿಂದಿನ ಭಾಗದಲ್ಲಿ ಒಳಗಡೆ ಒಂದು ಕೋಣೆಯನ್ನು ಸಿದ್ಧಪಡಿಸಿದನು. ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಇಡುವುದಕ್ಕಾಗಿಯೇ ಈ ಕೊಠಡಿಯನ್ನು ಸಿದ್ಧಪಡಿಸಲಾಗಿತ್ತು. |
20
|
ಈ ಕೊಠಡಿಯು ಮೂವತ್ತು ಅಡಿ ಉದ್ದ ಮೂವತ್ತು ಅಡಿ ಅಗಲ ಮತ್ತು ಮೂವತ್ತು ಅಡಿ ಎತ್ತರವಾಗಿತ್ತು. |
21
|
ಸೊಲೊಮೋನನು ಶುದ್ಧ ಚಿನ್ನದ ತಗಡನ್ನು ಈ ಕೊಠಡಿಗೆ ಹೊದಿಸಿದನು. ಈ ಕೊಠಡಿಯ ಮುಂದೆ ಧೂಪವೇದಿಕೆಯನ್ನು ಅವನು ನಿರ್ಮಿಸಿದನು. ಅವನು ಆ ವೇದಿಕೆಗೆ ಚಿನ್ನದ ಹೊದಿಕೆಯನ್ನೂ ಅದರ ಸುತ್ತಲೂ ಚಿನ್ನದ ಸರಪಣಿಗಳನ್ನೂ ಜೋಡಿಸಿದನು. ಆ ಕೊಠಡಿಯಲ್ಲಿ ಎರಡು ಕೆರೂಬಿಗಳ ಪ್ರತಿಮೆಗಳಿದ್ದವು. ಆ ಪ್ರತಿಮೆಗಳಿಗೆ ಚಿನ್ನದ ಹೊದಿಕೆಯನ್ನು ಹೊದಿಸಿದ್ದರು. |
22
|
ದೇವಾಲಯಕ್ಕೆಲ್ಲ ಚಿನ್ನದ ಹೊದಿಕೆಯನ್ನು ಹೊದಿಸಿದ್ದರು. ಅಲ್ಲದೆ, ಮಹಾ ಪವಿತ್ರಸ್ಥಳದ ಮುಂದಿನ ಯಜ್ಞವೇದಿಕೆಗೂ ಚಿನ್ನದ ಹೊದಿಕೆಯನ್ನು ಹೊದಿಸಿದ್ದರು. |
23
|
ಕೆಲಸಗಾರರು ರೆಕ್ಕೆಗಳಿರುವ ಎರಡು ಕೆರೂಬಿಗಳ ಪ್ರತಿಮೆಗಳನ್ನು ಆಲೀವ್ ಮರದಿಂದ ಮಾಡಿ ಅವುಗಳನ್ನು ಮಹಾಪವಿತ್ರ ಸ್ಥಳದಲ್ಲಿಟ್ಟರು. ಒಂದೊಂದು ಪ್ರತಿಮೆಯು ಹದಿನೈದು ಅಡಿ ಎತ್ತರವಾಗಿತ್ತು. |
24
|
[This verse may not be a part of this translation] |
25
|
[This verse may not be a part of this translation] |
26
|
[This verse may not be a part of this translation] |
27
|
ಈ ಕೆರೂಬಿಗಳನ್ನು ಮಹಾಪವಿತ್ರ ಸ್ಥಳದಲ್ಲಿಟ್ಟರು. ಅವುಗಳು ಒಂದಕ್ಕೊಂದು ಸಮೀಪದಲ್ಲಿದ್ದವು. ಅವುಗಳ ರೆಕ್ಕೆಗಳು ಕೊಠಡಿಯ ಮಧ್ಯಭಾಗದಲ್ಲಿ ಒಂದನ್ನೊಂದು ತಾಕುತ್ತಿದ್ದುವು. ಉಳಿದೆರಡು ರೆಕ್ಕೆಗಳು ಎರಡು ಕಡೆಗಳಲ್ಲಿದ್ದ ಗೋಡೆಗಳನ್ನು ತಾಕುತ್ತಿದ್ದುವು. |
28
|
ಈ ಎರಡು ಕೆರೂಬಿಗಳಿಗೆ ಚಿನ್ನದ ತಗಡನ್ನು ಹೊದಿಸಲಾಗಿತ್ತು. |
29
|
ಮುಖ್ಯಕೊಠಡಿಯ ಮತ್ತು ಒಳಕೋಣೆಯ ಗೋಡೆಗಳ ಮೇಲೆ ಕೆರೂಬಿಗಳ, ಖರ್ಜೂರ ವೃಕ್ಷಗಳ ಮತ್ತು ಹೂಗಳ ಚಿತ್ರಗಳನ್ನು ಕೆತ್ತಿದ್ದರು. |
30
|
