1
|
ಸೊಲೊಮೋನನು ಯೆಹೋವನ ಆಲಯವನ್ನು ಮತ್ತು ತನ್ನ ಅರಮನೆಯನ್ನು ಕಟ್ಟಿ ಮುಗಿಸಿದನು. ಸೊಲೊಮೋನನು ತಾನು ಕಟ್ಟಬೇಕೆಂದು ಅಪೇಕ್ಷಿಸಿದ ಎಲ್ಲವನ್ನು ಕಟ್ಟಿ ಮುಗಿಸಿದನು. |
2
|
ಆಗ ಯೆಹೋವನು ಸೊಲೊಮೋನನಿಗೆ, ಈ ಮುಂಚೆ ಗಿಬ್ಯೋನ್ ಪಟ್ಟಣದಲ್ಲಿ ಪ್ರತ್ಯಕ್ಷನಾದಂತೆ ಮತ್ತೆ ಪ್ರತ್ಯಕ್ಷನಾದನು. |
3
|
ಯೆಹೋವನು ಅವನಿಗೆ ಹೀಗೆ ಹೇಳಿದನು: “ನಿನ್ನ ಪ್ರಾರ್ಥನೆಯು ನನಗೆ ಕೇಳಿಸಿತು. ನಿನ್ನ ಬಿನ್ನಹಗಳನ್ನು ಆಲಿಸಿದೆನು. ಈ ಆಲಯವನ್ನು ನೀನು ಕಟ್ಟಿಸಿದೆ. ನಾನು ಅದನ್ನು ಪವಿತ್ರಸ್ಥಳವನ್ನಾಗಿ ಮಾಡಿದೆ. ಆದುದರಿಂದ ನಾನಿಲ್ಲಿ ಸದಾಕಾಲ ಸನ್ಮಾನಿಸಲ್ಪಡುವೆನು. ನನ್ನ ದೃಷ್ಟಿಯೂ ಮನಸ್ಸೂ ಸದಾ ಅದರ ಮೇಲಿರುತ್ತದೆ. |
4
|
ನಿನ್ನ ತಂದೆಯಾದ ದಾವೀದನು ಸೇವೆ ಮಾಡಿದಂತೆ ನೀನೂ ನನ್ನ ಸೇವೆಮಾಡಬೇಕು, ಅವನು ನ್ಯಾಯವಂತನಾಗಿದ್ದನು ಮತ್ತು ಯಥಾರ್ಥವಂತನಾಗಿದ್ದನು; ನೀನು ನನ್ನ ನಿಯಮಗಳಿಗೆ ವಿಧೇಯನಾಗಿರಬೇಕು ಮತ್ತು ನಾನು ನಿನಗೆ ಆಜ್ಞಾಪಿಸಿದವುಗಳನ್ನೆಲ್ಲ ಮಾಡಬೇಕು. |
5
|
“ನೀನು ಅವುಗಳನ್ನೆಲ್ಲಾ ಕೈಕೊಂಡು ನಡೆದರೆ ಯಾವಾಗಲೂ ನಿನ್ನ ಕುಟುಂಬದ ಯಾವನಾದರೊಬ್ಬನು ಇಸ್ರೇಲಿನ ರಾಜನಾಗಿರುತ್ತಾನೆಂದು ನಾನು ನಿನಗೆ ವಾಗ್ದಾನ ಮಾಡುತ್ತೇನೆ. ನಿನ್ನ ತಂದೆಯಾದ ದಾವೀದನಿಗೆ ನಾನು ಈ ವಾಗ್ದಾನವನ್ನು ಮಾಡಿದ್ದೆನು. ಯಾವಾಗಲೂ ಅವನ ಸಂತತಿಯವರಲ್ಲಿ ಯಾವನಾದರೊಬ್ಬನು ಇಸ್ರೇಲನ್ನು ಆಳುತ್ತಾನೆಂದು ನಾನು ಅವನಿಗೆ ಹೇಳಿದ್ದೆನು. |
6
|
[This verse may not be a part of this translation] |
7
|
[This verse may not be a part of this translation] |
8
|
ಈ ಆಲಯವನ್ನು ನಾಶಗೊಳಿಸುತ್ತೇನೆ. ಇದನ್ನು ನೋಡುವ ಪ್ರತಿಯೊಬ್ಬರೂ ವಿಸ್ಮಿತರಾಗುವರು. ‘ಈ ದೇಶಕ್ಕೂ ಈ ಆಲಯಕ್ಕೂ ಇಂತಹ ಭೀಕರ ಕಾರ್ಯವನ್ನು ಯೆಹೋವನು ಏಕೆ ಮಾಡಿದನು?’ ಎಂದು ಜನರು ಕೇಳುತ್ತಾರೆ. |
