ಯೆಹೋವನು ಸಮುವೇಲನಿಗೆ, “ನೀನು ಸೌಲನಿಗಾಗಿ ಎಷ್ಟುಕಾಲ ಶೋಕಿಸುವೆ? ನಾನು ಸೌಲನನ್ನು ಇಸ್ರೇಲರ ರಾಜತ್ವದಿಂದ ತಿರಸ್ಕರಿಸಿರುತ್ತೇನೆ. ನೀನು ಕೊಂಬಿನಲ್ಲಿ ಎಣ್ಣೆಯನ್ನು ತುಂಬಿಕೊಂಡು ಬಾ. ನಾನು ನಿನ್ನನ್ನು ಇಷಯನೆಂಬ ಮನುಷ್ಯನ ಬಳಿಗೆ ಕಳುಹಿಸುತ್ತೇನೆ. ಇಷಯನು ಬೆತ್ಲೆಹೇಮಿನಲ್ಲಿ ವಾಸಿಸುತ್ತಿದ್ದನು. ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಹೊಸ ರಾಜನನ್ನಾಗಿ ಆರಿಸಿದ್ದೇನೆ” ಎಂದು ಹೇಳಿದನು.
ಅದಕ್ಕೆ ಸಮುವೇಲನು, “ನಾನು ಹೊರಟರೆ ಸೌಲನಿಗೆ ಈ ಸುದ್ದಿಯು ತಿಳಿಯುತ್ತದೆ. ಆಗ ಅವನು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಾನೆ” ಎಂದನು. ಯೆಹೋವನು, “ಬೆತ್ಲೆಹೇಮಿಗೆ ಹೋಗು. ನಿನ್ನೊಡನೆ ಒಂದು ಎಳೆಕರುವನ್ನು ತೆಗೆದುಕೊಂಡು ಹೋಗು. ‘ನಾನು ಯೆಹೋವನಿಗೆ ಯಜ್ಞವನ್ನರ್ಪಿಸಲು ಬಂದಿದ್ದೇನೆ’ ಎಂದು ಹೇಳು.
ಸಮುವೇಲನು ತನಗೆ ಯೆಹೋವನು ಹೇಳಿದಂತೆ ಮಾಡಿದನು. ಸಮುವೇಲನು ಬೆತ್ಲೆಹೇಮಿಗೆ ಹೋದನು. ಬೆತ್ಲೆಹೇಮಿನ ಹಿರಿಯರು ಭಯದಿಂದ ನಡುಗಿದರು. ಅವರು ಸಮುವೇಲನನ್ನು ಕಂಡು, “ನಿನ್ನ ಆಗಮನವು ಶುಭಕರವಾಗಿದೆಯೇ?” ಎಂದು ಕೇಳಿದರು.
ಸಮುವೇಲನು, “ಹೌದು, ಶುಭಕರವಾಗಿದೆ. ನಾನು ಯೆಹೋವನಿಗೆ ಯಜ್ಞವನ್ನು ಅರ್ಪಿಸಲು ಬಂದಿದ್ದೇನೆ. ನೀವೆಲ್ಲ ಸಿದ್ಧರಾಗಿ ಯಜ್ಞಕಾರ್ಯಕ್ಕಾಗಿ ನನ್ನೊಂದಿಗೆ ಬನ್ನಿ” ಎಂದು ಹೇಳಿದನು. ಸಮುವೇಲನು ಇಷಯನನ್ನೂ ಅವನ ಮಕ್ಕಳನ್ನೂ ಸಿದ್ಧಗೊಳಿಸಿದನು. ನಂತರ ಸಮುವೇಲನು ಅವರನ್ನು ಯಜ್ಞದಲ್ಲಿ ಭಾಗಿಗಳಾಗಲು ಆಹ್ವಾನಿಸಿದನು.
ಆದರೆ ಯೆಹೋವನು ಸಮುವೇಲನಿಗೆ, “ಎಲೀಯಾಬನ ಎತ್ತರವನ್ನಾಗಲಿ ರೂಪವನ್ನಾಗಲಿ ಪರಿಗಣಿಸಬೇಡ. ಯಾಕೆಂದರೆ ನಾನು ಅವನನ್ನು ತಿರಸ್ಕರಿಸಿದ್ದೇನೆ. ಮನುಷ್ಯರಾದರೋ ಹೊರತೋರಿಕೆಯನ್ನು ಪರಿಗಣಿಸುತ್ತಾರೆ; ಯೆಹೋವನಾದರೋ ಹೊರತೋರಿಕೆಯನ್ನು ನೋಡದೆ ಹೃದಯವನ್ನೇ ನೋಡುವವನಾಗಿದ್ದಾನೆ” ಎಂದು ಹೇಳಿದನು.
