English Bible Languages

Indian Language Bible Word Collections

Bible Versions

English

Tamil

Hebrew

Greek

Malayalam

Hindi

Telugu

Kannada

Gujarati

Punjabi

Urdu

Bengali

Oriya

Marathi

Assamese

Books

1 Samuel Chapters

1 Samuel 24 Verses

1 ಸೌಲನು ಫಿಲಿಷ್ಟಿಯರನ್ನು ಅಟ್ಟಿಸಿಕೊಂಡು ಹೋಗಿ ಓಡಿಸಿದನಂತರ, ಅವನಿಗೆ ಜನರು, “ದಾವೀದನು ಏಂಗೆದಿಯ ಹತ್ತಿರದ ಮರಳುಗಾಡಿನಲ್ಲಿದ್ದಾನೆ” ಎಂದು ಹೇಳಿದರು.
2 ಇಸ್ರೇಲಿನ ಮೂರು ಸಾವಿರ ಜನರನ್ನು ಸೌಲನು ಆರಿಸಿದನು. ಸೌಲನು ಈ ಜನರೊಂದಿಗೆ ದಾವೀದನನ್ನು ಮತ್ತು ಅವನ ಜನರನ್ನು ಹುಡುಕಲು ಆರಂಭಿಸಿದನು. ಅವರು ಕಾಡು ಹೋತದ ಬಂಡೆಗಳ ಹತ್ತಿರ ಹುಡುಕಿದರು.
3 ಸೌಲನು ರಸ್ತೆಯ ಪಕ್ಕದ ಕುರಿದೊಡ್ಡಿಗೆ ಬಂದನು. ಅಲ್ಲಿಗೆ ಸಮೀಪದಲ್ಲಿ ಒಂದು ಗವಿಯಿದ್ದಿತು. ಸೌಲನು ಶೌಚಕ್ಕೋಸ್ಕರ ಗವಿಯ ಒಳಗಡೆಗೆ ಹೋದನು. ದಾವೀದನೂ ಅವನ ಜನರೂ ಅದೇ ಗವಿಯ ಹಿಂದಗಡೆ ಅಡಗಿಕೊಂಡಿದ್ದರು.
4 ಜನರು ದಾವೀದನಿಗೆ, “ಯೆಹೋವನು ಈ ದಿನವನ್ನೇ ಕುರಿತು ನಿನ್ನೊಂದಿಗೆ ಮಾತನಾಡಿದನು. ಯೆಹೋವನು ನಿನಗೆ, ‘ನಾನು ನಿನ್ನ ಶತ್ರುವನ್ನು ನಿನಗೆ ಒಪ್ಪಿಸುತ್ತೇನೆ. ನಿನ್ನ ಇಷ್ಟದಂತೆ ಶತ್ರುವಿಗೆ ಏನು ಬೇಕಾದರೂ ಮಾಡು’ ಎಂದು ಹೇಳಿದನು” ಎಂದರು. ನಂತರ ದಾವೀದನು ಸೌಲನ ಹತ್ತಿರಕ್ಕೆ ತೆವಳುತ್ತಾ ಹೋಗಿ ಸೌಲನ ಅಂಗಿಯ ಒಂದು ಮೂಲೆಯನ್ನು ಕತ್ತರಿಸಿದನು. ದಾವೀದನನ್ನು ಸೌಲನು ನೋಡಲಿಲ್ಲ.
5 ತರುವಾಯ ಸೌಲನ ಅಂಗಿಯ ಮೂಲೆಯನ್ನು ಕತ್ತರಿಸಿದ್ದಕ್ಕಾಗಿ ದಾವೀದನಿಗೆ ಅಸಮಾಧಾನವಾಯಿತು.
6 ದಾವೀದನು ತನ್ನ ಜನರಿಗೆ, “ಸೌಲನು ಯೆಹೋವನಿಂದ ಅಭಿಷೇಕಿಸಲ್ಪಟ್ಟವನೂ ನನ್ನ ರಾಜನೂ ಆಗಿರುವುದರಿಂದ ನಾನು ಅವನ ವಿರುದ್ಧವಾಗಿ ಏನೂ ಮಾಡಬಾರದು!” ಎಂದು ಹೇಳಿದನು.
7 ದಾವೀದನು ತನ್ನ ಜನರನ್ನು ತಡೆಯಲು ಈ ಮಾತುಗಳನ್ನು ಹೇಳಿದನು. ಸೌಲನನ್ನು ಆಕ್ರಮಿಸಲು ದಾವೀದನು ತನ್ನ ಜನರಿಗೆ ಅವಕಾಶ ಕೊಡಲಿಲ್ಲ. ಸೌಲನು ಗವಿಯನ್ನು ಬಿಟ್ಟು ತನ್ನ ದಾರಿಯಲ್ಲಿ ಹೊರಟನು.
