1
|
ಬಾಲಕನಾದ ಸಮುವೇಲನು ಏಲಿಯ ಕೈಕೆಳಗಿದ್ದು ಯೆಹೋವನ ಸೇವೆಮಾಡುತ್ತಿದ್ದನು. ಆ ಕಾಲದಲ್ಲಿ ಯೆಹೋವನು ಜನರೊಂದಿಗೆ ಪದೇಪದೇ ಮಾತಾಡುತ್ತಿರಲಿಲ್ಲ; ದರ್ಶನಗಳ ಸಂಖ್ಯೆಯೂ ಕಡಿಮೆಯಾಗಿತ್ತು. |
2
|
ಏಲಿಯ ಕಣ್ಣುಗಳು ಮಂಜಾಗಿ ಕುರುಡನೆನ್ನುವಷ್ಟು ಕಾಣುತ್ತಿರಲಿಲ್ಲ. ಒಂದು ರಾತ್ರಿ ಏಲಿಯು ತನ್ನ ಸ್ಥಳದಲ್ಲಿ ಮಲಗಿದ್ದನು. |
3
|
ಸಮುವೇಲನು ಯೆಹೋವನ ಪವಿತ್ರ ಆಲಯದಲ್ಲಿ ಹಾಸಿಗೆಯ ಮೇಲೆ ಮಲಗಿದ್ದನು. ಯೆಹೋವನ ಪವಿತ್ರ ಪೆಟ್ಟಿಗೆಯು ಅಲ್ಲಿಯೇ ಇತ್ತು. ಯೆಹೋವನ ದೀಪವು ಇನ್ನೂ ಬೆಳಗುತ್ತಿತ್ತು. |
4
|
ಯೆಹೋವನು ಸಮುವೇಲನನ್ನು ಕರೆದನು. ಸಮುವೇಲನು, “ಇಗೋ, ಇಲ್ಲಿದ್ದೇನೆ” ಎಂದನು. |
5
|
ಏಲಿಯು ಕರೆದಿರಬಹುದೆಂದು ಸಮುವೇಲನು ನೆನೆಸಿದನು. ಆದ್ದರಿಂದ ಸಮುವೇಲನು ಏಲಿಯ ಬಳಿಗೆ ಓಡಿಹೋಗಿ, “ಇಗೋ, ಇಲ್ಲಿದ್ದೇನೆ. ನೀನು ನನ್ನನ್ನು ಕರೆದೆಯಲ್ಲಾ” ಅಂದನು. ಆದರೆ ಏಲಿಯು, “ನಾನು ನಿನ್ನನ್ನು ಕರೆಯಲಿಲ್ಲ. ಹೋಗಿ ಮಲಗಿಕೋ” ಅಂದನು. ಸಮುವೇಲನು ಹೋಗಿ ಮಲಗಿಕೊಂಡನು. |
6
|
ನಂತರ ಯೆಹೋವನು, “ಸಮುವೇಲನೇ” ಎಂದು ಮತ್ತೆ ಕರೆದನು. ಸಮುವೇಲನು ಮತ್ತೆ ಏಲಿಯ ಬಳಿಗೆ ಓಡಿಹೋಗಿ, “ಇಗೋ, ಇಲ್ಲಿದ್ದೇನೆ. ನೀನು ನನ್ನನ್ನು ಕರೆದೆಯಲ್ಲಾ” ಎಂದು ಹೇಳಿದನು. ಏಲಿಯು, “ನಾನು ನಿನ್ನನ್ನು ಕರೆಯಲಿಲ್ಲ, ಹೋಗಿ ಮಲಗಿಕೋ” ಅಂದನು. |
7
|
ಆ ವರೆಗೂ ಸಮುವೇಲನಿಗೆ ಯೆಹೋವನ ಅನುಭವವಿರಲಿಲ್ಲ; ಯೆಹೋವನು ಅವನೊಂದಿಗೆ ನೇರವಾಗಿ ಮಾತಾಡಿರಲಿಲ್ಲ. |
8
|