9
|
[This verse may not be a part of this translation] |
10
|
ಯೆಹೋವನ ಆಲಯವನ್ನು ಮತ್ತು ರಾಜನ ಅರಮನೆಯನ್ನು ಕಟ್ಟಲು ರಾಜನಾದ ಸೊಲೊಮೋನನಿಗೆ ಇಪ್ಪತ್ತು ವರ್ಷಗಳು ಹಿಡಿಯಿತು. |
11
|
ರಾಜನಾದ ಸೊಲೊಮೋನನು ಇಪ್ಪತ್ತು ವರ್ಷಗಳ ತರುವಾಯ ಗಲಿಲಾಯದ ಇಪ್ಪತ್ತು ಪಟ್ಟಣಗಳನ್ನು ತೂರಿನ ರಾಜನಾದ ಹೀರಾಮನಿಗೆ ಬಿಟ್ಟುಕೊಟ್ಟನು. ಆಲಯವನ್ನು ಮತ್ತು ಅರಮನೆಯನ್ನು ನಿರ್ಮಿಸಲು ಹೀರಾಮನು ಸಹಾಯ ಮಾಡಿದ್ದರಿಂದ ಸೊಲೊಮೋನನು ಹೀರಾಮನಿಗೆ ಈ ಪಟ್ಟಣಗಳನ್ನು ಕೊಟ್ಟನು. ಸೊಲೊಮೋನನು ಅಪೇಕ್ಷಿಸಿದ ದೇವದಾರು ಮರಗಳನ್ನು, ತುರಾಯಿ ಮರಗಳನ್ನು ಮತ್ತು ಬಂಗಾರವನ್ನು ಹೀರಾಮನು ಕೊಟ್ಟಿದ್ದನು. |
12
|
ಸೊಲೊಮೋನನು ಬಿಟ್ಟುಕೊಟ್ಟ ಪಟ್ಟಣಗಳನ್ನು ನೋಡುವುದಕ್ಕಾಗಿ ಹೀರಾಮನು ತೂರಿನಿಂದ ಬಂದನು. ಹೀರಾಮನು ಆ ಪಟ್ಟಣಗಳನ್ನು ನೋಡಿದಾಗ ಅವನಿಗೆ ತೃಪ್ತಿಯಾಗಲಿಲ್ಲ. |
13
|
ರಾಜನಾದ ಹೀರಾಮನು, “ಸಹೋದರನೇ, ನೀನು ನನಗೆ ಕೊಟ್ಟಿರುವ ಪಟ್ಟಣಗಳು ಏಕೆ ಹೀಗಿವೆ?” ಎಂದು ಕೇಳಿದನು. ರಾಜನಾದ ಹೀರಾಮನು ಆ ದೇಶಕ್ಕೆ ಕಾಬೂಲ್ ದೇಶವೆಂದು ಹೆಸರಿಟ್ಟನು. ಆ ಪ್ರದೇಶವನ್ನು ಇಂದಿಗೂ ಕಾಬೂಲ್ ಎಂದೇ ಕರೆಯುತ್ತಾರೆ. |
14
|
ಹೀರಾಮನು ರಾಜನಾದ ಸೊಲೊಮೋನನಿಗೆ ಆಲಯದ ನಿರ್ಮಾಣಕ್ಕೆ ಉಪಯೋಗಿಸಲು ಒಂಭತ್ತು ಸಾವಿರ ಪೌಂಡು ಬಂಗಾರವನ್ನು ಕಳುಹಿಸಿದ್ದನು. |
15
|
ರಾಜನಾದ ಸೊಲೊಮೋನನು ತಾನು ನಿರ್ಮಿಸಿದ್ದ ಆಲಯದ ಮತ್ತು ಅರಮನೆಯ ಕೆಲಸಗಳನ್ನು ಮಾಡಲು ಗುಲಾಮರನ್ನು ಬಲಾತ್ಕರಿಸಿದನು. ರಾಜನಾದ ಸೊಲೊಮೋನನು ಇತರ ಅನೇಕ ಕಟ್ಟಡಗಳ ನಿರ್ಮಾಣಕ್ಕೆ ಬಿಟ್ಟಿಕೆಲಸದವರನ್ನು ಉಪಯೋಗಿಸಿಕೊಂಡನು. ಅವನು ಮಿಲ್ಲೋ ಕೋಟೆಯನ್ನು ನಿರ್ಮಿಸಿದನು; ಜೆರುಸಲೇಮಿನ ಸುತ್ತಲೂ ನಗರದ ಗೋಡೆಯನ್ನು ಕಟ್ಟಿಸಿದನು; ಅಲ್ಲದೆ ಅವನು ಹಾಚೋರ್, ಮೆಗಿದ್ದೋ ಮತ್ತು ಗೆಜೆರ್ ನಗರಗಳನ್ನು ಕಟ್ಟಿಸಿದನು. |