8 ದಾವೀದನು ಗವಿಯಿಂದ ಹೊರಗೆ ಬಂದನು. ದಾವೀದನು ಸೌಲನಿಗೆ, “ಅರಸನೇ, ನನ್ನ ಒಡೆಯನೇ!” ಎಂದು ಕೂಗಿದನು. ಸೌಲನು ಹಿಂದಿರುಗಿ ನೋಡಿದಾಗ ದಾವೀದನು ಅವನಿಗೆ ಸಾಷ್ಟಾಂಗನಮಸ್ಕಾರಮಾಡಿ,
9 “ ‘ದಾವೀದನು ನಿನಗೆ ಕೇಡುಮಾಡಲು ಸಂಚುಗಳನ್ನು ಮಾಡುತ್ತಿದ್ದಾನೆ’ ಎಂಬುದಾಗಿ ಜನರು ಹೇಳುವಾಗ ನೀನು ಕೇಳುವುದೇಕೆ?
10 ನಾನು ನಿನಗೆ ಕೇಡುಮಾಡಲು ಇಚ್ಛಿಸುವುದಿಲ್ಲ! ನೀನು ಅದನ್ನು ನಿನ್ನ ಸ್ವಂತ ಕಣ್ಣುಗಳಿಂದ ನೋಡಬಹುದು! ಈ ದಿನ ಗವಿಯಲ್ಲಿ ಯೆಹೋವನು ನಿನ್ನನ್ನು ನನಗೆ ಒಪ್ಪಿಸಿದ್ದನು. ಆದರೆ ನಾನು ನಿನ್ನನ್ನು ಕೊಲ್ಲಲು ನಿರಾಕರಿಸಿದೆ. ನಾನು ನಿನಗೆ ದಯಾಳುವಾಗಿದ್ದೆ. ‘ನಾನು ನನ್ನ ಒಡೆಯನಿಗೆ ಕೇಡು ಮಾಡುವುದಿಲ್ಲ. ಸೌಲನು ಯೆಹೋವನಿಂದ ಅಭಿಷೇಕಿಸಲ್ಪಟ್ಟ ರಾಜ!’
11 ನನ್ನ ತಂದೆಯೇ, ನನ್ನ ಕೈಯಲ್ಲಿರುವ ಚೂರು ಬಟ್ಟೆಯನ್ನು ನೋಡು. ನಾನು ನಿನ್ನ ಅಂಗಿಯ ಮೂಲೆಯನ್ನು ಕತ್ತರಿಸಿಹಾಕಿದೆ. ನಾನು ನಿನ್ನನ್ನು ಕೊಲ್ಲಬಹುದಿತ್ತು, ಆದರೆ ಕೊಲ್ಲಲಿಲ್ಲ! ನೀನು ಇದನ್ನು ಅರ್ಥಮಾಡಿಕೊಳ್ಳಬೇಕೆಂದು ನಾನು ಬಯಸಿದ್ದೇನೆ. ನಾನು ನಿನ್ನ ವಿರುದ್ಧವಾಗಿ ಯಾವ ಸಂಚನ್ನೂ ಮಾಡುತ್ತಿಲ್ಲವೆಂದು ನೀನು ತಿಳಿದುಕೊಳ್ಳಬೇಕಾಗಿದೆ! ನಾನು ನಿನಗೆ ಯಾವ ತಪ್ಪನ್ನೂ ಮಾಡಿಲ್ಲ! ಆದರೆ ನೀನು ನನ್ನನ್ನು ಹುಡುಕುತ್ತಿರುವೆ; ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿರುವೆ.
12 ಯೆಹೋವನೇ ನಮಗೆ ನ್ಯಾಯಾಧೀಶನಾಗಿರಲಿ! ನೀನು ಮಾಡಿರುವ ತಪ್ಪಿಗಾಗಿ ಯೆಹೋವನು ನಿನ್ನನ್ನು ದಂಡಿಸಲಿ. ಆದರೆ ನಾನು ನಿನ್ನೊಡನೆ ಹೋರಾಡುವುದಿಲ್ಲ.
13 ‘ಕೆಟ್ಟಕಾರ್ಯಗಳನ್ನು ಕೆಟ್ಟ ಜನರೇ ಮಾಡುತ್ತಾರೆ!’ ಎಂಬ ಹಳೆಯ ನಾಣ್ಣುಡಿಯೊಂದಿದೆ. “ನಾನು ಕೆಟ್ಟದ್ದನ್ನೇನೂ ಮಾಡಿಲ್ಲ! ನಾನು ಕೆಟ್ಟ ವ್ಯಕ್ತಿಯಲ್ಲ! ಆದ್ದರಿಂದ ನಾನು ನಿನಗೆ ಕೇಡು ಮಾಡುವುದಿಲ್ಲ!
