Bible Languages

Indian Language Bible Word Collections

Bible Versions

Books

1 Peter Chapters

1 Peter 3 Verses

Bible Versions

Books

1 Peter Chapters

1 Peter 3 Verses

1 ಸ್ತ್ರೀಯರೇ, ಇದೇ ರೀತಿಯಲ್ಲಿ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ. ಅವರಲ್ಲಿ ಕೆಲವರು ದೇವರ ವಾಕ್ಯಕ್ಕೆ ಅವಿಧೇಯರಾಗಿದ್ದರೂ
2 ನೀವು ದೇವರಲ್ಲಿ ಭಯಭಕ್ತಿಯುಳ್ಳವರಾಗಿದ್ದು ನಿಷ್ಕಳಂಕರಾಗಿ ಜೀವಿಸುವುದನ್ನು ಕಂಡು ವಾಕ್ಯೋಪದೇಶವಿಲ್ಲದಿದ್ದರೂ ದೇವರ ವಾಕ್ಯದ ಮೇಲೆ ನಂಬಿಕೆಯಿಡಲು ನಿಮ್ಮ ನಡತೆಯಿಂದಲೇ ಪ್ರೋತ್ಸಾಹಿಸಲ್ಪಡುವರು.
3 ತಲೆಕೂದಲನ್ನು ಸುಂದರವಾಗಿ ಬಾಚಿಕೊಳ್ಳುವುದಾಗಲಿ ಬಂಗಾರದ ಒಡವೆಗಳಾಗಲಿ ಒಳ್ಳೆಯ ಬಟ್ಟೆಗಳಾಗಲಿ ನಿಮ್ಮ ಸೌಂದರ್ಯದ ಸಾಧನಗಳಾಗದಿರಲಿ.
4 ಸಾತ್ವಿಕವೂ ಶಾಂತವೂ ಆದ ಆಂತರ್ಯವೇ ನಿಮ್ಮ ಸೌಂದರ್ಯವಾಗಿರಬೇಕು. ಆ ಸೌಂದರ್ಯ ನಶಿಸಿಹೋಗುವುದಿಲ್ಲ. ಅದು ದೇವರಿಗೆ ಬಹು ಅಮೂಲ್ಯವಾದದ್ದು.
5 ಬಹು ಕಾಲದ ಹಿಂದೆ ಜೀವಿಸಿದ್ದು ದೇವರನ್ನು ಅನುಸರಿಸುತ್ತಾ ಪರಿಶುದ್ಧರಾಗಿದ್ದ ಸ್ತ್ರೀಯರು ಇದೇ ರೀತಿಯಲ್ಲಿ ತಮ್ಮನ್ನು ಶೃಂಗರಿಸಿಕೊಂಡರು. ಅವರು ತಮ್ಮ ಗಂಡಂದಿರಿಗೆ ಅಧೀನರಾಗಿದ್ದರು.
6 ನಾನು ಸಾರಳಂತಹ ಸ್ತ್ರೀಯರ ಬಗ್ಗೆ ಹೇಳುತ್ತಿದ್ದೇನೆ. ಅವಳು ತನ್ನ ಗಂಡನಾದ ಅಬ್ರಹಾಮನಿಗೆ ವಿಧೇಯಳಾಗಿದ್ದು, ಅವನನ್ನು ತನ್ನ ಒಡೆಯನೆಂದು ಕರೆದಳು. ಸ್ತ್ರೀಯರಾದ ನೀವು ಭಯಪಡದೆ ಯಾವಾಗಲೂ ಯೋಗ್ಯವಾದುದನ್ನು ಮಾಡಿದರೆ, ನೀವು ಸಾರಳ ನಿಜವಾದ ಮಕ್ಕಳಾಗುವಿರಿ.
7 ಪುರುಷರೇ, ಇದೇ ರೀತಿಯಲ್ಲಿ ನೀವು ನಿಮ್ಮ ಪತ್ನಿಯರನ್ನು ಅರ್ಥಮಾಡಿಕೊಂಡು ಅವರೊಂದಿಗೆ ಬಾಳಬೇಕು. ನೀವು ನಿಮ್ಮ ಪತ್ನಿಯರಿಗೆ ಗೌರವ ತೋರಬೇಕು. ಅವರು ನಿಮಗಿಂತ ದುರ್ಬಲರು. ಆದರೆ ದೇವರು ನಿಮಗೆ ಕೊಡುವ ಆಶೀರ್ವಾದವನ್ನೇ ಅಂದರೆ ನಿಜಜೀವವನ್ನು ನೀಡುವ ಕೃಪೆಯನ್ನೇ ನಿಮ್ಮ ಪತ್ನಿಯರಿಗೂ ಕೊಡುವನು. ನೀವು ಹೀಗೆ ಜೀವಿಸುವುದಾಗಿದ್ದರೆ ಪ್ರಾರ್ಥಿಸಲು ನಿಮಗೆ ಅಡ್ಡಿಯಾಗುವುದಿಲ್ಲ.