16
|
ಹಿಂದೊಮ್ಮೆ, ಈಜಿಪ್ಟಿನ ರಾಜನು ಗೆಜೆರ್ ನಗರದ ವಿರುದ್ದ ಹೋರಾಟಮಾಡಿ, ಅದನ್ನು ಸುಟ್ಟುಹಾಕಿದ್ದನು. ಅವನು ಅಲ್ಲಿ ನೆಲೆಸಿದ್ದ ಕಾನಾನ್ಯ ಜನರನ್ನು ಕೊಂದು ಹಾಕಿದ್ದನು. ಸೊಲೊಮೋನನು ಫರೋಹನ ಮಗಳನ್ನು ಮದುವೆಯಾದನು. ಆದುದರಿಂದ ಫರೋಹನು ಆ ನಗರವನ್ನು ಸೊಲೊಮೋನನಿಗೆ ಮದುವೆಯ ಕೊಡುಗೆಯಾಗಿ ಕೊಟ್ಟನು. |
17
|
ರಾಜನಾದ ಸೊಲೊಮೋನನು ಆ ನಗರವನ್ನು ಮತ್ತೆ ನಿರ್ಮಿಸಿದನು. ಸೊಲೊಮೋನನು ಕೆಳಗಿನ ಬೇತ್ಹೋರೋನ್ ನಗರವನ್ನು ಸಹ ಕಟ್ಟಿಸಿದನು; |
18
|
ಮರಳುಗಾಡಿನಲ್ಲಿರುವ ಬಾಲಾತ್ ಮತ್ತು ತಾಮಾರ್ ನಗರಗಳನ್ನೂ ಕಟ್ಟಿಸಿದನು; |
19
|
ಧಾನ್ಯಗಳನ್ನು ಮತ್ತು ಇತರ ವಸ್ತುಗಳನ್ನು ಸಂಗ್ರಹಿಸುವ ಉಗ್ರಾಣನಗರಗಳನ್ನು ಸಹ ಕಟ್ಟಿಸಿದನು; ತನ್ನ ರಥಗಳಿಗೆ ಮತ್ತು ಕುದುರೆಗಳಿಗೆ ತಾಣವಾದ ಸ್ಥಳಗಳನ್ನೂ ಕಟ್ಟಿಸಿದನು; ತಾನು ಆಳುತ್ತಿದ್ದ ಜೆರುಸಲೇಮಿನಲ್ಲಿ, ಲೆಬನೋನಿನಲ್ಲಿ, ಮತ್ತಿತರ ಎಲ್ಲಾ ಸ್ಥಳಗಳಲ್ಲಿ ತಾನು ಅಪೇಕ್ಷಿಸಿದ ಕಟ್ಟಡಗಳನ್ನೆಲ್ಲ ಕಟ್ಟಿಸಿದನು. |
20
|
ಆ ದೇಶದಲ್ಲಿ ಇಸ್ರೇಲರಲ್ಲದ ಅನ್ಯಜನರೂ ಇದ್ದರು. ಆ ಜನರೆಂದರೆ: ಅಮೋರಿಯರು, ಹಿತ್ತಿಯರು, ಪೆರಿಜ್ಜೀಯರು, ಹಿವ್ವೀಯರು ಮತ್ತು ಯೆಬೂಸಿಯರು. |
21
|
ಇಸ್ರೇಲರು ಈ ಜನರನ್ನು ನಾಶಪಡಿಸಲು ಸಮರ್ಥರಾಗಿರಲಿಲ್ಲ. ಆದರೆ ಸೊಲೊಮೋನನು ಅವರನ್ನು ತನ್ನ ಕೆಲಸ ಮಾಡಲು ಗುಲಾಮರನ್ನಾಗಿ ಇಟ್ಟುಕೊಂಡನು; ಅವರು ಇಂದಿಗೂ ಗುಲಾಮರಾಗಿದ್ದಾರೆ. |
22
|
ಸೊಲೊಮೋನನು ಇಸ್ರೇಲರಾದ ಯಾರನ್ನೂ ತನ್ನ ಗುಲಾಮರಾಗಲು ಬಲಾತ್ಕರಿಸಲಿಲ್ಲ. ಇಸ್ರೇಲಿನ ಜನರು ಸೈನಿಕರಾಗಿದ್ದರು; ಸರ್ಕಾರದ ನೌಕರರಾಗಿದ್ದರು; ಅಧಿಕಾರಿಗಳಾಗಿದ್ದರು; ಸೇನಾಪತಿಗಳಾಗಿದ್ದರು; ರಥಾಶ್ವಗಳಿಗೂ ಅಶ್ವಪೇದೆಗೂ ಮಹಾ ಸೇನಾಧಿಪತಿಗಳಾಗಿದ್ದರು. |
