ನೀವು ದೇವರಲ್ಲಿ ಭಯಭಕ್ತಿಯುಳ್ಳವರಾಗಿದ್ದು ನಿಷ್ಕಳಂಕರಾಗಿ ಜೀವಿಸುವುದನ್ನು ಕಂಡು ವಾಕ್ಯೋಪದೇಶವಿಲ್ಲದಿದ್ದರೂ ದೇವರ ವಾಕ್ಯದ ಮೇಲೆ ನಂಬಿಕೆಯಿಡಲು ನಿಮ್ಮ ನಡತೆಯಿಂದಲೇ ಪ್ರೋತ್ಸಾಹಿಸಲ್ಪಡುವರು.
ನಾನು ಸಾರಳಂತಹ ಸ್ತ್ರೀಯರ ಬಗ್ಗೆ ಹೇಳುತ್ತಿದ್ದೇನೆ. ಅವಳು ತನ್ನ ಗಂಡನಾದ ಅಬ್ರಹಾಮನಿಗೆ ವಿಧೇಯಳಾಗಿದ್ದು, ಅವನನ್ನು ತನ್ನ ಒಡೆಯನೆಂದು ಕರೆದಳು. ಸ್ತ್ರೀಯರಾದ ನೀವು ಭಯಪಡದೆ ಯಾವಾಗಲೂ ಯೋಗ್ಯವಾದುದನ್ನು ಮಾಡಿದರೆ, ನೀವು ಸಾರಳ ನಿಜವಾದ ಮಕ್ಕಳಾಗುವಿರಿ.
ಪುರುಷರೇ, ಇದೇ ರೀತಿಯಲ್ಲಿ ನೀವು ನಿಮ್ಮ ಪತ್ನಿಯರನ್ನು ಅರ್ಥಮಾಡಿಕೊಂಡು ಅವರೊಂದಿಗೆ ಬಾಳಬೇಕು. ನೀವು ನಿಮ್ಮ ಪತ್ನಿಯರಿಗೆ ಗೌರವ ತೋರಬೇಕು. ಅವರು ನಿಮಗಿಂತ ದುರ್ಬಲರು. ಆದರೆ ದೇವರು ನಿಮಗೆ ಕೊಡುವ ಆಶೀರ್ವಾದವನ್ನೇ ಅಂದರೆ ನಿಜಜೀವವನ್ನು ನೀಡುವ ಕೃಪೆಯನ್ನೇ ನಿಮ್ಮ ಪತ್ನಿಯರಿಗೂ ಕೊಡುವನು. ನೀವು ಹೀಗೆ ಜೀವಿಸುವುದಾಗಿದ್ದರೆ ಪ್ರಾರ್ಥಿಸಲು ನಿಮಗೆ ಅಡ್ಡಿಯಾಗುವುದಿಲ್ಲ.
ಅಪಕಾರ ಮಾಡಿದವನಿಗೆ ಅಪಕಾರ ಮಾಡದೆ, ನಿಂದಿಸಿದವನನ್ನು ನಿಂದಿಸದೆ, ಅವನನ್ನು ಆಶೀರ್ವದಿಸುವಂತೆ ದೇವರಲ್ಲಿ ಬೇಡಿಕೊಳ್ಳಿರಿ. ಏಕೆಂದರೆ ಆಶೀರ್ವಾದವನ್ನು ಹೊಂದಿಕೊಳ್ಳಲು ನೀವು ಕರೆಯಲ್ಪಟ್ಟವರಾಗಿದ್ದೀರಿ.
ಆದರೆ ಸಾತ್ವಿಕತೆಯಿಂದ ಗೌರವಕರವಾದ ರೀತಿಯಲ್ಲಿ ಅವರಿಗೆ ಉತ್ತರವನ್ನು ಹೇಳಿ. ನೀವು ಮಾಡುತ್ತಿರುವುದು ಯೋಗ್ಯವಾದದ್ದೆಂಬುದು ನಿಮಗೆ ಯಾವಾಗಲೂ ಖಚಿತವಾಗಿ ತಿಳಿದಿರಬೇಕು. ಆಗ, ನೀವು ಕ್ರಿಸ್ತನಲ್ಲಿ ಒಳ್ಳೆಯವರಾಗಿ ಜೀವಿಸುವುದನ್ನು ನೋಡಿ ನಿಮ್ಮ ಬಗ್ಗೆ ಕೆಟ್ಟಮಾತುಗಳನ್ನು ಹೇಳುವವರು ತಾವು ಹೇಳಿದ ಕೆಟ್ಟ ಸಂಗತಿಗಳಿಗಾಗಿ ನಾಚಿಕೆಪಡುವರು.
ನಿಮ್ಮ ಪಾಪಗಳಿಗಾಗಿ ಕ್ರಿಸ್ತನು ಒಂದೇಸಾರಿ ಬಾಧೆ ಅನುಭವಿಸಿ ಸತ್ತನು. ನೀತಿವಂತನಾಗಿದ್ದ ಆತನು ಅಪರಾಧಿಗಳಿಗಾಗಿ ಪ್ರಾಣಕೊಟ್ಟನು. ನಿಮ್ಮೆಲ್ಲರನ್ನು ದೇವರ ಬಳಿಗೆ ನಡೆಸುವುದಕ್ಕಾಗಿ ಆತನು ಹೀಗೆ ಮಾಡಿದನು. ಆತನ ದೇಹವು ಕೊಲ್ಲಲ್ಪಟ್ಟಿತು, ಆದರೆ ಆತನು ಆತ್ಮಸಂಬಂಧದಲ್ಲಿ ಮತ್ತೆ ಜೀವಂತನಾದನು.
ಬಹಳ ಹಿಂದೆ ನೋಹನ ಕಾಲದಲ್ಲಿ ದೇವರಿಗೆ ಅವಿಧೇಯರಾಗಿದ್ದವರೇ ಅವರು. ನೋಹನು ನಾವೆಯನ್ನು ಕಟ್ಟುತ್ತಿದ್ದಾಗ ದೇವರು ತಾಳ್ಮೆಯಿಂದ ಕಾಯುತ್ತಿದ್ದನು. ಕೆಲವರು ಅಂದರೆ ಎಂಟು ಮಂದಿ ಮಾತ್ರ, ಆ ನಾವೆಯಲ್ಲಿ ನೀರಿನ ಮೂಲಕ ರಕ್ಷಿಸಲ್ಪಟ್ಟರು.
ಆ ನೀರು ಈಗ ನಿಮ್ಮನ್ನು ರಕ್ಷಿಸುತ್ತಿರುವ ದೀಕ್ಷಾಸ್ನಾನದಂತಿದೆ. ದೀಕ್ಷಾಸ್ನಾನವು ಮೈಕೊಳೆಯನ್ನು ತೊಳೆಯುವಂಥದ್ದಲ್ಲ. ಅದು ಪರಿಶುದ್ಧ ಹೃದಯ ಬೇಕೆಂದು ವಿಜ್ಞಾಪಿಸಿಕೊಳ್ಳುವಂಥದಾಗಿದೆ. ಯೇಸು ಕ್ರಿಸ್ತನು ಸಾವಿನಿಂದ ಎದ್ದುಬಂದದ್ದರಿಂದ ಅದು ನಿಮ್ಮನ್ನು ರಕ್ಷಿಸುತ್ತದೆ.