8 ಆದ್ದರಿಂದ ನೀವೆಲ್ಲರೂ ಒಟ್ಟಾಗಿ ಶಾಂತಿಯಿಂದ ಬಾಳಿರಿ; ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿರಿ. ಒಬ್ಬರನ್ನೊಬ್ಬರು ಸಹೋದರರಂತೆ ಪ್ರೀತಿಸಿರಿ. ದಯೆ ತೋರುವವರೂ ಮತ್ತು ದೀನತೆ ಉಳ್ಳವರೂ ಆಗಿರಿ.
9 ಅಪಕಾರ ಮಾಡಿದವನಿಗೆ ಅಪಕಾರ ಮಾಡದೆ, ನಿಂದಿಸಿದವನನ್ನು ನಿಂದಿಸದೆ, ಅವನನ್ನು ಆಶೀರ್ವದಿಸುವಂತೆ ದೇವರಲ್ಲಿ ಬೇಡಿಕೊಳ್ಳಿರಿ. ಏಕೆಂದರೆ ಆಶೀರ್ವಾದವನ್ನು ಹೊಂದಿಕೊಳ್ಳಲು ನೀವು ಕರೆಯಲ್ಪಟ್ಟವರಾಗಿದ್ದೀರಿ.
10 ಪವಿತ್ರ ಗ್ರಂಥವು ಹೇಳುವುದೇನಂದರೆ, “ಈ ಜೀವಿತದಲ್ಲಿ ಸಂತೋಷಿಸುತ್ತಾ ಸುದಿನಗಳನ್ನು ನೋಡಲು ಅಪೇಕ್ಷಿಸುವವನು ಕೆಟ್ಟ ಮಾತುಗಳನ್ನಾಡದಿರಲಿ; ಸುಳ್ಳನ್ನು ನುಡಿಯದಿರಲಿ.
11 ಅವನು ಕೆಟ್ಟದ್ದನ್ನು ಮಾಡದೆ ಒಳ್ಳೆಯದನ್ನೇ ಮಾಡಲಿ. ಅವನು ಶಾಂತಿಯನ್ನು ಎದುರು ನೋಡುತ್ತಾ ಅದನ್ನು ಪಡೆಯಲು ಪ್ರಯತ್ನಿಸಲಿ.
12 ನೀತಿವಂತರನ್ನು ಪ್ರಭುವು ಕಾಯುತ್ತಾನೆ; ಅವರ ಪ್ರಾರ್ಥನೆಗಳನ್ನು ಆಲಿಸುತ್ತಾನೆ. ಆದರೆ ಕೆಟ್ಟದ್ದನ್ನು ಮಾಡುವ ಜನರನ್ನು ಪ್ರಭುವು ವಿರೋಧಿಸುತ್ತಾನೆ.” ಕೀರ್ತನೆ 34:12-16
13 ನೀವು ಯಾವಾಗಲೂ ಒಳ್ಳೆಯದನ್ನು ಮಾಡಲು ಪ್ರಯತ್ನಿಸುತ್ತಿದ್ದರೆ, ಯಾರೂ ನಿಮಗೆ ಕೇಡು ಮಾಡುವುದಿಲ್ಲ.
14 ಆದರೆ ಯೋಗ್ಯವಾದುದನ್ನು ಮಾಡುವಾಗ ನೀವು ಸಂಕಟ ಪಡಬೇಕಾಗಬಹುದು. ಆದರೆ “ನಿಮ್ಮನ್ನು ಸಂಕಟಕ್ಕೆ ಒಳಪಡಿಸುವ ಜನರಿಗೆ ಹೆದರಬೇಡಿರಿ ಮತ್ತು ಚಿಂತಿಸಬೇಡಿರಿ.”
15 ನಿಮ್ಮ ಹೃದಯಗಳಲ್ಲಿ ಕ್ರಿಸ್ತನೇ ಪ್ರಭುವಾಗಿರಲಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ನಿಮ್ಮನ್ನು ಕೇಳುವ ಪ್ರತಿಯೊಬ್ಬರಿಗೂ ಉತ್ತರ ಹೇಳಲು ಯಾವಾಗಲೂ ಸಿದ್ಧವಾಗಿರಿ.