ಯೆಹೋವನು ಸಮುವೇಲನನ್ನು ಮೂರನೆಯ ಸಲ ಕರೆದನು. ಸಮುವೇಲನು ಮತ್ತೆ ಮೇಲೆದ್ದು ಏಲಿಯನ ಬಳಿಗೆ ಹೋಗಿ, “ಇಗೋ, ಇಲ್ಲಿದ್ದೇನೆ. ನೀನು ನನ್ನನ್ನು ಕರೆದೆಯಲ್ಲಾ” ಅಂದನು. ಬಾಲಕನನ್ನು ಕರೆಯುತ್ತಿರುವವನು ಯೆಹೋವನೆಂಬುದು ಏಲಿಗೆ ಆಗ ಅರ್ಥವಾಯಿತು. |
9
|
ಏಲಿಯು ಸಮುವೇಲನಿಗೆ, “ಹೋಗಿ ಮಲಗಿಕೋ. ನಿನ್ನನ್ನು ಮತ್ತೆ ಕರೆದರೆ, ‘ಅಪ್ಪಣೆಯಾಗಲಿ, ಯೆಹೋವನೇ ನಾನು ನಿನ್ನ ಸೇವಕ, ಕೇಳಿಸಿಕೊಳ್ಳುತ್ತಿದ್ದೇನೆ’ ಎಂದು ಉತ್ತರಿಸು” ಎಂಬುದಾಗಿ ಹೇಳಿದನು. ಸಮುವೇಲನು ತನ್ನ ಸ್ಥಳದಲ್ಲಿ ಮಲಗಲು ಹೋದನು. |
10
|
ಯೆಹೋವನು ಅಲ್ಲಿ ಪ್ರತ್ಯಕ್ಷನಾಗಿ ನಿಂತು ಮೊದಲು ಕರೆದಂತೆಯೇ “ಸಮುವೇಲನೆ, ಸಮುವೇಲನೆ” ಎಂದು ಕರೆದನು. ಸಮುವೇಲನು, “ಅಪ್ಪಣೆಯಾಗಲಿ, ನಾನು ನಿನ್ನ ಸೇವಕ, ಕೇಳಿಸಿಕೊಳ್ಳುತ್ತಿದ್ದೇನೆ” ಎಂದನು. |
11
|
ಯೆಹೋವನು ಸಮುವೇಲನಿಗೆ, “ನಾನು ಇಸ್ರೇಲಿನಲ್ಲಿ ಒಂದು ಕಾರ್ಯವನ್ನು ಶೀಘ್ರದಲ್ಲೇ ಮಾಡುವೆನು. ಈ ಕಾರ್ಯದ ಬಗ್ಗೆ ಕೇಳಿದ ಜನರು ಗಾಬರಿಗೊಳ್ಳುವರು. |
12
|
ನಾನು ಇದನ್ನು ಏಲಿ ಮತ್ತು ಅವನ ಕುಟುಂಬದ ವಿರುದ್ಧ ಸಂಪೂರ್ಣವಾಗಿ ಮಾಡುತ್ತೇನೆ. |
13
|
ಏಲಿಯ ಕುಟುಂಬವನ್ನು ನಿತ್ಯದಂಡನೆಗೆ ಗುರಿಪಡಿಸುತ್ತೇನೆಂದು ನಾನು ಏಲಿಗೆ ಹೇಳಿರುವೆನು. ಏಲಿಯ ಮಕ್ಕಳು ನನಗೆ ವಿರೋಧವಾಗಿ ಮಾತಾಡಿದ್ದರಿಂದ ಮತ್ತು ಕೆಟ್ಟಕಾರ್ಯಗಳನ್ನು ಮಾಡಿದ್ದರಿಂದ ನಾನು ಇದನ್ನು ಮಾಡುತ್ತೇನೆ. ಅಲ್ಲದೆ ಅವರನ್ನು ಹತೋಟಿಯಲ್ಲಿಡಲು ಏಲಿಗೆ ಸಾಧ್ಯವಾಗಲಿಲ್ಲ. |
14
|
ಆದಕಾರಣವೇ, ಏಲಿಯ ಕುಟುಂಬವು ಅರ್ಪಿಸುವ ಯಜ್ಞವಾಗಲೀ ಧಾನ್ಯನೈವೇದ್ಯವಾಗಲೀ ಅವರ ಪಾಪಗಳಿಗೆ ಪ್ರಾಯಶ್ಚಿತ್ತವಾಗುವುದಿಲ್ಲವೆಂದು ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು. |