23
|
ಸೊಲೊಮೋನನ ಯೋಜನೆಗಳ ಉಸ್ತುವಾರಿಗೆ ಐನೂರ ಐವತ್ತು ಮಂದಿ ಮೇಲ್ವಿಚಾರಕರಿದ್ದರು. ಅವರು ಕೆಲಸ ಮಾಡುವ ಜನರ ಮೇಲಿನ ಅಧಿಕಾರಿಗಳಾಗಿದ್ದರು. |
24
|
ಫರೋಹನ ಮಗಳು ದಾವೀದ ನಗರವನ್ನು ಬಿಟ್ಟು ಸೊಲೊಮೋನನು ಅವಳಿಗಾಗಿ ಕಟ್ಟಿಸಿದ ದೊಡ್ಡ ಮನೆಗೆ ಹೋದಳು. ಆಗ ಸೊಲೊಮೋನನು ಮಿಲ್ಲೋ ಕೋಟೆಯನ್ನು ಕಟ್ಟಿಸಿದನು. |
25
|
ಸೊಲೊಮೋನನು ಪ್ರತಿವರ್ಷದಲ್ಲೂ ಮೂರು ಸಲ ಸರ್ವಾಂಗಹೋಮಗಳನ್ನು, ಸಮಾಧಾನಯಜ್ಞಗಳನ್ನು ಯಜ್ಞವೇದಿಕೆಯ ಮೇಲೆ ಅರ್ಪಿಸುತ್ತಿದ್ದನು. ಈ ಯಜ್ಞವೇದಿಕೆಯನ್ನು ಸೊಲೊಮೋನನು ಯೆಹೋವನಿಗಾಗಿ ನಿರ್ಮಿಸಿದನು. ರಾಜನಾದ ಸೊಲೊಮೋನನು ಯೆಹೋವನ ಮುಂದೆ ಸುಗಂಧ ಧೂಪವನ್ನು ಸುಡುತ್ತಿದ್ದನು. ಅವನು ಆಲಯಕ್ಕೆ ಬೇಕಾದ ವಸ್ತುಗಳನ್ನು ಕೊಡುತ್ತಿದ್ದನು. |
26
|
ರಾಜನಾದ ಸೊಲೊಮೋನನು ಏಚ್ಯೋನ್ಗೆಬೆರಿನಲ್ಲಿ ಹಡಗುಗಳನ್ನು ಸಹ ನಿರ್ಮಿಸಿದನು. ಈ ಪಟ್ಟಣವು ಎದೋಮ್ ದೇಶದಲ್ಲಿ ಕೆಂಪು ಸಮುದ್ರತೀರದ ಏಲೋತಿನ ಹತ್ತಿರದಲ್ಲಿದೆ. |
27
|
ಸಮುದ್ರದ ಬಗ್ಗೆ ಹೆಚ್ಚಿಗೆ ತಿಳಿದಿರುವ ಕೆಲವು ಜನರು ರಾಜನಾದ ಹೀರಾಮನ ಹತ್ತಿರ ಇದ್ದರು. ಅವರು ಅನುಭವಸ್ತ ನಾವಿಕರಾಗಿದ್ದರು. ಸೊಲೊಮೋನನ ಹಡಗುಗಳಲ್ಲಿ ಅವನ ಜನರೊಡನೆ ಕೆಲಸಮಾಡಲು, ರಾಜನಾದ ಹೀರಾಮನು ತನ್ನ ನಿಪುಣರಾದ ಜನರನ್ನು ಕಳುಹಿಸಿದನು. |
28
|
ಸೊಲೊಮೋನನ ಹಡಗುಗಳು ಓಫೀರಿಗೆ ಹೋದವು. ಆ ಹಡಗುಗಳು ರಾಜನಾದ ಸೊಲೊಮೋನನಿಗೆ ಹದಿನಾಲ್ಕು ಸಾವಿರದ ಇನ್ನೂರ ಎಂಭತ್ತು ಕಿಲೋಗ್ರಾಂ ಬಂಗಾರವನ್ನು ಓಫೀರಿನಿಂದ ತೆಗೆದುಕೊಂಡು ಬಂದವು. |
1-Kings 9:7 Kannada Language Bible Words basic statistical display
COMING SOON ...