14 ನೀನು ಯಾರನ್ನು ಅಟ್ಟಿಸಿಕೊಂಡು ಹೋಗುತ್ತಿರುವೆ? ಇಸ್ರೇಲರ ರಾಜನಾದ ನೀನು ಯಾರೊಂದಿಗೆ ಹೋರಾಡಬೇಕೆಂದಿರುವೆ? ನಿನಗೆ ಕೇಡು ಮಾಡಬಹುದಾದವನನ್ನು ನೀನು ಅಟ್ಟಿಸಿಕೊಂಡು ಹೋಗುತ್ತಿಲ್ಲ! ನೀನು ಸತ್ತ ನಾಯಿಯನ್ನೋ ಇಲ್ಲವೆ ಚಿಟ್ಟೆಯನ್ನೋ ಅಟ್ಟಿಸಿಕೊಂಡು ಹೋಗುತ್ತಿರುವೆ!
15 ಯೆಹೋವನೇ ನಮ್ಮಿಬ್ಬರಿಗೂ ನ್ಯಾಯಾಧೀಶನಾಗಿದ್ದು ತೀರ್ಪು ನೀಡಲಿ. ಯೆಹೋವನು ನನ್ನ ಪರವಾಗಿ ವಾದಿಸಿ ನಾನು ನೀತಿವಂತನೆಂದು ನಿರೂಪಿಸಿ ನನ್ನನ್ನು ನಿನ್ನಿಂದ ರಕ್ಷಿಸುತ್ತಾನೆ” ಎಂದು ಹೇಳಿದನು.
16 ದಾವೀದನು ಈ ಮಾತುಗಳನ್ನು ಹೇಳಿದಾಗ ಸೌಲನು, “ನನ್ನ ಮಗನಾದ ದಾವೀದನೇ, ಇದು ನಿನ್ನ ಧ್ವನಿಯೇ?” ಎಂದು ಕೇಳಿದನು. ನಂತರ ಸೌಲನು ಅಳಲಾರಂಭಿಸಿದನು. ಸೌಲನು ಬಹಳ ಅತ್ತನು.
17 ಸೌಲನು, “ನೀನೇ ನೀತಿವಂತನು. ನಾನು ತಪ್ಪು ಮಾಡಿದೆ. ನೀನು ನನಗೆ ಒಳ್ಳೆಯವನಾಗಿದ್ದೆ; ಆದರೆ ನಾನು ನಿನಗೆ ಕೆಟ್ಟವನಾದೆ.
18 ನೀನು ನನಗೆ ಮಾಡಿದ ಒಳ್ಳೆಯ ಕಾರ್ಯಗಳ ಬಗ್ಗೆ ನನಗೆ ತಿಳಿಸಿರುವೆ. ಯೆಹೋವನು ನನ್ನನ್ನು ನಿನ್ನ ಬಳಿಗೆ ಕರೆದು ತಂದನು, ಆದರೆ ನೀನು ನನ್ನನ್ನು ಕೊಲ್ಲಲಿಲ್ಲ.
19 ಒಬ್ಬ ಮನುಷ್ಯನು ತನ್ನ ಶತ್ರುವನ್ನು ಹಿಡಿದುಕೊಂಡರೆ, ಅವನಿಗೆ ಕೇಡನ್ನು ಮಾಡದೆ ಕಳುಹಿಸಿಬಿಡುವನೇ? ಅವನು ಶತ್ರುವಿಗೆ ಒಳ್ಳೆಯದನ್ನು ಮಾಡುವುದಿಲ್ಲ. ನೀನು ನನಗೆ ಈ ದಿನ ಒಳ್ಳೆಯದನ್ನು ಮಾಡಿರುವುದರಿಂದ ಯೆಹೋವನು ನಿನಗೆ ಒಳ್ಳೆಯದನ್ನು ಮಾಡಲಿ.
20 ನೀನು ನೂತನ ರಾಜನಾಗುವೆಯೆಂಬುದು ನನಗೆ ತಿಳಿದಿದೆ. ಇಸ್ರೇಲ್ ರಾಜ್ಯವನ್ನು ನೀನು ಆಳುವೆ.
21 ಈಗ ನೀನು ನನಗೆ ಒಂದು ಪ್ರಮಾಣವನ್ನು ಮಾಡು. ನನ್ನ ಸಂತಾನದವರನ್ನು ನೀನು ಕೊಲ್ಲುವುದಿಲ್ಲವೆಂದು ಯೆಹೋವನ ಹೆಸರಿನಲ್ಲಿ ನನಗೆ ಪ್ರಮಾಣಮಾಡು. ನನ್ನ ತಂದೆಯ ಕುಲದಲ್ಲಿ ನನ್ನ ಹೆಸರನ್ನು ನಾಶಮಾಡುವುದಿಲ್ಲವೆಂದು ಪ್ರಮಾಣ ಮಾಡು” ಎಂದು ಬೇಡಿಕೊಂಡನು.
22 ಸೌಲನ ವಂಶದವರನ್ನು ಕೊಲ್ಲುವುದಿಲ್ಲವೆಂದು ದಾವೀದನು ಪ್ರಮಾಣಮಾಡಿದನು. ನಂತರ ಸೌಲನು ಮನೆಗೆ ಹಿಂದಿರುಗಿದನು. ದಾವೀದನು ಮತ್ತು ಅವನ ಜನರು ತಾವು ಅಡಗಿಕೊಂಡಿದ್ದ ಸ್ಥಳಕ್ಕೆ ಹೊರಟುಹೋದರು.
×

Alert

×