16 ಆದರೆ ಸಾತ್ವಿಕತೆಯಿಂದ ಗೌರವಕರವಾದ ರೀತಿಯಲ್ಲಿ ಅವರಿಗೆ ಉತ್ತರವನ್ನು ಹೇಳಿ. ನೀವು ಮಾಡುತ್ತಿರುವುದು ಯೋಗ್ಯವಾದದ್ದೆಂಬುದು ನಿಮಗೆ ಯಾವಾಗಲೂ ಖಚಿತವಾಗಿ ತಿಳಿದಿರಬೇಕು. ಆಗ, ನೀವು ಕ್ರಿಸ್ತನಲ್ಲಿ ಒಳ್ಳೆಯವರಾಗಿ ಜೀವಿಸುವುದನ್ನು ನೋಡಿ ನಿಮ್ಮ ಬಗ್ಗೆ ಕೆಟ್ಟಮಾತುಗಳನ್ನು ಹೇಳುವವರು ತಾವು ಹೇಳಿದ ಕೆಟ್ಟ ಸಂಗತಿಗಳಿಗಾಗಿ ನಾಚಿಕೆಪಡುವರು.
17 ಕೆಟ್ಟದ್ದನ್ನು ಮಾಡಿ ಸಂಕಟ ಪಡುವುದಕ್ಕಿಂತ ಒಳ್ಳೆಯದನ್ನು ಮಾಡಿ ಸಂಕಟಪಡುವುದು ಉತ್ತಮ. ಹೌದು, ಅದು ದೇವರ ಅಪೇಕ್ಷೆಯಾಗಿದ್ದರೆ ಅದೇ ಒಳ್ಳೆಯದು.
18 ನಿಮ್ಮ ಪಾಪಗಳಿಗಾಗಿ ಕ್ರಿಸ್ತನು ಒಂದೇಸಾರಿ ಬಾಧೆ ಅನುಭವಿಸಿ ಸತ್ತನು. ನೀತಿವಂತನಾಗಿದ್ದ ಆತನು ಅಪರಾಧಿಗಳಿಗಾಗಿ ಪ್ರಾಣಕೊಟ್ಟನು. ನಿಮ್ಮೆಲ್ಲರನ್ನು ದೇವರ ಬಳಿಗೆ ನಡೆಸುವುದಕ್ಕಾಗಿ ಆತನು ಹೀಗೆ ಮಾಡಿದನು. ಆತನ ದೇಹವು ಕೊಲ್ಲಲ್ಪಟ್ಟಿತು, ಆದರೆ ಆತನು ಆತ್ಮಸಂಬಂಧದಲ್ಲಿ ಮತ್ತೆ ಜೀವಂತನಾದನು.
19 ಬಳಿಕ ಆತನು ಆತ್ಮರೂಪದಲ್ಲಿ ಹೋಗಿ ಸೆರೆಮನೆಯಲ್ಲಿದ್ದ ಆತ್ಮಗಳಿಗೆ ಸುವಾರ್ತೆ ಸಾರಿದನು.
20 ಬಹಳ ಹಿಂದೆ ನೋಹನ ಕಾಲದಲ್ಲಿ ದೇವರಿಗೆ ಅವಿಧೇಯರಾಗಿದ್ದವರೇ ಅವರು. ನೋಹನು ನಾವೆಯನ್ನು ಕಟ್ಟುತ್ತಿದ್ದಾಗ ದೇವರು ತಾಳ್ಮೆಯಿಂದ ಕಾಯುತ್ತಿದ್ದನು. ಕೆಲವರು ಅಂದರೆ ಎಂಟು ಮಂದಿ ಮಾತ್ರ, ಆ ನಾವೆಯಲ್ಲಿ ನೀರಿನ ಮೂಲಕ ರಕ್ಷಿಸಲ್ಪಟ್ಟರು.
21 ಆ ನೀರು ಈಗ ನಿಮ್ಮನ್ನು ರಕ್ಷಿಸುತ್ತಿರುವ ದೀಕ್ಷಾಸ್ನಾನದಂತಿದೆ. ದೀಕ್ಷಾಸ್ನಾನವು ಮೈಕೊಳೆಯನ್ನು ತೊಳೆಯುವಂಥದ್ದಲ್ಲ. ಅದು ಪರಿಶುದ್ಧ ಹೃದಯ ಬೇಕೆಂದು ವಿಜ್ಞಾಪಿಸಿಕೊಳ್ಳುವಂಥದಾಗಿದೆ. ಯೇಸು ಕ್ರಿಸ್ತನು ಸಾವಿನಿಂದ ಎದ್ದುಬಂದದ್ದರಿಂದ ಅದು ನಿಮ್ಮನ್ನು ರಕ್ಷಿಸುತ್ತದೆ.
22 ಈಗ ಯೇಸು ಪರಲೋಕಕ್ಕೆ ಹೋಗಿರುವನು. ಆತನು ದೇವರ ಬಲಗಡೆಯಲ್ಲಿದ್ದಾನೆ. ಆತನು ದೇವದೂತರನ್ನೂ ಅಧಿಕಾರಿಗಳನ್ನೂ ಶಕ್ತಿಗಳನ್ನೂ ಆಳುತ್ತಿದ್ದಾನೆ.

1-Peter 3:1 Kannada Language Bible Words basic statistical display

COMING SOON ...

×

Alert

×