ಸೌಲನು ತನ್ನ ಅಯುಧವಾಹಕನಿಗೆ, “ನಿನ್ನ ಖಡ್ಗದಿಂದ ಇರಿದು ನನ್ನನ್ನು ಕೊಂದುಬಿಡು. ಆಗ, ಈ ಪರದೇಶೀಯರು ನನ್ನನ್ನು ಗಾಯಗೊಳಿಸುವುದಕ್ಕಾಗಲಿ ಅಪಹಾಸ್ಯ ಮಾಡುವುದಕ್ಕಾಗಲಿ ಸಾಧ್ಯವಾಗುವುದಿಲ್ಲ” ಎಂದನು. ಆದರೆ ಸೌಲನ ಆಯುಧವಾಹಕನು ನಿರಾಕರಿಸಿದನು. ಸೌಲನ ಸಹಾಯಕನು ಬಹಳ ಭಯಗೊಂಡಿದ್ದನು. ಆದ್ದರಿಂದ ಸೌಲನು ತನ್ನ ಸ್ವಂತ ಖಡ್ಗದಿಂದಲೇ ಇರಿದು ಆತ್ಮಹತ್ಯೆ ಮಾಡಿಕೊಂಡನು.
ಇಸ್ರೇಲರ ಸೈನ್ಯವು ಓಡಿಹೋಗುತ್ತಿರುವುದನ್ನು ಕಣಿವೆಯ ಮತ್ತೊಂದು ಪಕ್ಕದಲ್ಲಿ ವಾಸಮಾಡುತ್ತಿದ್ದ ಇಸ್ರೇಲರು ನೋಡಿದರು. ಸೌಲನು ಮತ್ತು ಅವನ ಮಕ್ಕಳು ಸತ್ತದ್ದನ್ನೂ ಅವರು ನೋಡಿದರು. ಆದ್ದರಿಂದ ಆ ಇಸ್ರೇಲರು ತಮ್ಮ ನಗರಗಳನ್ನು ಬಿಟ್ಟು ಓಡಿಹೋದರು. ನಂತರ ಫಿಲಿಷ್ಟಿಯರು ಬಂದು ಆ ನಗರಗಳನ್ನು ವಶಪಡಿಸಿಕೊಂಡು ನೆಲೆಸಿದರು.
ಆದ್ದರಿಂದ ಯಾಬೆಷಿನ ಸೈನಿಕರೆಲ್ಲ ಬೇತ್‌ಷೆಯಾನಿಗೆ ಹೋದರು. ಅವರು ರಾತ್ರಿಯೆಲ್ಲಾ ನಡೆದರು! ನಂತರ ಅವರು ಬೇತ್‌ಷೆಯಾನಿನ ಗೋಡೆಯಲ್ಲಿದ್ದ ಸೌಲನ ದೇಹವನ್ನು ಇಳಿಸಿದರು. ನಂತರ ಅವರು ಸೌಲನ ಗಂಡುಮಕ್ಕಳ ದೇಹಗಳನ್ನೂ ಇಳಿಸಿದರು. ನಂತರ ಅವರು ಆ ದೇಹಗಳನ್ನು ಯಾಬೇಷಿಗೆ ತೆಗೆದುಕೊಂಡು ಹೋದರು. ಸೌಲ ಮತ್ತು ಅವನ ಮೂವರು ಗಂಡುಮಕ್ಕಳ ದೇಹಗಳನ್ನು ಯಾಬೇಷಿನ ಜನರು ಅಲ್ಲಿ ದಹಿಸಿಬಿಟ್ಟರು.
ನಂತರ ಈ ಜನರು ಸೌಲ ಮತ್ತು ಅವನ ಮೂರು ಮಕ್ಕಳ ಮೂಳೆಗಳನ್ನು ತೆಗೆದುಕೊಂಡು, ಅವುಗಳನ್ನು ಯಾಬೇಷಿನ ಪಿಚುಲ ಮರದ ಕೆಳಗೆ ಸಮಾಧಿಮಾಡಿದರು. ನಂತರ ಯಾಬೇಷಿನ ಜನರು ದುಃಖದಿಂದ ಏಳು ದಿನಗಳ ಕಾಲ ಉಪವಾಸ ಮಾಡಿದರು. [*ಏಳು ದಿನಗಳ ಕಾಲ ಉಪವಾಸ ಮಾಡಿದರು ಸೌಲನ ಮರಣಕ್ಕಾಗಿ ತೀವ್ರ ಸಂತಾಪವನ್ನು ವ್ಯಕ್ತಪಡಿಸಲು ಅನುಸರಿಸಿದ ಮಾರ್ಗ. ಅವರ ನಗರವನ್ನು ಸೌಲನು ರಕ್ಷಿಸಿದನೆಂಬುದನ್ನು ಅವರು ಎಂದೆಂದಿಗೂ ಮರೆಯುವುದಿಲ್ಲ.]