ನಂತರ ಸಮುವೇಲನು ಇಷಯನನ್ನು, “ನಿನಗೆ ಇರುವ ಮಕ್ಕಳು ಇಷ್ಟೆಯೋ?” ಎಂದು ಕೇಳಿದನು. ಇಷಯನು, “ಇಲ್ಲ, ನನಗೆ ಇನ್ನೊಬ್ಬ ಕಿರಿಯ ಮಗನಿದ್ದಾನೆ. ಅವನು ಕುರಿಮೇಯಿಸುವದಕ್ಕೆ ಹೋಗಿದ್ದಾನೆ” ಎಂದು ಉತ್ತರಕೊಟ್ಟನು. ಆಗ ಸಮುವೇಲನು, “ಅವನನ್ನು ಕರೆಕಳುಹಿಸು. ಅವನನ್ನು ಇಲ್ಲಿಗೆ ಬರಹೇಳು. ಅವನು ಬರುವತನಕ ನಾವು ಊಟಕ್ಕೆ ಕುಳಿತುಕೊಳ್ಳುವುದು ಬೇಡ” ಎಂದು ಹೇಳಿದನು.
ಸಮುವೇಲನು ಎಣ್ಣೆಯಿದ್ದ ಕೊಂಬನ್ನು ತೆಗೆದುಕೊಂಡು, ಅದರಲ್ಲಿದ್ದ ವಿಶೇಷವಾದ ಎಣ್ಣೆಯನ್ನು ಇಷಯನ ಕಿರಿಮಗನ ಮೇಲೆ, ಅವನ ಸೋದರರ ಎದುರಿನಲ್ಲೇ ಸುರಿದನು. ಆ ದಿನದಿಂದ ಯೆಹೋವನ ಆತ್ಮವು ಮಹಾಶಕ್ತಿಯೊಡನೆ ದಾವೀದನಲ್ಲಿ ನೆಲೆಸಿತು. ಅನಂತರ ಸಮುವೇಲನು ರಾಮಕ್ಕೆ ಹಿಂದಿರುಗಿದನು.
ನಮಗೆ ಆಜ್ಞಾಪಿಸುವುದಾದರೆ, ಕಿನ್ನರಿ ಬಾರಿಸುವವನನ್ನು ಹುಡುಕಿ ಕರೆದುಕೊಂಡು ಬರುತ್ತೇವೆ. ಯೆಹೋವನಿಂದ ಬಂದ ದುರಾತ್ಮವು ನಿನ್ನ ಮೈಮೇಲೆ ಬಂದಾಗ ಅವನು ಕಿನ್ನರಿ ಬಾರಿಸಿದರೆ, ದುರಾತ್ಮವು ನಿನ್ನನ್ನು ಬಿಟ್ಟುಹೋಗಿ ನಿನಗೆ ಉಪಶಮನವಾಗುತ್ತದೆ” ಎಂದು ಹೇಳಿದರು.
ಅವನ ಸೇವಕರಲ್ಲಿ ಒಬ್ಬನು, “ಇಷಯ ಎಂಬ ಹೆಸರಿನ ಒಬ್ಬ ಮನುಷ್ಯನು ಬೆತ್ಲೆಹೇಮಿನಲ್ಲಿ ವಾಸಿಸುತ್ತಿದ್ದಾನೆ. ನಾನು ಇಷಯನ ಮಗನನ್ನು ನೋಡಿದ್ದೇನೆ. ಅವನು ಕಿನ್ನರಿ ಬಾರಿಸುತ್ತಾನೆ. ಅವನು ಧೈರ್ಯಶಾಲಿ ಮತ್ತು ಒಳ್ಳೆಯ ಹೋರಾಟಗಾರ; ಅವನು ಬುದ್ಧಿವಂತನೂ ರಣಶೂರನೂ ರೂಪವಂತನೂ ಆಗಿದ್ದಾನೆ. ಅದಲ್ಲದೆ ಯೆಹೋವನು ಅವನೊಂದಿಗಿದ್ದಾನೆ” ಎಂದು ಹೇಳಿದನು.