ಈ ಎರಡು ಕೊಠಡಿಗಳ ನೆಲಕ್ಕೆ ಚಿನ್ನದ ತಗಡನ್ನು ಹಾಸಿದ್ದರು. |
31
|
ಕೆಲಸಗಾರರು ಆಲೀವ್ ಮರದ ಎರಡು ಬಾಗಿಲುಗಳನ್ನು ಮಾಡಿದರು. ಅವರು ಮಹಾಪವಿತ್ರ ಸ್ಥಳದ ಪ್ರವೇಶದ್ವಾರದಲ್ಲಿ ಈ ಎರಡು ಬಾಗಿಲುಗಳನ್ನು ಇಟ್ಟರು. ಬಾಗಿಲಿನ ಚೌಕಟ್ಟನ್ನು ಪಂಚಕೋಣಾಕೃತಿಯಲ್ಲಿ ಮಾಡಿದ್ದರು. |
32
|
ಅವರು ಆಲೀವ್ ಮರದಿಂದ ಎರಡು ಬಾಗಿಲುಗಳನ್ನು ಮಾಡಿದರು. ಕೆಲಸಗಾರರು ಕೆರೂಬಿಗಳ, ಖರ್ಜೂರ ವೃಕ್ಷಗಳ ಮತ್ತು ಹೂಗಳ ಚಿತ್ರಗಳನ್ನು ಬಾಗಿಲುಗಳ ಮೇಲೆ ಕೆತ್ತಿದರು. ನಂತರ ಬಾಗಿಲುಗಳಿಗೆ ಚಿನ್ನವನ್ನು ಹೊದಿಸಿದರು. |
33
|
ಅವರು ಮುಖ್ಯ ಕೊಠಡಿಯ ಪ್ರವೇಶಕ್ಕೂ ಬಾಗಿಲುಗಳನ್ನು ಮಾಡಿದರು. ಅವರು ಚೌಕಾಕಾರದ ಬಾಗಿಲಿನ ಚೌಕಟ್ಟನ್ನು ಆಲೀವ್ ಮರದಿಂದ ಮಾಡಿದರು. |
34
|
ನಂತರ ಅವರು ತುರಾಯಿ ಮರದ ಬಾಗಿಲುಗಳನ್ನು ಮಾಡಿದರು. ಅಲ್ಲಿ ಎರಡು ಬಾಗಿಲುಗಳಿದ್ದು, ಪ್ರತಿಯೊಂದೂ ಮಡಿಸುವಂತಹ ಎರಡು ಭಾಗಗಳನ್ನು ಹೊಂದಿದ್ದವು. |
35
|
ಅವರು ಕೆರೂಬಿಗಳ, ಖರ್ಜೂರವೃಕ್ಷಗಳ ಮತ್ತು ಹೂಗಳ ಚಿತ್ರಗಳನ್ನು ಬಾಗಿಲುಗಳ ಮೇಲೆ ಕೆತ್ತಿದ್ದರು. ಅವರು ಅವುಗಳಿಗೆ ಚಿನ್ನವನ್ನು ಹೊದಿಸಿದರು. |
36
|
ನಂತರ ಅವರು ಒಳಾಂಗಣವನ್ನು ನಿರ್ಮಿಸಿದರು. ಅವರು ಒಳಾಂಗಣದ ಸುತ್ತಲೂ ಗೋಡೆಗಳನ್ನು ನಿರ್ಮಿಸಿದರು. ಪ್ರತಿಯೊಂದು ಗೋಡೆಯು ಕತ್ತರಿಸಿದ ಕಲ್ಲುಗಳ ಮೂರು ಸಾಲುಗಳನ್ನೂ ದೇವದಾರುಮರದ ತೊಲೆಗಳ ಒಂದು ಸಾಲನ್ನೂ ಹೊಂದಿತ್ತು. |
37
|
ಅವರು ವರ್ಷದ ಎರಡನೆಯ ತಿಂಗಳಿನ ವೈಶಾಖ ಮಾಸದಲ್ಲಿ ದೇವಾಲಯವನ್ನು ಕಟ್ಟಲಾರಂಭಿಸಿದರು. ಇಸ್ರೇಲನ್ನು ಸೊಲೊಮೋನನು ಆಳಲು ಆರಂಭಿಸಿದ ನಾಲ್ಕನೆಯ ವರ್ಷದಲ್ಲಿ ಇದು ನಡೆಯಿತು. |
38
|
ಈ ದೇವಾಲಯದ ನಿರ್ಮಾಣವು ವರ್ಷದ ಎಂಟನೆಯ ತಿಂಗಳಾದ ಕಾರ್ತಿಕ ಮಾಸದಲ್ಲಿ ಮುಗಿಯಿತು. ಅದು ಸೊಲೊಮೋನನ ಆಳ್ವಿಕೆಯ ಹನ್ನೊಂದನೆಯ ವರ್ಷವಾಗಿತ್ತು. ದೇವಾಲಯವನ್ನು ಕಟ್ಟಲು ಏಳು ವರ್ಷ ಹಿಡಿಯಿತು. ದೇವಾಲಯವನ್ನು ಅದರ ನಿಯಮಾನುಸಾರವಾಗಿ ಕಟ್ಟಿದರು. |
1-Kings 6:19 Kannada Language Bible Words basic statistical display
COMING SOON ...