15
|
ಸಮುವೇಲನು ನಿದ್ರಿಸಿದನು. ಅವನು ಮುಂಜಾನೆ ಮೇಲೆದ್ದು ಯೆಹೋವನ ಆಲಯದ ಬಾಗಿಲುಗಳನ್ನು ತೆರೆದನು. ಸಮುವೇಲನು ತಾನು ಕಂಡ ದರ್ಶನದ ಬಗ್ಗೆ ಏಲಿಗೆ ತಿಳಿಸಲು ಭಯಪಟ್ಟನು. |
16
|
ಆದರೆ ಏಲಿಯು, “ಸಮುವೇಲನೇ, ನನ್ನ ಮಗನೇ” ಎಂದು ಕರೆದನು. ಸಮುವೇಲನು, “ಇಗೋ, ಇದ್ದೇನೆ” ಅಂದನು. |
17
|
ಏಲಿಯು, “ಯೆಹೋವನು ನಿನಗೆ ಹೇಳಿದ್ದೇನು? ನನ್ನೊಂದಿಗೆ ಅದನ್ನು ಮುಚ್ಚಿಡಬೇಡ. ಆತನು ನಿನ್ನೊಂದಿಗೆ ಆಡಿದ ಮಾತುಗಳಲ್ಲಿ ಏನನ್ನಾದರೂ ಮುಚ್ಚಿಟ್ಟರೆ ಆತನು ನಿನ್ನನ್ನು ಶಿಕ್ಷಿಸುತ್ತಾನೆ” ಎಂದು ತಿಳಿಸಿದನು. |
18
|
ಸಮುವೇಲನು ಏನನ್ನೂ ಮುಚ್ಚಿಡದೆ, ಎಲ್ಲವನ್ನೂ ಏಲಿಗೆ ತಿಳಿಸಿದನು. ಏಲಿಯು, “ಆತನು ಯೆಹೋವ. ಆತನು ತನಗೆ ಸರಿಕಾಣುವದನ್ನೇ ಮಾಡಲಿ” ಎಂದು ಹೇಳಿದನು. |
19
|
ಯೆಹೋವನು ಸಮುವೇಲನ ಸಂಗಡವಿದ್ದನು; ಸಮುವೇಲನು ಬೆಳೆದು ದೊಡ್ಡವನಾದನು; ಸಮುವೇಲನ ಯಾವ ಸಂದೇಶವೂ ಸುಳ್ಳಾಗದಂತೆ ಯೆಹೋವನು ನೋಡಿಕೊಂಡನು. |
20
|
ಸಮುವೇಲನು ಯೆಹೋವನ ನಿಜಪ್ರವಾದಿಯೆಂಬುದು ದಾನಿನಿಂದ ಬೇರ್ಷೆಬದವರೆಗಿದ್ದ ಎಲ್ಲಾ ಇಸ್ರೇಲರಿಗೂ ಆಗ ತಿಳಿದು ಬಂದಿತು. |
21
|
ಯೆಹೋವನು ಶೀಲೋವಿನಲ್ಲಿ ಸಮುವೇಲನಿಗೆ ದರ್ಶನ ಕೊಡುವುದನ್ನು ಮುಂದುವರಿಸಿದನು. ಯೆಹೋವನು ಸಮುವೇಲನಿಗೆ ತನ್ನ ವಾಕ್ಯದ ಮೂಲಕ ತನ್ನನ್ನು ಪ್ರಕಟಿಸಿಕೊಂಡನು. |
1-Samuel 3:17 Kannada Language Bible Words basic statistical display
COMING SOON ...